Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5657 ಪ್ರಕರಣಗಳು ಇತ್ಯರ್ಥ*
  • *ಕಾಯಕ ಶರಣರ ಜಯಂತಿ ಸಮ ಸಮಾಜ ನಿರ್ಮಾಣದಲ್ಲಿ ಕಾಯಕ ಶರಣರ ಕೊಡುಗೆ ಅಪಾರ: ಹೇಮಲತಾ*
  • *ಸೌಂದರ್ಯ ತಜ್ಞರು ನಿತ್ಯ ವ್ಯಾಯಾಮದೊಂದಿಗೆ ತಮ್ಮ ಆರೋಗ್ಯ ವೃದ್ಧಿಸಿಕೊಳ್ಳುವ ಬಗ್ಗೆ ಗಮನಹರಿಸಬೇಕು ಎಂದು ಅಂತರರಾಷ್ಟ್ರೀಯ ಬ್ಯಾಡ್ಮಿಂಟನ್ ಕ್ರೀಡಾಪಟು ತಾತಪಂಡ ಜ್ಯೋತಿ ಸೋಮಯ್ಯ ಕಿವಿಮಾತು ಹೇಳಿದರು*
  • *ಮೈಸೂರು-ಕುಶಾಲನಗರ ರೈಲ್ವೆ ಯೋಜನೆ ಪುನಾರಂಭಿಸಲು ಅಶ್ವಿನ್‌ ವೈಷ್ಣವ್‌ಗೆ ಯದುವೀರ್‌ ಮನವಿ ಭೂ ಸ್ವಾಧೀನ ಪ್ರಕ್ರಿಯೆಗೆ ಚಾಲನೆ ನೀಡಲು ಕ್ರಮ ಕೈಗೊಳ್ಳಬೇಕೆಂದು ಸಂಸದರ ಪತ್ರ*
  • *ಕೊಡವ ಭಾಷೆಗೂ ಸಾಂವಿಧಾನಿಕ ಭದ್ರತೆ ನೀಡಬೇಕು : ಸಣ್ಣ ಸಣ್ಣ ಭಾಷೆಗಳನ್ನು ಹತ್ತಿಕಿದರೆ ಏಕತೆಗೆ ದಕ್ಕೆ : ಸಿಎನ್‌ಸಿ ಪ್ರತಿಪಾದನೆ*
  • *‘ಜಂತು ಹುಳು ರಹಿತ ಮಕ್ಕಳು – ಆರೋಗ್ಯವಂತ ಮಕ್ಕಳು’ ರಾಷ್ಟ್ರೀಯ ಜಂತು ಹುಳು ನಿವಾರಣಾ ಕಾರ್ಯಕ್ರಮ*
  • *ಫೆ.14 ರಂದು ಕೊಡವ ಭವನ ಉದ್ಘಾಟನೆ*
  • *ಮಡಿಕೇರಿಯಲ್ಲಿ “ಆರೋಗ್ಯ ಹಕ್ಕಿನ ಜಾಥಾ”*
  • *ಕೊಡವ ಕುಟುಂಬಗಳ ನಡುವಣ “ಮುಲ್ಲೇಂಗಡ ಕಬಡ್ಡಿ ನಮ್ಮೆ”*
  • *104 ಮೊಬೈಲ್ ಫೋನ್‌ಗಳನ್ನು ವಾರಸುದಾರರಿಗೆ ಹಸ್ತಾಂತರಿಸಿದ ಕೊಡಗು ಜಿಲ್ಲಾ ಪೊಲೀಸ್*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ದೆಹಲಿ ಗಣರಾಜ್ಯೋತ್ಸವ : ಸಿರಿಧಾನ್ಯದಿಂದ ಮೈಕ್ರೋಚಿಪ್ ವರೆಗೆ ಸ್ತಬ್ಧಚಿತ್ರ : ಭಾರತ ಪರ್ವದಲ್ಲಿ ಪ್ರದರ್ಶನ*
ಇತ್ತೀಚಿನ ಸುದ್ದಿಗಳು

*ದೆಹಲಿ ಗಣರಾಜ್ಯೋತ್ಸವ : ಸಿರಿಧಾನ್ಯದಿಂದ ಮೈಕ್ರೋಚಿಪ್ ವರೆಗೆ ಸ್ತಬ್ಧಚಿತ್ರ : ಭಾರತ ಪರ್ವದಲ್ಲಿ ಪ್ರದರ್ಶನ*

January 23, 20264 Mins Read
Share
Facebook Twitter LinkedIn Pinterest WhatsApp Email

ಬೆಂಗಳೂರು ಜ.23 NEWS DESK : ಭಾರತವನ್ನು ಆತ್ಮನಿರ್ಭರ ರಾಷ್ಟ್ರವನ್ನಾಗಿಸುವ ದಿಶೆಯಲ್ಲಿ ಕರ್ನಾಟಕದಂತಹ ಸ್ವಾವಲಂಬಿ ರಾಜ್ಯಗಳ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ಕೃಷಿಯಿಂದ ಕೈಗಾರಿಕೆವರೆಗೆ ಹಾಗೂ ಆಧುನಿಕ ತಂತ್ರಜ್ಞಾನದ ಬಳಕೆಯಲ್ಲಿ ನಮ್ಮ ರಾಜ್ಯ ಮುಂಚೂಣಿಯಲ್ಲಿದೆ. ಈ ಪಯಣವನ್ನು ಸಂಕೇತಿಸುವಂತೆ, ಸಿರಿಧಾನ್ಯದಿಂದ ಮೈಕ್ರೋಚಿಪ್ ವರೆಗೆ (ಮಿಲ್ಲೆಟ್ ಟು ಮೈಕ್ರೋಚಿಪ್) ಎನ್ನುವ ಸ್ತಬ್ಧಚಿತ್ರವನ್ನು 2026ರ ಜ.26 ರಂದು ನವದೆಹಲಿಯಲ್ಲಿ ನಡೆಯುವ ಗಣರಾಜ್ಯೋತ್ಸವದ ಅಂಗವಾಗಿ ಕೆಂಪು ಕೋಟೆಯಲ್ಲಿ ಆಯೋಜಿಸುವ ಭಾರತ ಪರ್ವ ದಲ್ಲಿ ಕರ್ನಾಟಕವು ಪ್ರದರ್ಶಿಸುತ್ತಿದೆ. ಕರ್ನಾಟಕ ರಾಜ್ಯದ ಪರವಾಗಿ ಗಣರಾಜ್ಯೋತ್ಸವದ ಪಥಸಂಚಲನ ಮತ್ತು ಭಾರತ ಪರ್ವದಲ್ಲಿ ಪಾಲ್ಗೊಳ್ಳುವ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಪ್ರತಿ ವರ್ಷ ತನ್ನ ವೈಶಿಷ್ಟ್ಯಪೂರ್ಣ ಸ್ತಬ್ಧಚಿತ್ರಗಳ ಮೂಲಕವೇ ದೇಶದ ಗಮನ ಸೆಳೆಯುತ್ತಿದೆ. ವರ್ಷದಿಂದ ವರ್ಷಕ್ಕೆ ಹೊಸ ಮೈಲಿಗಲ್ಲುಗಳನ್ನು ಸ್ಥಾಪಿಸುತ್ತಲೇ ಸಾಗಿದೆ. ಈ ಬಾರಿ ಕೃಷಿ, ಶಿಕ್ಷಣ, ವಿಜ್ಞಾನ, ಉನ್ನತ ತಂತ್ರಜ್ಞಾನ ಹಾಗೂ ಮೈಕ್ರೋಚಿಪ್‍ಗಳ ಉತ್ಪಾದನೆಯಲ್ಲಿ ಸಾಧಿಸಿರುವ ಸಮತೋಲನಯುತ ಪ್ರಗತಿಯನ್ನು ಸ್ತಬ್ಧಚಿತ್ರದಲ್ಲಿ ತೋರಿಸಲಾಗಿದೆ ಎಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತರಾದ ಹೇಮಂತ್ ಎಂ ನಿಂಬಾಳ್ಕರ್ ಅವರು ತಿಳಿಸಿದ್ದಾರೆ. ಸಿರಿಧಾನ್ಯಗಳ ಉತ್ಪಾದನೆ ಮತ್ತು ಪೌಷ್ಟಿಕ ಆಹಾರದ ಬಳಕೆಯನ್ನು ಉತ್ತೇಜಿಸುವಲ್ಲಿ ಕರ್ನಾಟಕವು ದೇಶದ ಪ್ರಮುಖ ರಾಜ್ಯಗಳಲ್ಲಿ ಒಂದಾಗಿದೆ. ಮಾಹಿತಿ ತಂತ್ರಜ್ಞಾನ ಹಾಗೂ ಜೈವಿಕ ತಂತ್ರಜ್ಞಾನ ಕ್ಷೇತ್ರಗಳಲ್ಲಿ ಬೆಂಗಳೂರು ಜಾಗತಿಕವಾಗಿ ಗಮನ ಸೆಳೆದಿದೆ. ಮೈಕ್ರೋಚಿಪ್, ಎಲೆಕ್ಟ್ರಾನಿಕ್ಸ್ ಹಾಗೂ ಸೆಮಿಕಂಡಕ್ಟರ್ ವಲಯಗಳಲ್ಲಿನ ಆವಿಷ್ಕಾರಗಳು ಕರ್ನಾಟಕವನ್ನು ಶ್ರೇಷ್ಠ ತಂತ್ರಜ್ಞಾನ ಕೇಂದ್ರವಾಗಿಸಿದೆ. ಇವೆಲ್ಲವೂ ಈ ಬಾರಿ ಸ್ತಬ್ಧಚಿತ್ರದಲ್ಲಿ ಮೇಳೈಸಿವೆ. ಸಂಶೋಧನೆ, ನವೀನತೆ ಮತ್ತು ಕೌಶಲ್ಯಾಭಿವೃದ್ಧಿಗೆ ನೀಡಲಾಗಿರುವ ವಿಶೇಷ ಆದ್ಯತೆಯ ಮೂಲಕ ಯುವಶಕ್ತಿಗೆ ಉದ್ಯಮಶೀಲ ಅವಕಾಶಗಳನ್ನು ಒದಗಿಸಿ, ಭವಿಷ್ಯದ ಆರ್ಥಿಕತೆಗೆ ಭದ್ರ ಬುನಾದಿಯನ್ನು ಕರ್ನಾಟಕ ನಿರ್ಮಿಸುತ್ತಿದೆ. ಹೂಡಿಕೆ ಸ್ನೇಹಿ ನೀತಿಗಳ ಮೂಲಕ ಉತ್ಪಾದನಾ ವಲಯದಲ್ಲಿ ಗರಿಷ್ಠ ಬೆಳವಣಿಗೆಯನ್ನು ಸಾಧಿಸಿರುವ ಕರ್ನಾಟಕವು ಕೈಗಾರಿಕಾ ಅಭಿವೃದ್ಧಿಯಲ್ಲಿಯೂ ಮುಂಚೂಣಿಯಲ್ಲಿದೆ. ಜೊತೆಗೆ, ಸಾರ್ಟ್ ಅಪ್ ಕ್ಯಾಪಿಟಲ್ ಆಫ್ ಇಂಡಿಯಾ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ರಾಜ್ಯವು ನವ ದೆಹಲಿಯಲ್ಲಿ ಪ್ರದರ್ಶಿಸುತ್ತಿರುವ ಈ ಸ್ತಬ್ಧಚಿತ್ರವು ಎಲ್ಲರ ಮನಸೂರೆಗೊಳ್ಳಲಿದೆ ಎಂದು ವಾರ್ತಾ ಇಲಾಖೆಯ ಆಯುಕ್ತರು ವಿಶ್ವಾಸವನ್ನು ವ್ಯಕ್ತಪಡಿಸಿದ್ದಾರೆ. ದೆಹಲಿಯ ಗಣರಾಜ್ಯೋತ್ಸವದ ಸ್ತಬ್ಧಚಿತ್ರದ ವಿಷಯದ ಆಯ್ಕೆ, ವಿನ್ಯಾಸ, ಕೇಂದ್ರ ಸರ್ಕಾರ ರಕ್ಷಣಾ ಸಚಿವಾಲಯದಲ್ಲಿ ಅದರ ಅನುಮೋದನೆ, ನಿರ್ಮಾಣ, ಪಾಲ್ಗೊಳ್ಳುವಿಕೆ ಹೀಗೆ ಎಲ್ಲಾ ಹಂತಗಳಲ್ಲೂ ‘ವಾರ್ತಾ ಮತ್ತು ಸಾರ್ವಜನಿಕ ಸಂರ್ಪಕ ಇಲಾಖೆಯೇ ಸಕ್ರಿಯವಾಗಿ ಪಾಲ್ಗೊಳ್ಳುತ್ತದೆ. ಅಲ್ಲದೆ, ಇಲಾಖೆಯು ಕಳೆದ 16 ವರ್ಷಗಳಿಂದ ನಿರಂತರವಾಗಿ ಗಣರಾಜ್ಯೋತ್ಸವದ ಪಥಸಂಚಲನ ಮತ್ತು ಭಾರತ ಪರ್ವದ ಪ್ರದರ್ಶನದಲ್ಲಿ (2024 ಮತ್ತು 2026ರಲ್ಲಿ) ಪಾಲ್ಗೊಳ್ಳುತ್ತಿದೆ. ಇದು ಕನ್ನಡಿಗರೆಲ್ಲರೂ ಹೆಮ್ಮೆಪಡುವ ಸಂಗತಿ ಎಂದು ಹೇಳಿದ್ದಾರೆ. 2026ರ ಜನವರಿ 26ರಂದು ನಡೆಯುವ ದೆಹಲಿ ಗಣರಾಜ್ಯೋತ್ಸವದ ಸ್ತಬ್ಧಚಿತ್ರಕ್ಕಾಗಿ ಇಲಾಖೆಯು
1. ಕಿತ್ತೂರು ರಾಣಿ ಚೆನ್ನಮ್ಮ ಮತ್ತು ರಾಣಿ ಅಬ್ಬಕ್ಕದೇವಿ
2. ಕರ್ನಾಟಕ ಪುಷ್ಪ ವೈಭವ
3. ಹಲಗಲಿ ಬೇಡರು
4.‘ಸಿರಿಧಾನ್ಯದಿಂದ ಮೈಕ್ರೋಚಿಪ್’ ವರೆಗೆ ಎಂಬ ನಾಲ್ಕು ವಿಷಯಗಳನ್ನು ಆಯ್ಕೆ ಮಾಡಿ ಕಳುಹಿಸಿತ್ತು. ಮೊದಲ ಸಭೆಯಲ್ಲಿಯೇ ಸಿರಿಧಾನ್ಯದಿಂದ ಮೈಕ್ರೋಚಿಪ್ ವರೆಗೆ ಎಂಬ ವಿಷಯವನ್ನು ಪರಿಣತರ ಸಮಿತಿಯು ಒಮ್ಮತದಿಂದ ಅಂತಿಮಗೊಳಿಸಿತ್ತು. ಅದಕ್ಕನುಗುಣವಾಗಿ ಮಣ್ಣಿನಲ್ಲಿ ಸಿರಿಧಾನ್ಯಗಳನ್ನು ಬೆಳೆಸಿದ ದೇಶೀಯ ಜ್ಞಾನದಿಂದ ಮೈಕ್ರೋಚಿಪ್‍ಗಳನ್ನು ಉತ್ಪಾದಿಸುವ ಸೂಕ್ಷ್ಮತೆಯನ್ನು ಈ ಸ್ತಬ್ಧಚಿತ್ರ ಮನಮುಟ್ಟುವಂತೆ ಕಟ್ಟಿಕೊಡುತ್ತದೆ. ವಿಷಯ ಆಯ್ಕೆಯ ಬಳಿಕ ಅದನ್ನು ವಿವಿಧ ಸ್ತರಗಳನ್ನು ನಿರೂಪಿಸಬೇಕಾಗಿತ್ತು. ಕರ್ನಾಟಕದ ಬಗೆಗಿನ ಅಭಿಮಾನ, ನಾಡಿನ ಹಿರಿಮೆ ಹಾಗೂ ಸಂಸ್ಕøತಿಯ ಮಹತ್ವವನ್ನು ಎತ್ತಿಹಿಡಿಯುವ ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರ ಪ್ರೋತ್ಸಾಹದ ನುಡಿಗಳೇ ಈ ಸವಾಲಿನ ಕೆಲಸಕ್ಕೆ ಮುನ್ನುಡಿ ಬರೆದವು. ವಾರ್ತಾ ಮತ್ತು ಸಾರ್ವಜನಿಕ ಸಂರ್ಪಕ ಇಲಾಖೆಯ ಕಾರ್ಯದರ್ಶಿಗಳಾದ ಶ್ರೀಮತಿ ಬಿ.ಬಿ. ಕಾವೇರಿ ಅವರ ಸಲಹೆ – ಸೂಚನೆಗಳು ಸ್ತಬ್ಧಚಿತ್ರದ ಕೆಲಸವನ್ನು ಸುಗಮವಾಗಿಸಿತ್ತು ಎಂದು ವಾರ್ತಾ ಇಲಾಖೆಯ ಆಯುಕ್ತರು ಹೇಳಿದರು. : : ಸ್ತಬ್ಧಚಿತ್ರದಲ್ಲಿ ಏನಿರಲಿದೆ: : ಸ್ತಬ್ಧಚಿತ್ರದ ಮುಂಭಾಗದಲ್ಲಿ ಉದಯಿಸುತ್ತಿರುವ ಸೂರ್ಯ ನಿರಂತರ ಪ್ರಗತಿ ಮತ್ತು ಚಲನಶೀಲತೆಯ ಸಂಕೇತವಾಗಿ ಹೊಳೆಯುತ್ತಿದೆ. ದೊಡ್ಡ ಮಡಿಕೆಗಳಲ್ಲಿ ಪ್ರದರ್ಶಿಸಲಾದ ವಿವಿಧ ಸಿರಿಧಾನ್ಯಗಳು ಕೃಷಿ ಸಮೃದ್ಧಿಯನ್ನು ತೋರಿಸುತ್ತವೆ. ಬೆಳೆದ ಫಸಲನ್ನು ಎತ್ತಿಹಿಡಿದಿರುವ ರೈತ, ಆತನ ಪತ್ನಿ ಹಾಗೂ ಉಲ್ಲಾಸದಿಂದ ಕಾಣಿಸುತ್ತಿರುವ ಮಕ್ಕಳು ಗ್ರಾಮೀಣ ಶಕ್ತಿಯ ಜೀವಂತ ಚಿತ್ರಣವಾಗಿದ್ದಾರೆ. ಮಧ್ಯಭಾಗದಲ್ಲಿ ತಿರುಗುತ್ತಿರುವ ಅಣುವಿನ ಮಾಲಿಕ್ಯೂಲ್‍ಗಳ ಮಾದರಿ ತಂತ್ರಜ್ಞಾನ ಪ್ರಗತಿಯನ್ನು ಸೂಚಿಸುತ್ತದೆ. ಕೃತಕ ಬುದ್ಧಿಮತ್ತೆಯ ರೋಬೋಟ್ ಕಂಪ್ಯೂಟರ್ ನಲ್ಲಿ ಕಾರ್ಯನಿರ್ವಹಿಸುತ್ತಿರುವುದು ಭವಿಷ್ಯದ ಆವಿಷ್ಕಾರಗಳ ಸಂಕೇತವಾಗಿದೆ. ಇಕ್ಕೆಲಗಳಲ್ಲಿ ಬಾಹ್ಯಾಕಾಶ ಕ್ಷೇತ್ರವನ್ನು ಪ್ರತಿನಿಧಿಸುವ ರಾಕೆಟ್ ಮತ್ತು ವಿಜ್ಞಾನಿ, ಟೆಲಿಮೆಡಿಸಿನ್ ಮೂಲಕ ಮಾರ್ಗದರ್ಶನ ನೀಡುತ್ತಿರುವ ವೈದ್ಯೆ ಹಾಗೂ ಕೃಷಿಭೂಮಿಯಲ್ಲಿ ಡ್ರೋನ್ ಬಳಸುತ್ತಿರುವ ಮಹಿಳೆಯು ವಿಜ್ಞಾನ, ಆರೋಗ್ಯ ಮತ್ತು ಆಧುನಿಕ ಕೃಷಿಯ ಸಮನ್ವಯವನ್ನು ತೋರಿಸುತ್ತಾರೆ. ಕೈಗಾರಿಕಾ ವಲಯವನ್ನು ಪ್ರತಿನಿಧಿಸುವಂತೆ ಯಂತ್ರೋಪಕರಣಗಳೊಂದಿಗೆ ಕಾರ್ಯನಿರ್ವಹಿಸುತ್ತಿರುವ ಕಾರ್ಮಿಕರು ಉತ್ಪಾದನಾ ಶಕ್ತಿಗೆ ಸಾಕ್ಷಿಯಾಗಿದ್ದಾರೆ. ಇಡೀ ಸ್ತಬ್ಧಚಿತ್ರದ ಆಕರ್ಷಣೆಯ ಕೇಂದ್ರಬಿಂದುವಾಗಿ ಕೊನೆಯಲ್ಲಿ ಮಿನುಗುತ್ತಿರುವ ಮೈಕ್ರೋಚಿಪ್ ಹಾಗೂ ಬಂಗಾರದ ಬಣ್ಣದ ಸರ್ಕ್ಯೂಟ್‍ಗಳ ಮಧ್ಯೆ ರೋಬೋಟ್‍ನ ಮುಖವನ್ನು ಸಾಂಕೇತಿಕವಾಗಿ ಚಿತ್ರಿಸಲಾಗಿದೆ. ಇದು ಪರಂಪರೆಯಿಂದ ಪ್ರಗತಿಯತ್ತ, ಮಣ್ಣಿನಿಂದ ಯಂತ್ರಗಳತ್ತ ಸಾಗುತ್ತಿರುವ ಕರ್ನಾಟಕದ ಆತ್ಮನಿರ್ಭರ ಪಯಣದ ಸಾರವಾಗಿದೆ. : : ತೀವ್ರ ಪೈಪೋಟಿ : : ಗಣರಾಜ್ಯೋತ್ಸವದ ಪಥಸಂಚಲನದಲ್ಲಿ ಸ್ತಬ್ಧಚಿತ್ರದೊಂದಿಗೆ ಭಾಗವಹಿಸುವುದು ಪ್ರತಿ ರಾಜ್ಯಕ್ಕೂ ಹೆಮ್ಮೆಯ ಮತ್ತು ಪ್ರತಿಷ್ಠೆಯ ಸಂಕೇತ. ಹಿಂದೆ ಎಲ್ಲಾ ರಾಜ್ಯಗಳಿಗೂ ಪಥಸಂಚಲನದಲ್ಲಿ ಭಾಗವಹಿಸಲು ಅವಕಾಶವಿತ್ತು. ಭದ್ರತೆ ಮತ್ತು ಗಣರಾಜ್ಯೋತ್ಸವದ ಅವಧಿಯಲ್ಲಿ ಮಾಡಿದ ಇಳಿಕೆ, ಪ್ರಾತಿನಿಧ್ಯತೆಯಿಂದಾಗಿ ಸ್ತಬ್ಧಚಿತ್ರಕ್ಕಾಗಿ ಪ್ರತಿನಿಧಿಸುವ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳ ಸಂಖ್ಯೆಯನ್ನು ರಕ್ಷಣಾ ಸಚಿವಾಲಯವು 2022ನೇ ಸಾಲಿನಿಂದ 15 ಕ್ಕೆ ಇಳಿಸಿದೆ. 2024ರಲ್ಲಿ ಭಾರತ ಸರ್ಕಾರದ ರಕ್ಷಣಾ ಸಚಿವಾಲಯವು ಎಲ್ಲಾ ರಾಜ್ಯಗಳಿಗೂ ಗಣರಾಜ್ಯೋತ್ಸವ ಪರೇಡ್‍ನಲ್ಲಿ ಸ್ತಬ್ಧಚಿತ್ರದೊಂದಿಗೆ ಪಾಲ್ಗೊಳ್ಳಲು ಸಮಾನ ಅವಕಾಶ ಕಲ್ಪಿಸಲು ಆವರ್ತನ ಮಾದರಿಯಲ್ಲಿ ಒಂದು ವರ್ಷ ಪಥಸಂಚಲನ ಮತ್ತು ಅದರ ಮುಂದಿನ ವರ್ಷ ಭಾರತ ಪರ್ವದಲ್ಲಿ ಪ್ರದರ್ಶಿಸುವಂತೆ ಎಲ್ಲಾ ರಾಜ್ಯಗಳೊಂದಿಗೆ ಒಡಂಬಡಿಕೆ ಮಾಡಿಕೊಂಡಿದೆ. ಹೀಗಾಗಿ, ಇದು ತೀವ್ರ ಪೈಪೋಟಿಗೆ ಕಾರಣವಾಗಿದೆ. ಅಷ್ಟೇ ಅಲ್ಲದೆ ಗುಣಮಟ್ಟಕ್ಕೆ, ವಿನ್ಯಾಸಕ್ಕೆ ಹೆಚ್ಚಿನ ಒತ್ತು ನೀಡಲಾಗುತ್ತಿದೆ. ಸ್ತಬ್ಧಚಿತ್ರಕ್ಕಾಗಿ ಪ್ರಶಸ್ತಿ ಪಡೆದುಕೊಳ್ಳುವುದಕ್ಕಿಂತಲೂ ಪಥಸಂಚಲನ ಮತ್ತು ಪ್ರದರ್ಶನದಲ್ಲಿ ಭಾಗವಹಿಸುವುದೇ ಪ್ರತಿಷ್ಠೆಯ ಸಂಕೇತವಾಗಿದೆ. ಇಂತಹ ಕಠಿಣ ಪರೀಕ್ಷೆಯಲ್ಲಿ ಕರ್ನಾಟಕವು 16 ಬಾರಿ ಭಾಗವಹಿಸಿ, ಹಲವು ಪ್ರಶಸ್ತಿಗಳನ್ನು ಮುಡಿಗೇರಿಸಿಕೊಂಡಿದೆ. : : ಪ್ರಶಸ್ತಿಗಳ ಸರಮಾಲೆ : :  2022ರಲ್ಲಿ ಇಲಾಖೆಯು ಪ್ರದರ್ಶಿಸಿದ್ದ ಸಾಂಪ್ರದಾಯಿಕ ಕಸೂತಿ ತೊಟ್ಟಿಲು ಗೆ ದ್ವಿತೀಯ ಪ್ರಶಸ್ತಿ, 2015ರಲ್ಲಿ ರಾಜ್ಯವು ಚನ್ನಪಟ್ಟಣದ ಗೊಂಬೆಗಳಿಗೆ ತೃತೀಯ, 2012ರಲ್ಲಿ ದಕ್ಷಿಣ ಕನ್ನಡ ಭೂತಾರಾಧನೆಗೆ ತೃತೀಯ, 2011ರಲ್ಲಿ ಬೀದರ್ ನ ಪಾರಂಪರಿಕ ಕಲೆಯಾದ ಬಿದರಿ ಸ್ತಬ್ಧಚಿತ್ರಕ್ಕೆ ದ್ವಿತೀಯ ಮತ್ತು 2008ರಲ್ಲಿ ಹೋಯ್ಸಳ ವಾಸ್ತುಶಿಲ್ಪ ಕ್ಕೆ ದ್ವಿತೀಯ ಪ್ರಶಸ್ತಿ ಸಂದಿತ್ತು. 2005ರಲ್ಲಿ ವೈರಾಗ್ಯಮೂರ್ತಿ ಬಾಹುಬಲಿಯ ಮಹಾಮಸ್ತಕಾಭಿಷೇಕ ದ ಸ್ತಬ್ಧಚಿತ್ರಕ್ಕೆ ಪ್ರಥಮ ಪ್ರಶಸ್ತಿ ದೊರೆತಿತ್ತು. 2008ರಲ್ಲಿ ಹೊಯ್ಸಳ ಕಲೆಯ ಸ್ತಬ್ಧಚಿತ್ರವು ದ್ವಿತೀಯ ಪ್ರಶಸ್ತಿಯ ಜೊತೆಗೆ ಅತ್ಯುತ್ತಮ ನಿರೂಪಣೆ ಮತ್ತು ಅತ್ಯುತ್ತಮ ಫ್ಯಾಬ್ರಿಕೇಷನ್‍ಗಾಗಿ ಪ್ರಶಸ್ತಿ ಲಭಿಸಿತ್ತು. ಒಂದೇ ಸ್ತಬ್ಧಚಿತ್ರಕ್ಕಾಗಿ ಮೂರು ಪ್ರಶಸ್ತಿಗಳನ್ನು ಪಡೆದಂತಹ ಅಪರೂಪದ ಸಾಧನೆಯನ್ನು ನಮ್ಮ ರಾಜ್ಯವು ಮಾಡಿದೆ ಎನ್ನುವುದು ಹೆಮ್ಮೆಯ ಸಂಗತಿ ಎಂದು ಆಯುಕ್ತರು ತಿಳಿಸಿದ್ದಾರೆ.

Share. Facebook Twitter Pinterest LinkedIn Tumblr Email WhatsApp
Previous Article*ಶ್ರೀ ಆದಿ ಬೈತೂರಪ್ಪ ದೇವಾಲಯದಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ಎತ್ತು ಪೋರಾಟ್ ಹಾಗೂ ಅಕ್ಕಿ ಅಳೆಯುವ ಶಾಸ್ತ್ರ*
Next Article *ಮುಖ್ಯಮಂತ್ರಿಗಳಿಂದ ಪತ್ರಕರ್ತರ 40ನೇ ರಾಜ್ಯ ಸಮ್ಮೇಳನದ ಲೋಗೋ ಅನಾವರಣ*

Related Posts

*ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5657 ಪ್ರಕರಣಗಳು ಇತ್ಯರ್ಥ*

February 11, 2026

*ಕಾಯಕ ಶರಣರ ಜಯಂತಿ ಸಮ ಸಮಾಜ ನಿರ್ಮಾಣದಲ್ಲಿ ಕಾಯಕ ಶರಣರ ಕೊಡುಗೆ ಅಪಾರ: ಹೇಮಲತಾ*

February 10, 2026

*ಸೌಂದರ್ಯ ತಜ್ಞರು ನಿತ್ಯ ವ್ಯಾಯಾಮದೊಂದಿಗೆ ತಮ್ಮ ಆರೋಗ್ಯ ವೃದ್ಧಿಸಿಕೊಳ್ಳುವ ಬಗ್ಗೆ ಗಮನಹರಿಸಬೇಕು ಎಂದು ಅಂತರರಾಷ್ಟ್ರೀಯ ಬ್ಯಾಡ್ಮಿಂಟನ್ ಕ್ರೀಡಾಪಟು ತಾತಪಂಡ ಜ್ಯೋತಿ ಸೋಮಯ್ಯ ಕಿವಿಮಾತು ಹೇಳಿದರು*

February 10, 2026

*ಕಾಯಕ ಶರಣರ ಜಯಂತಿ ಸಮ ಸಮಾಜ ನಿರ್ಮಾಣದಲ್ಲಿ ಕಾಯಕ ಶರಣರ ಕೊಡುಗೆ ಅಪಾರ: ಹೇಮಲತಾ*

February 10, 2026

ಮಡಿಕೇರಿ,  NEWS DESK ಫೆ.10:-ಹನ್ನೆರಡನೇ ಶತಮಾನದಲ್ಲಿ ಬಸವಣ್ಣ ಅವರ ನೇತೃತ್ವದಲ್ಲಿ ಅನುಭವ ಮಂಟಪದಲ್ಲಿ ಹಲವು ಕಾಯಕ ಶರಣರು ವರ್ಣ ವ್ಯವಸ್ಥೆ,…

*ಸೌಂದರ್ಯ ತಜ್ಞರು ನಿತ್ಯ ವ್ಯಾಯಾಮದೊಂದಿಗೆ ತಮ್ಮ ಆರೋಗ್ಯ ವೃದ್ಧಿಸಿಕೊಳ್ಳುವ ಬಗ್ಗೆ ಗಮನಹರಿಸಬೇಕು ಎಂದು ಅಂತರರಾಷ್ಟ್ರೀಯ ಬ್ಯಾಡ್ಮಿಂಟನ್ ಕ್ರೀಡಾಪಟು ತಾತಪಂಡ ಜ್ಯೋತಿ ಸೋಮಯ್ಯ ಕಿವಿಮಾತು ಹೇಳಿದರು*

February 10, 2026

*ಮೈಸೂರು-ಕುಶಾಲನಗರ ರೈಲ್ವೆ ಯೋಜನೆ ಪುನಾರಂಭಿಸಲು ಅಶ್ವಿನ್‌ ವೈಷ್ಣವ್‌ಗೆ ಯದುವೀರ್‌ ಮನವಿ ಭೂ ಸ್ವಾಧೀನ ಪ್ರಕ್ರಿಯೆಗೆ ಚಾಲನೆ ನೀಡಲು ಕ್ರಮ ಕೈಗೊಳ್ಳಬೇಕೆಂದು ಸಂಸದರ ಪತ್ರ*

February 10, 2026

*ಕೊಡವ ಭಾಷೆಗೂ ಸಾಂವಿಧಾನಿಕ ಭದ್ರತೆ ನೀಡಬೇಕು : ಸಣ್ಣ ಸಣ್ಣ ಭಾಷೆಗಳನ್ನು ಹತ್ತಿಕಿದರೆ ಏಕತೆಗೆ ದಕ್ಕೆ : ಸಿಎನ್‌ಸಿ ಪ್ರತಿಪಾದನೆ*

February 10, 2026

*ಫೆ.14 ರಂದು ಕೊಡವ ಭವನ ಉದ್ಘಾಟನೆ*

February 10, 2026

*ಮಡಿಕೇರಿಯಲ್ಲಿ “ಆರೋಗ್ಯ ಹಕ್ಕಿನ ಜಾಥಾ”*

February 10, 2026

*ಕೊಡವ ಕುಟುಂಬಗಳ ನಡುವಣ “ಮುಲ್ಲೇಂಗಡ ಕಬಡ್ಡಿ ನಮ್ಮೆ”*

February 10, 2026

*104 ಮೊಬೈಲ್ ಫೋನ್‌ಗಳನ್ನು ವಾರಸುದಾರರಿಗೆ ಹಸ್ತಾಂತರಿಸಿದ ಕೊಡಗು ಜಿಲ್ಲಾ ಪೊಲೀಸ್*

February 10, 2026

*ತಾಲ್ಲೂಕು ಮಟ್ಟದ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ನೀಡಲು ಅರ್ಜಿ ಆಹ್ವಾನ*

February 10, 2026

*ಫೆ.15ರಂದು ಗೌಡ ಜನಾಂಗಗಳ ಜಿಲ್ಲಾ ಮಟ್ಟದ ಕ್ಯಾರಂಬೋರ್ಡ್ ಕ್ರೀಡಾಕೂಟ : ಏಪ್ರಿಲ್ ನಲ್ಲಿ ಟೆನ್ನಿಸ್ ಬಾಲ್ ಕ್ರಿಕೆಟ್*

February 10, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.