
ಮಡಿಕೇರಿ ನ.23 NEWS DESK : ಜಿಲ್ಲಾ ಮಕ್ಕಳ ವಿಶೇಷ ಪೊಲೀಸ್ ಘಟಕದ ಅಧಿಕಾರಿ ಮತ್ತು ಸಿಬ್ಬಂದಿಗಳು ಮಡಿಕೇರಿಯ ದೇವರಾಜ್ ಅರಸು ಹಿಂದುಳಿದ ವರ್ಗಗಳ ಮೆಟ್ರಿಕ್ ನಂತರದ ಬಾಲಕಿಯರ ಹಾಸ್ಟೆಲಿಗೆ ಭೇಟಿ ನೀಡಿ ವಿದ್ಯಾರ್ಥಿಗಳಿಗೆ ಸೈಬರ್ ಕ್ರೈಂ, ಮಾದಕ ವಸ್ತು, ಬಾಲ್ಯ ವಿವಾಹ, ಅಕ್ಕ ಪಡೆ ಮುಂತಾದ ವಿಷಯಗಳ ಬಗ್ಗೆ ಕಾನೂನು ಅರಿವು ಮೂಡಿಸಿದರು.









