
ಬೆಂಗಳೂರು ನ.23 NEWS DESK : ವಿಧಾನಸೌಧದ ಪೂರ್ವ ದಿಕ್ಕಿನಲ್ಲಿ ಮರುಪ್ರತಿಷ್ಠಾಪನೆ ಮಾಡಿರುವ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಪ್ರತಿಮೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಲೋಕಾರ್ಪಣೆಗೊಳಿಸಿ, ನೇತಾಜಿ ಅವರ ಜನ್ಮದಿನದ ಅಂಗವಾಗಿ ಅವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ, ವಂದಿಸಿದರು. ಶಾಸಕರಾದ ರಿಜ್ವಾನ್ ಅರ್ಷದ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್ ಸೇರಿ ಹಲವು ಗಣ್ಯರು ಉಪಸ್ಥಿತರಿದ್ದರು.









