Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5657 ಪ್ರಕರಣಗಳು ಇತ್ಯರ್ಥ*
  • *ಕಾಯಕ ಶರಣರ ಜಯಂತಿ ಸಮ ಸಮಾಜ ನಿರ್ಮಾಣದಲ್ಲಿ ಕಾಯಕ ಶರಣರ ಕೊಡುಗೆ ಅಪಾರ: ಹೇಮಲತಾ*
  • *ಸೌಂದರ್ಯ ತಜ್ಞರು ನಿತ್ಯ ವ್ಯಾಯಾಮದೊಂದಿಗೆ ತಮ್ಮ ಆರೋಗ್ಯ ವೃದ್ಧಿಸಿಕೊಳ್ಳುವ ಬಗ್ಗೆ ಗಮನಹರಿಸಬೇಕು ಎಂದು ಅಂತರರಾಷ್ಟ್ರೀಯ ಬ್ಯಾಡ್ಮಿಂಟನ್ ಕ್ರೀಡಾಪಟು ತಾತಪಂಡ ಜ್ಯೋತಿ ಸೋಮಯ್ಯ ಕಿವಿಮಾತು ಹೇಳಿದರು*
  • *ಮೈಸೂರು-ಕುಶಾಲನಗರ ರೈಲ್ವೆ ಯೋಜನೆ ಪುನಾರಂಭಿಸಲು ಅಶ್ವಿನ್‌ ವೈಷ್ಣವ್‌ಗೆ ಯದುವೀರ್‌ ಮನವಿ ಭೂ ಸ್ವಾಧೀನ ಪ್ರಕ್ರಿಯೆಗೆ ಚಾಲನೆ ನೀಡಲು ಕ್ರಮ ಕೈಗೊಳ್ಳಬೇಕೆಂದು ಸಂಸದರ ಪತ್ರ*
  • *ಕೊಡವ ಭಾಷೆಗೂ ಸಾಂವಿಧಾನಿಕ ಭದ್ರತೆ ನೀಡಬೇಕು : ಸಣ್ಣ ಸಣ್ಣ ಭಾಷೆಗಳನ್ನು ಹತ್ತಿಕಿದರೆ ಏಕತೆಗೆ ದಕ್ಕೆ : ಸಿಎನ್‌ಸಿ ಪ್ರತಿಪಾದನೆ*
  • *‘ಜಂತು ಹುಳು ರಹಿತ ಮಕ್ಕಳು – ಆರೋಗ್ಯವಂತ ಮಕ್ಕಳು’ ರಾಷ್ಟ್ರೀಯ ಜಂತು ಹುಳು ನಿವಾರಣಾ ಕಾರ್ಯಕ್ರಮ*
  • *ಫೆ.14 ರಂದು ಕೊಡವ ಭವನ ಉದ್ಘಾಟನೆ*
  • *ಮಡಿಕೇರಿಯಲ್ಲಿ “ಆರೋಗ್ಯ ಹಕ್ಕಿನ ಜಾಥಾ”*
  • *ಕೊಡವ ಕುಟುಂಬಗಳ ನಡುವಣ “ಮುಲ್ಲೇಂಗಡ ಕಬಡ್ಡಿ ನಮ್ಮೆ”*
  • *104 ಮೊಬೈಲ್ ಫೋನ್‌ಗಳನ್ನು ವಾರಸುದಾರರಿಗೆ ಹಸ್ತಾಂತರಿಸಿದ ಕೊಡಗು ಜಿಲ್ಲಾ ಪೊಲೀಸ್*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ವಿರಾಜಪೇಟೆಯಲ್ಲಿ ವರ್ತಕರ ಸಭೆ : ರಸ್ತೆ ಅಭಿವೃದ್ಧಿ ಕುರಿತು ಶಾಸಕ ಎ.ಎಸ್.ಪೊನ್ನಣ್ಣಗೆ ಮನವಿ ಸಲ್ಲಿಸಲು ತೀರ್ಮಾನ*
ಇತ್ತೀಚಿನ ಸುದ್ದಿಗಳು

*ವಿರಾಜಪೇಟೆಯಲ್ಲಿ ವರ್ತಕರ ಸಭೆ : ರಸ್ತೆ ಅಭಿವೃದ್ಧಿ ಕುರಿತು ಶಾಸಕ ಎ.ಎಸ್.ಪೊನ್ನಣ್ಣಗೆ ಮನವಿ ಸಲ್ಲಿಸಲು ತೀರ್ಮಾನ*

January 23, 20262 Mins Read
Share
Facebook Twitter LinkedIn Pinterest WhatsApp Email

ವಿರಾಜಪೇಟೆ ಜ.23 NEWS DESK : ವಿರಾಜಪೇಟೆ ಗಡಿಯಾರ ಕಂಬದಿಂದ ಖಾಸಗಿ ಬಸ್ಸು ನಿಲ್ದಾಣದವರೆಗೆ ಏಕಮುಖ ಸಂಚಾರವೇ ಇರಲಿ. ಅಭಿವೃದ್ಧಿ ಹೆಸರಿನಲ್ಲಿ ದ್ವಿಮುಖ ಸಂಚಾರ ವ್ಯವಸ್ಥೆ ಮಾಡಿದರೆ ವರ್ತಕರಿಗೆ ವ್ಯಾಪಾರ ವಹಿವಾಟು ಸಮಸ್ಯೆಯಾಗುತ್ತದೆ ಎಂದು 200ಕ್ಕೂ ಅಧಿಕ ಮಂದಿ ವರ್ತಕರು ಸಾಮೂಹಿಕವಾಗಿ ಸಭೆ ನಡೆಸಿ ವಿರಾಜಪೇಟೆ ಶಾಸಕರು, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಿಗೆ ಮನವಿ ಸಲ್ಲಿಸಲು ತೀರ್ಮಾನಿಸಲಾಯಿತು. ವಿರಾಜಪೇಟೆಯ ಹಿಲ್‍ಪ್ಯಾಲೆಸ್ ಹೋಟೆಲ್ ಸಭಾಂಗಣದಲ್ಲಿ ನಡೆದ ವರ್ತಕರ ಸಭೆಯಲ್ಲಿ ರಸ್ತೆ ಅಭಿವೃದ್ಧಿಗೆ ನಮ್ಮ ವಿರೋಧವಿಲ್ಲ. ಅಭಿವೃದ್ಧಿಯ ಜೊತೆಗೆ ಏಕಮುಖ ಸಂಚಾರ ವ್ಯವಸ್ಥೆ ಇದ್ದು ವಾಹನ ನಿಲುಗಡೆಗೆ ಪರ್ಯಾಯ ವ್ಯವಸ್ಥೆ ಮಾಡಬೇಕು, ವರ್ತಕರು ಹಾಗೂ ಮಾಲೀಕರು ತಮ್ಮ ವಾಹನಗಳನ್ನು ರಸ್ತೆ ಬದಿ ನಿಲುಗಡೆ ಮಾಡದೆ ಸಹಕರಿಸುವಂತೆ ತೀರ್ಮಾನಿಸಲಾಯಿತು. ವಿರಾಜಪೇಟೆ ವರ್ತಕ, ವಿರಾಜಪೇಟೆ ವರ್ತಕರ ಸಂಘದ ಅಧ್ಯಕ್ಷ ಪಿ.ಎ.ಮಂಜುನಾಥ್ ಮಾತನಾಡಿ, ದ್ವಿಮುಖ ಸಂಚಾರ ಮಾಡುವುದು, ರಸ್ತೆ ಬದಿಯಲ್ಲಿ ವಾಹನ ನಿಲುಗಡೆಗೆ ಅವಕಾಶವಿಲ್ಲ ಎಂಬ ವಿಚಾರಕ್ಕೆ ಸಭೆ ಸೇರಿ ಒಮ್ಮತದ ತೀರ್ಮಾನ ತೆಗೆದುಕೊಂಡು ಗಡಿಯಾರ ಕಂಬದಿಂದ ಖಾಸಗಿ ಬಸ್ ನಿಲ್ದಾಣದ ರಸ್ತೆಯಲ್ಲಿ ಬೆಳಿಗ್ಗೆಯಿಂದ ಸಂಜೆವರೆಗೆ ಅಂಗಡಿ ಮಾಲೀಕರು ತಮ್ಮ ವಾಹನವನ್ನು ನಿಲುಗಡೆ ಮಾಡದಂತೆ ತೀರ್ಮಾನ ತೆಗೆದುಕೊಂಡಿದ್ದೇವೆ, ವ್ಯಾಪಾರ ವಹಿವಾಟು ಹೆಚ್ಚಾಗುವ ಸಂದರ್ಭದಲ್ಲಿ ವಾಹನ ನಿಲುಗಡೆಗೆ ಅವಕಾಶವಿಲ್ಲದಿದ್ದರೆ ವರ್ತಕರಿಗೆ ಸಮಸ್ಯೆಯಾಗಲಿದೆ ಎಂಬುವುದನ್ನು ಮತ್ತೊಮ್ಮೆ ಶಾಸಕರ ಗಮನಕ್ಕೆ ತರುವ ಪ್ರಯತ್ನ ಮಾಡುತ್ತೇವೆ. ವಿರಾಜಪೇಟೆ ಪುರಸಭೆ ವ್ಯಾಪ್ತಿಯಲ್ಲಿ ಪಾರ್ಕಿಂಗ್ ಸಮಸ್ಯೆ ರಸ್ತೆಗಳು ರಸ್ತೆಗಳು ಕಿರಿದಾಗಿರುವುದು ನಿಜ. ರಸ್ತೆ ಅಗಲೀಕರಣ ಹಾಗೂ ಅಭಿವೃದ್ಧಿಗೆ ನಮ್ಮ ಅಡ್ಡಿ ಇಲ್ಲ. ರಸ್ತೆ ಅಗಲೀಕರಣ ಮಾಡುವಾಗ ಕಟ್ಟಡದ ಮಾಲೀಕರನ್ನು ಗಣನೆಗೆ ತೆಗೆದುಕೊಂಡು ಪರಿಹಾರ ನೀಡಿ ರಸ್ತೆ ಅಗಲೀಕರಣ ಮಾಡುವುದರಲ್ಲಿ ನಮ್ಮ ಅಭ್ಯಂತರ ಇಲ್ಲ. ಪಾರ್ಕಿಂಗ್ ಸಮಸ್ಯೆ ಇದ್ದರೆ ಅದಕ್ಕೆ ಪರ್ಯಾಯ ವ್ಯವಸ್ಥೆ ಅಂದರೆ ವಿರಾಜಪೇಟೆ ಪುರಸಭೆ ವ್ಯಾಪ್ತಿಯಲ್ಲಿ ಅಧಿಕಾರಿಗಳು ಅಥವಾ ಜಾಗದ ಮಾಲೀಕರು ಖಾಲಿ ಜಾಗಗಳಲ್ಲಿ ಪೆ ಅಂಡ್ ಪಾರ್ಕ್ ವ್ಯವಸ್ಥೆ ಮಾಡಬೇಕು. ಮುಖ್ಯರಸ್ತೆ ಬಿಟ್ಟು ಹಣ ನೀಡಿ ಪಾರ್ಕಿಂಗ್ ಮಾಡುವ ವ್ಯವಸ್ಥೆ ಜಾರಿಗೊಳಿಸಬೇಕು ಎಂದರು. ಅದೇ ರೀತಿ ವಿರಾಜಪೇಟೆ ಕ್ಷೇತ್ರದ ಶಾಸಕರಾದ ಎ.ಎಸ್.ಪೆÇನ್ನಣ್ಣ ಏನೇ ತೀರ್ಮಾನ ತೆಗೆದುಕೊಂಡರು ವರ್ತಕರನ್ನು ಗಣನೆಗೆ ತೆಗೆದುಕೊಂಡು ತೀರ್ಮಾನಿಸಲಾಗುವುದು ಎಂದು ಈಗಾಗಲೇ ವರ್ತಕರಿಗೆ ಭರವಸೆ ನೀಡಿದ್ದಾರೆ. ಆದರೂ ಸರ್ವ ವರ್ತಕರು ಒಗ್ಗೂಡಿ ಶಾಸಕರನ್ನು ಮತ್ತೊಮ್ಮೆ ಭೇಟಿ ಮಾಡಿ ಶಾಸಕರಿಗೆ ಮತ್ತೊಮ್ಮೆ ಮನವಿ ಸಲ್ಲಿಸಲಾಗುವುದು ಎಂದರು. ವರ್ತಕರ ಸಂಘದ ನಿರ್ದೇಶಕ ಸಕ್ಸೆಸ್ ಮೆನ್ಸ್ ಹಬ್‍ನ ಮಾಲೀಕ ಆರ್.ಸುರೇಶ್ ಮಾತನಾಡಿ, ಜನವರಿಯಿಂದ ಮೇ ವರೆಗೆ ವ್ಯಾಪಾರದ ಸೀಸನ್ ಆಗಿರುವುದರಿಂದ ಈ ಸಂದರ್ಭದಲ್ಲಿ ಪಾರ್ಕಿಂಗ್ ನಿರಾಕರಿಸಿ ದ್ವಿಮುಖ ಸಂಚಾರ ಮಾಡಿದರೆ ವ್ಯಾಪಾರಸ್ಥರು ತೀವ್ರ ನಷ್ಟ ಅನುಭವಿಸುವ ಪರಿಸ್ಥಿತಿ ಎದುರಾಗಲಿದೆ. ವಿರಾಜಪೇಟೆಯಲ್ಲಿ ನಡೆಯುವಂತಹ ಅಭಿವೃದ್ಧಿ ಕೆಲಸ ಕಾರ್ಯಗಳಿಗೆ ನಮ್ಮ ಅಭ್ಯಂತರವಿಲ್ಲ, ಅಂಗಡಿ ಮಾಲೀಕರಿಗೂ ತೊಂದರೆಯಾಗದಂತೆ ಕೆಲಸ ಮಾಡಬೇಕು. ಅಧಿಕಾರಿಗಳು, ಸಂಬಂಧಪಟ್ಟವರು ಮರು ಪರಿಶೀಲನೆ ಮಾಡಬೇಕು ಎಂದರು. ಈ ಸಂದರ್ಭದಲ್ಲಿ ವಿರಾಜಪೇಟೆಯ ಹ್ಯಾಪಿ ಶಾಪಿಂಗ್ ಹಬ್, ಅಭಿಲಾಷ್ ಸ್ಟೋರ್, ಲೋರ ಲೇಡೀಸ್ ಶಾಪ್, ಚಿಲ್ದ್ರನ್ಸ್ ಪಾರ್ಕ್, ಫ್ಯಾಮಿಲಿ ಫ್ಯಾಷನ್, ಕೂರ್ಗ್ ಟ್ರೇಡಿಷನಲ್ ಶಾಪ್, ಅಭಿಷೇಕ್ ಸೆಲೆಕ್ಷನ್, ವಿಶಾಲ್ ಗಾರ್ಮೆಂಟ್ಸ್, ವಿಷ್ಣು ಗಾರ್ಮೆಂಟ್ಸ್, ಕಾವೇರಿ ಫರ್ನಿಚರ್, ಮೂನ್ ವಾಕ್ ಶಾಪ್, ಫೇಬ್ರಿಕ್ ಹೌಸ್ ಶಾಪ್, ಇನ್ನಿತರ ಸುಮಾರು 80ಕ್ಕೂ ಹೆಚ್ಚು ಅಂಗಡಿ ಮಾಲೀಕರು ಸಭೆಯಲ್ಲಿ ಭಾಗವಹಿಸಿದ್ದರು.

 

Share. Facebook Twitter Pinterest LinkedIn Tumblr Email WhatsApp
Previous Article*ಅಬಾಕಸ್ ಮತ್ತು ಕ್ಯಾಲಿಗ್ರಫಿ ಸ್ಪರ್ಧೆ : ಕುಶಾಲನಗರ ರೋಟರಿ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳ ಸಾಧನೆ*
Next Article *ಕ್ರೀಡಾ ವಸತಿ ನಿಲಯ 5ನೇ ತರಗತಿ ಪ್ರವೇಶ : ಫೆ.5 ರಿಂದ ಕ್ರೀಡಾಪಟುಗಳ ಆಯ್ಕೆ ಪ್ರಕ್ರಿಯೆ*

Related Posts

*ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5657 ಪ್ರಕರಣಗಳು ಇತ್ಯರ್ಥ*

February 11, 2026

*ಕಾಯಕ ಶರಣರ ಜಯಂತಿ ಸಮ ಸಮಾಜ ನಿರ್ಮಾಣದಲ್ಲಿ ಕಾಯಕ ಶರಣರ ಕೊಡುಗೆ ಅಪಾರ: ಹೇಮಲತಾ*

February 10, 2026

*ಸೌಂದರ್ಯ ತಜ್ಞರು ನಿತ್ಯ ವ್ಯಾಯಾಮದೊಂದಿಗೆ ತಮ್ಮ ಆರೋಗ್ಯ ವೃದ್ಧಿಸಿಕೊಳ್ಳುವ ಬಗ್ಗೆ ಗಮನಹರಿಸಬೇಕು ಎಂದು ಅಂತರರಾಷ್ಟ್ರೀಯ ಬ್ಯಾಡ್ಮಿಂಟನ್ ಕ್ರೀಡಾಪಟು ತಾತಪಂಡ ಜ್ಯೋತಿ ಸೋಮಯ್ಯ ಕಿವಿಮಾತು ಹೇಳಿದರು*

February 10, 2026

*ಕಾಯಕ ಶರಣರ ಜಯಂತಿ ಸಮ ಸಮಾಜ ನಿರ್ಮಾಣದಲ್ಲಿ ಕಾಯಕ ಶರಣರ ಕೊಡುಗೆ ಅಪಾರ: ಹೇಮಲತಾ*

February 10, 2026

ಮಡಿಕೇರಿ,  NEWS DESK ಫೆ.10:-ಹನ್ನೆರಡನೇ ಶತಮಾನದಲ್ಲಿ ಬಸವಣ್ಣ ಅವರ ನೇತೃತ್ವದಲ್ಲಿ ಅನುಭವ ಮಂಟಪದಲ್ಲಿ ಹಲವು ಕಾಯಕ ಶರಣರು ವರ್ಣ ವ್ಯವಸ್ಥೆ,…

*ಸೌಂದರ್ಯ ತಜ್ಞರು ನಿತ್ಯ ವ್ಯಾಯಾಮದೊಂದಿಗೆ ತಮ್ಮ ಆರೋಗ್ಯ ವೃದ್ಧಿಸಿಕೊಳ್ಳುವ ಬಗ್ಗೆ ಗಮನಹರಿಸಬೇಕು ಎಂದು ಅಂತರರಾಷ್ಟ್ರೀಯ ಬ್ಯಾಡ್ಮಿಂಟನ್ ಕ್ರೀಡಾಪಟು ತಾತಪಂಡ ಜ್ಯೋತಿ ಸೋಮಯ್ಯ ಕಿವಿಮಾತು ಹೇಳಿದರು*

February 10, 2026

*ಮೈಸೂರು-ಕುಶಾಲನಗರ ರೈಲ್ವೆ ಯೋಜನೆ ಪುನಾರಂಭಿಸಲು ಅಶ್ವಿನ್‌ ವೈಷ್ಣವ್‌ಗೆ ಯದುವೀರ್‌ ಮನವಿ ಭೂ ಸ್ವಾಧೀನ ಪ್ರಕ್ರಿಯೆಗೆ ಚಾಲನೆ ನೀಡಲು ಕ್ರಮ ಕೈಗೊಳ್ಳಬೇಕೆಂದು ಸಂಸದರ ಪತ್ರ*

February 10, 2026

*ಕೊಡವ ಭಾಷೆಗೂ ಸಾಂವಿಧಾನಿಕ ಭದ್ರತೆ ನೀಡಬೇಕು : ಸಣ್ಣ ಸಣ್ಣ ಭಾಷೆಗಳನ್ನು ಹತ್ತಿಕಿದರೆ ಏಕತೆಗೆ ದಕ್ಕೆ : ಸಿಎನ್‌ಸಿ ಪ್ರತಿಪಾದನೆ*

February 10, 2026

*ಫೆ.14 ರಂದು ಕೊಡವ ಭವನ ಉದ್ಘಾಟನೆ*

February 10, 2026

*ಮಡಿಕೇರಿಯಲ್ಲಿ “ಆರೋಗ್ಯ ಹಕ್ಕಿನ ಜಾಥಾ”*

February 10, 2026

*ಕೊಡವ ಕುಟುಂಬಗಳ ನಡುವಣ “ಮುಲ್ಲೇಂಗಡ ಕಬಡ್ಡಿ ನಮ್ಮೆ”*

February 10, 2026

*104 ಮೊಬೈಲ್ ಫೋನ್‌ಗಳನ್ನು ವಾರಸುದಾರರಿಗೆ ಹಸ್ತಾಂತರಿಸಿದ ಕೊಡಗು ಜಿಲ್ಲಾ ಪೊಲೀಸ್*

February 10, 2026

*ತಾಲ್ಲೂಕು ಮಟ್ಟದ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ನೀಡಲು ಅರ್ಜಿ ಆಹ್ವಾನ*

February 10, 2026

*ಫೆ.15ರಂದು ಗೌಡ ಜನಾಂಗಗಳ ಜಿಲ್ಲಾ ಮಟ್ಟದ ಕ್ಯಾರಂಬೋರ್ಡ್ ಕ್ರೀಡಾಕೂಟ : ಏಪ್ರಿಲ್ ನಲ್ಲಿ ಟೆನ್ನಿಸ್ ಬಾಲ್ ಕ್ರಿಕೆಟ್*

February 10, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.