
ಮಡಿಕೇರಿ ಜ.24 NEWS DESK : ಬೆಂಗಳೂರಿನಲ್ಲಿ ನಡೆದ ರಾಜ್ಯ ಮಟ್ಟದ ಪೊಲೀಸ್ ಕ್ರೀಡಾ ಕೂಟದಲ್ಲಿ 45+ ವಿಭಾಗದ 100 ಮೀ ಮತ್ತು 200 ಮೀ ಓಟದ ಸ್ಪರ್ಧೆಯಲ್ಲಿ ಜಿಲ್ಲಾ ನಿಸ್ತಂತು ಕೇಂದ್ರದ ಎಎಸ್‌ಐ ಜೋಷಿ ಪ್ರಥಮ ಸ್ಥಾನ ಗೆದ್ದುಕೊಂಡಿದ್ದಾರೆ. ಇವರನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಎನ್.ಬಿಂದುಮಣಿ ಅವರು ಜಿಲ್ಲಾ ಪೊಲೀಸ್ ಅಧೀಕ್ಷಕರ ಕಚೇರಿಯಲ್ಲಿ ಅಭಿನಂದಿಸಿದರು.









