
ನಾಪೋಕ್ಲು ಜ.24 NEWS DESK : ಚೆರಿಯ ಪರಂಬು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸ್ಥಳ ದಾನಿ ಪಿ.ಪಿ.ಮೋಹಿದಿನ್ ಹಾಜಿ ಅವರಿಗೆ ಪುಷ್ಪ ನಮನದೊಂದಿಗೆ ಶ್ರದ್ಧಾಂಜಲಿ ಅರ್ಪಿಸಲಾಯಿತು. ಶಾಲೆಯ ಅಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ರಶೀದ್ ಅವರು ಶ್ರದ್ಧಾಂಜಲಿ ಸಭೆಯ ಅಧ್ಯಕ್ಷತೆ ವಹಿಸಿ ಮೋಹಿದೀನ್ ಹಾಜಿ ಅವರ ನಿಸ್ವಾರ್ಥ ಸೇವೆಗೆ ಪ್ರಸಂಸೆ ವ್ಯಕ್ತಪಡಿಸಿದರು. ಅವರ ಆದರ್ಶಗಳನ್ನು ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಮೈಗೂಡಿಸಿಕೊಳ್ಳಬೇಕು ಎಂದರು. ಚರಿಯಪರಂಬುವಿನಲ್ಲಿ ಮೋಹಿದಿನ್ ಹಾಜಿ ಅವರು 1975 ರಲ್ಲಿ ಚರಿಯ ಪರಂಬು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ 25 ಸೆಂಟ್ ಜಾಗವನ್ನು ದಾನವಾಗಿ ನೀಡಿ ವಿದ್ಯಾರ್ಥಿಗಳಿಗೆ ಬಟ್ಟೆ, ಪುಸ್ತಕವನ್ನು ಉದಾರವಾಗಿ ನೀಡಿ ವಿದ್ಯಾರ್ಜನೆಗೆ ಸಹಕರಿಸಿದ್ದರು . ಅವರು ಶನಿವಾರ ನಿಧನರಾಗಿದ್ದು ಅವರ ಆತ್ಮಕ್ಕೆ ಶಾಂತಿಯನ್ನು ಕೋರಿ ಚೆರಿಯ ಪರಂಬು ಸರ್ಕಾರಿ ಶಾಲೆಯಲ್ಲಿ ಶಾಲೆಯ ಆಡಳಿತ ಮಂಡಳಿ, ಅಂಗನವಾಡಿ ಕೇಂದ್ರ ,ಹಳೆಯ ವಿದ್ಯಾರ್ಥಿ ಸಂಘ ಹಾಗೂ ವಿದ್ಯಾರ್ಥಿಗಳು ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಗೌರವ ಸಲ್ಲಿಸಿದರು. ಈ ಸಂದರ್ಭ ಶಾಲೆಯ ಮುಖ್ಯ ಶಿಕ್ಷಕಿ ಶಾರದ, ನಿವೃತ್ತ ಶಿಕ್ಷಕ ಧರ್ಮೇಂದ್ರ, ಭವಾನಿ, ಲೀಲಾವತಿ, ರುಕ್ಕಿಯ ,ಆಶಾಲತಾ ಆಡಳಿತ ಮಂಡಳಿ ಪದಾಧಿಕಾರಿಗಳು, ಹಳೆಯ ವಿದ್ಯಾರ್ಥಿಗಳು ,ಅಂಗನವಾಡಿ ಕಾರ್ಯಕರ್ತೆಯರು ,ಶಿಕ್ಷಕರು, ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.
ವರದಿ : ದುಗ್ಗಳ ಸದಾನಂದ









