Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*
  • *ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*
  • *ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*
  • *ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*
  • *ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*
  • *ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*
  • *2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*
  • *ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*
  • *ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*
  • *ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಶರಣ ಸಾಹಿತ್ಯ ಪರಿಷತ್ತಿನ ವಿಚಾರ ಸಂಕಿರಣ ಉದ್ಘಾಟನೆ : ಕನ್ನಡ ಭಾಷೆಗೆ ಜಾಗತಿಕಮನ್ನಣೆ ತಂದುಕೊಟ್ಟ ವಿಶ್ವಚೇತನ ಡಾ.ಕುವೆಂಪು : ಹರಪಳ್ಳಿ ರವೀಂದ್ರ ಶ್ಲಾಘನೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಶರಣ ಸಾಹಿತ್ಯ ಪರಿಷತ್ತಿನ ವಿಚಾರ ಸಂಕಿರಣ ಉದ್ಘಾಟನೆ : ಕನ್ನಡ ಭಾಷೆಗೆ ಜಾಗತಿಕಮನ್ನಣೆ ತಂದುಕೊಟ್ಟ ವಿಶ್ವಚೇತನ ಡಾ.ಕುವೆಂಪು : ಹರಪಳ್ಳಿ ರವೀಂದ್ರ ಶ್ಲಾಘನೆ*

ಜನವರಿ 24, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಸೋಮವಾರಪೇಟೆ ಜ.24 NEWS DESK : ಏಳು ದಶಕಗಳ ನಿರಂತರ ಅಧ್ಯಯನ, ಸಂಶೋಧನೆ ಹಾಗೂ ಬರಹಗಳ ಮೂಲಕ ಕನ್ನಡ ಭಾಷೆಗೆ ಜಾಗತಿಕ ಮನ್ನಣೆ ತಂದು ಕೊಟ್ಟ ವಿಶ್ವ ಕವಿ ಡಾ.ಕುವೆಂಪು ಕನ್ನಡ ಸಾಹಿತ್ಯ ಮರೆಯಲಾರದ ಮಾಣಿಕ್ಯ ಎಂದು ರಾಜ್ಯ ಒಕ್ಕಲಿಗ ಸಮಾಜದ ಕೊಡಗು ಜಿಲ್ಲಾ ನಿರ್ದೇಶಕರೂ ಆದ ಸಮಾಜ ಸೇವಕ ಹರಪಳ್ಳಿ ರವೀಂದ್ರ ಶ್ಲಾಘಿಸಿದರು.  ಕೊಡಗು ಜಿಲ್ಲಾ ಶರಣ ಸಾಹಿತ್ಯ ಪರಿಷತ್ತು ಹಾಗೂ ತೋಳೂರು ಶೆಟ್ಟಳ್ಳಿಯ ಡಾ.ಬಿ.ಆರ್.ಅಂಬೇಡ್ಕರ್ ವಿದ್ಯಾರ್ಥಿನಿಯರ ವಸತಿ ಶಾಲೆಯ ಜಂಟಿ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ” ರಾಷ್ಟ್ರಕವಿ ಕುವೆಂಪು – ವಿಚಾರಧಾರೆ ” ಗಳ ಕುರಿತಾದ ವಿಚಾರ ಸಂಕಿರಣ ಉದ್ಘಾಟಿಸಿ ಮಾತನಾಡಿದ ಅವರು, ಕುವೆಂಪು ಅವರು ತಮ್ಮ ಜೀವನದುದ್ದಕ್ಕೂ ಪರಿಸರ, ಪ್ರಾಣಿ – ಪಕ್ಷಿ, ಗಿಡ – ಮರಗಳನ್ನು ಒಡಗೂಡಿದ ಪ್ರಕೃತಿಯನ್ನು ಆರಾಧಿಸಿದರು. ಪರಿಸರ ಪ್ರಕೃತಿ ಸಂರಕ್ಷಣೆಯ ಮಹತ್ವ ಸಾರಿದರು. ಆ ಮೂಲಕ ಗುಡಿ ಗೋಪುರ ಮಸೀದಿ ಮಂದಿರಗಳನ್ನು ಬಿಟ್ಟು ಹೊರ ಬನ್ನಿ ಎಂದು ಸಾರಿದ ಮಹಾಮಹಿಮ ಎಂದರು. ಯಡೂರು ಸರ್ಕಾರಿ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿಯೂ ಆದ ಸೋಮವಾರಪೇಟೆ ಸಾಹಿತಿ ಎಲ್.ಎಂ.ಪ್ರೇಮ ಮಾತನಾಡಿ, ಜಾತಿ, ಮತ- ಪಂಥಗಳ ಬೇಲಿಯನ್ನು ದಾಟಿ ನಿಜವಾದ ಮನುಷ್ಯರಾಗುವ ಜೀವನದ ಪಾಠವನ್ನು ಕಲಿಸಿದ ಯುಗದ ಕವಿ ಸಾಹಿತ್ಯ ಸೇವೆಯ ತಪಸ್ವಿ ಕುವೆಂಪು ಕರುನಾಡಿನ ಮಹಾ ಜ್ಯೋತಿಯಾಗಿ ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ಹೊಸ ಬೆಳಕು ಮೂಡಿಸಿದವರು.
ಬರೆದಂತೆ ಬದುಕಿದ ಜ್ಞಾನದ ಶಿಖರವೇರಿದ ಕನ್ನಡ ನೆಲದ ಮಹಾ ತಪಸ್ವಿ ಡಾ.ಕುವೆಂಪು ದೇಶಕ್ಕೆ ಹೆಮ್ಮೆ ಎಂದರು. ಗಡಿ ನಾಡು ಕೊಡಗು ಜಿಲ್ಲೆಯಲ್ಲಿ ಪರಭಾಷೆಗಳ ಅಟ್ಟಹಾಸಕ್ಕೆ ಆಸ್ಪದ ನೀಡದೇ ಕನ್ನಡ ಭಾಷೆಯನ್ನು ಶ್ರೀಮಂತಗೊಳಿಸುತ್ತಿರುವ ನಾಡಿನ ಸಾಹಿತ್ಯ ಕ್ಷೇತ್ರಕ್ಕೆ ಕುವೆಂಪು ನಿತ್ಯವೂ ಸ್ಪೂರ್ತಿಯ ಸೆಲೆಯಾಗಿದ್ದಾರೆ ಎಂದು ಪ್ರೇಮ ಹೇಳಿದರು. ಬ್ರಟಿಷ್ ಕವಿ ಜೇಮ್ಸ್ ಕಸಿನ್ಸ್ ಎಂಬವರು ಅಂದು ಕುವೆಂಪು ಅವರ ಸಾಹಿತ್ಯ ಸೇವೆಯನ್ನು ಶ್ಲಾಘಿಸದೇ ಇದ್ದಿದ್ದಲ್ಲಿ ಇವತ್ತು ಕನ್ನಡ ನಾಡು ಇಂತಹ ಶ್ರೇಷ್ಠ ಕವಿಯನ್ನು ಕಾಣುತ್ತಿರಲಿಲ್ಲ ಎಂದು ಹೆಮ್ಮೆ ವ್ಯಕ್ತ ಪಡಿಸಿದರು. ಡಾ.ಅಂಬೇಡ್ಕರ್ ವಸತಿ ಶಾಲಾ ಪ್ರಾಂಶುಪಾಲ ಚಂದ್ರಶೇಖರ ರೆಡ್ಡಿ ಅಧ್ಯಕ್ಷತೆ ವಹಿಸಿ ಮಾತನಾಡಿ, ನಾಡು ಕಂಡ ದಾರ್ಶನಿಕ, ತತ್ವಜ್ಞಾನಿ ಡಾ.ಕುಪ್ಪಳ್ಳಿ ವೆಂಕಟಪ್ಪ ಪುಟ್ಟಪ್ಪ ಅವರ ಸ್ಮರಣೆ ಕನ್ನಡ ನಾಡಿನಲ್ಲಿ ನಿತ್ಯವೂ ನಡೆಯಬೇಕು ಎಂದರು. ಕೊಡಗು ಜಿಲ್ಲಾ ಶರಣ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಕೆ.ಎಸ್.ಮೂರ್ತಿ ಪ್ರಾಸ್ತಾವಿಕ ನುಡಿಗಳಾಡಿದರು.
ಶಿಕ್ಷಕರಾದ ಕೀರ್ತಿ, ಪೂಜಾ, ಅರ್ಪಿತಾ, ರಮ್ಯಾ ಮೊದಲಾದವರಿದ್ದರು. ಇದೇ ಸಂದರ್ಭ ಕುವೆಂಪು ರಚಿತ ಹಾಡುಗಳಿಗೆ ಶಾಲಾ ವಿದ್ಯಾರ್ಥಿನಿಯರಿಂದ ವೈವಿಧ್ಯಮಯ ನೃತ್ಯ ಪ್ರಾಕಾರಗಳು ನಡೆದವು. ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ರಂಗೋಲಿ ಸ್ಪರ್ಧೆಯಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆಯಾದ ಶಾಲಾ ವಿದ್ಯಾರ್ಥಿನಿ ಪುಣ್ಯ ಆಚಾರ್ ಅವರನ್ನು ಸನ್ಮಾನಿಸಲಾಯಿತು. ಶಾಲಾ ಶಿಕ್ಷಕಿ ಶಭಾನಾ ಸ್ವಾಗತಿಸಿ ನಿರೂಪಿಸಿದರು. ಪುಷ್ಪಲತಾ ವಂದಿಸಿದರು.

Follow us Follow us
Share. WhatsApp Facebook Twitter Email Telegram Copy Link

Related Posts

*ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಸೆ.26: ನಗರದ ನಾಲ್ಕು ಶಕ್ತಿ ದೇವತೆಗಳಲ್ಲಿ ಒಂದಾದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್…

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*

ಸೆಪ್ಟೆಂಬರ್ 26, 2026

*ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*

ಸೆಪ್ಟೆಂಬರ್ 26, 2026

*ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*

ಸೆಪ್ಟೆಂಬರ್ 26, 2026

*2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*

ಸೆಪ್ಟೆಂಬರ್ 26, 2026

*ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*

ಸೆಪ್ಟೆಂಬರ್ 26, 2026

*ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*

ಸೆಪ್ಟೆಂಬರ್ 26, 2026

*ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*

ಸೆಪ್ಟೆಂಬರ್ 26, 2026

*36 ವರ್ಷ ಸೇವೆ ಸಲ್ಲಿಸಿದ ಅಂಗನವಾಡಿ ಕಾರ್ಯಕರ್ತೆ ದೇವಮಾಜಿ, ಶಿಕ್ಷಕಿ ಭೋಜಮ್ಮಗೆ ಆತ್ಮೀಯ ಬೀಳ್ಕೊಡುಗೆ*

ಸೆಪ್ಟೆಂಬರ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.