
ಮಡಿಕೇರಿ NEWS DESK ಜ.25 : ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರು ಇಂದು ಗೋಣಿಕೊಪ್ಪಲು-ಪಾಲಿಬೆಟ್ಟ ರಸ್ತೆ ಕಾಮಗಾರಿಯನ್ನು ಪರಿಶೀಲಿಸಿದರು. ಮಳೆಗಾಲದಲ್ಲಿ ಹದಗೆಟ್ಟಿದ್ದ ರಸ್ತೆಯ ಅಭಿವೃದ್ಧಿ ಕಾಮಗಾರಿಗೆ ಶಾಸಕರು ಅನುದಾನ ಒದಗಿಸಿದ್ದರು. ನೂತನ ರಸ್ತೆಯ ಗುಣಮಟ್ಟ ಪರಿಶೀಲಿಸಿದ ಶಾಸಕರು ಕಾಮಗಾರಿಯನ್ನು ಶೀಘ್ರ ಪೂರ್ಣಗೊಳಿಸಿ ಸಾರ್ವಜನಿಕರ ಅನುಕೂಲಕ್ಕೆ ಕಲ್ಪಿಸಿಕೊಡುವಂತೆ ಗುತ್ತಿಗೆದಾರರಿಗೆ ಸೂಚನೆ ನೀಡಿದರು. ರಾಜ್ಯ ಕ್ರೀಡಾ ಪ್ರಾಧಿಕಾರದ ಉಪಾಧ್ಯಕ್ಷ ಚೆಪ್ಪುಡೀರ ಅರುಣ್ ಮಾಚಯ್ಯ ಮತ್ತಿತರರು ಹಾಜರಿದ್ದರು.









