
ಮಡಿಕೇರಿ ಜ.26 NEWS DESK : ನಗರದ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಅವರ ಪ್ರತಿಮೆ ಸ್ಥಳಕ್ಕೆ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಭೇಟಿ ನೀಡಿ ಪರಿಶೀಲಿಸಿದರು. ಜ.28 ರಂದು ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಅವರ ಜನ್ಮ ದಿನಾಚರಣೆ ಹಿನ್ನೆಲೆ ಶಾಸಕರು ಸಿದ್ಧತೆ ಬಗ್ಗೆ ಮಾಹಿತಿ ಪಡೆದರು. ರಾಷ್ಟ್ರದ ಪ್ರಥಮ ಸೇನಾದಂಡ ನಾಯಕರಾದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಅವರ ಜನ್ಮ ದಿನಾಚರಣೆ ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ನಡೆಸುವಂತೆ ಸಲಹೆ ನೀಡಿದರು. ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ಸದಸ್ಯರಾದ ಚೊಟ್ಟೆಯಂಡ ಸಂಜು ಕಾವೇರಪ್ಪ, ಪುತ್ತರೀರ ಪಪ್ಪು ತಿಮ್ಮಯ್ಯ, ಪ್ರಮುಖರಾದ ಸೂರಜ್ ಹೊಸೂರು ಇತರರು ಇದ್ದರು.









