Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕಾಯಕ ಶರಣರ ಜಯಂತಿ ಸಮ ಸಮಾಜ ನಿರ್ಮಾಣದಲ್ಲಿ ಕಾಯಕ ಶರಣರ ಕೊಡುಗೆ ಅಪಾರ: ಹೇಮಲತಾ*
  • *ಸೌಂದರ್ಯ ತಜ್ಞರು ನಿತ್ಯ ವ್ಯಾಯಾಮದೊಂದಿಗೆ ತಮ್ಮ ಆರೋಗ್ಯ ವೃದ್ಧಿಸಿಕೊಳ್ಳುವ ಬಗ್ಗೆ ಗಮನಹರಿಸಬೇಕು ಎಂದು ಅಂತರರಾಷ್ಟ್ರೀಯ ಬ್ಯಾಡ್ಮಿಂಟನ್ ಕ್ರೀಡಾಪಟು ತಾತಪಂಡ ಜ್ಯೋತಿ ಸೋಮಯ್ಯ ಕಿವಿಮಾತು ಹೇಳಿದರು*
  • *ಮೈಸೂರು-ಕುಶಾಲನಗರ ರೈಲ್ವೆ ಯೋಜನೆ ಪುನಾರಂಭಿಸಲು ಅಶ್ವಿನ್‌ ವೈಷ್ಣವ್‌ಗೆ ಯದುವೀರ್‌ ಮನವಿ ಭೂ ಸ್ವಾಧೀನ ಪ್ರಕ್ರಿಯೆಗೆ ಚಾಲನೆ ನೀಡಲು ಕ್ರಮ ಕೈಗೊಳ್ಳಬೇಕೆಂದು ಸಂಸದರ ಪತ್ರ*
  • *ಕೊಡವ ಭಾಷೆಗೂ ಸಾಂವಿಧಾನಿಕ ಭದ್ರತೆ ನೀಡಬೇಕು : ಸಣ್ಣ ಸಣ್ಣ ಭಾಷೆಗಳನ್ನು ಹತ್ತಿಕಿದರೆ ಏಕತೆಗೆ ದಕ್ಕೆ : ಸಿಎನ್‌ಸಿ ಪ್ರತಿಪಾದನೆ*
  • *‘ಜಂತು ಹುಳು ರಹಿತ ಮಕ್ಕಳು – ಆರೋಗ್ಯವಂತ ಮಕ್ಕಳು’ ರಾಷ್ಟ್ರೀಯ ಜಂತು ಹುಳು ನಿವಾರಣಾ ಕಾರ್ಯಕ್ರಮ*
  • *ಫೆ.14 ರಂದು ಕೊಡವ ಭವನ ಉದ್ಘಾಟನೆ*
  • *ಮಡಿಕೇರಿಯಲ್ಲಿ “ಆರೋಗ್ಯ ಹಕ್ಕಿನ ಜಾಥಾ”*
  • *ಕೊಡವ ಕುಟುಂಬಗಳ ನಡುವಣ “ಮುಲ್ಲೇಂಗಡ ಕಬಡ್ಡಿ ನಮ್ಮೆ”*
  • *104 ಮೊಬೈಲ್ ಫೋನ್‌ಗಳನ್ನು ವಾರಸುದಾರರಿಗೆ ಹಸ್ತಾಂತರಿಸಿದ ಕೊಡಗು ಜಿಲ್ಲಾ ಪೊಲೀಸ್*
  • *ತಾಲ್ಲೂಕು ಮಟ್ಟದ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ನೀಡಲು ಅರ್ಜಿ ಆಹ್ವಾನ*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » ಕೊಡಗು : ಪ್ರತಿಯೊಬ್ಬ ಯುವ ಮತದಾರರು ತಪ್ಪದೆ ಹಕ್ಕು ಚಲಾಯಿಸಿ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಕರೆ*
ಇತ್ತೀಚಿನ ಸುದ್ದಿಗಳು

ಕೊಡಗು : ಪ್ರತಿಯೊಬ್ಬ ಯುವ ಮತದಾರರು ತಪ್ಪದೆ ಹಕ್ಕು ಚಲಾಯಿಸಿ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಕರೆ*

January 26, 20262 Mins Read
Share
Facebook Twitter LinkedIn Pinterest WhatsApp Email

ಮಡಿಕೇರಿ ಜ.26 NEWS DESK : 18 ವರ್ಷ ಪೂರ್ಣಗೊಂಡ ಪ್ರತಿಯೊಬ್ಬ ಯುವ ಮತದಾರರು ಚುನಾವಣಾ ಗುರುತಿನ‌ ಚೀಟಿ ಪಡೆಯುವ ಮೂಲಕ‌ ಚುನಾವಣೆ ಸಂದರ್ಭದಲ್ಲಿ ತಪ್ಪದೆ ಮತ ಹಕ್ಕು ಚಲಾಯಿಸುವಂತಾಗಬೇಕು ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಎಸ್.ಜೆ.ಸೋಮಶೇಖರ್ ಅವರು ಕರೆ ನೀಡಿದ್ದಾರೆ‌. ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ಭಾರತ ಚುನಾವಣಾ ಆಯೋಗ, ಜಿಲ್ಲಾಡಳಿತ ವತಿಯಿಂದ ನಡೆದ ರಾಷ್ಟ್ರೀಯ ಮತದಾರರ ದಿನದ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಪ್ರಜಾಪ್ರಭುತ್ವದಲ್ಲಿ ಚುನಾವಣೆಯನ್ನು ಹಬ್ಬ ಎಂದು ಕರೆಯುತ್ತೇವೆ. ಆ ದಿಸೆಯಲ್ಲಿ ಪ್ರಜಾಪ್ರಭುತ್ವದ ಚುನಾವಣಾ ಹಬ್ಬದಲ್ಲಿ ಅರ್ಹರೆಲ್ಲರೂ ತಪ್ಪದೆ ಮತ ಹಕ್ಕು ಚಲಾಯಿಸಬೇಕು ಎಂದು ಜಿಲ್ಲಾಧಿಕಾರಿ ಅವರು ಹೇಳಿದರು. 18 ವರ್ಷ ಪೂರ್ಣಗೊಂಡ ಪ್ರತಿಯೊಬ್ಬ ಯುವ ಮತದಾರರು ಮತದಾನದಲ್ಲಿ ಮತ ಹಕ್ಕು ಚಲಾಯಿಸಬೇಕು. ಯಾವುದೇ ಕಾರಣಕ್ಕೂ ಹಿಂಜರಿಯದೆ, ಪ್ರಜಾಪ್ರಭುತ್ವ ರಾಷ್ಟ್ರವನ್ನು ಬಲಪಡಿಸುವತ್ತ ಗಮನಹರಿಸಬೇಕು ಎಂದು ಜಿಲ್ಲಾಧಿಕಾರಿ ಅವರು ವಿವರಿಸಿದರು.
ಚುನಾವಣೆಯನ್ನು ನಿಷ್ಪಕ್ಷಪಾತವಾಗಿ ನಡೆಸುವಲ್ಲಿ ಚುನಾವಣಾ ಆಯೋಗವು ಸಾಕಷ್ಟು ಸುಧಾರಣೆ ತಂದಿದೆ ಎಂದರು.  ಮತದಾನದ ಮಹತ್ವ ಕುರಿತು ಸ್ವೀಪ್ ಕಾರ್ಯಕ್ರಮ ಮೂಲಕ ಹೆಚ್ಚಿನ‌ ಜಾಗೃತಿ ಮೂಡಿಸಲಾಗುತ್ತದೆ. ನಮೂನೆ 6, 7 ಮತ್ತು 8 ರಂತೆ ಕ್ರಮವಾಗಿ ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ, ತೆಗೆದು ಹಾಕುವುದು ಅಥವಾ ಸ್ಥಳಾಂತರಕ್ಕೆ ಅವಕಾಶವಿದ್ದು, ಇದನ್ನು ಅರ್ಹರು ಬಳಸಿಕೊಳ್ಳುವಂತಾಗಬೇಕು ಎಂದು ಎಸ್.ಜೆ. ಸೋಮಶೇಖರ್ ಅವರು ನುಡಿದರು.
ಭಾರತ ಚುನಾವಣಾ ಆಯೋಗವು ಮತದಾನ ಹೆಚ್ಚಳಕ್ಕೆ ಹಲವು ಕಾರ್ಯಕ್ರಮ ರೂಪಿಸಿದೆ, ಆ ನಿಟ್ಟಿನಲ್ಲಿ ಯುವ ಜನರು ಮತಹಕ್ಕು ಚಲಾಯಿಸುವ ಮೂಲಕ ಶೇಕಡಾವಾರು ಮತದಾನ ಹೆಚ್ಚಳಕ್ಕೆ ಕೈಜೋಡಿಸಬೇಕು ಎಂದು ಜಿಲ್ಲಾಧಿಕಾರಿ ಅವರು ಕೋರಿದರು.  ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ ನ್ಯಾಯಾಧೀಶರಾದ ಜಿ.ಸುರೇಂದ್ರ ಅವರು ರಾಷ್ಟ್ರೀಯ ಮತದಾರರ ದಿನಕ್ಕೆ ಚಾಲನೆ ನೀಡಿ ಮಾತನಾಡಿ ಭಾರತ ವಿಶ್ವದಲ್ಲಿಯೇ ದೊಡ್ಡ ಪ್ರಜಾಪ್ರಭುತ್ವ ಸಂವಿಧಾನ ರಾಷ್ಟ್ರವಾಗಿದೆ ಎಂದರು. ರಾಷ್ಟ್ರವು ಶೇ.65 ಕ್ಕೂ ಹೆಚ್ಚು ಯುವ ಮತದಾರರನ್ನು ಹೊಂದಿದ್ದು, ಯುವ ಜನರು ತಪ್ಪದೆ ಮತದಾನದಲ್ಲಿ ಸಕ್ರೀಯವಾಗಿ ಪಾಲ್ಗೊಳ್ಳಬೇಕು ಎಂದು ತಿಳಿಸಿದರು. ಇತ್ತೀಚಿನ ವರ್ಷಗಳಲ್ಲಿ ಯುವ ಜನರು ಐಪಿಎಲ್ ಕ್ರೀಡೆಗೆ ಹೆಚ್ಚಿನ ಒತ್ತು ನೀಡುತ್ತಾರೆ, ಮತದಾನ ದಿನದಂದು ಪ್ರವಾಸ ತೆರಳುತ್ತಾರೆ. ಇದರಿಂದ ಪ್ರಜಾಪ್ರಭುತ್ವ ಉಳಿಸಲು ಸಾಧ್ಯವೇ ಎಂಬ ಬಗ್ಗೆ ಪ್ರತಿಯೊಬ್ಬರೂ ಅವಲೋಕಿಸಬೇಕು ಎಂದು‌ ಕಿವಿಮಾತು ಹೇಳಿದರು. ಮೊದಲು ಮತದಾನ ಮಾಡಿದ್ದಲ್ಲಿ, ಪ್ರಶ್ನೆ ಮಾಡುವ ಮನೋಭಾವ ಬರಲಿದೆ. ಅದನ್ನು ಬಿಟ್ಟು ರಜೆ ಸಿಕ್ಕಿದೆ ಎಂದು ಪ್ರವಾಸ ಹೊರಡುವವುದು ಸರಿಯಲ್ಲ ಎಂದು ಜಿ.ಸುರೇಂದ್ರ ಅವರು ಹೇಳಿದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿಂದುಮಣಿ ಅವರು ಮಾತನಾಡಿ 18 ವರ್ಷ ಪೂರ್ಣಗೊಂಡ ನಂತರ ಮೊದಲ ಬಾರಿಗೆ ಚುನಾವಣಾ ಗುರುತಿನ ಚೀಟಿ ಪಡೆದಾಗ ಒಂದು ರೀತಿ ರೋಮಾಂಚಕ ವಾಗಿತ್ತು ಎಂದು ಸ್ಮರಿಸಿದರು. ಪ್ರಜಾಪ್ರಭುತ್ವದಲ್ಲಿ ಮತದಾನದ ಮೌಲ್ಯವನ್ನು ಪ್ರತಿಯೊಬ್ಬರೂ ತಿಳಿದುಕೊಳ್ಳುವಂತಾಬೇಕು. ಮತದಾನ ಮಾಡುವಾಗ ಎಚ್ಚರ ವಹಿಸಬೇಕು. ಯಾರ ಪ್ರಭಾವಕ್ಕೂ ಒಳಗಾಗದೆ ಮತದಾನ ಮಾಡುವುದು ಅರ್ಹರೆಲ್ಲರ ಜವಾಬ್ದಾರಿಯಾಗಿದೆ ಎಂದರು. ಕುಗ್ರಾಮಗಳಲ್ಲಿಯೂ ಸಹ ಹೆಚ್ಚಿನ ಮತದಾನ ಆಗಬೇಕು. ಮತದಾನದಲ್ಲಿ ಖುಷಿಯಿಂದ ಭಾಗವಹಿಸಿ, ಜಿಲ್ಲೆಯಲ್ಲಿ ಶೇಕಡಾವಾರು ಮತದಾನ ಹೆಚ್ಚಿನ ಶ್ರಮಿಸಬೇಕು ಎಂದು ಕರೆ ನೀಡಿದರು. ಉಪ ವಿಭಾಗಾಧಿಕಾರಿ ನಿತಿನ್ ಚಕ್ಕಿ ಅವರು ಮತದಾರರ ಪ್ರತಿಜ್ಞಾ ವಿಧಿ ಬೋಧಿಸಿ, ಮಾತನಾಡಿದರು. 18 ವರ್ಷ ತುಂಬಿದ ಹೊಸ ಮತದಾರರಿಗೆ ಚುನಾವಣಾ ಗುರುತಿನ ಚೀಟಿಯನ್ನು ಇದೇ ಸಂದರ್ಭದಲ್ಲಿ ಗಣ್ಯರು ವಿತರಿಸಿದರು. ರಾಷ್ಟ್ರೀಯ ಮತದಾರರ ದಿನದ ಪ್ರಯುಕ್ತ ಪ್ರೌಢಶಾಲಾ, ಪದವಿ ಪೂರ್ವ ಮತ್ತು ಪದವಿ ಹಂತದ ವಿದ್ಯಾರ್ಥಿಗಳಿಗೆ ತಾಲ್ಲೂಕು ಹಾಗೂ ಜಿಲ್ಲಾ ಮಟ್ಟದಲ್ಲಿ ಏರ್ಪಡಿಸಲಾಗಿದ್ದ ವಿವಿಧ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಪ್ರಶಸ್ತಿ ಪತ್ರ ವಿತರಿಸಲಾಯಿತು. ಜಿಲ್ಲೆಯ ಎರಡು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸಿದ ಬೂತ್ ಮಟ್ಟದ ಅಧಿಕಾರಿಗಳನ್ನು ಸನ್ಮಾನಿಸಲಾಯಿತು. ಜತೆಗೆ ಕಿಟ್ ವಿತರಿಸಲಾಯಿತು. ತಹಶಿಲ್ದಾರರಾದ ಆರ್. ಶ್ರೀಧರ, ಶಾಲಾ ಶಿಕ್ಷಣ ಇಲಾಖೆಯ ಶಿಕ್ಷಣಾಧಿಕಾರಿ ಶರ್ಮಿಳ, ಕಾನೂನು ಸೇವಾ ಪ್ರಾಧಿಕಾರದ ಆಡಳಿತ ಸಹಾಯಕರಾದ ಜಯಪ್ಪ, ಶಿರಸ್ತೆದಾರರಾದ ಮಧುಕರ, ಮಹೇಶ್, ಚಂದ್ರಶೇಖರ್, ಅನಿಲ್ ಕುಮಾರ್ ಇತರರು ಇದ್ದರು. ಭಾಗಮಂಡಲ ಶ್ರೀ ಕಾವೇರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಕೆ.ಜೆ.ದಿವಾಕರ ಅವರು ನಿರೂಪಿಸಿದರು, ಸಂತ ಜೋಸೆಫರ ಶಾಲೆಯ ವಿದ್ಯಾರ್ಥಿನಿಯರು ರಾಷ್ಟ್ರಗೀತೆ ಮತ್ತು ನಾಡಗೀತೆ ಹಾಡಿದರು, ಶಾಲಾ ಶಿಕ್ಷಣ ಇಲಾಖೆಯ ವಿಷಯ ಪರಿವೀಕ್ಷಕರಾದ ಬಿಂದು ವಂದಿಸಿದರು.

 

Share. Facebook Twitter Pinterest LinkedIn Tumblr Email WhatsApp
Previous Article*ಮಡಿಕೇರಿಯಲ್ಲಿ ಸವಿತಾ ಮಹರ್ಷಿ ಜಯಂತಿ : ಸರ್ಕಾರದ ಸೌಲಭ್ಯ ಬಳಸಿಕೊಂಡು ಶೈಕ್ಷಣಿಕ ಹಾಗೂ ರಾಜಕೀಯವಾಗಿ ಮುಂದೆ ಬರಬೇಕು : ಟಿ.ಪಿ.ರಮೇಶ್ ಸಲಹೆ*
Next Article *ವಿಶ್ವವ್ಯಾಪಿ ಮಾನವೀಯ ಧಮ೯ ಸಂರಕ್ಷಣೆಯಲ್ಲಿ ರೆಡ್ ಕ್ರಾಸ್ ಮುಖ್ಯ ಪಾತ್ರ : ಬಿ.ಭಾಸ್ಕರರಾವ್*

Related Posts

*ಕಾಯಕ ಶರಣರ ಜಯಂತಿ ಸಮ ಸಮಾಜ ನಿರ್ಮಾಣದಲ್ಲಿ ಕಾಯಕ ಶರಣರ ಕೊಡುಗೆ ಅಪಾರ: ಹೇಮಲತಾ*

February 10, 2026

*ಸೌಂದರ್ಯ ತಜ್ಞರು ನಿತ್ಯ ವ್ಯಾಯಾಮದೊಂದಿಗೆ ತಮ್ಮ ಆರೋಗ್ಯ ವೃದ್ಧಿಸಿಕೊಳ್ಳುವ ಬಗ್ಗೆ ಗಮನಹರಿಸಬೇಕು ಎಂದು ಅಂತರರಾಷ್ಟ್ರೀಯ ಬ್ಯಾಡ್ಮಿಂಟನ್ ಕ್ರೀಡಾಪಟು ತಾತಪಂಡ ಜ್ಯೋತಿ ಸೋಮಯ್ಯ ಕಿವಿಮಾತು ಹೇಳಿದರು*

February 10, 2026

*ಮೈಸೂರು-ಕುಶಾಲನಗರ ರೈಲ್ವೆ ಯೋಜನೆ ಪುನಾರಂಭಿಸಲು ಅಶ್ವಿನ್‌ ವೈಷ್ಣವ್‌ಗೆ ಯದುವೀರ್‌ ಮನವಿ ಭೂ ಸ್ವಾಧೀನ ಪ್ರಕ್ರಿಯೆಗೆ ಚಾಲನೆ ನೀಡಲು ಕ್ರಮ ಕೈಗೊಳ್ಳಬೇಕೆಂದು ಸಂಸದರ ಪತ್ರ*

February 10, 2026

*ಸೌಂದರ್ಯ ತಜ್ಞರು ನಿತ್ಯ ವ್ಯಾಯಾಮದೊಂದಿಗೆ ತಮ್ಮ ಆರೋಗ್ಯ ವೃದ್ಧಿಸಿಕೊಳ್ಳುವ ಬಗ್ಗೆ ಗಮನಹರಿಸಬೇಕು ಎಂದು ಅಂತರರಾಷ್ಟ್ರೀಯ ಬ್ಯಾಡ್ಮಿಂಟನ್ ಕ್ರೀಡಾಪಟು ತಾತಪಂಡ ಜ್ಯೋತಿ ಸೋಮಯ್ಯ ಕಿವಿಮಾತು ಹೇಳಿದರು*

February 10, 2026

ಮಡಿಕೇರಿ, NEWS DESK ಫೆ.10: ಕೊಡಗು ಜಿಲ್ಲಾ ಬ್ಯುಟೀಷಿಯನ್ ಅಸೋಸಿಯೇಷನ್ ವತಿಯಿಂದ ಮಡಿಕೇರಿಯ ಮ್ಯಾನ್ಸ್ ಕಾಂಪೌಂಡ್ ಮೈದಾನದಲ್ಲಿ ನಡೆದ ಜಿಲ್ಲಾಮಟ್ಟದ…

*ಮೈಸೂರು-ಕುಶಾಲನಗರ ರೈಲ್ವೆ ಯೋಜನೆ ಪುನಾರಂಭಿಸಲು ಅಶ್ವಿನ್‌ ವೈಷ್ಣವ್‌ಗೆ ಯದುವೀರ್‌ ಮನವಿ ಭೂ ಸ್ವಾಧೀನ ಪ್ರಕ್ರಿಯೆಗೆ ಚಾಲನೆ ನೀಡಲು ಕ್ರಮ ಕೈಗೊಳ್ಳಬೇಕೆಂದು ಸಂಸದರ ಪತ್ರ*

February 10, 2026

*ಕೊಡವ ಭಾಷೆಗೂ ಸಾಂವಿಧಾನಿಕ ಭದ್ರತೆ ನೀಡಬೇಕು : ಸಣ್ಣ ಸಣ್ಣ ಭಾಷೆಗಳನ್ನು ಹತ್ತಿಕಿದರೆ ಏಕತೆಗೆ ದಕ್ಕೆ : ಸಿಎನ್‌ಸಿ ಪ್ರತಿಪಾದನೆ*

February 10, 2026

*ಫೆ.14 ರಂದು ಕೊಡವ ಭವನ ಉದ್ಘಾಟನೆ*

February 10, 2026

*ಮಡಿಕೇರಿಯಲ್ಲಿ “ಆರೋಗ್ಯ ಹಕ್ಕಿನ ಜಾಥಾ”*

February 10, 2026

*ಕೊಡವ ಕುಟುಂಬಗಳ ನಡುವಣ “ಮುಲ್ಲೇಂಗಡ ಕಬಡ್ಡಿ ನಮ್ಮೆ”*

February 10, 2026

*104 ಮೊಬೈಲ್ ಫೋನ್‌ಗಳನ್ನು ವಾರಸುದಾರರಿಗೆ ಹಸ್ತಾಂತರಿಸಿದ ಕೊಡಗು ಜಿಲ್ಲಾ ಪೊಲೀಸ್*

February 10, 2026

*ತಾಲ್ಲೂಕು ಮಟ್ಟದ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ನೀಡಲು ಅರ್ಜಿ ಆಹ್ವಾನ*

February 10, 2026

*ಫೆ.15ರಂದು ಗೌಡ ಜನಾಂಗಗಳ ಜಿಲ್ಲಾ ಮಟ್ಟದ ಕ್ಯಾರಂಬೋರ್ಡ್ ಕ್ರೀಡಾಕೂಟ : ಏಪ್ರಿಲ್ ನಲ್ಲಿ ಟೆನ್ನಿಸ್ ಬಾಲ್ ಕ್ರಿಕೆಟ್*

February 10, 2026

*ಆಹಾರ ವಾಹಿನಿ ಯೋಜನೆಯಡಿ ಸಹಾಯಧನ ಸೌಲಭ್ಯ ಒದಗಿಸಲು ಅರ್ಜಿ ಆಹ್ವಾನ*

February 10, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.