
ಮಡಿಕೇರಿ ಜ.26 NEWS DESK : ಮಡಿಕೇರಿಯ ಮೈತ್ರಿ ಭವನದ ಬಳಿ ನಿರ್ಮಿಸಲು ಉದ್ದೇಶಿಸಿರುವ ಪೊಲೀಸ್ ವಸತಿ ಗೃಹಗಳ ನಿರ್ಮಾಣಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್.ಭೋಸರಾಜು ಅವರು ಭೂಮಿ ಪೂಜೆ ನೆರವೇರಿಸಿ ಕಾಮಗಾರಿಗೆ ಚಾಲನೆ ನೀಡಿದರು. ಈ ಸಂದರ್ಭ ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ, ನಗರಸಭೆ ಅಧ್ಯಕ್ಷ ಪಿ.ಕಲಾವತಿ, ಗ್ಯಾರಂಟಿ ಯೋಜನೆಗಳ ಜಿಲ್ಲಾಧ್ಯಕ್ಷ ಧರ್ಮಜ ಉತ್ತಪ್ಪ, ಜಿಲ್ಲಾಧಿಕಾರಿ ಎಸ್.ಕೆ.ಸೋಮಶೇಖರ್, ಜಿ.ಪಂ ಸಿಇಓ ಆನಂದ್ ಪ್ರಕಾಶ್ ಮೀನಾ, ಪೊಲೀಸ್ ವರಿಷ್ಠಾಧಿಕಾರಿ ಆರ್.ಎನ್.ಬಿಂದುಮಣಿ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಬಾರಿಕೆ ದಿನೇಶ್ ಸೇರಿದಂತೆ ಮತ್ತಿತರರು ಹಾಜರಿದ್ದರು.









