
ನಾಪೋಕ್ಲು ಜ.27 NEWS DESK : ಬೇತು ಗ್ರಾಮದ ಸೆಕ್ರೆಟ್ ಹಾರ್ಟ್ಸ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ 77ನೇ ಗಣರಾಜ್ಯೋತ್ಸವವನ್ನು ಅದ್ದೂರಿಯಾಗಿ ಆಚರಣೆ ಮಾಡಲಾಯಿತು. ಶಾಲಾ ಆವರಣದಲ್ಲಿ ಆಯೋಜಿಸಿದ ಕಾರ್ಯಕ್ರಮದ ಧ್ವಜಾರೋಹಣವನ್ನು ಶಿಕ್ಷಕಿ ಮೈನಾ ಕುಮಾರಿ ನೆರವೇರಿಸಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಶಿಕ್ಷಕ ಕಿರಣ್ ಗಣರಾಜ್ಯೋತ್ಸ ದಿನದ ಮಹತ್ವದ ಬಗ್ಗೆ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದರು. ಈ ಸಂದರ್ಭ ವಿದ್ಯಾರ್ಥಿಗಳಿಂದ ಹಾಡು, ಭಾಷಣ ಹಾಗೂ ನೃತ್ಯಗಳ ಮೂಲಕ ವಿದ್ಯಾರ್ಥಿಗಳ ಸೇರಿದಂತೆ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಲಾಯಿತು. ಭಾಗವಹಿಸಿದ ವಿದ್ಯಾರ್ಥಿಗಳಿಗೆ ಹಾಗೂ ಅತ್ಯುತ್ತಮವಾಗಿ ಪ್ರದರ್ಶನ ನೀಡಿದ ವಿದ್ಯಾರ್ಥಿಗಳಿಗೆ ಸಿಹಿ ವಿತರಿಸಿ ಶುಭ ಹಾರೈಸಲಾಯಿತು. ಸಮಾರಂಭವನ್ನು ವಿದ್ಯಾರ್ಥಿ ಬಿ.ಎಂ.ಆಜ್ಮಿಯ ನಿರೂಪಿಸಿದರು. ಕೆ.ಐ.ಮುಪ್ಪಿದ ವಂದಿಸಿದರು. ಈ ಸಂದರ್ಭ ಶಾಲಾ ಶಿಕ್ಷಕರು, ಸಿಬ್ಬಂದಿಗಳು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ವರದಿ : ದುಗ್ಗಳ ಸದಾನಂದ.









