
ನಾಪೋಕ್ಲು ಜ.27 NEWS DESK : ನಾಪೋಕ್ಲು ವ್ಯಾಪ್ತಿಯ ವಿವಿಧ ಶಾಲೆಗಳಲ್ಲಿ 77ನೇ ಗಣರಾಜ್ಯೋತ್ಸವ ಸಂಭ್ರಮದಿಂದ ಆಚರಿಸಲಾಯಿತು. ಶ್ರೀ ರಾಮ ಟ್ರಸ್ಟ್ ವಿದ್ಯಾಸಂಸ್ಥೆಯಲ್ಲಿ ಸಂಸ್ಥೆಯ ನಿರ್ದೇಶಕ ಪ್ರೊ.ಕಲ್ಯಾಟಂಡ ಪೂಣಚ್ಚ ಧ್ವಜಾರೋಹಣ ನೆರವೇರಿಸಿ, ವಿದ್ಯಾರ್ಥಿಗಳಿಂದ ಧ್ವಜವಂದನೆಯನ್ನು ಸ್ವೀಕರಿಸಿದರು. ನಂತರ ಎನ್‍ಸಿಸಿ ವಿದ್ಯಾರ್ಥಿಗಳಿಂದ ಪಥಸಂಚಲನ ನಡೆಯಿತು. ಸಭಾ ಕಾರ್ಯಕ್ರಮದಲ್ಲಿ ನಿರ್ದೇಶಕ ಪ್ರೊ.ಕಲ್ಯಾಟಂಡ ಪೂಣಚ್ಚ ಸಂವಿಧಾನದ ಆಶಯ ಭದ್ರತೆಯ ಕುರಿತು ಮಾತನಾಡಿದರು. ಪ್ರಾಂಶುಪಾಲರಾದ ಬಿ.ಎಂ.ಶಾರದಾ, ಶಿಕ್ಷಕಿ ಎಂ.ಎ.ಲೀಲಾವತಿ ದಿನದ ಮಹತ್ವದ ಕುರಿತು ಮಾತನಾಡಿದರು. ವೇದಿಕೆಯಲ್ಲಿ ಸಂಸ್ಥೆಯ ನಿರ್ದೇಶಕರಾದ ಅಪ್ಪ ಚೆಟ್ಟೋಳಂಡ ನವೀನ್ ಅಪ್ಪಯ್ಯ, ಚೌರಿರ ಮಂದಣ್ಣ, ಉಪಸ್ಥಿತರಿದ್ದರು. ವಿದ್ಯಾರ್ಥಿಗಳಿಂದ ಮನೋರಂಜನ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿ ವಿಜೇತರಾದ ವಿದ್ಯಾರ್ಥಿಗಳಿಗೆ ಅತಿಥಿಗಳು ಬಹುಮಾನಗಳನ್ನು ವಿತರಿಸಿದರು. ವಿದ್ಯಾರ್ಥಿ ಎಂ.ಹೆಚ್.ಜೀವನ್ ಸ್ವಾಗತಿಸಿದರು. ಕೆ.ಪಿ.ಸೋನಾಲ್ ವಂದಿಸಿದರು.
ವರದಿ : ದುಗ್ಗಳ ಸದಾನಂದ.









