
ಮಡಿಕೇರಿ ಜ.27 NEWS DESK : 2026-27ನೇ ಸಾಲಿನ ಮಡಿಕೇರಿ ನಗರಸಭೆ ಆಯವ್ಯಯ ತಯಾರಿಸುವ ಸಲುವಾಗಿ ಈ ಸಾಲಿನ ಆದಾಯ ಮತ್ತು ವ್ಯಯದ ಬಗ್ಗೆ ಸೂಕ್ತ ಸಲಹೆ ಸೂಚನೆಗಳನ್ನು ಪಡೆಯಲು ನಗರಸಭಾ ಅಧ್ಯಕ್ಷರಾದ ಪಿ.ಕಲಾವತಿ ಅವರ ಅಧ್ಯಕ್ಷತೆಯಲ್ಲಿ ಹಾಗೂ ಚುನಾಯಿತ ಆಡಳಿತ ಸದಸ್ಯರ ಉಪಸ್ಥಿತಿಯಲ್ಲಿ ಜನವರಿ, 28 ರಂದು ಮಧ್ಯಾಹ್ನ 3.30 ಗಂಟೆಗೆ ನಗರದ ಕಾವೇರಿ ಕಲಾಕ್ಷೇತ್ರದಲ್ಲಿ ಪೂರ್ವಭಾವಿ ಸಭೆ ನಡೆಯಲಿದೆ. ಈ ಸಭೆಗೆ ಹಿರಿಯ ನಾಗರಿಕರು, ನೋಂದಾಯಿತ ಸಂಘ ಸಂಸ್ಥೆಗಳು, ಎನ್‍ಜಿಒಗಳು ಮತ್ತು ಚುನಾಯಿತ ಸ್ಥಳೀಯ ಸಂಸ್ಥೆಯ ಮಾಜಿ ಜನಪ್ರತಿನಿಧಿಗಳು ಹಾಗೂ ಆಸಕ್ತಿಯುಳ್ಳ ಸಾರ್ವಜನಿಕರು ಹಾಜರಾಗಿ ತಮ್ಮ ಸೂಕ್ತ ಸಲಹೆ ಸೂಚನೆ ನೀಡುವಂತೆ ನಗರಸಭೆ ಪೌರಾಯುಕ್ತರಾದ ಎಚ್.ಆರ್.ರಮೇಶ್ ಅವರು ಕೋರಿದ್ದಾರೆ.








