
ಸುಂಟಿಕೊಪ್ಪ ಜ.24 NEWS DESK : ಗುಂಡುಗುಟ್ಟಿ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ 77ನೇ ಗಣರಾಜ್ಯೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ನಿವೃತ್ತ ಯೋಧ ಎ.ಸಿ.ಪೊನ್ನಪ್ಪ ಅವರು ಧ್ವಜಾರೋಹಣ ನೇರವೇರಿಸಿದರು. ಶಾಲೆಯ ಪ್ರಭಾರ ಮುಖ್ಯ ಶಿಕ್ಷಕಿ ಎಸ್.ಎಲ್.ಗೌರಮಣಿ ದಿನದ ಮಹತ್ವದ ಕುರಿತು, ದೇಶದ ಸಂವಿಧಾನದ ಬಗ್ಗೆ ಮಾಹಿತಿಯನ್ನು ನೀಡಿದರು. ಶಾಲಾ ಅಭಿವೃದ್ಧಿ ಸಮಿತಿ ಸದಸ್ಯರು ಹಾಗೂ ಪೋಷಕರು ಉಪಸ್ಥಿತರಿದ್ದರು. ಶಿಕ್ಷಕಿ ಪೂರ್ಣಿಮಾ ದಿನದ ಮಹತ್ವದ ಬಗ್ಗೆ ಮಾತನಾಡಿ ಕೊನೆಯಲ್ಲಿ ವಂದಿಸಿದರು. ಶಾಲೆಯಲ್ಲಿ ಮಕ್ಕಳಿಂದ ಭಾಷಣ, ಸಾಮೂಹಿಕ ಕವಾಯತ್, ಡಂಬಲ್ಸ್, ಲೆಂಜೆಸ್‍ಗಳು ಗಮನ ಸೆಳೆಯಿತು.









