Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕಾಯಕ ಶರಣರ ಜಯಂತಿ ಸಮ ಸಮಾಜ ನಿರ್ಮಾಣದಲ್ಲಿ ಕಾಯಕ ಶರಣರ ಕೊಡುಗೆ ಅಪಾರ: ಹೇಮಲತಾ*
  • *ಸೌಂದರ್ಯ ತಜ್ಞರು ನಿತ್ಯ ವ್ಯಾಯಾಮದೊಂದಿಗೆ ತಮ್ಮ ಆರೋಗ್ಯ ವೃದ್ಧಿಸಿಕೊಳ್ಳುವ ಬಗ್ಗೆ ಗಮನಹರಿಸಬೇಕು ಎಂದು ಅಂತರರಾಷ್ಟ್ರೀಯ ಬ್ಯಾಡ್ಮಿಂಟನ್ ಕ್ರೀಡಾಪಟು ತಾತಪಂಡ ಜ್ಯೋತಿ ಸೋಮಯ್ಯ ಕಿವಿಮಾತು ಹೇಳಿದರು*
  • *ಮೈಸೂರು-ಕುಶಾಲನಗರ ರೈಲ್ವೆ ಯೋಜನೆ ಪುನಾರಂಭಿಸಲು ಅಶ್ವಿನ್‌ ವೈಷ್ಣವ್‌ಗೆ ಯದುವೀರ್‌ ಮನವಿ ಭೂ ಸ್ವಾಧೀನ ಪ್ರಕ್ರಿಯೆಗೆ ಚಾಲನೆ ನೀಡಲು ಕ್ರಮ ಕೈಗೊಳ್ಳಬೇಕೆಂದು ಸಂಸದರ ಪತ್ರ*
  • *ಕೊಡವ ಭಾಷೆಗೂ ಸಾಂವಿಧಾನಿಕ ಭದ್ರತೆ ನೀಡಬೇಕು : ಸಣ್ಣ ಸಣ್ಣ ಭಾಷೆಗಳನ್ನು ಹತ್ತಿಕಿದರೆ ಏಕತೆಗೆ ದಕ್ಕೆ : ಸಿಎನ್‌ಸಿ ಪ್ರತಿಪಾದನೆ*
  • *‘ಜಂತು ಹುಳು ರಹಿತ ಮಕ್ಕಳು – ಆರೋಗ್ಯವಂತ ಮಕ್ಕಳು’ ರಾಷ್ಟ್ರೀಯ ಜಂತು ಹುಳು ನಿವಾರಣಾ ಕಾರ್ಯಕ್ರಮ*
  • *ಫೆ.14 ರಂದು ಕೊಡವ ಭವನ ಉದ್ಘಾಟನೆ*
  • *ಮಡಿಕೇರಿಯಲ್ಲಿ “ಆರೋಗ್ಯ ಹಕ್ಕಿನ ಜಾಥಾ”*
  • *ಕೊಡವ ಕುಟುಂಬಗಳ ನಡುವಣ “ಮುಲ್ಲೇಂಗಡ ಕಬಡ್ಡಿ ನಮ್ಮೆ”*
  • *104 ಮೊಬೈಲ್ ಫೋನ್‌ಗಳನ್ನು ವಾರಸುದಾರರಿಗೆ ಹಸ್ತಾಂತರಿಸಿದ ಕೊಡಗು ಜಿಲ್ಲಾ ಪೊಲೀಸ್*
  • *ತಾಲ್ಲೂಕು ಮಟ್ಟದ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ನೀಡಲು ಅರ್ಜಿ ಆಹ್ವಾನ*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *17ನೇ ಬೆಂಗಳೂರು ಅಂತರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ‘ಉಮ್ಮತ್ತಾಟ್’ ಆಯ್ಕೆ : ಕೊಟ್ಟುಕತ್ತೀರ ಪ್ರಕಾಶ್ ಕಾರ್ಯಪ್ಪ ಹಾಗೂ ಕೊಟ್ಟುಕತ್ತೀರ ಯಶೋಧ ಪ್ರಕಾಶ್ ದಂಪತಿಗೆ ಮತ್ತೊಂದು ಹೆಗ್ಗಳಿಕೆ*
ಇತ್ತೀಚಿನ ಸುದ್ದಿಗಳು

*17ನೇ ಬೆಂಗಳೂರು ಅಂತರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ‘ಉಮ್ಮತ್ತಾಟ್’ ಆಯ್ಕೆ : ಕೊಟ್ಟುಕತ್ತೀರ ಪ್ರಕಾಶ್ ಕಾರ್ಯಪ್ಪ ಹಾಗೂ ಕೊಟ್ಟುಕತ್ತೀರ ಯಶೋಧ ಪ್ರಕಾಶ್ ದಂಪತಿಗೆ ಮತ್ತೊಂದು ಹೆಗ್ಗಳಿಕೆ*

January 28, 20262 Mins Read
Share
Facebook Twitter LinkedIn Pinterest WhatsApp Email

ಮಡಿಕೇರಿ NEWS DESK ಜ.28 : ಬೆಂಗಳೂರಿನ ರಾಜಾಜಿನಗರದ ಲುಲು ಮಾಲ್ ನಲ್ಲಿ ಜ.29ರಿಂದ ಫೆ.6ರ ವರೆಗೆ ನಡೆಯುವ 17ನೇ ಬೆಂಗಳೂರು ಅಂತರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ‘ಉಮ್ಮತ್ತಾಟ್’ ಕೊಡವ ಸಾಕ್ಷ್ಯ ಚಿತ್ರ ಆಯ್ಕೆಯಾಗಿದೆ. ‘ಯೂ’ ಅರ್ಹತಾಪತ್ರ ಪಡೆದಿರುವ ‘ಉಮ್ಮತ್ತಾಟ್’ ಜನಪದದಲ್ಲಿ ಸಿಬಿಎಫ್ ಸಿ ದಾಖಲಾತಿ ಹೊಂದಿದ ಸಾಕ್ಷ್ಯಚಿತ್ರವಾಗಿದೆ. ಈ ಬಾರಿಯ ಅಂತರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಮಹಿಳೆಯರಿಗೆ ಆದ್ಯತೆ ನೀಡಲಾಗುತ್ತಿದ್ದು, ‘ಮಹಿಳಾ ಸಬಲೀಕರಣ’ ವಿಭಾಗದಲ್ಲಿ ‘ಉಮ್ಮತ್ತಾಟ್’ ಪ್ರದರ್ಶನಗೊಳ್ಳಲಿದೆ ಎಂದು ಸಾಕ್ಷ್ಯ ಚಿತ್ರದ ನಿರ್ದೇಶಕ ಕೊಟ್ಟುಕತ್ತೀರ ಪ್ರಕಾಶ್ ಕಾರ್ಯಪ್ಪ ಅವರು ತಿಳಿಸಿದ್ದಾರೆ. ಸ್ವಸ್ತಿಕ್ ಎಂಟರ್ಟೈನ್ಮೆಂಟ್ ಬ್ಯಾನರ್ ಅಡಿಯಲ್ಲಿ ಕೊಟ್ಟುಕತ್ತೀರ ಯಶೋಧ ಪ್ರಕಾಶ್ ಅವರು ನಿರ್ಮಿಸಿ, ಕೊಟ್ಟುಕತ್ತೀರ ಪ್ರಕಾಶ್ ಕಾರ್ಯಪ್ಪ ಅವರು ನಿರ್ದೇಶಿಸಿರುವ ‘ಉಮ್ಮತ್ತಾಟ್’ ಕೊಡವ ಜಾನಪದ ನೃತ್ಯ ಪ್ರಕಾರದ ಮೇಲೆ ಬೆಳಕು ಚೆಲ್ಲಿದೆ. ಹಲವು ವರ್ಷಗಳ ಇತಿಹಾಸ ಹೊಂದಿರುವ ಈ ಕಲೆಯ ಒಟ್ಟು 13 ನೃತ್ಯ ಪ್ರಕಾರಗಳನ್ನು ಚಿತ್ರೀಕರಿಸಲಾಗಿದ್ದು, 153 ಕಲಾವಿದರು ನೃತ್ಯ ಮಾಡಿದ್ದಾರೆ. ಕೊಟ್ಟುಕತ್ತೀರ ಪ್ರಕಾಶ್ ಕಾರ್ಯಪ್ಪ ಅವರ ನಿರ್ದೇಶನದ ಸಾಕ್ಷ್ಯಚಿತ್ರಕ್ಕೆ ‘ಉಮ್ಮತ್ತಾಟ್’ ತರಬೇತುದಾರರಾದ ಕಲಾವಿದೆ ಬೊಳ್ಳಜಿರ ಯಮುನಾ ಅಯ್ಯಪ್ಪ ಅವರ ಸಹ ನಿರ್ದೇಶನವಿದ್ದು, ನಿರೂಪಣೆಯನ್ನು ಕೂಡ ಮಾಡಿದ್ದಾರೆ. ಅಲ್ಲದೆ ವಸ್ತç ವಿನ್ಯಾಸ ಮತ್ತು ನೃತ್ಯ ಪ್ರದರ್ಶನಕ್ಕೆ ಸಹಕಾರ ನೀಡಿದ್ದಾರೆ. ರಾಜ್ಯ ಪ್ರಶಸ್ತಿ ವಿಜೇತೆ, ನೃತ್ಯ ಮತ್ತು ನೃತ್ಯ ಸಂಗೀತ ಭರತನಾಟ್ಯದ ಕುರಿತು ಮಂಡಿಸಿದ ಪ್ರಬಂಧಕ್ಕೆ ಕೇಂದ್ರ ಸರಕಾರದ ಜೂನಿಯರ್ ಫೆಲೋಶಿಪ್ ಪಡೆದಿರುವ ಅಂತರಾಷ್ಟ್ರೀಯ ಮಟ್ಟದ ಖ್ಯಾತ ಭರತನಾಟ್ಯ ಕಲಾವಿದೆ ಮುಕ್ಕಾಟಿರ ಶಿಲ್ಪ ನಂಜಪ್ಪ ಅವರು ನೃತ್ಯ ಪ್ರಕಾರಗಳನ್ನು ನಿರೂಪಣೆ ಮಾಡಿದ್ದಾರೆ. ಕೊಡಗು ಜಿಲ್ಲೆಯ ಮುಟ್ಲುವಿನಿಂದ ಕುಟ್ಟದವರೆಗಿನ ವಿವಿಧೆಡೆಯ ಸುಂದರ ಪ್ರದೇಶದಲ್ಲಿ ‘ಉಮ್ಮತ್ತಾಟ್’ ಸಾಕ್ಷ್ಯ ಚಿತ್ರ ಚಿತ್ರೀಕರಣಗೊಂಡಿದ್ದು, ಛಾಯಾಗ್ರಾಹಕ ವಿನಾಯಕ ರೇವಡಿ ಅವರ ಛಾಯಾಗ್ರಹಣ ಹಾಗೂ ಟಿ.ಮುತ್ತುರಾಜು ಅವರ ಸಂಕಲನವಿದೆ. ತಂತಿಪಾಲ, ದೇವಸ್ತೂರು, ಬಲಂಬೇರಿ, ಕಾಕೋಟುಪರಂಬು, ನೀರುಕೊಲ್ಲಿ, ಮುಟ್ಲು, ಬಾಳೆಲೆ ಆದೆಂಗಡ ಐನ್ ಮನೆ, ಗುಹ್ಯ ಅಗಸ್ತೇಶ್ವರ ದೇವಾಲಯ, ಚೇರಂಬಾಣೆಯ ಗೋಪಾಲಕೃಷ್ಣ ದೇವಾಲಯ ಮುಂತಾದೆಡೆ ಚಿತ್ರೀಕರಿಸಲಾಗಿದೆ. ರಾಷ್ಟ್ರ ಮತ್ತು ರಾಜ್ಯ ಪ್ರಶಸ್ತಿಗಳನ್ನು ಮುಡಿಗೇರಿಸಿಕೊಂಡಿರುವ ಕೊಟ್ಟುಕತ್ತೀರ ಪ್ರಕಾಶ್ ಕಾರ್ಯಪ್ಪ ಹಾಗೂ ಕೊಟ್ಟುಕತ್ತೀರ ಯಶೋಧ ಪ್ರಕಾಶ್ ದಂಪತಿಗೆ ‘ಉಮ್ಮತ್ತಾಟ್’ ಆಯ್ಕೆಯಾಗಿರುವುದು ಮತ್ತೊಂದು ಹೆಗ್ಗಳಿಕೆಯಾಗಿದೆ. ಮೊದಲ ಸಾಕ್ಷ್ಯಚಿತ್ರ  >> ಕಳೆದ ವರ್ಷ ಗೋವಾದಲ್ಲಿ ನಡೆದ 56ನೇ ಅಂತರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ರದರ್ಶನಗೊಂಡ ‘ಉಮ್ಮತ್ತಾಟ್’ ಇಂಡಿಯನ್ ಪನೋರಮಾಗೆ ಆಯ್ಕೆಯಾದ ಮೊದಲ ಕೊಡವ ಭಾಷಾ ಸಾಕ್ಷ್ಯಚಿತ್ರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿತ್ತು. ಇದೀಗ 17ನೇ ಬೆಂಗಳೂರು ಅಂತರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಆಯ್ಕೆಯಾಗಿರುವುದರಿಂದ ನಮ್ಮ ಜವಾಬ್ದಾರಿ ಮತ್ತಷ್ಟು ಹೆಚ್ಚಾಗಿದೆ ಎಂದು ಕೊಟ್ಟುಕತ್ತೀರ ಪ್ರಕಾಶ್ ಕಾರ್ಯಪ್ಪ ಅವರು ಹರ್ಷ ವ್ಯಕ್ತಪಡಿಸಿದ್ದಾರೆ. ಹಿರಿಯ ಸಾಹಿತಿ ಬಾಚರಣಿಯಂಡ ಅಪ್ಪಣ್ಣ, ಜಾನಪದ ಕಲಾವಿದೆ ಪದ್ಮಶ್ರೀ ಐಮುಡಿಯಂಡ ರಾಣಿ ಮಾಚಯ್ಯ, ಜನಪದ ನೃತ್ಯ ಅಧ್ಯಯನ ಗ್ರಂಥ ರಚಿಸಿರುವ ಸಾಹಿತಿ ಡಾ.ರೇವತಿ ಪೂವಯ್ಯ, ಸಾಹಿತಿ ಹಾಗೂ ಕಲಾವಿದೆ ಮೊಣ್ಣಂಡ ಶೋಭಾ ಸುಬ್ಬಯ್ಯ, ತಾಯಿ ಬೇರು ಪುಸ್ತಕದ ರಚನೆಕಾರರಾದ ಬೆಂಗಳೂರಿನ ಸ್ನೇಹ ಕಪ್ಪಣ್ಣ ಅವರುಗಳ ಸಹಕಾರ ಮತ್ತು ಸಲಹೆಯನ್ನು ಪಡೆದು ಸಾಕ್ಷ್ಯಚಿತ್ರ ‘ಉಮ್ಮತ್ತಾಟ್’ ನ್ನು ತಯಾರಿಸಲಾಗಿದೆ ಎಂದು ಕೊಟ್ಟುಕತ್ತೀರ ಯಶೋಧ ಪ್ರಕಾಶ್ ತಿಳಿಸಿದ್ದಾರೆ. ಜ.29ರಿಂದ ಫೆ.6ರ ವರೆಗೆ ನಡೆಯುವ 17ನೇ ಬೆಂಗಳೂರು ಅಂತರಾಷ್ಟ್ರೀಯ ಚಲನಚಿತ್ರೋತ್ಸವವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉದ್ಘಾಟಿಸಲಿದ್ದಾರೆ.

 

Share. Facebook Twitter Pinterest LinkedIn Tumblr Email WhatsApp
Previous Article*ಇಂಗ್ಲಿಷ್ ಭಾಷಣ ಸ್ಪರ್ಧೆ : ಎಂ.ಚಾರಿಕ ರಾಜ್ಯಮಟ್ಟಕ್ಕೆ ಆಯ್ಕೆ*
Next Article *ಜಿಲ್ಲೆಯ ನಟ-ನಟಿಯರು, ಗಾಯಕ, ಕಲಾವಿದರ ಸಮಾಗಮ*

Related Posts

*ಕಾಯಕ ಶರಣರ ಜಯಂತಿ ಸಮ ಸಮಾಜ ನಿರ್ಮಾಣದಲ್ಲಿ ಕಾಯಕ ಶರಣರ ಕೊಡುಗೆ ಅಪಾರ: ಹೇಮಲತಾ*

February 10, 2026

*ಸೌಂದರ್ಯ ತಜ್ಞರು ನಿತ್ಯ ವ್ಯಾಯಾಮದೊಂದಿಗೆ ತಮ್ಮ ಆರೋಗ್ಯ ವೃದ್ಧಿಸಿಕೊಳ್ಳುವ ಬಗ್ಗೆ ಗಮನಹರಿಸಬೇಕು ಎಂದು ಅಂತರರಾಷ್ಟ್ರೀಯ ಬ್ಯಾಡ್ಮಿಂಟನ್ ಕ್ರೀಡಾಪಟು ತಾತಪಂಡ ಜ್ಯೋತಿ ಸೋಮಯ್ಯ ಕಿವಿಮಾತು ಹೇಳಿದರು*

February 10, 2026

*ಮೈಸೂರು-ಕುಶಾಲನಗರ ರೈಲ್ವೆ ಯೋಜನೆ ಪುನಾರಂಭಿಸಲು ಅಶ್ವಿನ್‌ ವೈಷ್ಣವ್‌ಗೆ ಯದುವೀರ್‌ ಮನವಿ ಭೂ ಸ್ವಾಧೀನ ಪ್ರಕ್ರಿಯೆಗೆ ಚಾಲನೆ ನೀಡಲು ಕ್ರಮ ಕೈಗೊಳ್ಳಬೇಕೆಂದು ಸಂಸದರ ಪತ್ರ*

February 10, 2026

*ಸೌಂದರ್ಯ ತಜ್ಞರು ನಿತ್ಯ ವ್ಯಾಯಾಮದೊಂದಿಗೆ ತಮ್ಮ ಆರೋಗ್ಯ ವೃದ್ಧಿಸಿಕೊಳ್ಳುವ ಬಗ್ಗೆ ಗಮನಹರಿಸಬೇಕು ಎಂದು ಅಂತರರಾಷ್ಟ್ರೀಯ ಬ್ಯಾಡ್ಮಿಂಟನ್ ಕ್ರೀಡಾಪಟು ತಾತಪಂಡ ಜ್ಯೋತಿ ಸೋಮಯ್ಯ ಕಿವಿಮಾತು ಹೇಳಿದರು*

February 10, 2026

ಮಡಿಕೇರಿ, NEWS DESK ಫೆ.10: ಕೊಡಗು ಜಿಲ್ಲಾ ಬ್ಯುಟೀಷಿಯನ್ ಅಸೋಸಿಯೇಷನ್ ವತಿಯಿಂದ ಮಡಿಕೇರಿಯ ಮ್ಯಾನ್ಸ್ ಕಾಂಪೌಂಡ್ ಮೈದಾನದಲ್ಲಿ ನಡೆದ ಜಿಲ್ಲಾಮಟ್ಟದ…

*ಮೈಸೂರು-ಕುಶಾಲನಗರ ರೈಲ್ವೆ ಯೋಜನೆ ಪುನಾರಂಭಿಸಲು ಅಶ್ವಿನ್‌ ವೈಷ್ಣವ್‌ಗೆ ಯದುವೀರ್‌ ಮನವಿ ಭೂ ಸ್ವಾಧೀನ ಪ್ರಕ್ರಿಯೆಗೆ ಚಾಲನೆ ನೀಡಲು ಕ್ರಮ ಕೈಗೊಳ್ಳಬೇಕೆಂದು ಸಂಸದರ ಪತ್ರ*

February 10, 2026

*ಕೊಡವ ಭಾಷೆಗೂ ಸಾಂವಿಧಾನಿಕ ಭದ್ರತೆ ನೀಡಬೇಕು : ಸಣ್ಣ ಸಣ್ಣ ಭಾಷೆಗಳನ್ನು ಹತ್ತಿಕಿದರೆ ಏಕತೆಗೆ ದಕ್ಕೆ : ಸಿಎನ್‌ಸಿ ಪ್ರತಿಪಾದನೆ*

February 10, 2026

*ಫೆ.14 ರಂದು ಕೊಡವ ಭವನ ಉದ್ಘಾಟನೆ*

February 10, 2026

*ಮಡಿಕೇರಿಯಲ್ಲಿ “ಆರೋಗ್ಯ ಹಕ್ಕಿನ ಜಾಥಾ”*

February 10, 2026

*ಕೊಡವ ಕುಟುಂಬಗಳ ನಡುವಣ “ಮುಲ್ಲೇಂಗಡ ಕಬಡ್ಡಿ ನಮ್ಮೆ”*

February 10, 2026

*104 ಮೊಬೈಲ್ ಫೋನ್‌ಗಳನ್ನು ವಾರಸುದಾರರಿಗೆ ಹಸ್ತಾಂತರಿಸಿದ ಕೊಡಗು ಜಿಲ್ಲಾ ಪೊಲೀಸ್*

February 10, 2026

*ತಾಲ್ಲೂಕು ಮಟ್ಟದ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ನೀಡಲು ಅರ್ಜಿ ಆಹ್ವಾನ*

February 10, 2026

*ಫೆ.15ರಂದು ಗೌಡ ಜನಾಂಗಗಳ ಜಿಲ್ಲಾ ಮಟ್ಟದ ಕ್ಯಾರಂಬೋರ್ಡ್ ಕ್ರೀಡಾಕೂಟ : ಏಪ್ರಿಲ್ ನಲ್ಲಿ ಟೆನ್ನಿಸ್ ಬಾಲ್ ಕ್ರಿಕೆಟ್*

February 10, 2026

*ಆಹಾರ ವಾಹಿನಿ ಯೋಜನೆಯಡಿ ಸಹಾಯಧನ ಸೌಲಭ್ಯ ಒದಗಿಸಲು ಅರ್ಜಿ ಆಹ್ವಾನ*

February 10, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.