Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*
  • *ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*
  • *ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*
  • *ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*
  • *2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*
  • *ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*
  • *ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*
  • *ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*
  • *36 ವರ್ಷ ಸೇವೆ ಸಲ್ಲಿಸಿದ ಅಂಗನವಾಡಿ ಕಾರ್ಯಕರ್ತೆ ದೇವಮಾಜಿ, ಶಿಕ್ಷಕಿ ಭೋಜಮ್ಮಗೆ ಆತ್ಮೀಯ ಬೀಳ್ಕೊಡುಗೆ*
  • *ವಿರಾಜಪೇಟೆ : ಗಣೇಶ ವಿಸರ್ಜನೆ ಶೋಭಾಯಾತ್ರೆ ಸಂದರ್ಭ ವಿದ್ಯುತ್ ಅವಘಡ : ಐವರಿಗೆ ಗಾಯ : ಇಬ್ಬರ ಸ್ಥಿತಿ ಗಂಭೀರ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕಟ್ಟೆಪುರ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ವಾರ್ಷಿಕೋತ್ಸವ ಸಂಭ್ರಮ‌ : ಪೋಷಕರು ತಮ್ಮ ಮಕ್ಕಳಿಗೆ ಉತ್ತಮ ಸಂಸ್ಕಾರ ಕಲಿಸಿ : ಗಣ್ಯರ ಕರೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕಟ್ಟೆಪುರ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ವಾರ್ಷಿಕೋತ್ಸವ ಸಂಭ್ರಮ‌ : ಪೋಷಕರು ತಮ್ಮ ಮಕ್ಕಳಿಗೆ ಉತ್ತಮ ಸಂಸ್ಕಾರ ಕಲಿಸಿ : ಗಣ್ಯರ ಕರೆ*

ಜನವರಿ 29, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಕುಶಾಲನಗರ ಜ.29 NEWS DESK : ಸೋಮವಾರಪೇಟೆ ತಾಲ್ಲೂಕಿನ ಬೇಸೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಕಟ್ಟೆಪುರ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ವಾರ್ಷಿಕೋತ್ಸವ ಹಾಗೂ ಕ್ರೀಡೋತ್ಸವ ಕಾರ್ಯಕ್ರಮ ಸಂಭ್ರಮದಿಂದ ನಡೆಯಿತು. ವಾರ್ಷಿಕೋತ್ಸವದ ಅಂಗವಾಗಿ ಮಕ್ಕಳಿಗೆ ಏರ್ಪಡಿಸಿದ್ದ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ವಿದ್ಯಾರ್ಥಿಗಳು ಭರತನಾಟ್ಯ, ಜಾನಪದ ನೃತ್ಯ ಹಾಗೂ ಸಮೂಹ ನೃತ್ಯಗಳನ್ನು ಪ್ರದರ್ಶಿಸಿ ಪ್ರೇಕ್ಷಕರ ಮನ ರಂಜಿಸಿದರು. ವಿವಿಧ ಕ್ರೀಡಾ ಚಟುವಟಿಕೆಗಳಲ್ಲಿ ವಿಜೇತರಾದ ಮಕ್ಕಳಿಗೆ ಅತಿಥಿಗಳು ಬಹುಮಾನ ವಿತರಣೆ ಮಾಡಿದರು. ಪೋಷಕರು ಮತ್ತು ಸಾರ್ವಜನಿಕರು ಕಾರ್ಯಕ್ರಮದಲ್ಲಿ ಭಾಗವಹಿಸಿ ಮಕ್ಕಳ ಪ್ರತಿಭೆಯನ್ನು ಪ್ರೋತ್ಸಾಹಿಸಿದರು. ವಾರ್ಷಿಕೋತ್ಸವ ಕಾರ್ಯಕ್ರಮ ಉದ್ಘಾಟಿಸಿದ ಬೇಸೂರು ಗ್ರಾಮ ಪಂಚಾಯತಿ ಅಧ್ಯಕ್ಷ ಕಮಲಮ್ಮ ಮಾತನಾಡಿ, ವಾರ್ಷಿಕೋತ್ಸವಕ್ಕೆ ಶುಭಹಾರೈಸಿದರು. ಗ್ರಾಮಸ್ಥರು ಹಾಗೂ ದಾನಿಗಳು ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಕೈಜೋಡಿಸಬೇಕು. ಕಾರ್ಯಕ್ರಮ ಯಶಸ್ವಿಗೆ ಶ್ರಮಿಸಿದ ಎಲ್ಲಾರಿಗೂ ಧನ್ಯವಾದ ಅರ್ಪಿಸುತ್ತೇನೆ ಎಂದರು.  ಮುಖ್ಯ ಭಾಷಣಕಾರರಾಗಿ ಆಗಮಿಸಿದ್ದ ಸೋಮವಾರಪೇಟೆ ತಾಲ್ಲೂಕು ಮೀನುಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕಿ ಮಿಲನ ಭರತ್ ಮಾತನಾಡಿ, ಮಕ್ಕಳ ಸರ್ವಾಂಗೀಣ ಬೆಳವಣಿಗೆಯಲ್ಲಿ ಶಾಲೆಗಳು ಹೊಣೆಗಾರಿಕೆ ಬಹುಮುಖ್ಯವಾದರೂ ಪೋಷಕರು ಜವಾಬ್ದಾರಿಯೂ ಸಮನಾಗಿದೆ. ವಿದ್ಯಾರ್ಥಿಗಳು ಕಠಿಣ ಪರಿಶ್ರಮದಿಂದ ಓದಿ ಮುಂದೆ ಬರಬೇಕು. ಸಾಧನೆ ಇಂದಿನ ಯುವ ಜನಾಂಗಕ್ಕೆ ಮಾದರಿಯಾಗಿ ಪ್ರೇರಣೆ ನೀಡಿಬೇಕು. ವಿದ್ಯೆ ಮನುಷ್ಯನನ್ನು ಬಾಳಿ ಬೆಳಸುತ್ತದೆ. ಎತ್ತರಕ್ಕೆ ಬೆಳದ ವ್ಯಕ್ತಿ ಸಮಾಜದ ಪ್ರಗತಿ, ದೇಶದ ಅಭಿವೃದ್ಧಿಗೆ ಶ್ರಮಿಸಬೇಕು ಎಂದು ಕರೆ ನೀಡಿದರು. ಚಿಕ್ಕ ಅಳುವಾರ ಸ್ನಾತಕೋತ್ತರ ಕೇಂದ್ರ ಪ್ರೊಫೆಸರ್ ಧರ್ಮಪ್ಪ ಮಾತನಾಡಿ, ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಮಕ್ಕಳಿಗೆ ಉತ್ತಮ ಹಾಗೂ ಗುಣಮಟ್ಟದ ಶಿಕ್ಷಣ ತುಂಬ ಅಗತ್ಯವಾಗಿದೆ. ಪೋಷಕರು ತಮ್ಮ ಮಕ್ಕಳ ಪ್ರೌಢಶಿಕ್ಷಣ ಮುಗಿದ ನಂತರ ಪಿಯುಸಿ ವ್ಯಾಸಂಗಕ್ಕೆ ಪಟ್ಟಣ ಹಾಗೂ ನಗರ ಪ್ರದೇಶದ ಉತ್ತಮ ಕಾಲೇಜು ಗಳಿಗೆ ಸೇರಿಸಿ ಅವರನ್ನು ಉನ್ನತ ವ್ಯಾಸಂಗ ಕೊಡಿಸುವತ್ತ ಚಿಂತನೆ ಹರಿಸಬೇಕು.ಇತ್ತೀಚಿನ ವರ್ಷಗಳಲ್ಲಿ ಪದವಿ ವ್ಯಾಸಂಗ ಮಾಡುವವರ ಸಂಖ್ಯೆ ಶೇ.5 ಕ್ಕಿಂತ ಕಡಿಮೆಯಾಗಿದೆ. ಸ್ನಾತಕೋತ್ತರ ಪದವಿ ಪಡೆಯುವವರ ಸಂಖ್ಯೆ ಶೇ.2 ಕ್ಕಿಂತಲೂ ಕಡಿಮೆ ಇದೆ.ವರ್ಷ ದಿಂದ ವರ್ಷಕ್ಕೆ ಉನ್ನತ ಶಿಕ್ಷಣ ಪಡೆಯುವವರ ಸಂಖ್ಯೆ ಕ್ಷೀಣಿಸುತ್ತಿದೆ ಎಂದು ವಿಷಾದ ವ್ಯಕ್ತಪಡಿಸಿದರು.  ಸಂಪನ್ಮೂಲ ವ್ಯಕ್ತಿ ಜಯಕುಮಾರ್ ಮಾತನಾಡಿ, ಪೋಷಕರು ತಮ್ಮ ಮಕ್ಕಳಿಗೆ ಬಾಲ್ಯದಿಂದಲೇ ಉತ್ತಮ ಸಂಸ್ಕಾರ ಹಾಗೂ ಹವ್ಯಾಸಗಳನ್ನು ಕಲಿಸುವತ್ತ ಗಮನ ಹರಿಸಬೇಕು. ಮನೆಯೇ ಮೊದಲ ಪಾಠ ಶಾಲೆ, ತಾಯಿಯೇ ಮೊದಲ ಗುರುಗಳಾಗಿದ್ದಾರೆ. ಶಾಲೆಯ ಜೊತೆಗೆ ಮನೆಯ ಪರಿಸರ ಉತ್ತಮವಾಗಿರಬೇಕು. ಮನೆಯಲ್ಲಿ ತಂದೆತಾಯಿಗಳು ಮಕ್ಕಳಿಗೆ ಒಳ್ಳೆಯ ಮಾರ್ಗದರ್ಶನ ಮಾಡುವ ಮೂಲಕ ಅವರನ್ನು ಉತ್ತಮ ಸತ್ಪ್ರರ್ಜೆಯಾಗಿ ರೂಪಿಸಬೇಕು ಎಂದರು. ಕಾಫಿ ಬೆಳೆಗಾರ ಯತೀಶ್ ಮಾತನಾಡಿ,ಪೋಷಕರು ಮಕ್ಕಳಿಗೆ ಆಸ್ತಿ ಮಾಡುವುದು ಬೇಡ ಮಕ್ಕಳನ್ನೇ ಆಸ್ತಿಯನ್ನಾಗಿ ಮಾಡಿ.ಅವರಿಗೆ ಉತ್ತಮ ಶಿಕ್ಷಣ ಕೊಡಿಸಿ ಸಮಾಜದಲ್ಲಿ ಉನ್ನತ ಸ್ಥಾನಮಾನಗಳಿಸುವಂತೆ ಒತ್ತು ನೀಡಬೇಕು ಎಂದರು. ಶಾಲೆಯ ಶಿಕ್ಷಕಿ ಎಚ್.ಪಿ.ತೇಜಾವತಿ ಶಾಲಾ ವಾರ್ಷಿಕ ವರದಿಯನ್ನು ವಾಚಿಸಿ ಶಾಲೆಯ ಶೈಕ್ಷಣಿಕ ಮತ್ತು ಕ್ರೀಡಾ ಸಾಧನೆಗಳನ್ನು ಹಂಚಿಕೊಂಡರು. ಶಾಲಾ ಅಭಿವೃದ್ಧಿ ಸಮಿತಿ ಅಧ್ಯಕ್ಷ ಹನುಮೇಗೌಡ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಶಾಲಾ ಮುಖ್ಯ ಶಿಕ್ಷಕ ಎಂ.ಸಿ.ಧರ್ಮರಾಜ್, ಶಾಲಾಭಿವೃದ್ಧಿ ಸಮಿತಿ ಉಪಾಧ್ಯಕ್ಷೆ ಸೌಮ್ಯ, ರಾಜ್ಯ ಸರ್ಕಾರಿ ನೌಕರರ ತಾಲ್ಲೂಕು ಘಟಕದ ನಿರ್ದೇಶಕ ಸುರೇಶ್, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ನಿರ್ದೇಶಕಿ ಕವಿತಾ,ಕೊಡ್ಲಿಪೇಟೆ ಶಿಕ್ಷಕ ಕೆ.ಎನ್.ಕಿರಣ್ ಕುಮಾರ್,ಮುಳ್ಳುರು ಸರ್ಕಾರಿ ಪ್ರಾಥಮಿಕ ಶಾಲೆ ಮುಖ್ಯ ಶಿಕ್ಷಕ ಸತೀಶ್,ಸಹ ಶಿಕ್ಷಕ ಜಾನ್,ಸಿ. ಆರ್.ಪಿ.ಮುರುಳೀಧರ್,ದಾನಿಗಳಾದ ಎನ್.ಎನ್.ಧರ್ಮಪ್ಪ ,ಮಹೇಶ್,ಸಿದ್ದಪ್ಪ, ತೋಪೇಗೌಡ,ಜವರಯ್ಯ,ಗೋಪಾಣ್ಣ,ಪುಟ್ಟರಾಜು,ಎಚ್.ಬಿ.ಧರ್ಮಪ್ಪ, ಸುವರ್ಣ, ಅಪ್ಪಾಜಿ, ಮಹೇಶಾಚಾರಿ, ರತ್ನಮ್ಮ ಸುರೇಶ್ ಪಾಲ್ಗೊಂಡಿದ್ದರು. ಮೊದಲಿಗೆ ಗ್ರಾಮಸ್ಥರಿಗೆ ನಡೆದ ಕಬಡ್ಡಿ ಕ್ರೀಡಾಕೂಟ ಕ್ರೀಡಾಭಿಮಾನಿಗಳ ಮನ ರಂಜಿಸಿತು. ಕಾಫಿ ಬೆಳೆಗಾರ ಯತೀಶ್ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಶುಭ ಹಾರೈಸಿದರು. ಇದೇ ಸಂದರ್ಭ ದಾನಿಗಳು, ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಗಣ್ಯರು ಹಾಗೂ ಅತಿಥಿಗಳನ್ನು ಶಾಲಾಭಿವೃದ್ಧಿ ಸಮಿತಿ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.

Follow us Follow us
Share. WhatsApp Facebook Twitter Email Telegram Copy Link

Related Posts

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*

ಸೆಪ್ಟೆಂಬರ್ 26, 2026

*ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*

ಸೆಪ್ಟೆಂಬರ್ 26, 2026

*ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*

ಸೆಪ್ಟೆಂಬರ್ 26, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ, NEWS DESK ಸೆ.26: ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಸ್ಕೃತಿ ಮತ್ತು ಸಾಹಿತ್ಯ ಪರಿಷತ್ತು (ಬೆಂಗಳೂರು) ವತಿಯಿಂದ ದಾವಣಗೆರೆಯಲ್ಲಿ…

*ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*

ಸೆಪ್ಟೆಂಬರ್ 26, 2026

*ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*

ಸೆಪ್ಟೆಂಬರ್ 26, 2026

*2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*

ಸೆಪ್ಟೆಂಬರ್ 26, 2026

*ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*

ಸೆಪ್ಟೆಂಬರ್ 26, 2026

*ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*

ಸೆಪ್ಟೆಂಬರ್ 26, 2026

*ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*

ಸೆಪ್ಟೆಂಬರ್ 26, 2026

*36 ವರ್ಷ ಸೇವೆ ಸಲ್ಲಿಸಿದ ಅಂಗನವಾಡಿ ಕಾರ್ಯಕರ್ತೆ ದೇವಮಾಜಿ, ಶಿಕ್ಷಕಿ ಭೋಜಮ್ಮಗೆ ಆತ್ಮೀಯ ಬೀಳ್ಕೊಡುಗೆ*

ಸೆಪ್ಟೆಂಬರ್ 26, 2026

*ವಿರಾಜಪೇಟೆ : ಗಣೇಶ ವಿಸರ್ಜನೆ ಶೋಭಾಯಾತ್ರೆ ಸಂದರ್ಭ ವಿದ್ಯುತ್ ಅವಘಡ : ಐವರಿಗೆ ಗಾಯ : ಇಬ್ಬರ ಸ್ಥಿತಿ ಗಂಭೀರ*

ಸೆಪ್ಟೆಂಬರ್ 26, 2026

*ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕೊಡಗಿನಲ್ಲಿ ಜನಜಾಗೃತಿ : 50 ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ವಾಹನ ಜಾಥಾ*

ಸೆಪ್ಟೆಂಬರ್ 25, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.