
ನಾಪೋಕ್ಲು ಜ.29 NEWS DESK : ಕಕ್ಕಬ್ಬೆ ಕ್ಲಸ್ಟರ್ ಮಟ್ಟದ ಕಲಿಕಾ ಹಬ್ಬವು ಕಕ್ಕಬ್ಬೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸಂಭ್ರಮದಿಂದ ಜರುಗಿತು. ಶಾಲಾ ಅಭಿವೃದ್ಧಿ ಸಮಿತಿ ಅಧ್ಯಕ್ಷರಾದ ಕೆ.ಎ.ಕಾರ್ಯಪ್ಪ ಅವರ ಅಧ್ಯಕ್ಷತೆಯಲ್ಲಿ ಜರುಗಿದ ಕಾರ್ಯಕ್ರಮವನ್ನು ಮುಖ್ಯ ಅತಿಥಿಗಳು ಉದ್ಘಾಟಿಸಿ, ಕಲಿಕಾ ಹಬ್ಬಕ್ಕೆ ಶುಭ ಹಾರೈಸಿದರು. ನಂತರ ಮಕ್ಕಳಿಂದ ವಿವಿಧ ಕಲಿಕಾ ಚಟುವಟಿಕೆಗಳನ್ನು ಏರ್ಪಡಿಸಲಾಗಿತ್ತು. ಸ್ಪರ್ಧೆಯ ವಿಜೇತರರಿಗೆ ಕಕ್ಕಬ್ಬೆ ಗ್ರಾಮ ಪಂಚಾಯಿತಿ ವತಿಯಿಂದ ಬಹುಮಾನಗಳನ್ನು ವಿತರಿಸಲಾಯಿತು. ಈ ಸಂದರ್ಭ ಕಕ್ಕಬೆ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಪೊಂಗೆರ ಶಿಲ್ಪಾ, ಕಕ್ಕಬೆ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಬಿ.ವೈ.ಅಶೋಕ್ ಕುಮಾರ್, ಗ್ರಾಮ ಪಂಚಾಯಿತಿ ಸದಸ್ಯರಾದ ಸಫಿಯ, ಇಂದಿರಾ, ಕಕ್ಕಬೆ ಕ್ಲಸ್ಟರ್ ಸಮೂಹ ಸಂಪನ್ಮೂಲ ವ್ಯಕ್ತಿಯವರಾದ ಕಲ್ಪನಾ ಪಿ.ಆರ್., ಯವಕಪಾಡಿ ಶಾಲೆಯ ಎಸ್‍ಡಿಎಂಸಿ ಸದಸ್ಯರಾದ ಗಿರಿಜಾ, ಕಕ್ಕಬೆ ಶಾಲೆಯ ಮುಖ್ಯೋಪಾಧ್ಯಾಯರಾದ ಮಾಲತಿ ಕ್ಲಸ್ಟರ್ ನ ಶಿಕ್ಷಕರು, ವಿದ್ಯಾರ್ಥಿಗಳು ಹಾಗೂ ಪೋಷಕರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ದಾನಿಗಳಾದ ಕೆಡಿಪಿ ಸದಸ್ಯರಾದ ಬಾಚಮಂಡ ಲವ ಚಿನ್ನಪ್ಪ ವಿದ್ಯಾರ್ಥಿಗಳಿಗೆ ಸೇರಿದಂತೆ ಆಗಮಿಸಿದ ಸರ್ವರಿಗೂ ಊಟದ ವ್ಯವಸ್ಥೆಯನ್ನು ಮಾಡಿಸಿದರು. ಶಾಲೆಯ ಶಿಕ್ಷಕಿ ಮಾಲತಿ ಸ್ವಾಗತಿಸಿದರು. ಕ್ಲಸ್ಟರ್ ನ ಸಮೂಹ ಸಂಪನ್ಮೂಲ ವ್ಯಕ್ತಿ ಕಲ್ಪನಾ ಪಿ.ಆರ್ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಶಿಕ್ಷಕಿ ಆಶಿಕ, ಸಾಜಿದಾ ಕಾರ್ಯಕ್ರಮವನ್ನು ನಿರ್ವಹಿಸಿದರು. ಮಮತಾ ವಂದಿಸಿದರು.
ವರದಿ : ದುಗ್ಗಳ ಸದಾನಂದ.










