Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5657 ಪ್ರಕರಣಗಳು ಇತ್ಯರ್ಥ*
  • *ಕಾಯಕ ಶರಣರ ಜಯಂತಿ ಸಮ ಸಮಾಜ ನಿರ್ಮಾಣದಲ್ಲಿ ಕಾಯಕ ಶರಣರ ಕೊಡುಗೆ ಅಪಾರ: ಹೇಮಲತಾ*
  • *ಸೌಂದರ್ಯ ತಜ್ಞರು ನಿತ್ಯ ವ್ಯಾಯಾಮದೊಂದಿಗೆ ತಮ್ಮ ಆರೋಗ್ಯ ವೃದ್ಧಿಸಿಕೊಳ್ಳುವ ಬಗ್ಗೆ ಗಮನಹರಿಸಬೇಕು ಎಂದು ಅಂತರರಾಷ್ಟ್ರೀಯ ಬ್ಯಾಡ್ಮಿಂಟನ್ ಕ್ರೀಡಾಪಟು ತಾತಪಂಡ ಜ್ಯೋತಿ ಸೋಮಯ್ಯ ಕಿವಿಮಾತು ಹೇಳಿದರು*
  • *ಮೈಸೂರು-ಕುಶಾಲನಗರ ರೈಲ್ವೆ ಯೋಜನೆ ಪುನಾರಂಭಿಸಲು ಅಶ್ವಿನ್‌ ವೈಷ್ಣವ್‌ಗೆ ಯದುವೀರ್‌ ಮನವಿ ಭೂ ಸ್ವಾಧೀನ ಪ್ರಕ್ರಿಯೆಗೆ ಚಾಲನೆ ನೀಡಲು ಕ್ರಮ ಕೈಗೊಳ್ಳಬೇಕೆಂದು ಸಂಸದರ ಪತ್ರ*
  • *ಕೊಡವ ಭಾಷೆಗೂ ಸಾಂವಿಧಾನಿಕ ಭದ್ರತೆ ನೀಡಬೇಕು : ಸಣ್ಣ ಸಣ್ಣ ಭಾಷೆಗಳನ್ನು ಹತ್ತಿಕಿದರೆ ಏಕತೆಗೆ ದಕ್ಕೆ : ಸಿಎನ್‌ಸಿ ಪ್ರತಿಪಾದನೆ*
  • *‘ಜಂತು ಹುಳು ರಹಿತ ಮಕ್ಕಳು – ಆರೋಗ್ಯವಂತ ಮಕ್ಕಳು’ ರಾಷ್ಟ್ರೀಯ ಜಂತು ಹುಳು ನಿವಾರಣಾ ಕಾರ್ಯಕ್ರಮ*
  • *ಫೆ.14 ರಂದು ಕೊಡವ ಭವನ ಉದ್ಘಾಟನೆ*
  • *ಮಡಿಕೇರಿಯಲ್ಲಿ “ಆರೋಗ್ಯ ಹಕ್ಕಿನ ಜಾಥಾ”*
  • *ಕೊಡವ ಕುಟುಂಬಗಳ ನಡುವಣ “ಮುಲ್ಲೇಂಗಡ ಕಬಡ್ಡಿ ನಮ್ಮೆ”*
  • *104 ಮೊಬೈಲ್ ಫೋನ್‌ಗಳನ್ನು ವಾರಸುದಾರರಿಗೆ ಹಸ್ತಾಂತರಿಸಿದ ಕೊಡಗು ಜಿಲ್ಲಾ ಪೊಲೀಸ್*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ವಿಬಿ ರಾಮ್ ಜಿ ಯೋಜನೆಯನ್ನು ಕಾಂಗ್ರೆಸ್ ಉದ್ದೇಶಪೂರ್ವಕವಾಗಿ ವಿರೋಧಿಸುತ್ತಿದೆ*
ಇತ್ತೀಚಿನ ಸುದ್ದಿಗಳು

*ವಿಬಿ ರಾಮ್ ಜಿ ಯೋಜನೆಯನ್ನು ಕಾಂಗ್ರೆಸ್ ಉದ್ದೇಶಪೂರ್ವಕವಾಗಿ ವಿರೋಧಿಸುತ್ತಿದೆ*

January 29, 20262 Mins Read
Share
Facebook Twitter LinkedIn Pinterest WhatsApp Email

ಮಡಿಕೇರಿ ಜ.29 NEWS DESK : ಮಹಾತ್ಮ ಗಾಂಧಿ ಪರಿಕಲ್ಪನೆಯ ಗ್ರಾಮ ಸ್ವರಾಜ್ಯದ ಚಿಂತನೆಗಳಡಿ ರೂಪಿಸಿರುವ ವಿಬಿ ರಾಮ್ ಜಿ ಯೋಜನೆಯನ್ನು ಕಾಂಗ್ರೆಸ್ ಪಕ್ಷ  ಉದ್ದೇಶಪೂರ್ವಕವಾಗಿ ವಿರೋಧಿಸುತ್ತಿದೆ ಮತ್ತು ಅಪಪ್ರಚಾರದಲ್ಲಿ ತೊಡಗಿದೆ ಮೈಸೂರು- ಕೊಡಗು ಕ್ಷೇತ್ರದ ಸಂಸದ ಯದುವೀರ್ ಒಡೆಯರ್ ಅವರು ಆರೋಪಿಸಿದ್ದಾರೆ. ಮಡಿಕೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಿಕಸಿತ ಭಾರತದ ಪರಿಕಲ್ಪನೆಯಡಿ ಅಭಿವೃದ್ಧಿ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ನಿರ್ವಹಿಸಿ ಮೂರು ಬಾರಿ ಪ್ರಧಾನಮಂತ್ರಿಗಳಾಗಿರುವ ನರೇಂದ್ರ ಮೋದಿಯವರನ್ನು ವಿರೋಧಿಸುವ ಏಕೈಕ ಉದ್ದೇಶದಿಂದ ಕಾಂಗ್ರೆಸ್ ಪಕ್ಷ ವಿಬಿ ರಾಮ್ ಜಿ ಯೋಜನೆಯ ವಿರುದ್ಧ ಮಾತನಾಡುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಬಹಳ ಹಿಂದಿನಿಂದಲು ನರೇಂದ್ರ ಮೋದಿಯವರನ್ನು ವಿರೋಧಿಸಿಕೊಂಡು ಬರುತ್ತಿರುವ ಕಾಂಗ್ರೆಸ್ ಇದೀಗ ವಿಬಿ ರಾಮ್ ಜಿ ಯೋಜನೆಯನ್ನು ವಿರೋಧಿಸುತ್ತಿದೆ. ಇಂತಹ ಮನಸ್ಥಿತಿಯಿಂದ ಕೇಂದ್ರದ ಮಹತ್ವಾಕಾಂಕ್ಷಿ ಆಯುಷ್ಮಾನ್ ಸೇರಿದಂತೆ ವಿವಿಧ ಯೋಜನೆಗಳಿಗೆ ರಾಜ್ಯದಲ್ಲಿ ಹಿನ್ನಡೆಯಾಗುವಂತಾಗಿದೆ ಎಂದು ಯೆಂದು ಬೇಸರ ವ್ಯಕ್ತಪಡಿಸಿದರು.  ಮಹಾತ್ಮಾ ಗಾಂಧೀಜಿ ಮನ್‍ರೇಗಾ ಯೋಜನೆ 2005ರಲ್ಲಿ ಆರಂಭಗೊಂಡಿತು, ಇದೀಗ ನಾವು 2026ನೇ ಸಾಲಿನಲ್ಲಿದ್ದೇವೆ. ಈ ನಡುವಿನ ಅವಧಿಯಲ್ಲಿ ಭಾರತ ಆಧುನೀಕತೆಯೊಂದಿಗೆ ಸಾಕಷ್ಟು ಬದಲಾವಣೆಗಳನ್ನು ಕಾಣುತ್ತಿದೆ. ಆದ್ದರಿಂದ ಇಂದಿನ ಕಾಲಘಟ್ಟಕ್ಕೆ ಅನ್ವಯಿಸುವಂತೆ ಯೋಜನೆಯನ್ನು ನವೀಕರಿಸುವ ಮೂಲಕ, ಮಹಾತ್ಮಾ ಗಾಂಧೀಜಿಯವರ ಪರಿಕಲ್ಪನೆಯ ಗ್ರಾಮಗಳ ಅಭ್ಯುದಯಕ್ಕೆ ಹೆಚ್ಚಿನ ಒತ್ತನ್ನು ನೀಡಲಾಗಿದೆ ಎಂದು ತಿಳಿಸಿದರು. ಹಿಂದಿನ ಮನ್‍ರೇಗಾ ಯೋಜನೆಯ ಹಂತದಲ್ಲಿ ಮೇಲ್ವಿಚಾರಣೆಗಳು ಸಮರ್ಪಕವಾಗಿ ನಡೆಯುತ್ತಿರಲಿಲ್ಲ ಮತ್ತು ಹೊಣೆಗಾರಿಕೆಯೂ ಇರಲಿಲ್ಲ. ಆದರೆ, ವಿಬಿ ರಾಮ್ ಜಿ ಯೋಜನೆಯಡಿ ಆರು ತಿಂಗಳಿಗೊಮ್ಮೆ ಯೋಜನೆ ಅನುಷ್ಠಾನÀದ ಕುರಿತು ಕಡ್ಡಾಯ ಲೆಕ್ಕ ಪರಿಶೋಧನೆ ನಡೆಯಬೇಕಾಗಿದೆ. ಕಾಮಗಾರಿ ನಡೆಯುವ ಸ್ಥಳದಲ್ಲಿ ಮಾಹಿತಿಯ ಫಲಕ ಅಳವಡಿಕೆ ಮೊದಲಾದ ಕ್ರಮಗಳನ್ನು ಕೈಗೊಳ್ಳಲಾಗಿದೆ. ಹೇಳಿದರು. ವಿಬಿ ರಾಮ್ ಜಿ ಯೋಜನೆಯಲ್ಲಿನ ಅಂಶಗಳು ಕೊಡಗು ಜಿಲ್ಲೆಯಲ್ಲಿನ ಪ್ರಾಕೃತಿಕ ವಿಕೋಪಗಳನ್ನು ತಡೆಗಟ್ಟುವ ನಿಟ್ಟಿನಲ್ಲಿಯು ಸಹಕಾರಿಯಾಗಿದೆ. ಯೋಜನೆಯ ಮೂಲಕ ಮುಂಗಾರಿನ ಅವಧಿಯಲ್ಲಿ ಬರೆ ಕುಸಿತಗಳು ಉಂಟಾಗಬಹುದಾದ ಪ್ರದೇಶಗಳಲ್ಲಿ ತಡೆಗೋಡೆಗಳ ನಿರ್ಮಾಣಕ್ಕೂ ಗ್ರಾಮ ಪಂಚಾಯ್ತಿಗಳಿಗೆ ಅವಕಾಶ ದೊರಯಲಿದೆ ಎಂದು ಸಂಸದ ಯದುವೀರ್ ಒಡೆಯರ್ ಹೇಳಿದರು. ಜಿಲ್ಲಾ ಬಿಜೆಪಿ ಅಧ್ಯಕ್ಷ ನಾಪಂಡ ರವಿ ಕಾಳಪ್ಪ ಅವರು ಮಾತನಾಡಿ, ವಿಬಿ ರಾಮ್ ಜಿ ಯೋಜನೆಯ ಹಿನ್ನೆಲೆಯಲ್ಲಿ ರಾಜ್ಯ ಸರಕಾರ ಗ್ರಾಮ ಪಂಚಾಯ್ತಿಗಳಲ್ಲಿ ಸಭೆ ನಡೆಸುವಂತೆ ಸೂಚನೆ ನೀಡಿತ್ತು. ಅದರಂತೆ ಜಿಲ್ಲಾ ವ್ಯಾಪ್ತಿಯ ಗ್ರಾ.ಪಂಗಳಲ್ಲಿ ನಡೆದ ಸಭೆಯಲ್ಲಿ, ಯೋಜನೆಯಿಂದ ಪಂಚಾಯ್ತಿಗೆ ಅನುಕೂಲವಾಗಲಿದೆ ಎನ್ನುವುದನ್ನು ಅರಿತ ಬಹುತೇಕ ಗ್ರಾ.ಪಂ ಗಳು ಸಮ್ಮತಿ ಸೂಚಿಸಿವೆ ಎಂದು ತಿಳಿಸಿದರು. ವಿಬಿ ರಾಮ್ ಜಿ ಯೋಜನೆಗೆ ಸಂಬಂಧಿಸಿದಂತೆ ಜಿಲ್ಲಾ ಬಿಜೆಪಿಯಿಂದ ಜ.30ರಂದು ಬೆಳಗ್ಗೆ ನಗರದ ಬಿಜೆಪಿ ಕಚೇರಿಯಲ್ಲಿ ಜಿಲ್ಲಾ ಮಟ್ಟದ ಸಮಾವೇಶ ನಡೆಯಲಿದೆ ಎಂದರು. ಬಿಜೆಪಿ ಕೃಷಿ ಮೋರ್ಚಾದ ರಾಜ್ಯ ಕಾರ್ಯದರ್ಶಿ ಡಾ.ಬಿ.ಸಿ.ನವೀನ್ ಕುಮಾರ್, ಅವರು ಮಾತನಾಡಿ ಗ್ರಾಮೀಣ ಭಾಗಗಳ ಪ್ರಗತಿಗೆ ಯೋಜನೆ ಪೂರಕವಾಗಿದ್ದರೂ ಕಾಂಗ್ರೆಸ್ ಅಪಪ್ರಚಾರದಲ್ಲಿ ತೊಡಗಿರುವುದು ಸರಿಯಲ್ಲವೆಂದರು.  ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಮಹೇಶ್ ಜೈನಿ, ವಕ್ತಾರ ಬಿ.ಕೆ.ಅರುಣ್ ಕುಮಾರ್ ಹಾಗೂ ಮಡಿಕೇರಿ ನಗರ ಬಿಜೆಪಿ ಅಧ್ಯಕ್ಷ ಉಮೇಶ್ ಸುಬ್ರಹ್ಮಣಿ ಉಪಸ್ಥಿತರಿದ್ದರು.

Share. Facebook Twitter Pinterest LinkedIn Tumblr Email WhatsApp
Previous Article*ಶಿಕ್ಷಕ ವಿಕ್ರಾಂತ್ ಕೇಳ್ಕರ್ ರಚಿಸಿರುವ ಎಸ್‌ಎಸ್‌ಎಲ್‌ಸಿ ಇಂಗ್ಲೀಷ್ ಕಲಿಕಾ ಪುಸ್ತಕ ಬಿಡುಗಡೆ : ಇಂಗ್ಲೀಷ್ ಕಲಿಕೆ ಕಬ್ಬಿಣದ ಕಡಲೆಯಲ್ಲ : ರಾಮಚಂದ್ರರಾಜೇ ಅರಸ್ ಸಲಹೆ*
Next Article *ರಾಜ್ಯ ಸರಕಾರದ ವಿಳಂಬವೇ ರೈಲು ಮಾರ್ಗದ ಹಿನ್ನಡೆಗೆ ಕಾರಣ*

Related Posts

*ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5657 ಪ್ರಕರಣಗಳು ಇತ್ಯರ್ಥ*

February 11, 2026

*ಕಾಯಕ ಶರಣರ ಜಯಂತಿ ಸಮ ಸಮಾಜ ನಿರ್ಮಾಣದಲ್ಲಿ ಕಾಯಕ ಶರಣರ ಕೊಡುಗೆ ಅಪಾರ: ಹೇಮಲತಾ*

February 10, 2026

*ಸೌಂದರ್ಯ ತಜ್ಞರು ನಿತ್ಯ ವ್ಯಾಯಾಮದೊಂದಿಗೆ ತಮ್ಮ ಆರೋಗ್ಯ ವೃದ್ಧಿಸಿಕೊಳ್ಳುವ ಬಗ್ಗೆ ಗಮನಹರಿಸಬೇಕು ಎಂದು ಅಂತರರಾಷ್ಟ್ರೀಯ ಬ್ಯಾಡ್ಮಿಂಟನ್ ಕ್ರೀಡಾಪಟು ತಾತಪಂಡ ಜ್ಯೋತಿ ಸೋಮಯ್ಯ ಕಿವಿಮಾತು ಹೇಳಿದರು*

February 10, 2026

*ಕಾಯಕ ಶರಣರ ಜಯಂತಿ ಸಮ ಸಮಾಜ ನಿರ್ಮಾಣದಲ್ಲಿ ಕಾಯಕ ಶರಣರ ಕೊಡುಗೆ ಅಪಾರ: ಹೇಮಲತಾ*

February 10, 2026

ಮಡಿಕೇರಿ,  NEWS DESK ಫೆ.10:-ಹನ್ನೆರಡನೇ ಶತಮಾನದಲ್ಲಿ ಬಸವಣ್ಣ ಅವರ ನೇತೃತ್ವದಲ್ಲಿ ಅನುಭವ ಮಂಟಪದಲ್ಲಿ ಹಲವು ಕಾಯಕ ಶರಣರು ವರ್ಣ ವ್ಯವಸ್ಥೆ,…

*ಸೌಂದರ್ಯ ತಜ್ಞರು ನಿತ್ಯ ವ್ಯಾಯಾಮದೊಂದಿಗೆ ತಮ್ಮ ಆರೋಗ್ಯ ವೃದ್ಧಿಸಿಕೊಳ್ಳುವ ಬಗ್ಗೆ ಗಮನಹರಿಸಬೇಕು ಎಂದು ಅಂತರರಾಷ್ಟ್ರೀಯ ಬ್ಯಾಡ್ಮಿಂಟನ್ ಕ್ರೀಡಾಪಟು ತಾತಪಂಡ ಜ್ಯೋತಿ ಸೋಮಯ್ಯ ಕಿವಿಮಾತು ಹೇಳಿದರು*

February 10, 2026

*ಮೈಸೂರು-ಕುಶಾಲನಗರ ರೈಲ್ವೆ ಯೋಜನೆ ಪುನಾರಂಭಿಸಲು ಅಶ್ವಿನ್‌ ವೈಷ್ಣವ್‌ಗೆ ಯದುವೀರ್‌ ಮನವಿ ಭೂ ಸ್ವಾಧೀನ ಪ್ರಕ್ರಿಯೆಗೆ ಚಾಲನೆ ನೀಡಲು ಕ್ರಮ ಕೈಗೊಳ್ಳಬೇಕೆಂದು ಸಂಸದರ ಪತ್ರ*

February 10, 2026

*ಕೊಡವ ಭಾಷೆಗೂ ಸಾಂವಿಧಾನಿಕ ಭದ್ರತೆ ನೀಡಬೇಕು : ಸಣ್ಣ ಸಣ್ಣ ಭಾಷೆಗಳನ್ನು ಹತ್ತಿಕಿದರೆ ಏಕತೆಗೆ ದಕ್ಕೆ : ಸಿಎನ್‌ಸಿ ಪ್ರತಿಪಾದನೆ*

February 10, 2026

*ಫೆ.14 ರಂದು ಕೊಡವ ಭವನ ಉದ್ಘಾಟನೆ*

February 10, 2026

*ಮಡಿಕೇರಿಯಲ್ಲಿ “ಆರೋಗ್ಯ ಹಕ್ಕಿನ ಜಾಥಾ”*

February 10, 2026

*ಕೊಡವ ಕುಟುಂಬಗಳ ನಡುವಣ “ಮುಲ್ಲೇಂಗಡ ಕಬಡ್ಡಿ ನಮ್ಮೆ”*

February 10, 2026

*104 ಮೊಬೈಲ್ ಫೋನ್‌ಗಳನ್ನು ವಾರಸುದಾರರಿಗೆ ಹಸ್ತಾಂತರಿಸಿದ ಕೊಡಗು ಜಿಲ್ಲಾ ಪೊಲೀಸ್*

February 10, 2026

*ತಾಲ್ಲೂಕು ಮಟ್ಟದ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ನೀಡಲು ಅರ್ಜಿ ಆಹ್ವಾನ*

February 10, 2026

*ಫೆ.15ರಂದು ಗೌಡ ಜನಾಂಗಗಳ ಜಿಲ್ಲಾ ಮಟ್ಟದ ಕ್ಯಾರಂಬೋರ್ಡ್ ಕ್ರೀಡಾಕೂಟ : ಏಪ್ರಿಲ್ ನಲ್ಲಿ ಟೆನ್ನಿಸ್ ಬಾಲ್ ಕ್ರಿಕೆಟ್*

February 10, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.