



ಮಡಿಕೇರಿ ಜ.31 NEWS DESK : ಅಲ್ಲಾರಂಡ ರಂಗಚಾವಡಿ, ಸಿರಿಗನ್ನಡ ವೇದಿಕೆ ಹಾಗೂ ‘ಚಕೋರ ಕೊಡಗು’ ಕರ್ನಾಟಕ ಸಾಹಿತ್ಯ ಅಕಾಡೆಮಿ ವತಿಯಿಂದ ಕಲಾವಿದ ಅಲ್ಲಾರಂಡ ವಿಠಲ ನಂಜಪ್ಪ ಅವರ ‘ಬಹುರೂಪಿ’ ಪುಸ್ತಕ ಬಿಡುಗಡೆ ಸಮಾರಂಭ ಫೆ.5 ರಂದು ಮಡಿಕೇರಿಯಲ್ಲಿ ನಡೆಯಲಿದೆ. ನಗರದ ಫೀ.ಮಾ.ಕೆ.ಎಂ.ಕಾರ್ಯಪ್ಪ ವೃತ್ತದ ಬಳಿಯ ಗಾಂಧಿ ಭವನದಲ್ಲಿ ಬೆಳಿಗ್ಗೆ 10.30 ಗಂಟೆಗೆ ಕ್ರೀಡಾ ಬರಹಗಾರ ಮನೆಯಪಂಡ ಎ.ಪೊನ್ನಪ್ಪ ಅವರ ಅಧ್ಯಕ್ಷತೆಯಲ್ಲಿ ನಡೆಯುವ ಕಾರ್ಯಕ್ರಮವನ್ನು ಸಾಹಿತಿ ಹಾಗೂ ವಿಚಾರವಾದಿ ಪ್ರೊ.ಎಸ್.ಜಿ.ಸಿದ್ಧರಾಮಯ್ಯ ಅವರು ಉದ್ಘಾಟಿಸಲಿದ್ದಾರೆ. ವಿಶೇಷ ಅತಿಥಿಗಳಾಗಿ ಜೆಸಿಐ ಇಂಡಿಯಾದ ರಾಷ್ಟ್ರೀಯ ಅಧ್ಯಕ್ಷ ಅಜ್ಜಿಕುಟ್ಟಿರ ಎಸ್.ನರೇನ್ ಕಾರ್ಯಪ್ಪ, ಮುಖ್ಯ ಅತಿಥಿಗಳಾಗಿ ಹಿರಿಯ ವಕೀಲ, ಸಾಹಿತಿ ಕೆ.ಪಿ.ಬಾಲಸುಬ್ರಮಣ್ಯ ಕಂಜರ್ಪಣೆ ಹಾಗೂ ಬ್ರಹ್ಮಗಿರಿ ಪತ್ರಿಕೆಯ ಸಂಪಾದಕ ಉಳ್ಳಿಯಡ ಎಂ.ಪೂವಯ್ಯ ಪಾಲ್ಗೊಳ್ಳಲಿದ್ದಾರೆ. ‘ಬಹುರೂಪಿ’ ಪುಸ್ತಕದ ಕುರಿತು ವಕೀಲ, ಬಾರುಕೋಲು ಪತ್ರಿಕೆಯ ಸಂಪಾದಕ ಬಿ.ಆರ್.ರಂಗಸ್ವಾಮಿ ಹಾಗೂ ಮಂಗಳೂರು ವಿಶ್ವ ವಿದ್ಯಾನಿಲಯದ ಸಂಸ್ಕೃತಿ ಚಿಂತಕ ಪ್ರೊ.ಟಿ.ರಂಗಪ್ಪ ಮಾತನಾಡಲಿದ್ದಾರೆ. *ಸನ್ಮಾನ* ಕಾರ್ಯಕ್ರಮದಲ್ಲಿ ಶಿಕ್ಷಣ ತಜ್ಞರಾದ ಕಲ್ಲುಮಾಡಂಡ ಸರಸ್ವತಿ, ಕೊಡವ ತಕ್ ಎಳ್ತ್ ಕಾರಡ ಕೂಟದ ಸ್ಥಾಪಕ ಅಧ್ಯಕ್ಷ ಚೆಂಬಾಂಡ ಶಿವಿ ಭೀಮಯ್ಯ, ಕೊಡವ ಮಕ್ಕಡ ಕೂಟದ ಅಧ್ಯಕ್ಷ ಬೊಳ್ಳಜಿರ ಬಿ.ಅಯ್ಯಪ್ಪ ಹಾಗೂ ಶ್ರೀಕೃಷ್ಣ ಕಂಪ್ಯೂಟರ್ಸ್‍ನ ಮಾಲೀಕ ಉಣ್ಣಿಕೃಷ್ಣನ್ ಅವರುಗಳನ್ನು ಸನ್ಮಾನಿಸಲಾಗುವುದು ಎಂದು ಕಲಾವಿದ ಅಲ್ಲಾರಂಡ ವಿಠಲ ನಂಜಪ್ಪ ತಿಳಿಸಿದ್ದಾರೆ.












