



ಮಡಿಕೇರಿ ಜ.31 NEWS DESK : ಸೋಮವಾರಪೇಟೆ ಹೋಂಸ್ಟೇ ಮತ್ತು ಟೂರಿಸಂ ಅಸೋಸಿಯೇಷನ್ ತ್ರೈಮಾಸಿಕ ಸಭೆಯು ಖಾಸಗಿ ರೆಸಾರ್ಟ್‍ನಲ್ಲಿ ನಡೆಯಿತು. ಅಸೋಸಿಯೇಷನ್ ಅಧ್ಯಕ್ಷ ಸಿ.ಕೆ.ರೋಹಿತ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಉಪವಿಭಾಗಧಿಕಾರಿ ನಿತಿನ್ ಚಕ್ಕಿ ಮಾತನಾಡಿ, ಪ್ರವಾಸೋದ್ಯಮಕ್ಕೆ ಹೆಚ್ಚಿನ ಬೇಡಿಕೆಯಲ್ಲಿದೆ, ಮುಂದಿನ ದಿನಗಳಲ್ಲಿ ಕೊಡಗು ಅತ್ಯುತ್ತಮ ಸುಧಾರಿತ ಪ್ರವಾಸಿ ಸ್ಥಳವನ್ನಾಗಿ ಮಾಡಲು ಸರ್ಕಾರ ಈಗಾಗಲೇ ರೂಪುರೇಷೆಯನ್ನು ತಯಾರಿಸಿದ್ದು, ಪ್ರತಿ ತಾಲೂಕಿನಲ್ಲೂ ಪ್ರಮುಖ ಆಕರ್ಷಿತ ಪ್ರವಾಸಿ ಸ್ಥಳಗಳನ್ನು ಅಭಿವೃದ್ಧಿಪಡಿಸಲು ಯೋಜನೆ ರೂಪಿಸಲಾಗಿದೆ ಮತ್ತು ಹೋಟೆಲ್ ನಿರ್ಮಾಣ ಮಾಡಲು ಸರ್ಕಾರದಿಂದ ಶೇ.25 ಸಬ್ಸಿಡಿ ಅನ್ನು ಒದಗಿಸುವುದಾಗಿ ತಿಳಿಸಿದರು. ಎಸ್.ಬಿ.ಐ ಬ್ಯಾಂಕ್ ವ್ಯವಸ್ಥಾಪಕ ಹೇಮಂತ್ ಮಾತನಾಡಿ ಐದು ವರ್ಷ ಹಳೆಯ ಹೋಂಸ್ಟೇ ಅಭಿವೃದ್ಧಿಪಡಿಸಲು ಎಸ್.ಬಿ.ಐ ಬ್ಯಾಂಕ್ ನಿಂದ ಕಡಿಮೆ ಬಡ್ಡಿ ದರದಲ್ಲಿ ಸಾಲ ಸೌಲಭ್ಯವನ್ನು ಆಧಾರ ರಹಿತ ವಾಗಿ ನೀಡುವುದಾಗಿ ತಿಳಿಸಿದರು. ಈ ಸಂದರ್ಭ ಹೋಂಸ್ಟೇ ಅಸೋಸಿಯೇಷನ್ ಉಪಾಧ್ಯಕ್ಷ ಯೋಗೇಶ್ ಪಟೇಲ್, ಕಾರ್ಯದರ್ಶಿ ಅಭಿನಂದ್, ಖಜಾಂಚಿ ಡಿ.ಪಿ.ಪ್ರೀತಂ ಹಾಗೂ ಹೋಂಸ್ಟೇ ಸದಸ್ಯರು ಹಾಜರಿದ್ದರು.














