



ಮಡಿಕೇರಿ ಜ.31 NEWS DESK : ಬೆಂಗಳೂರು ದಕ್ಷಿಣ ರಾಮನಗರ ಜಿಲ್ಲೆಯ ಕನಕಪುರದಲ್ಲಿ ತಾಲೂಕಿನಲ್ಲಿ ಆಯೋಜನೆಗೊಂಡಿದ್ದ ಸಾಂಪ್ರದಾಯಿಕ ಹಾಗೂ ಪಾರಂಪರಿಕ ಕನಕೋತ್ಸವದಲ್ಲಿ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ಕನಕೋತ್ಸವದಲ್ಲಿ ವಿವಿಧ ಸಾಂಸ್ಕೃತಿಕ ಹಾಗೂ ಸ್ಪರ್ಧಾ ಕಾರ್ಯಕ್ರಮಗಳು ನಡೆದು ಜನರನ್ನು ಆಕರ್ಷಿಸಿತು.ಈ ಸಂದರ್ಭ ಶ್ರೀ ವಚನಾನಂದ ಸ್ವಾಮೀಜಿ, ಕೆಪಿಸಿಸಿ ಅಧ್ಯಕ್ಷರು ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಮಾಜಿ ಸಂಸದ ಡಿ.ಕೆ ಸುರೇಶ್ ಶಾಸಕ ಎ.ಎಸ್.ಪೊನ್ನಣ್ಣ ಅವರನ್ನು ಸನ್ಮಾನಿಸಿ ಗೌರವಿಸಿದರು.












