
ನಾಪೋಕ್ಲು ಜ.31 NEWS DESK : ಕಕ್ಕಬ್ಬೆ ಕೇಂದ್ರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ ಮುಖ್ಯ ಶಿಕ್ಷಕಿ ಚಂಡೀರ ಲೀಲಾವತಿ ಉತ್ತಪ್ಪ ಅವರನ್ನು ಬೀಳ್ಕೊಡಲಾಯಿತು. ಶಾಲಾ ಆಡಳಿತ ಮಂಡಳಿ ವತಿಯಿಂದ ಆಯೋಜಿಸಿದ ಬೀಳ್ಕೊಡುಗೆ ಸಮಾರಂಭದಲ್ಲಿ ಚಂಡೀರ ಲೀಲಾವತಿ ಉತ್ತಪ್ಪ ಅವರನ್ನು ಆಡಳಿತ ಮಂಡಳಿ ಅಧ್ಯಕ್ಷ ಕೇಟೋಳಿರ ಕುಟ್ಟಪ್ಪ ಶಾಲಾ ಪರವಾಗಿ ಸನ್ಮಾನಿಸಿ ಶುಭ ಹಾರೈಸಿದರು. ಈ ಸಂದರ್ಭ ಶಾಲಾ ಆಡಳಿತ ಮಂಡಳಿ ನಿರ್ದೇಶಕರು, ಶಿಕ್ಷಕ ವೃಂದ ಉಪಸ್ಥಿತರಿದ್ದರು. ಕಕ್ಕಬ್ಬೆ ಗ್ರಾಮ ಪಂಚಾಯಿತಿಯ ಕಕ್ಕಬ್ಬೆ ಕೇಂದ್ರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಿಕ್ಷಕಿ ಚಂಡೀರ ಲೀಲಾವತಿ ಉತ್ತಪ್ಪ 34 ವರ್ಷ ಸೇವೆಯನ್ನು ಸಲ್ಲಿಸಿದ್ದರು.
ವರದಿ : ದುಗ್ಗಳ ಸದಾನಂದ.









