

ಮಡಿಕೇರಿ NEWS DESK ಫೆ.6 : ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ವತಿಯಿಂದ ಜಿಲ್ಲೆಯ ಶನಿವಾರಸಂತೆಯಲ್ಲಿ 0.65 ಎಕರೆ ವಿಸ್ತೀರ್ಣದಲ್ಲಿ ರೂ.105 ಲಕ್ಷ ವೆಚ್ಚದಲ್ಲಿ ನಿರ್ಮಿಸಲಾದ ನೂತನ ಬಸ್ ನಿಲ್ದಾಣದ ಉದ್ಘಾಟನಾ ಸಮಾರಂಭವು ಫೆಬ್ರವರಿ, 07 ರಂದು ಬೆಳಗ್ಗೆ 11.30 ಗಂಟೆಗೆ ಶನಿವಾರಸಂತೆ ಬಸ್ ನಿಲ್ದಾಣದಲ್ಲಿ ನಡೆಯಲಿದೆ. ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು, ಸಾರಿಗೆ ಮತ್ತು ಮುಜರಾಯಿ ಸಚಿವರಾದ ರಾಮಲಿಂಗಾರೆಡ್ಡಿ, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಅಧ್ಯಕ್ಷರು ಹಾಗೂ ಗುಬ್ಬಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಎಸ್.ಆರ್.ಶ್ರೀನಿವಾಸ್(ವಾಸು), ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ.ಮಂತರ್‌ಗೌಡ, ಮುಖ್ಯಮಂತ್ರಿಯವರ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಎಸ್.ಪೊನ್ನಣ್ಣ, ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ರಾಜ್ಯ ಸಭಾ ಸದಸ್ಯರಾದ ಅಜಯ್ ಮಾಕನ್, ವಿಧಾನ ಪರಿಷತ್ ಸದಸ್ಯರಾದ ಎಂ.ಪಿ.ಸುಜಾ ಕುಶಾಲಪ್ಪ, ಎಸ್.ಎಲ್.ಭೋಜೇಗೌಡ, ಡಾ.ಧನಂಜಯ ಸರ್ಜಿ, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಉಪಾಧ್ಯಕ್ಷರಾದ ಮೊಹಮ್ಮದ್ ರಿಜ್ವಾನ್ ನವಾಬ್, ಕರ್ನಾಟಕ ಕ್ರೀಡಾ ಪ್ರಾಧಿಕಾರದ ಉಪಾಧ್ಯಕ್ಷರಾದ ಸಿ.ಎಸ್.ಅರುಣ್ ಮಾಚಯ್ಯ, ಶನಿವಾರಸಂತೆ ಗ್ರಾ.ಪಂ. ಅಧ್ಯಕ್ಷರಾದ ಗೀತಾ ಹರೀಶ್, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಟಿ.ಎಂ.ಧರ್ಮಜ ಉತ್ತಪ್ಪ, ತಾಲ್ಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಜಿ.ಎಂ.ಕಾAತರಾಜ್, ಸಾರಿಗೆ ಇಲಾಖೆ ಕಾರ್ಯದರ್ಶಿ ಹಾಗೂ ಕೊಡಗು ಜಿ.ಪಂ.ಆಡಳಿತಾಧಿಕಾರಿಗಳು ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ಎನ್.ವಿ.ಪ್ರಸಾದ್, ಕ.ರಾ.ರ.ಸಾ.ನಿಗಮದ ವ್ಯವಸ್ಥಾಪಕ ನಿರ್ದೇಶಕರಾದ ಅಕ್ರಂ ಪಾಷ, ಕರಾರಸಾ ನಿಗಮದ ನಿರ್ದೇಶಕರು(ಸಿಬ್ಬಂದಿ ಮತ್ತು ಜಾಗೃತ) ಡಾ.ನಂದಿನಿದೇವಿ ಕೆ., ಕೊಡಗು ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಎನ್.ಬಿಂದುಮಣಿ, ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ, ಕ.ರಾ.ರ.ಸಾ.ನಿಗಮದ ವಿಭಾಗೀಯ ನಿಯಂತ್ರಣಾಧಿಕಾರಿ ಎಂ.ಪಿ.ಶ್ರೀಹರಿಬಾಬು ಇತರರು ಪಾಲ್ಗೊಳ್ಳಲಿದ್ದಾರೆ.










