Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕಾಯಕ ಶರಣರ ಜಯಂತಿ ಸಮ ಸಮಾಜ ನಿರ್ಮಾಣದಲ್ಲಿ ಕಾಯಕ ಶರಣರ ಕೊಡುಗೆ ಅಪಾರ: ಹೇಮಲತಾ*
  • *ಸೌಂದರ್ಯ ತಜ್ಞರು ನಿತ್ಯ ವ್ಯಾಯಾಮದೊಂದಿಗೆ ತಮ್ಮ ಆರೋಗ್ಯ ವೃದ್ಧಿಸಿಕೊಳ್ಳುವ ಬಗ್ಗೆ ಗಮನಹರಿಸಬೇಕು ಎಂದು ಅಂತರರಾಷ್ಟ್ರೀಯ ಬ್ಯಾಡ್ಮಿಂಟನ್ ಕ್ರೀಡಾಪಟು ತಾತಪಂಡ ಜ್ಯೋತಿ ಸೋಮಯ್ಯ ಕಿವಿಮಾತು ಹೇಳಿದರು*
  • *ಮೈಸೂರು-ಕುಶಾಲನಗರ ರೈಲ್ವೆ ಯೋಜನೆ ಪುನಾರಂಭಿಸಲು ಅಶ್ವಿನ್‌ ವೈಷ್ಣವ್‌ಗೆ ಯದುವೀರ್‌ ಮನವಿ ಭೂ ಸ್ವಾಧೀನ ಪ್ರಕ್ರಿಯೆಗೆ ಚಾಲನೆ ನೀಡಲು ಕ್ರಮ ಕೈಗೊಳ್ಳಬೇಕೆಂದು ಸಂಸದರ ಪತ್ರ*
  • *ಕೊಡವ ಭಾಷೆಗೂ ಸಾಂವಿಧಾನಿಕ ಭದ್ರತೆ ನೀಡಬೇಕು : ಸಣ್ಣ ಸಣ್ಣ ಭಾಷೆಗಳನ್ನು ಹತ್ತಿಕಿದರೆ ಏಕತೆಗೆ ದಕ್ಕೆ : ಸಿಎನ್‌ಸಿ ಪ್ರತಿಪಾದನೆ*
  • *‘ಜಂತು ಹುಳು ರಹಿತ ಮಕ್ಕಳು – ಆರೋಗ್ಯವಂತ ಮಕ್ಕಳು’ ರಾಷ್ಟ್ರೀಯ ಜಂತು ಹುಳು ನಿವಾರಣಾ ಕಾರ್ಯಕ್ರಮ*
  • *ಫೆ.14 ರಂದು ಕೊಡವ ಭವನ ಉದ್ಘಾಟನೆ*
  • *ಮಡಿಕೇರಿಯಲ್ಲಿ “ಆರೋಗ್ಯ ಹಕ್ಕಿನ ಜಾಥಾ”*
  • *ಕೊಡವ ಕುಟುಂಬಗಳ ನಡುವಣ “ಮುಲ್ಲೇಂಗಡ ಕಬಡ್ಡಿ ನಮ್ಮೆ”*
  • *104 ಮೊಬೈಲ್ ಫೋನ್‌ಗಳನ್ನು ವಾರಸುದಾರರಿಗೆ ಹಸ್ತಾಂತರಿಸಿದ ಕೊಡಗು ಜಿಲ್ಲಾ ಪೊಲೀಸ್*
  • *ತಾಲ್ಲೂಕು ಮಟ್ಟದ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ನೀಡಲು ಅರ್ಜಿ ಆಹ್ವಾನ*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ಶನಿವಾರಸಂತೆಯಲ್ಲಿ ನೂತನ ಬಸ್ ನಿಲ್ದಾಣ ಉದ್ಘಾಟನೆ : ಶಕ್ತಿ ಯೋಜನೆಯಿಂದ ಕೋಟ್ಯಾಂತರ ಮಹಿಳೆಯರ ಪ್ರಯಾಣ ಸುಗಮ : ಚಾಲಕ, ನಿರ್ವಾಹಕರ ನೇಮಕಾತಿ : ಸಚಿವ ರಾಮಲಿಂಗಾರೆಡ್ಡಿ*
ಇತ್ತೀಚಿನ ಸುದ್ದಿಗಳು

*ಶನಿವಾರಸಂತೆಯಲ್ಲಿ ನೂತನ ಬಸ್ ನಿಲ್ದಾಣ ಉದ್ಘಾಟನೆ : ಶಕ್ತಿ ಯೋಜನೆಯಿಂದ ಕೋಟ್ಯಾಂತರ ಮಹಿಳೆಯರ ಪ್ರಯಾಣ ಸುಗಮ : ಚಾಲಕ, ನಿರ್ವಾಹಕರ ನೇಮಕಾತಿ : ಸಚಿವ ರಾಮಲಿಂಗಾರೆಡ್ಡಿ*

February 7, 20263 Mins Read
Share
Facebook Twitter LinkedIn Pinterest WhatsApp Email

ಮಡಿಕೇರಿ NEWS DESK ಫೆ.7 : ಸರಕಾರ ಜಾರಿಗೊಳಿಸಿರುವ ಶಕ್ತಿ ಗ್ಯಾರಂಟಿ ಯೋಜನೆಯಿಂದ ರಾಜ್ಯದಲ್ಲಿ 670 ಕೋಟಿ ಗೂ ಹೆಚ್ಚು ಮಹಿಳೆಯರು ಬಸ್ ಸಂಚಾರ ಮಾಡಿದ್ದು, ಇದು ದಾಖಲೆಯಾಗಿದೆ ಎಂದು ಸಾರಿಗೆ ಹಾಗೂ ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಅವರು ತಿಳಿಸಿದ್ದಾರೆ. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ವತಿಯಿಂದ ಶನಿವಾರಸಂತೆಯಲ್ಲಿ 105 ಲಕ್ಷ ರೂ. ವೆಚ್ಚದಲ್ಲಿ ನೂತನವಾಗಿ ನಿರ್ಮಿಸಿರುವ ಬಸ್ ನಿಲ್ದಾಣವನ್ನು ಉದ್ಘಾಟಿಸಿ ಸಚಿವರು ಮಾತನಾಡಿದರು. ಸರ್ಕಾರ 10 ಸಾವಿರ ಚಾಲಕರು ಮತ್ತು ನಿರ್ವಾಹಕರನ್ನು ನೇಮಕಾತಿ ಮಾಡಿದ್ದು, ಇದರಲ್ಲಿ 9 ಸಾವಿರ ಮಂದಿ ನಿರ್ವಾಹಕರು ಮತ್ತು ಚಾಲಕರನ್ನು ನೇರ ನೇಮಕಾತಿ ಮಾಡಲಾಗಿದೆ. ಒಂದು ಸಾವಿರ ಚಾಲಕರು ಮತ್ತು ನಿರ್ವಾಹಕರನ್ನು ‘ಅನುಕಂಪದ ಆಧಾರದ ಮೇಲೆ’ ಅರ್ಹರನ್ನು ನೇಮಿಸಲಾಗಿದೆ ಎಂದು ತಿಳಿಸಿದರು. ರಾಜ್ಯದಲ್ಲಿ ಈ ಹಿಂದೆ 5,800 ಬಸ್‌ಗಳು ಹಾಗೂ ಪ್ರಸಕ್ತ ವರ್ಷ 2 ಸಾವಿರ ಬಸ್ಸುಗಳು ಒಟ್ಟು 7,800 ಕೆಎಸ್‌ಆರ್‌ಟಿಸಿ ಬಸ್‌ಗಳು ಸಂಚರಿಸುತ್ತವೆ. ಪ್ರತೀ ವರ್ಷ ಕಾಲಾನು ಕಾಲಕ್ಕೆ ಹೊಸ ಬಸ್‌ಗಳನ್ನು ಖರೀದಿಸಿ, ಬಸ್ಸು ಓಡಾಟಕ್ಕೆ ಅವಕಾಶ ಮಾಡಲಾಗಿದೆ ಎಂದರು. ಶನಿವಾರಸಂತೆಯಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಬಸ್ ನಿಲ್ದಾಣಕ್ಕೆ ರಾಷ್ಟ್ರದ ಪ್ರಥಮ ಸೇನಾ ಮಹಾದಂಡನಾಯಕ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಅವರ ಹೆಸರಿಡಲು ನಿರ್ಧರಿಸಲಾಗಿದೆ. ಶನಿವಾರಸಂತೆ ಗ್ರಾಮದಲ್ಲಿ ಹುಟ್ಟಿ ಬೆಳೆದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಅವರ ಸೇನಾ ಕ್ಷೇತ್ರದಲ್ಲಿನ ಸೇವೆಯನ್ನು ಸ್ಮರಿಸಿ ಕಾರ್ಯಪ್ಪ ಅವರ ಹೆಸರಿಡಲು ಮುಂದಾಗಲಾಗಿದೆ. ಆ ನಿಟ್ಟಿನಲ್ಲಿ ಕ್ಯಾಬಿನೆಟ್ ಅನುಮೋದನೆ ಪಡೆಯಲಾಗುವುದು ಎಂದು ಸಚಿವರು ಹೇಳಿದರು. ಶನಿವಾರಸಂತೆ ಬಸ್ ನಿಲ್ದಾಣದ ಆವರಣದಲ್ಲಿ ಕಾಂಕ್ರೀಟ್ ನಿರ್ಮಾಣಕ್ಕೆ ಅನುದಾನ ನೀಡಲಾಗುವುದು. ಕೊಡ್ಲಿಪೇಟೆಯಲ್ಲೂ ಸಹ ಜಾಗ ನೀಡಿದಲ್ಲಿ ಬಸ್ ನಿಲ್ದಾಣ ನಿರ್ಮಿಸಲಾಗುವುದು. ಆ ನಿಟ್ಟಿನಲ್ಲಿ ಜಾಗ ಒದಗಿಸುವಂತೆ ಊರಿನ ಪ್ರಮುಖರನ್ನು ಕೋರಿದರು.
ಬರುವ ಬಜೆಟಿನಲ್ಲಿ ಸಾರಿಗೆ ಸಂಪರ್ಕಕ್ಕೆ ಇನ್ನಷ್ಟು ಹೆಚ್ಚಿನ ಒತ್ತು ನೀಡಲಾಗಿದ್ದು, ಜಿಲ್ಲೆಗೂ ಸಹ ಸಾರಿಗೆ ಇಲಾಖೆಯಲ್ಲಿ ಆಗಬೇಕಿರುವ ಕೆಲಸಗಳಿಗೆ ಎಲ್ಲಾ ರೀತಿಯ ಸಹಕಾರ ನೀಡಲಾಗುವುದು. ಕೊಡಗು ಜಿಲ್ಲೆಗೆ ಹೆಚ್ಚಿನ ಬಸ್ಸು ಸೌಕರ್ಯ ಕಲ್ಪಿಸಲಾಗುವುದು ಎಂದು ಸಚಿವರು ವಿವರಿಸಿದರು. ನಾಡಿನ ಜೀವನದಿ ಕಾವೇರಿ ಉಗಮಸ್ಥಾನ ತಲಕಾವೇರಿಯಲ್ಲಿ ಸಂಭವಿಸುವ ಪವಿತ್ರ ತೀರ್ಥೋದ್ಭವ ಜಾತ್ರೆಗೆ ಸರ್ಕಾರದಿಂದ ಮೂರು ವರ್ಷದಿಂದ ಅನುದಾನ ನೀಡಲಾಗುತ್ತಿದೆ. ಶಾಸಕರಾದ ಎ.ಎಸ್.ಪೊನ್ನಣ್ಣ ಅವರ ಕಾಳಜಿಯಿಂದ ಅನುದಾನ ನೀಡಲಾಗುತ್ತಿದೆ ಎಂದು ರಾಮಲಿಂಗಾರೆಡ್ಡಿ ಹೇಳಿದರು.
ಶಾಸಕ ಡಾ.ಮಂತರ್ ಗೌಡ ಅವರು ಮಾತನಾಡಿ ಚುನಾವಣಾ ಪ್ರಚಾರ ಸಂದರ್ಭದಲ್ಲಿ ಹಿರಿಯರೊಬ್ಬರು ಶನಿವಾರಸಂತೆಯಲ್ಲಿ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣ ನಿರ್ಮಿಸಬೇಕು ಎಂದು ಮನವಿ ಮಾಡಿದ ಹಿನ್ನೆಲೆ, ಆ ಸಂದರ್ಭದಲ್ಲಿ ಭರವಸೆ ನೀಡಲಾಗಿತ್ತು. ಎಲ್ಲರ ಆಶೀರ್ವಾದದಿಂದ ಜಯ ಗಳಿಸಿದ ನಂತರ ಅಂದಿನ ಜಿಲ್ಲಾಧಿಕಾರಿ ಆಗಿದ್ದ ಡಾ.ಬಿ.ಸಿ.ಸತೀಶ ಅವರು ಜಾಗ ಗುರುತಿಸಿದ್ದರು. ಅದರಂತೆ ಮಾನ್ಯ ಸಾರಿಗೆ ಸಚಿವರಲ್ಲಿ ಮನವಿ ಮಾಡಿದಾಗ ತಕ್ಷಣವೇ 105 ಲಕ್ಷ ರೂ ಅನುದಾನ ಬಿಡುಗಡೆ ಮಾಡಿ, ಭೂಮಿ ಪೂಜೆ ನೆರವೇರಿಸಲಾಗಿತ್ತು. ಅದರಂತೆ ಒಂದು ವರ್ಷದಲ್ಲಿಯೇ ನಿರ್ಮಾಣ ಮಾಡಲಾಗಿರುವುದು ವಿಶೇಷವೇ ಸರಿ ಎಂದು ಹೇಳಿದರು. ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಅವರು ಹುಟ್ಟಿದ ಊರಿನಲ್ಲಿ ಬಸ್ ನಿಲ್ದಾಣಕ್ಕೆ ಕಾರ್ಯಪ್ಪ ಹೆಸರಿಡಬೇಕೆಂದು ಅಧಿವೇಷನದಲ್ಲಿ ಗಮನ ಸೆಳೆಯಲಾಗಿತ್ತು. ಅದರಂತೆ ಸಚಿವರು ಒಪ್ಪಿಗೆ ನೀಡಿದ್ದಾರೆ ಎಂದು ಡಾ.ಮಂತರ್ ಗೌಡ ಅವರು ನುಡಿದರು. ಈ ಜಾಗವನ್ನು ಗ್ರಾ.ಪಂ.ಅವರು ನೀಡಿರುವುದಕ್ಕೆ ಕೃತಜ್ಞತೆ ಸಲ್ಲಿಸಿದ ಡಾ.ಮಂತರ್ ಗೌಡ ಅವರು ಕೊಡ್ಲಿಪೇಟೆಯಲ್ಲಿ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣ ನಿರ್ಮಾಣ ಮಾಡಬೇಕು. ಕುಶಾಲನಗರದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣವನ್ನು ಮೇಲ್ದರ್ಜೆಗೇರಿಸಲು ಅಗತ್ಯ ಅನುದಾನ ನೀಡುವಂತೆ ಸಾರಿಗೆ ಸಚಿವರಲ್ಲಿ ಶಾಸಕರಾದ ಡಾ.ಮಂತರ್ ಗೌಡ ಅವರು ಮನವಿ ಮಾಡಿದರು. ಕೊಡಗು ಜಿಲ್ಲೆಗೆ ಪ್ರತ್ಯೇಕ ಕೆಎಸ್‌ಆರ್‌ಟಿಸಿ ವಿಭಾಗೀಯ ಕಚೇರಿ ಆರಂಭಿಸಬೇಕು ಎಂದು ಶಾಸಕರು ಮನವಿ ಮಾಡಿದರು. ಕೊಡಗು ಜಿಲ್ಲೆಯಲ್ಲಿ ಇನ್ನೂ ಹೆಚ್ಚಿನ ಸಂಖ್ಯೆಯಲ್ಲಿ ಬಸ್‌ಗಳ ಸಂಚಾರಕ್ಕೆ ಅವಕಾಶ ಮಾಡಬೇಕು. ಚಾಲಕರು ಮತ್ತು ನಿರ್ವಾಹಕರನ್ನು ಹೆಚ್ಚಿನ ಸಂಖ್ಯೆಯಲ್ಲಿ ನೇಮಿಸುವಂತಾಗಬೇಕು ಎಂದು ಶಾಸಕರಾದ ಡಾ.ಮಂತರ್‌ಗೌಡ ಅವರು ಕೋರಿದರು. ಈಗಾಗಲೇ ಕೆಎಸ್‌ಆರ್‌ಟಿಸಿ ಬಸ್‌ಗಳಿಗೆ ಕೆಎ.12 ನಂಬರ್ ನೋಂದಣಿ ಸಂಖ್ಯೆಯನ್ನು ಸಚಿವರು ಕೊಡಿಸಿದ್ದಾರೆ ಎಂದು ಶಾಸಕರು ಕೃತಜ್ಞತೆ ಸಲ್ಲಿಸಿದರು. ಜಿಲ್ಲೆಯ ದೇವಾಲಯಗಳ ಅಭಿವೃದ್ಧಿಗೆ ಇನ್ನಷ್ಟು ಹೆಚ್ಚಿನ ಅನುದಾನ ಒದಗಿಸುವಂತೆ ಶಾಸಕರಾದ ಡಾ.ಮಂತರ್ ಗೌಡ ಅವರು ಸಚಿವರಲ್ಲಿ ಮನವಿ ಮಾಡಿದರು.
ಶನಿವಾರಸಂತೆ ಗ್ರಾ.ಪಂ.ಅಧ್ಯಕ್ಷರಾದ ಗೀತಾ ಹರೀಶ್ ಅವರು ಮಾತನಾಡಿ ಶನಿವಾರಸಂತೆಯಲ್ಲಿ ನಡೆಯುವ ಸಂತೆಗೆ ವ್ಯಾಪಾರ ವಹಿವಾಟಿಗಾಗಿ ಸುತ್ತಮುತ್ತಲಿನ ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಿದ್ದು, ಸಂತೆಯನ್ನು ಮತ್ತಷ್ಟು ಅಭಿವೃದ್ಧಿ ಪಡಿಸಲು ಅಗತ್ಯ ಅನುದಾನ ಬಿಡುಗಡೆಗೆ ಶಾಸಕರಲ್ಲಿ ಕೋರಿದರು. ಕಿರಿಕೊಡ್ಲಿ ಮಠದ ಸದಾಶಿವ ಸ್ವಾಮೀಜಿ ಅವರು ಮಾತನಾಡಿ ಶನಿವಾರಸಂತೆಯಲ್ಲಿ ಬಸ್ ನಿಲ್ದಾಣ ನಿರ್ಮಾಣ ಮಾಡಬೇಕು ಎಂದು ಹಲವು ದಶಕಗಳ ಕನಸಾಗಿತ್ತು. ಅದು ನನಸಾಗಿದೆ ಎಂದರು. ಶಾಸಕರಾದ ಡಾ.ಮಂತರ್ ಗೌಡ ಅವರು ಅಭಿವೃದ್ಧಿ ಕೆಲಸದಲ್ಲಿ ಪಕ್ಷಾತೀತವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಸ್ವಾಮೀಜಿ ಅವರು ಮೆಚ್ಚುಗೆ ವ್ಯಕ್ತಪಡಿಸಿದರು.
ಕೊಡಿಪೇಟೆಯಲ್ಲಿ ಬಸ್ ನಿಲ್ದಾಣ ನಿರ್ಮಾಣ ಮಾಡುವಂತಾಗಬೇಕು ಎಂದು ಸಚಿವರಲ್ಲಿ ಸದಾಶಿವ ಸ್ವಾಮೀಜಿ ಅವರು ಇದೇ ಸಂದರ್ಭದಲ್ಲಿ ಮನವಿ ಮಾಡಿದರು. ಪ್ರಮುಖರಾದ ಎಚ್.ಎಸ್.ಚಂದ್ರಮೌಳಿ ಅವರು ಮಾತನಾಡಿ ಶಾಸಕರ ಅಭಿವೃದ್ಧಿ ಕೆಲಸಗಳಿಗೆ ಸದಾ ಕೈಜೋಡಿಸಲಾಗಿದೆ. ಶಾಸಕರು ಉತ್ತಮವಾಗಿ ಕೆಲಸ ಮಾಡುತ್ತಿದ್ದು, ಜನ ಮೆಚ್ಚುಗೆಗೆ ಪಾತ್ರರಾಗಿದ್ದಾರೆ ಎಂದರು. 25 ವರ್ಷಗಳಿಂದ ಆಗದ ಕೆಲಸ, 25 ತಿಂಗಳಲ್ಲಿ ಆಗಿರುವುದು ಮೆಚ್ಚಲೇಬೇಕು ಎಂದು ಎಚ್.ಎಸ್.ಚಂದ್ರಮೌಳಿ ಅವರು ನುಡಿದರು. ಗುತ್ತಿಗೆದಾರರಾದ ರೇವಣ್ಣ ಪ್ರಸಾದ್ ಅವರನ್ನು ಇದೇ ಸಂದರ್ಭ ಸನ್ಮಾನಿಸಲಾಯಿತು.
ವಿಧಾನಪರಿಷತ್ ಮಾಜಿ ಸದಸ್ಯರಾದ ವೀಣಾ ಅಚ್ಚಯ್ಯ, ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್, ಗ್ಯಾರಂಟಿ ಅನುಷ್ಠಾನ ಸಮಿತಿ ಜಿಲ್ಲಾ ಅಧ್ಯಕ್ಷರಾದ ತೀತಿರ ಧರ್ಮಜ ಉತ್ತಪ್ಪ, ತಾಲ್ಲೂಕು ಘಟಕದ ಅಧ್ಯಕ್ಷರಾದ ಜಿ.ಎಂ.ಕಾAತರಾಜು, ವಿ.ಪಿ.ಶಶಿಧರ, ಜಾನ್ಸನ್, ಕೆಎಸ್‌ಆರ್‌ಟಿಸಿ ಪುತ್ತೂರು ವಿಭಾಗದ ನಿಯಂತ್ರಣಾಧಿಕಾರಿ ಎಂ.ಪಿ.ಶ್ರೀಹರಿಬಾಬು, ಮಡಿಕೇರಿ ಕೆಎಸ್‌ಆರ್‌ಟಿಸಿ ಘಟಕ ವ್ಯವಸ್ಥಾಪಕರಾದ ಈರಸಪ್ಪ, ಪ್ರಮುಖರಾದ ಲಕ್ಷ್ಮಣ, ಕೆ.ಪಿ.ಚಂದ್ರಕಲಾ, ಜನಾರ್ಧನ, ಶರತ್ ಶೇಖರ್, ತಹಶೀಲ್ದಾರರಾದ ಕೃಷ್ಣಮೂರ್ತಿ ಮತ್ತಿತರರು ಇದ್ದರು. ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ನಾಡಗೀತೆ ಹಾಡಿದರು. ವಿಘ್ನೇಶ್ವರ ಬಾಲಿಕ ಪ್ರೌಢ ಶಾಲೆಯ ವಿದ್ಯಾರ್ಥಿನೀಯರು ರೈತಗೀತೆ ಹಾಡಿದರು. ರೋಷಿ ಪ್ರಾರ್ಥಿಸಿದರು. ಜಯಕುಮಾರ ಸ್ವಾಗತಿಸಿದರು. ಜಸಿಂತಾ ನಿರೂಪಿಸಿದರು. ಶನಿವಾರಸಂತೆಯಲ್ಲಿನ ಬಸ್ ನಿಲ್ದಾಣದಲ್ಲಿರುವ ಸೌಲಭ್ಯಗಳು: ಸಂಚಾರ ನಿಯಂತ್ರಕರ ಕೊಠಡಿ, ಪ್ರಯಾಣಿಕರ ನಿರೀಕ್ಷಣಾ ಅಂಕಣ, ಸಿಬ್ಬಂದಿ ವಿಶ್ರಾಂತಿ ಕೊಠಡಿ, ಶುದ್ಧ ಕುಡಿಯುವ ನೀರಿನ ಸೌಲಭ್ಯ, ಉಪಹಾರ ಗೃಹ-01, ವಾಣಿಜ್ಯ ಮಳಿಗೆ-02, ಶೌಚಾಲಯ ಒಳಗೊಂಡಿದೆ.

Share. Facebook Twitter Pinterest LinkedIn Tumblr Email WhatsApp
Previous Article*ಕುಂದಚೇರಿ ಗ್ರಾ.ಪಂ ನೂತನ ಕಟ್ಟಡ ಉದ್ಘಾಟನೆ : ರಾಜಕೀಯ ರಹಿತವಾಗಿ ಸೌಲಭ್ಯ ಒದಗಿಸಿ : ಶಾಸಕ ಎ.ಎಸ್.ಪೊನ್ನಣ್ಣ ಕರೆ*
Next Article *ಮಡಿಕೇರಿಯಲ್ಲಿ ನಶಾ ಮುಕ್ತ ಭಾರತ ಜಾಗೃತಿ ಜಾಥಾ : ಮಾದಕ ವಸ್ತುಗಳು ಸಮಾಜವನ್ನೇ ಹಾಳು ಮಾಡುತ್ತವೆ : ಯುವ ಸಮೂಹ ಜಾಗೃತಗೊಳ್ಳಬೇಕು : ಶಾಸಕ ಡಾ.ಮಂತರ್ ಗೌಡ ಕರೆ*

Related Posts

*ಕಾಯಕ ಶರಣರ ಜಯಂತಿ ಸಮ ಸಮಾಜ ನಿರ್ಮಾಣದಲ್ಲಿ ಕಾಯಕ ಶರಣರ ಕೊಡುಗೆ ಅಪಾರ: ಹೇಮಲತಾ*

February 10, 2026

*ಸೌಂದರ್ಯ ತಜ್ಞರು ನಿತ್ಯ ವ್ಯಾಯಾಮದೊಂದಿಗೆ ತಮ್ಮ ಆರೋಗ್ಯ ವೃದ್ಧಿಸಿಕೊಳ್ಳುವ ಬಗ್ಗೆ ಗಮನಹರಿಸಬೇಕು ಎಂದು ಅಂತರರಾಷ್ಟ್ರೀಯ ಬ್ಯಾಡ್ಮಿಂಟನ್ ಕ್ರೀಡಾಪಟು ತಾತಪಂಡ ಜ್ಯೋತಿ ಸೋಮಯ್ಯ ಕಿವಿಮಾತು ಹೇಳಿದರು*

February 10, 2026

*ಮೈಸೂರು-ಕುಶಾಲನಗರ ರೈಲ್ವೆ ಯೋಜನೆ ಪುನಾರಂಭಿಸಲು ಅಶ್ವಿನ್‌ ವೈಷ್ಣವ್‌ಗೆ ಯದುವೀರ್‌ ಮನವಿ ಭೂ ಸ್ವಾಧೀನ ಪ್ರಕ್ರಿಯೆಗೆ ಚಾಲನೆ ನೀಡಲು ಕ್ರಮ ಕೈಗೊಳ್ಳಬೇಕೆಂದು ಸಂಸದರ ಪತ್ರ*

February 10, 2026

*ಸೌಂದರ್ಯ ತಜ್ಞರು ನಿತ್ಯ ವ್ಯಾಯಾಮದೊಂದಿಗೆ ತಮ್ಮ ಆರೋಗ್ಯ ವೃದ್ಧಿಸಿಕೊಳ್ಳುವ ಬಗ್ಗೆ ಗಮನಹರಿಸಬೇಕು ಎಂದು ಅಂತರರಾಷ್ಟ್ರೀಯ ಬ್ಯಾಡ್ಮಿಂಟನ್ ಕ್ರೀಡಾಪಟು ತಾತಪಂಡ ಜ್ಯೋತಿ ಸೋಮಯ್ಯ ಕಿವಿಮಾತು ಹೇಳಿದರು*

February 10, 2026

ಮಡಿಕೇರಿ, NEWS DESK ಫೆ.10: ಕೊಡಗು ಜಿಲ್ಲಾ ಬ್ಯುಟೀಷಿಯನ್ ಅಸೋಸಿಯೇಷನ್ ವತಿಯಿಂದ ಮಡಿಕೇರಿಯ ಮ್ಯಾನ್ಸ್ ಕಾಂಪೌಂಡ್ ಮೈದಾನದಲ್ಲಿ ನಡೆದ ಜಿಲ್ಲಾಮಟ್ಟದ…

*ಮೈಸೂರು-ಕುಶಾಲನಗರ ರೈಲ್ವೆ ಯೋಜನೆ ಪುನಾರಂಭಿಸಲು ಅಶ್ವಿನ್‌ ವೈಷ್ಣವ್‌ಗೆ ಯದುವೀರ್‌ ಮನವಿ ಭೂ ಸ್ವಾಧೀನ ಪ್ರಕ್ರಿಯೆಗೆ ಚಾಲನೆ ನೀಡಲು ಕ್ರಮ ಕೈಗೊಳ್ಳಬೇಕೆಂದು ಸಂಸದರ ಪತ್ರ*

February 10, 2026

*ಕೊಡವ ಭಾಷೆಗೂ ಸಾಂವಿಧಾನಿಕ ಭದ್ರತೆ ನೀಡಬೇಕು : ಸಣ್ಣ ಸಣ್ಣ ಭಾಷೆಗಳನ್ನು ಹತ್ತಿಕಿದರೆ ಏಕತೆಗೆ ದಕ್ಕೆ : ಸಿಎನ್‌ಸಿ ಪ್ರತಿಪಾದನೆ*

February 10, 2026

*ಫೆ.14 ರಂದು ಕೊಡವ ಭವನ ಉದ್ಘಾಟನೆ*

February 10, 2026

*ಮಡಿಕೇರಿಯಲ್ಲಿ “ಆರೋಗ್ಯ ಹಕ್ಕಿನ ಜಾಥಾ”*

February 10, 2026

*ಕೊಡವ ಕುಟುಂಬಗಳ ನಡುವಣ “ಮುಲ್ಲೇಂಗಡ ಕಬಡ್ಡಿ ನಮ್ಮೆ”*

February 10, 2026

*104 ಮೊಬೈಲ್ ಫೋನ್‌ಗಳನ್ನು ವಾರಸುದಾರರಿಗೆ ಹಸ್ತಾಂತರಿಸಿದ ಕೊಡಗು ಜಿಲ್ಲಾ ಪೊಲೀಸ್*

February 10, 2026

*ತಾಲ್ಲೂಕು ಮಟ್ಟದ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ನೀಡಲು ಅರ್ಜಿ ಆಹ್ವಾನ*

February 10, 2026

*ಫೆ.15ರಂದು ಗೌಡ ಜನಾಂಗಗಳ ಜಿಲ್ಲಾ ಮಟ್ಟದ ಕ್ಯಾರಂಬೋರ್ಡ್ ಕ್ರೀಡಾಕೂಟ : ಏಪ್ರಿಲ್ ನಲ್ಲಿ ಟೆನ್ನಿಸ್ ಬಾಲ್ ಕ್ರಿಕೆಟ್*

February 10, 2026

*ಆಹಾರ ವಾಹಿನಿ ಯೋಜನೆಯಡಿ ಸಹಾಯಧನ ಸೌಲಭ್ಯ ಒದಗಿಸಲು ಅರ್ಜಿ ಆಹ್ವಾನ*

February 10, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.