ಮಡಿಕೇರಿ NEWS DESK ಫೆ.8 : ಕೊಡಗು ಮೂಲದ ಉದ್ಯಮಿಯೊಬ್ಬರು ಕಾರಿನಲ್ಲಿ ಬೆಂಕಿ ಹಂಚಿಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಕೇರಳದ ವಯನಾಡಿನಲ್ಲಿ ನಡೆದಿದೆ. ಪೊನ್ನಂಪೇಟೆ ತಾಲ್ಲೂಕಿನ ಕುಟ್ಟ ಗ್ರಾಮದ ನಿವಾಸಿ ಸಜೀರ್ ಎಂಬುವವರೇ ಆತ್ಮಹತ್ಯೆ ಮಾಡಿಕೊಂಡ ಉದ್ಯಮಿ. ಕಾರಿನಲ್ಲಿದ್ದ ಸಜೀರ್ ಅವರ ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಸ್ಥಳೀಯರು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಸಜೀರ್ ಅವರು ವ್ಯಕ್ತಿಯೊಬ್ಬರಿಗೆ 20 ಲಕ್ಷ ರೂ. ಸಾಲ ನೀಡಿದ್ದರು. ಆದರೆ ಹಣವನ್ನು ವಾಪಾಸ್ ನೀಡದ ಕಾರಣ ಮನನೊಂದ ಸಜೀರ್ ಆತನ ಮನೆ ಎದುರೇ ಕಾರಿನಲ್ಲಿ ಪತ್ನಿ ಹಾಗೂ ಇಬ್ಬರು ಮಕ್ಕಳೊಂದಿಗೆ ಬೆಂಕಿ ಹಚ್ಚಿಕೊಂಡಿದ್ದಾರೆ ಎಂದು ಹೇಳಲಾಗಿದೆ. ಸಜೀರ್ ಮೃತಪಟ್ಟರೆ, ಉಳಿದ ಮೂವರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಮಾನಂದವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಕುಟ್ಟ ಗ್ರಾಮದಲ್ಲಿ ಸಜೀರ್ ಹಲವು ವ್ಯಾಪಾರ ಮಳಿಗೆ ಹೊಂದಿದ್ದರು. ಆತ್ಮಹತ್ಯೆಗೂ ಮೊದಲು ವಿಡಿಯೋ ಮಾಡಿದ್ದ ಅವರು ನಮ್ಮ ಸಾವಿಗೆ ಸಾಲ ಪಡೆದ ವ್ಯಕ್ತಿಯೇ ಕಾರಣವೆಂದು ಆರೋಪಿಸಿದ್ದಾರೆ.








