Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5657 ಪ್ರಕರಣಗಳು ಇತ್ಯರ್ಥ*
  • *ಕಾಯಕ ಶರಣರ ಜಯಂತಿ ಸಮ ಸಮಾಜ ನಿರ್ಮಾಣದಲ್ಲಿ ಕಾಯಕ ಶರಣರ ಕೊಡುಗೆ ಅಪಾರ: ಹೇಮಲತಾ*
  • *ಸೌಂದರ್ಯ ತಜ್ಞರು ನಿತ್ಯ ವ್ಯಾಯಾಮದೊಂದಿಗೆ ತಮ್ಮ ಆರೋಗ್ಯ ವೃದ್ಧಿಸಿಕೊಳ್ಳುವ ಬಗ್ಗೆ ಗಮನಹರಿಸಬೇಕು ಎಂದು ಅಂತರರಾಷ್ಟ್ರೀಯ ಬ್ಯಾಡ್ಮಿಂಟನ್ ಕ್ರೀಡಾಪಟು ತಾತಪಂಡ ಜ್ಯೋತಿ ಸೋಮಯ್ಯ ಕಿವಿಮಾತು ಹೇಳಿದರು*
  • *ಮೈಸೂರು-ಕುಶಾಲನಗರ ರೈಲ್ವೆ ಯೋಜನೆ ಪುನಾರಂಭಿಸಲು ಅಶ್ವಿನ್‌ ವೈಷ್ಣವ್‌ಗೆ ಯದುವೀರ್‌ ಮನವಿ ಭೂ ಸ್ವಾಧೀನ ಪ್ರಕ್ರಿಯೆಗೆ ಚಾಲನೆ ನೀಡಲು ಕ್ರಮ ಕೈಗೊಳ್ಳಬೇಕೆಂದು ಸಂಸದರ ಪತ್ರ*
  • *ಕೊಡವ ಭಾಷೆಗೂ ಸಾಂವಿಧಾನಿಕ ಭದ್ರತೆ ನೀಡಬೇಕು : ಸಣ್ಣ ಸಣ್ಣ ಭಾಷೆಗಳನ್ನು ಹತ್ತಿಕಿದರೆ ಏಕತೆಗೆ ದಕ್ಕೆ : ಸಿಎನ್‌ಸಿ ಪ್ರತಿಪಾದನೆ*
  • *‘ಜಂತು ಹುಳು ರಹಿತ ಮಕ್ಕಳು – ಆರೋಗ್ಯವಂತ ಮಕ್ಕಳು’ ರಾಷ್ಟ್ರೀಯ ಜಂತು ಹುಳು ನಿವಾರಣಾ ಕಾರ್ಯಕ್ರಮ*
  • *ಫೆ.14 ರಂದು ಕೊಡವ ಭವನ ಉದ್ಘಾಟನೆ*
  • *ಮಡಿಕೇರಿಯಲ್ಲಿ “ಆರೋಗ್ಯ ಹಕ್ಕಿನ ಜಾಥಾ”*
  • *ಕೊಡವ ಕುಟುಂಬಗಳ ನಡುವಣ “ಮುಲ್ಲೇಂಗಡ ಕಬಡ್ಡಿ ನಮ್ಮೆ”*
  • *104 ಮೊಬೈಲ್ ಫೋನ್‌ಗಳನ್ನು ವಾರಸುದಾರರಿಗೆ ಹಸ್ತಾಂತರಿಸಿದ ಕೊಡಗು ಜಿಲ್ಲಾ ಪೊಲೀಸ್*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ಮಾರ್ಚ್ ಅಂತ್ಯದೊಳಗೆ ಹೋಂ ಸ್ಟೇಗೆ ಪರವಾನಗಿ ಹಾಗೂ ನವೀಕರಣಕ್ಕೆ ಜಿಲ್ಲಾಧಿಕಾರಿ ಸೋಮಶೇಖರ್ ಸೂಚನೆ*  
LATEST UPDATES

*ಮಾರ್ಚ್ ಅಂತ್ಯದೊಳಗೆ ಹೋಂ ಸ್ಟೇಗೆ ಪರವಾನಗಿ ಹಾಗೂ ನವೀಕರಣಕ್ಕೆ ಜಿಲ್ಲಾಧಿಕಾರಿ ಸೋಮಶೇಖರ್ ಸೂಚನೆ*  

February 9, 20265 Mins Read
Share
Facebook Twitter LinkedIn Pinterest WhatsApp Email

ಮಡಿಕೇರಿ NEWS DESK ಫೆ.9 : ಜಿಲ್ಲೆಯಲ್ಲಿನ ಹೊಸ ಹೋಂ ಸ್ಟೇಗಳ ನೋಂದಣಿ ಮತ್ತು ಈಗಾಗಲೇ ಇರುವ ಹೋಂ ಸ್ಟೇಗಳಿಗೆ ಪರವಾನಗಿ ನೀಡುವುದು ಹಾಗೂ ಈಗಾಗಲೇ ನೋಂದಾಯಿಸಿರುವ ಹೋಂಸ್ಟೇಗಳಿಗೆ ನವೀಕರಣವನ್ನು ಮಾರ್ಚ್, 31 ರೊಳಗೆ ಪೂರ್ಣಗೊಳಿಸುವಂತೆ ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಅವರು ಸೂಚಿಸಿದ್ದಾರೆ. ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಜಿಲ್ಲಾಧಿಕಾರಿ ಅವರ ಅಧ್ಯಕ್ಷತೆಯಲ್ಲಿ ಸೋಮವಾರ ನಡೆದ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ಸಮಿತಿ ಸಭೆಯಲ್ಲಿ ಅವರು ಮಾತನಾಡಿದರು. ಆನ್‌ಲೈನ್ ಮೂಲಕ ಪರವಾನಗಿ ನೋಂದಣಿ ಹಾಗೂ ನವೀಕರಣ ಕಾರ್ಯವು ಸ್ಥಗಿತವಾಗಿದ್ದು, ತಾತ್ಕಾಲಿಕವಾಗಿ ಆಪ್‌ಲೈನ್ ಮೂಲಕ ಸ್ಥಳ ಪರಿಶೀಲಿಸಿ ಅನುಮೋದನೆ ಮಾಡಬೇಕಿದ್ದು,  ಆ ನಿಟ್ಟಿನಲ್ಲಿ ಅಗತ್ಯ ಕ್ರಮವಹಿಸುವಂತೆ ಜಿಲ್ಲಾಧಿಕಾರಿ ಅವರು ನಿರ್ದೇಶನ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಪ್ರವಾಸೋದ್ಯಮ ಇಲಾಖೆ ಉಪ ನಿರ್ದೇಶಕರು ಹಾಗೂ ಉಪ ವಿಭಾಗಾಧಿಕಾರಿ ನಿತಿನ್ ಚಕ್ಕಿ ಅವರು ಫೆಬ್ರವರಿ, 07 ರವರೆಗೆ 100 ಹೊಸ ಹೋಂ ಸ್ಟೇಗಳಿಗೆ ಪರವಾನಗಿ ನೀಡಲು ಅರ್ಜಿ ಸಲ್ಲಿಕೆಯಾಗಿವೆ. ಹಾಗೆಯೇ 180 ಹೋಂ ಸ್ಟೇಗಳ ನವೀಕರಣಕ್ಕೆ ಅರ್ಜಿ ಸಲ್ಲಿಕೆಯಾಗಿದೆ ಎಂದು ಅವರು ಮಾಹಿತಿ ನೀಡಿದರು. ಈ ಬಗ್ಗೆ ಮಾತನಾಡಿದ ಜಿಲ್ಲಾಧಿಕಾರಿ ಸೋಮಶೇಖರ್ ಅವರು ಖುದ್ದಾಗಿ ಸ್ಥಳಕ್ಕೆ ತೆರಳಿ, ನೋಂದಣಿ ಹಾಗೂ ನವೀಕರಣ ಕಾರ್ಯವನ್ನು ಕೈಗೊಳ್ಳಬೇಕು. ಈಗಾಗಲೇ ಸಲ್ಲಿಕೆಯಾಗಿರುವ ಅರ್ಜಿಗಳಿಗೆ ಮಾರ್ಚ್ ಅಂತ್ಯದೊಳಗೆ ಪರಿಶೀಲಿಸಿ ಅರ್ಜಿ ವಿಲೇವಾರಿಗೆ ಕ್ರಮವಹಿಸುವಂತೆ ಸೂಚಿಸಿದರು. ಈ ಸಂದರ್ಭದಲ್ಲಿ ಚೇಂಬರ್ ಆಫ್ ಕಾಮರ್ಸ್ ಅಧ್ಯಕ್ಷರಾದ ನಾಗೇಂದ್ರ ಪ್ರಸಾದ್, ಹೋಂ ಸ್ಟೇ ಅಸೋಷಿಯೇಷನ್ ಅಧ್ಯಕ್ಷರಾದ ಮೋಂತಿ ಗಣೇಶ್ ಅವರು ಮಾತನಾಡಿ ಕೊರೋನಾ ಸಂದರ್ಭದಲ್ಲಿ ಹಲವು ಹೋಂ ಸ್ಟೇಗಳು ಮುಚ್ಚಿ ಹೋದವು. ಆ ಸಂದರ್ಭದಲ್ಲಿ ಬದುಕು ನಡೆಸುವುದೇ ದುಸ್ತರವಾಗಿತ್ತು ಎಂದು ಹೇಳಿದರು. ವಿಶ್ವ ಪ್ರವಾಸೋದ್ಯಮ ದಿನಾಚರಣೆಯನ್ನು ಪ್ರತೀವರ್ಷ ಅರ್ಥಪೂರ್ಣವಾಗಿ ಆಯೋಜಿಸುವಂತಾಗಬೇಕು ಎಂದು ಜಿಲ್ಲಾಧಿಕಾರಿ ಅವರು ಇದೇ ಸಂದರ್ಭದಲ್ಲಿ ಸಲಹೆ ಮಾಡಿದರು. ಕೂರ್ಗ್ ವಿಲೇಜ್ ಅಭಿವೃದ್ದಿ ಸಂಬAಧಿಸಿದAತೆ ಮಾಹಿತಿ ಪಡೆದ ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಅವರು ನಗರಸಭೆ ಹಾಗೂ ತೋಟಗಾರಿಕೆ ಇಲಾಖೆ ಅಧಿಕಾರಿಗಳು ಆಸಕ್ತರನ್ನು ಒಳಗೊಂಡ ಉಪ ಸಮಿತಿ ರಚಿಸುವಂತೆ ನಿರ್ದೇಶನ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಕೊಡಗು ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ಉಪಾಧ್ಯಕ್ಷರಾದ ನವೀನ್ ಅಂಬೆಕಲ್ಲು ಅವರು 98 ಲಕ್ಷ ರೂ. ಖರ್ಚು ಮಾಡಿ ಕೂರ್ಗ್ ವಿಲೇಜ್‌ನ್ನು ನಿರ್ಮಿಸಲಾಗಿದೆ. ಅಲ್ಲಿ ಮತ್ತೆ ವೆಚ್ಚ ಮಾಡುವುದಕ್ಕಿಂತ ರಾಜಾಸೀಟನ್ನು ಅಭಿವೃದ್ಧಿ ಪಡಿಸುವುದು ಒಳಿತು ಎಂದು ಸಲಹೆ ಮಾಡಿದರು. ಈ ಸಂದರ್ಭದಲ್ಲಿ ಮಾತನಾಡಿದ ತೋಟಗಾರಿಕೆ ಇಲಾಖೆ ಉಪ ನಿರ್ದೇಶಕರಾದ ಶಶಿಧರ ಅವರು ಸ್ವಸಹಾಯ ಗುಂಪುಗಳಿಗೆ ಹಾಗೂ ವಿವಿಧ ಇಲಾಖೆಗಳಿಗೆ ಮಳಿಗೆ ನೀಡಲು ನಿರ್ಧರಿಸಲಾಗಿತ್ತು, ಆ ಸಂದರ್ಭದಲ್ಲಿ ಯಾರೂ ಸಹ ಮುಂದೆ ಬರಲಿಲ್ಲ ಎಂದು ಸದ್ಯ ಆರ್ಟ್ ಗ್ಯಾಲರಿ, ಮತ್ತಿತರ ಮಳಿಗೆಯನ್ನು ಸ್ಥಾಪಿಸಲು ಉದ್ದೇಶಿಸಲಾಗಿದೆ ಎಂದರು. ಮೋಂತಿ ಗಣೇಶ್ ಅವರು ಮಾತನಾಡಿ ಕೂರ್ಗ್ ವಿಲೇಜ್ ಬಳಕೆಯಾಗಬೇಕು. ಜೊತೆಗೆ ನೆಹರು ಮಂಟಪವನ್ನು ಅಭಿವೃದ್ಧಿ ಪಡಿಸಬೇಕು ಎಂದು ಸಲಹೆ ನೀಡಿದರು. ರಾಜಾಸೀಟು ಅಭಿವೃದ್ಧಿ ಸಮಿತಿಯಲ್ಲಿ ಆಸಕ್ತರನ್ನು ಆಹ್ವಾನಿಸಬೇಕು. ಉಪ ಸಮಿತಿ ರಚನೆ ಮಾಡಿ ಪ್ರವಾಸಿ ಕೇಂದ್ರವನ್ನು ಮತ್ತಷ್ಟು ಅಭಿವೃದ್ಧಿ ಪಡಿಸಲು ಮುಂದಾಗಬೇಕು ಎಂದು ಜಿಲ್ಲಾಧಿಕಾರಿ ಅವರು ಹೇಳಿದರು. ನಗರಸಭೆ, ತೋಟಗಾರಿಕೆ ಇಲಾಖೆ, ಉಪ ವಿಭಾಗಾಧಿಕಾರಿಯವರು ಹಾಗೆಯೇ ಸಂಚಾರಿ ಪೊಲೀಸರು ಹಾಗೂ ಸಾರ್ವಜನಿಕರನ್ನು ಒಳಗೊಂಡ ಉಪ ಸಮಿತಿಯನ್ನು ರಚನೆ ಮಾಡಿಕೊಂಡು ರಾಜಾಸೀಟು ಅಭಿವೃದ್ಧಿಗೆ ಮುಂದಾಗುವAತೆ ಜಿಲ್ಲಾಧಿಕಾರಿ ಅವರು ನಿರ್ದೇಶನ ನೀಡಿದರು. ರಾಜಾಸೀಟಿನಲ್ಲಿ ಪುಟಾಣಿ ರೈಲು ಸಂಬಂಧಿಸಿದಂತೆ ಮಾತನಾಡಿದ ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಅವರು ಮೈಸೂರಿನ ರೈಲ್ವೆ ಅಧಿಕಾರಿಗಳ ಜೊತೆ ಚರ್ಚಿಸಿ ತ್ವರಿತ ಕ್ರಮ ಕೈಗೊಳ್ಳಲಾಗುವುದು ಎಂದರು. ಕೊಡವ ಹೆರಿಟೇಜ್ ಸೆಂಟರ್ ಇನ್ನೂ ಪೂರ್ಣಗೊಳ್ಳದಿರುವುದಕ್ಕೆ ತೀವ್ರ ಅತೃಪ್ತಿ ವ್ಯಕ್ತಪಡಿಸಿದ ಕೊಡಗು ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ಅಧ್ಯಕ್ಷರಾದ ನಾಗೇಂದ್ರ ಪ್ರಸಾದ್ ಅವರು ಪ್ರತೀ ವರ್ಷ ಚರ್ಚೆಗೆ ಬರುತ್ತಿದೆ. ಆದರೆ ಕೆಲಸ ಆಗಿಲ್ಲ ಎಂದು ದೂರಿದರು. ಭಾರತ ಸರ್ಕಾರದ ನಾಗರಿಕ ಸೇವೆಯಲ್ಲಿದ್ದ ಕೊಡಗು ಜಿಲ್ಲೆಯ ರತಿ ವಿನೇಜಾ ಅವರ ಪ್ರಯತ್ನದಿಂದ ಕೊಡವ ಹೆರಿಟೇಜ್ ಸ್ಥಾಪನೆಗೆ ಮುಂದಾಗಲಾಗಿತ್ತು. ಆದರೆ ಈ ಕಾಮಗಾರಿ ಪೂರ್ಣಗೊಂಡಿಲ್ಲ ಎಂದು ಮೋಂತಿ ಗಣೇಶ್ ಅವರು ಹೇಳಿದರು. ಹೋಂ ಮೇಡ್ ವೈನ್, ಚಾಕಲೇಟ್ ತಯಾರಿಕೆ ಹಾಗೂ ಸ್ಪೆöÊಸಸ್ ಹೆಸರಿನಲ್ಲಿ ಕೊಡಗು ಜಿಲ್ಲೆಯಲ್ಲಿ ಸುಳ್ಳು ಹೇಳಿ ವ್ಯಾಪಾರ ಮಾಡುತ್ತಿದ್ದು, ಇದಕ್ಕೆ ಕಡಿವಾಣ ಬೀಳಬೇಕು ಎಂದು ಮೋಂತಿ ಗಣೇಶ್ ಅವರು ಮನವಿ ಮಾಡಿದರು. ‘ಕೊಡಗು ಸಿಲ್ಕ್’ ಹೆಸರಿನಲ್ಲಿ ಸೀರೆಯನ್ನು ಮಾರುವುದು ಕಂಡು ಬರುತ್ತಿದೆ. ಇದಕ್ಕೆ ಅರ್ಥವಿದೆಯೇ ಎಂದು ಕರುಂಬಯ್ಯ ಅವರು ಗಮನ ಸೆಳೆದರು. ಕೊಡಗು ಹೋಂ ಮೇಡ್ ಹೆಸರಿನಲ್ಲಿ ಕಡಿಮೆ ಬೆಲೆಗೆ ವೈನ್ ಮಾರಾಟ ಮಾಡುತ್ತಿದ್ದಾರೆ. ಈ ಬಗ್ಗೆ ಗಮನಹರಿಸಬೇಕು. ಆರೋಗ್ಯ ಸುರಕ್ಷತೆಗೆ ಒತ್ತು ನೀಡಬೇಕು ಎಂದು ಜಿಲ್ಲಾಧಿಕಾರಿ ಅವರು ಸಲಹೆ ಮಾಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಅಬಕಾರಿ ಇಲಾಖೆ ಇನ್ಸ್ಪೆಕ್ಟರ್ ಅಬ್ರಾಹಂ ಚೇತನ್ ಅವರು ಹೋಂ ಮೇಡ್ ವೈನ್‌ನಲ್ಲಿ ಶೇ.,6.8 ರಷ್ಟು ಆಲ್ಕೋ ಹಾಲ್ ಅಂಶ ಇರುವುದು ಕಂಡುಬಂದಿದೆ ಎಂದು ಅವರು ತಿಳಿಸಿದರು. ಹೋಂ ಮೇಡ್ ಚಾಕಲೇಟ್ ಸಂಬಂಧಿಸಿದಂತೆ ತಯಾರಿಕಾ ದಿನಾಂಕ ಹಾಗೂ ವರ್ಷ, ತಯಾರಿಕೆ ಸಂಸ್ಥೆಯ ಹೆಸರು, ಎಕ್ಸ್ಪೈಯರಿ ಡೇಟ್, ಪರವಾನಗಿ ಮತ್ತಿತರ ಅಂಶಗಳು ಒಳಗೊಂಡಿರಬೇಕು ಎಂದು ಅವರು ಹೇಳಿದರು. ಕೊಡಗು ಜಿಲ್ಲಾ ಕೇಂದ್ರ ಮಡಿಕೇರಿಗೆ ರಾಜಾಸೀಟು ವೀಕ್ಷಣೆಗೆ ವಾರಾಂತ್ಯದಲ್ಲಿ ಸಾವಿರಾರು ಜನರು ಆಗಮಿಸುತ್ತಾರೆ. ಇದರಿಂದ ಪ್ರವಾಸಿ ವಾಹನಗಳ ನಿಲುಗಡೆಗೆ ತೊಂದರೆಯಾಗಿದೆ. ಆದ್ದರಿಂದ ಈ ಬಗ್ಗೆ ಗಮನಹರಿಸಬೇಕು ಎಂದು ನಾಗೇಂದ್ರ ಪ್ರಸಾದ್ ಅವರು ಹೇಳಿದರು. ಕಳೆದ 15 ವರ್ಷಗಳಿಂದ ಇದೇ ಮಾಹಿತಿ ಹೇಳಿಕೊಂಡು ಬರಲಾಗಿದೆ. ಆದರೆ ಕೆಲಸಗಳು ಆಗಿಲ್ಲ ಎಂದು ಸಮಿತಿ ಸದಸ್ಯರೊಬ್ಬರು ಅತೃಪ್ತಿ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ನಗರಾಭಿವೃದ್ಧಿ ಯೋಜನಾ ಶಾಖೆಯ ಯೋಜನಾ ನಿರ್ದೇಶಕರಾದ ಬಿ.ಬಸಪ್ಪ ಅವರು ನಗರೋತ್ಥಾನ ಯೋಜನೆಯಡಿ ಟೆಂಡರ್ ಆಗಿದ್ದು, ಶೀಘ್ರ ಕಾಮಗಾರಿ ಆರಂಭಿಸಲಾಗುತ್ತದೆ ಎಂದು ಹೇಳಿದರು. ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಅವರು ವಾಹನ ನಿಲುಗಡೆಗೆ ಅಗತ್ಯ ಕ್ರಮ ಕೈಗೊಳ್ಳಬೇಕು. ಆದಷ್ಟು ಕಾಮಗಾರಿಯನ್ನು ಶೀಘ್ರ ಆರಂಭಿಸುವಂತೆ ನಿರ್ದೇಶನ ನೀಡಿದರು. ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಅವರು ಮಾತನಾಡಿ ಜಿಲ್ಲೆಯಲ್ಲಿ ಪ್ಲಾಸ್ಟಿಕ್‌ನ್ನು ಹಂತ ಹಂತವಾಗಿ ರದ್ದುಗೊಳಿಸಬೇಕಿದೆ. ಮಾರ್ಚ್, 01 ರಿಂದ ಏಪ್ರಿಲ್ 1 ರ ತನಕ ಸ್ವಚ್ಚ ಹಾಗೂ ಸುಂದರ ಕೊಡಗು ಹೆಸರಿನಲ್ಲಿ ಅಭಿಯಾನ ಆಯೋಜಿಸುವಂತೆ ಜಿಲ್ಲಾಧಿಕಾರಿ ಅವರು ಹೇಳಿದರು. ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾ ಚೇಂಬರ್ ಆಫ್ ಕಾಮರ್ಸ್ನ ನಿರ್ದೇಶಕರಾದ ಶ್ಯಾಮ್ ಅವರು ಕಲ್ಯಾಣ ಮಂಟಪದಲ್ಲಿಯೂ ಸಹ ಪ್ಲಾಸ್ಟಿಕ್ ಬಳಸದಂತೆ ಜಾಗೃತಿ ಮೂಡಿಸಬೇಕು. ಕುಟ್ಟ ಹಾಗೂ ಮಾಕುಟ್ಟ ಗಡಿ ಪ್ರದೇಶದಲ್ಲಿ ವಾಹನಗಳ ತಪಾಸಣೆ ಮಾಡಿ ಪರಿಸರ ಶುಚಿತ್ವಕ್ಕೆ ಒತ್ತು ನೀಡಬೇಕು ಎಂದು ಸಲಹೆ ಮಾಡಿದರು. ಮಾಂದಲ್ ಪಟ್ಟಿಗೆ ತೆರಳುವ ವಾಹನ ಸಂಬಧಿಸಿದಂತೆ ದೂರುಗಳು ಕೇಳಿ ಬರುತ್ತಿರುವ ಹಿನ್ನೆಲೆ ಫ್ರೀಪೈಡ್ ವಾಹನಕ್ಕೆ ಅವಕಾಶ ಮಾಡುವಂತೆ ಜಿಲ್ಲಾಧಿಕಾರಿ ಅವರು ಸಲಹೆ ಮಾಡಿದರು. ಈ ಸಂದರ್ಭದಲ್ಲಿ ಮಾತನಾಡಿದ ನಾಗೇಂದ್ರ ಪ್ರಸಾದ್ ಅವರು ದುಬಾರೆಯಲ್ಲಿ ಪ್ರೀಪೈಡ್ ಮಾದರಿಯಲ್ಲಿ ಬೋಟ್‌ಗಳು ಸಂಚರಿಸುತ್ತಿವೆ ಎಂದರು. ಮಾಂದಲ್ ಪಟ್ಟಿಯಲ್ಲಿ ಬಾಡಿಗೆ ವಾಹನದಾರರು ಪ್ರವಾಸಿಗರಿಂದ ಹೆಚ್ಚಿನ ಶುಲ್ಕ ಪಡೆಯುತ್ತಿರುವ ದೂರುಗಳು ಕೇಳಿಬರುತ್ತಿರುವ ಹಿನ್ನೆಲೆ ಪ್ರೀಪೈಡ್ ಮಾದರಿಯಲ್ಲಿ ಶುಲ್ಕ ನಿಗಧಿ ಮಾಡುವಂತೆ ಜಿಲ್ಲಾಧಿಕಾರಿ ಅವರು ಸಲಹೆ ಮಾಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಸೆಂಥಿಲ್ ಕುಮಾರ್  ಮಾಂದಲ್ ಪಟ್ಟಿಯಲ್ಲಿ ಸುಗಮ ಸಾರಿಗೆ ಸಂಚಾರ ಸಂಬಂಧ ಸಣ್ಣ ಸಣ್ಣ ಕಲ್ಲುಗಳನ್ನು ಅಳವಡಿಸಿ ರಸ್ತೆ ನಿರ್ಮಿಸಲಾಗುತ್ತದೆ ಎಂದರು. ಈ ಸಂದರ್ಭದಲ್ಲಿ ಮಾತನಾಡಿದ ನಾಗೇಂದ್ರ ಪ್ರಸಾದ್ ಅವರು ಗಡಿ ಭಾಗದಲ್ಲಿ ವೈಟ್‌ಬೋರ್ಡ್ಗಳನ್ನು ತಪಾಸಣೆ ಮಾಡಬೇಕು. ತೆರಿಗೆಯನ್ನು ಸಂಗ್ರಹಿಸಬೇಕು ಎಂದರು. ಈ ಕುರಿತು ಪ್ರತಿಕ್ರಿಯಿಸಿದ ಪ್ರಾದೇಶಿಕ ಸಾರಿಗೆ ಅಧಿಕಾರಿ ಸತೀಶ್ ಅವರು ಜಿಲ್ಲೆಯಲ್ಲಿ 1.69 ಕೋಟಿಯಷ್ಟು ವಾಹನ ತೆರಿಗೆ ಸಂಗ್ರಹಿಸಲಾಗಿದೆ ಎಂದು ಮಾಹಿತಿ ನೀಡಿದರು. ನಾಗೇಂದ್ರ ಪ್ರಸಾದ್ ಅವರು ಮಾತನಾಡಿ ಕುಶಾಲನಗರದಲ್ಲಿ ತಾವರೆಕೆರೆಯನ್ನು ಪ್ರವಾಸೋದ್ಯಮವಾಗಿ ಅಭಿವೃದ್ಧಿ ಪಡಿಸಬೇಕು. ಅಬ್ಬಿಪಾಲ್ಸ್, ತೂಗುಸೇತುವೆ ಸರಿಪಡಿಸುವಂತಾಗಬೇಕು ಎಂದು ಅವರು ಸಲಹೆ ಮಾಡಿದರು. ಜಿಲ್ಲೆಯಲ್ಲಿ ಡ್ರಗ್ಸ್ ನಿಯಂತ್ರಿಸುವ ಸಂಬಂಧ ಹೋಂಸ್ಟೇಗಳ ಪರಿಶೀಲನೆ ಮಾಡಬೇಕು ಎಂದು ಉಪ ವಿಭಾಗಾಧಿಕಾರಿ ಸಲಹೆ ಮಾಡಿದರು.  ಈ ಕುರಿತು ಪ್ರತಿಕ್ರಿಯಿಸಿದ ಶ್ಯಾಮ್ ಅವರು ನವೀಕರಣ ಸಂದರ್ಭದಲ್ಲಿ ಪರಿಶೀಲಿಸಲಾಗುತ್ತಿದೆ ಎಂದು ಹೇಳಿದರು. ದುಬಾರೆಯಲ್ಲಿನ ಆನೆ ಶಿಬಿರ ವೀಕ್ಷಣೆಗೆ ತೆರಳುವ ಸಂದರ್ಭದಲ್ಲಿ ಸಾರ್ವಜನಿಕರಿಂದ ಪ್ರವೇಶ ಶುಲ್ಕವನ್ನು ಹೆಚ್ಚು ತೆಗೆದುಕೊಳ್ಳಲಾಗುತ್ತಿದ್ದು, ಇದನ್ನು ಕಡಿಮೆ ಮಾಡಬೇಕು ಎಂದು ಸಮಿತಿ ಸದಸ್ಯರೊಬ್ಬರು ಹೇಳಿದರು. ಲೋಕೋಪಯೋಗಿ ಇಲಾಖೆ ಕಾರ್ಯಪಾಲಕ ಎಂಜಿನಿಯರ್ ಇಬ್ರಾಹಿಂ ಅವರು ಮಾತನಾಡಿ ದುಬಾರೆಯಲ್ಲಿ ತೂಗುಸೇತುವೆ ನಿರ್ಮಿಸುವ ಸಂಬಂಧ ಟೆಂಡರ್ ಆಗಿದ್ದು, ಕಾರ್ಯಾದೇಶ ನೀಡಬೇಕಿದೆ ಎಂದು ಹೇಳಿದರು. ಟೂರ್ ಅಂಡ್ ಟ್ರಾವಲ್ ಅಸೋಷಿಯೇಷನ್ ಅಧ್ಯಕ್ಷರಾದ ಕುಪ್ಪಂಡ ವಸಂತ್ ಅವರು ಪ್ರವಾಸಿ ಸ್ಥಳಗಳಲ್ಲಿ ಸಾರ್ವಜನಿಕರಿಗೆ ಯಾವುದೇ ಕಿರಿಕಿರಿ ಉಂಟಾಗದಂತೆ ಗಮನಹರಿಸಲಾಗುವುದು ಎಂದರು. ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರಾದ ಬಿ.ಬಸಪ್ಪ, ತೋಟಗಾರಿಕೆ ಇಲಾಖೆ ಉಪ ನಿರ್ದೇಶಕರಾದ ಶಶಿಧರ, ಉಪ ಪೊಲೀಸ್ ವರಿಷ್ಠಾಧಿಕಾರಿ ಐ.ಪಿ.ಮೇದಪ್ಪ, ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕರಾದ ಸಚಿನ್, ಜಿಲ್ಲಾ ಪರಿಸರ ಅಧಿಕಾರಿ ರಘುರಾಮ್, ದುಬಾರೆ ರಿವರ್ ರ‍್ಯಾಪ್ಟಿಂಗ್ ಮೆಂಬರ್ ವಿಶ್ವ ಇತರರು ಹಲವು ಮಾಹಿತಿ ನೀಡಿದರು. ಪ್ರವಾಸೋದ್ಯಮ ಇಲಾಖೆಯ ಸಮಾಲೋಚಕರಾದ ಜತಿನ್ ಬಿದ್ದಪ್ಪ ಇತರರು ಇದ್ದರು.

Share. Facebook Twitter Pinterest LinkedIn Tumblr Email WhatsApp
Previous Article*ಕುಶಾಲನಗರ ರೋಟರಿ ಸಂಭ್ರಮೋತ್ಸವಕ್ಕೆ ಚಾಲನೆ… ಕಾವೇರಿ ನದಿ ಸೇತುವೆ ಬಳಿ ಬಾಟಲಿ ಮಾದರಿಯ ತೊಟ್ಟಿ ಉದ್ಘಾಟನೆ..*
Next Article *ಸಂಭ್ರಮದಿಂದ ನಡೆದ ಸೋಮವಾರಪೇಟೆ ತಾಲ್ಲೂಕು 9ನೇ ಕನ್ನಡ ಸಾಹಿತ್ಯ ಸಮ್ಮೇಳನ*

Related Posts

*ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5657 ಪ್ರಕರಣಗಳು ಇತ್ಯರ್ಥ*

February 11, 2026

*ಕಾಯಕ ಶರಣರ ಜಯಂತಿ ಸಮ ಸಮಾಜ ನಿರ್ಮಾಣದಲ್ಲಿ ಕಾಯಕ ಶರಣರ ಕೊಡುಗೆ ಅಪಾರ: ಹೇಮಲತಾ*

February 10, 2026

*ಸೌಂದರ್ಯ ತಜ್ಞರು ನಿತ್ಯ ವ್ಯಾಯಾಮದೊಂದಿಗೆ ತಮ್ಮ ಆರೋಗ್ಯ ವೃದ್ಧಿಸಿಕೊಳ್ಳುವ ಬಗ್ಗೆ ಗಮನಹರಿಸಬೇಕು ಎಂದು ಅಂತರರಾಷ್ಟ್ರೀಯ ಬ್ಯಾಡ್ಮಿಂಟನ್ ಕ್ರೀಡಾಪಟು ತಾತಪಂಡ ಜ್ಯೋತಿ ಸೋಮಯ್ಯ ಕಿವಿಮಾತು ಹೇಳಿದರು*

February 10, 2026

*ಕಾಯಕ ಶರಣರ ಜಯಂತಿ ಸಮ ಸಮಾಜ ನಿರ್ಮಾಣದಲ್ಲಿ ಕಾಯಕ ಶರಣರ ಕೊಡುಗೆ ಅಪಾರ: ಹೇಮಲತಾ*

February 10, 2026

ಮಡಿಕೇರಿ,  NEWS DESK ಫೆ.10:-ಹನ್ನೆರಡನೇ ಶತಮಾನದಲ್ಲಿ ಬಸವಣ್ಣ ಅವರ ನೇತೃತ್ವದಲ್ಲಿ ಅನುಭವ ಮಂಟಪದಲ್ಲಿ ಹಲವು ಕಾಯಕ ಶರಣರು ವರ್ಣ ವ್ಯವಸ್ಥೆ,…

*ಸೌಂದರ್ಯ ತಜ್ಞರು ನಿತ್ಯ ವ್ಯಾಯಾಮದೊಂದಿಗೆ ತಮ್ಮ ಆರೋಗ್ಯ ವೃದ್ಧಿಸಿಕೊಳ್ಳುವ ಬಗ್ಗೆ ಗಮನಹರಿಸಬೇಕು ಎಂದು ಅಂತರರಾಷ್ಟ್ರೀಯ ಬ್ಯಾಡ್ಮಿಂಟನ್ ಕ್ರೀಡಾಪಟು ತಾತಪಂಡ ಜ್ಯೋತಿ ಸೋಮಯ್ಯ ಕಿವಿಮಾತು ಹೇಳಿದರು*

February 10, 2026

*ಮೈಸೂರು-ಕುಶಾಲನಗರ ರೈಲ್ವೆ ಯೋಜನೆ ಪುನಾರಂಭಿಸಲು ಅಶ್ವಿನ್‌ ವೈಷ್ಣವ್‌ಗೆ ಯದುವೀರ್‌ ಮನವಿ ಭೂ ಸ್ವಾಧೀನ ಪ್ರಕ್ರಿಯೆಗೆ ಚಾಲನೆ ನೀಡಲು ಕ್ರಮ ಕೈಗೊಳ್ಳಬೇಕೆಂದು ಸಂಸದರ ಪತ್ರ*

February 10, 2026

*ಕೊಡವ ಭಾಷೆಗೂ ಸಾಂವಿಧಾನಿಕ ಭದ್ರತೆ ನೀಡಬೇಕು : ಸಣ್ಣ ಸಣ್ಣ ಭಾಷೆಗಳನ್ನು ಹತ್ತಿಕಿದರೆ ಏಕತೆಗೆ ದಕ್ಕೆ : ಸಿಎನ್‌ಸಿ ಪ್ರತಿಪಾದನೆ*

February 10, 2026

*ಫೆ.14 ರಂದು ಕೊಡವ ಭವನ ಉದ್ಘಾಟನೆ*

February 10, 2026

*ಮಡಿಕೇರಿಯಲ್ಲಿ “ಆರೋಗ್ಯ ಹಕ್ಕಿನ ಜಾಥಾ”*

February 10, 2026

*ಕೊಡವ ಕುಟುಂಬಗಳ ನಡುವಣ “ಮುಲ್ಲೇಂಗಡ ಕಬಡ್ಡಿ ನಮ್ಮೆ”*

February 10, 2026

*104 ಮೊಬೈಲ್ ಫೋನ್‌ಗಳನ್ನು ವಾರಸುದಾರರಿಗೆ ಹಸ್ತಾಂತರಿಸಿದ ಕೊಡಗು ಜಿಲ್ಲಾ ಪೊಲೀಸ್*

February 10, 2026

*ತಾಲ್ಲೂಕು ಮಟ್ಟದ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ನೀಡಲು ಅರ್ಜಿ ಆಹ್ವಾನ*

February 10, 2026

*ಫೆ.15ರಂದು ಗೌಡ ಜನಾಂಗಗಳ ಜಿಲ್ಲಾ ಮಟ್ಟದ ಕ್ಯಾರಂಬೋರ್ಡ್ ಕ್ರೀಡಾಕೂಟ : ಏಪ್ರಿಲ್ ನಲ್ಲಿ ಟೆನ್ನಿಸ್ ಬಾಲ್ ಕ್ರಿಕೆಟ್*

February 10, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.