ಮಡಿಕೇರಿ ಫೆ.10 NEWS DESK : ಹಿಂದುಳಿದ ವರ್ಗಗಳ ಮೀಸಲಾತಿ ಪಟ್ಟಿಯ ಪ್ರವರ್ಗ-3ಎ ನಲ್ಲಿ ಒಕ್ಕಲಿಗ, ವಕ್ಕಲಿಗ, ಸರ್ಪ ಒಕ್ಕಲಿಗ, ಹಳ್ಳಿಕಾರ್ ಒಕ್ಕಲಿಗ, ನಾಮಧಾರಿ ಒಕ್ಕಲಿಗ, ಗಂಗಡ್ ಕಾರ್ ಒಕ್ಕಲಿಗ, ದಾಸ್ ಒಕ್ಕಲಿಗ, ರೆಡ್ಡಿ ಒಕ್ಕಲಿಗ, ಮರಸು ಒಕ್ಕಲಿಗ, ಗೌಡ/ಗೌಡ, ಹಳ್ಳಿಕಾರ್, ಕುಂಚಿಟಿಗ, ಗೌಡ, ಕಾಪು, ಹೆಗ್ಗಡೆ, ಕಮ್ಮ, ರೆಡ್ಡಿ, ಗೌಂಡರ್, ನಾಮಧಾರಿ ಗೌಡ, ಉಪ್ಪಿನಕೊಳಗ/ಉತ್ತಮ ಕೊಳಗ ಸಮುದಾಯಕ್ಕೆ ಸೇರಿದ ಜನರ ಅಭಿವೃದ್ಧಿಗಾಗಿ 2025-26ನೇ ಸಾಲಿನಲ್ಲಿ ಅನುಷ್ಠಾನಗೊಳಿಸುತ್ತಿರುವ ಆಹಾರ ವಾಹಿನಿ(ಆಹಾರ ಕಿಯೋಸ್ಟ್) ಯೋಜನೆಯಲ್ಲಿ ಸೌಲಭ್ಯ ಪಡೆಯ ಬಯಸುವವರಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಆಹಾರ ವಾಹಿನಿ(ಆಹಾರ ಕಿಯೋಸ್ಕ್) ಯೋಜನೆಯಡಿ ಸ್ಥಳಾಂತರಿಸಬಹುದಾದ ತಿಂಡಿ ಮಳಿಗೆಗಳನ್ನು ನಾಲ್ಕು ಚಕ್ರಗಳ ಇಗಿ-ಗೂಡ್ಸ್ ವಾಹನಗಳನ್ನು ಅಗತ್ಯಕ್ಕೆ ತಕ್ಕಂತೆ ನವೀಕರಿಸಿ ಫಲಾನುಭವಿಗಳಿಗೆ ವಿತರಿಸುವ ಯೋಜನೆಯಾಗಿದೆ. ನಿಗಮದಿಂದ ವಾಹನ ಖರೀದಿಗೆ ರೂ.3 ಲಕ್ಷಗಳ ಸಹಾಯಧನವನ್ನು ಬಿಡುಗಡೆ ಮಾಡಲಾಗುವುದು. ಉಳಿಕೆ ಮೊತ್ತವನ್ನು ಬ್ಯಾಂಕ್ ಗಳು/ಹಣಕಾಸು ಸಂಸ್ಥೆಗಳಿಂದ ಸಾಲ ಪಡೆಯಬಹುದಾಗಿರುತ್ತದೆ. ನಗರ ಪ್ರದೇಶದ ವಿಧಾನಸಭಾ ಕ್ಷೇತ್ರವಾದ ಮಡಿಕೇರಿ ವಿಧಾನಸಭಾ ಕ್ಷೇತ್ರದ ಒಕ್ಕಲಿಗ ಸಮುದಾಯದ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಬಹುದಾಗಿದೆ. ಯೋಜನೆಯ ಸೌಲಭ್ಯ ಪಡೆಯ ಬಯಸುವವರು ಒಕ್ಕಲಿಗ ಸಮುದಾಯಕ್ಕೆ ಸೇರಿದವರಾಗಿರಬೇಕು. ಕುಟುಂಬದ ವಾರ್ಷಿಕ ವರಮಾನ ರೂ. 3 ಲಕ್ಷಗಳ ಒಳಗಿರಬೇಕು. ಅರ್ಜಿದಾರರ ವಯಸ್ಸು 21 ರಿಂದ 45 ವರ್ಷಗಳ ಮಿತಿಯಲ್ಲಿರಬೇಕು. ಈ ಎಲ್ಲಾ ಯೋಜನೆಗಳಡಿಯಲ್ಲಿ ಸೌಲಭ್ಯ ಒದಗಿಸಲು ಸೇವಾಸಿಂಧು ತಂತ್ರಾಂಶದಲ್ಲಿ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸುವಾಗ ಅರ್ಜಿದಾರರು ಆಧಾರ್ ಜೋಡಣೆಯಾದ ಚಾಲ್ತಿಯಲ್ಲಿರುವ ಬ್ಯಾಂಕ್ ಖಾತೆ ಹೊಂದಿರಬೇಕು. ಆಧಾರ್ ಕಾರ್ಡ್ ನಲ್ಲಿರುವಂತೆ ಅರ್ಜಿದಾರರ ಹೆಸರು (ಶ್ರೀ/ಶ್ರೀಮತಿ ಕುಮಾರಿ ಮುಂತಾದ ದಾಖಲಾತಿಗಳೆಲ್ಲವು) ಇತರೆ ದಾಖಲಾತಿಗಳಾದ ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಬ್ಯಾಂಕ್ ಪಾಸ್ ಪುಸ್ತಕದಲ್ಲಿಯೂ ಇದ್ದು, ಹೊಂದಾಣಿಕೆಯಾಗಬೇಕು. ಒಂದು ಬಾರಿ ನಿಗಮದ ಯಾವುದಾದರೂ ಯೋಜನೆಯಲ್ಲಿ ಪ್ರಯೋಜನ ಪಡೆದಿದ್ದಲ್ಲಿ ಅಂತಹವರು ಹಾಗೂ ಅವರ ಕುಟುಂಬದವರು ಮತ್ತೊಮ್ಮೆ ಸೌಲಭ್ಯ ಕೋರಿ ಅರ್ಜಿ ಸಲ್ಲಿಸಲು ಅರ್ಹರಿರುವುದಿಲ್ಲ. ಈ ಸೌಲಭ್ಯಗಳನ್ನು ಪಡೆಯಲು ಇಚ್ಚಿಸುವ ಒಕ್ಕಲಿಗ ಸಮುದಾಯದ ಅರ್ಜಿದಾರರು ಅರ್ಜಿಗಳನ್ನು ಸೇವಾಸಿಂಧು ಪೆÇೀರ್ಟಲ್ ಮುಖಾಂತರ ಗ್ರಾಮ ಒನ್, ಬೆಂಗಳೂರು ಒನ್ ಮತ್ತು ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿರುತ್ತದೆ. ಅರ್ಜಿ ಸಲ್ಲಿಸಲು ದಿನಾಂಕ: 06-03-2026 ರಂದು ಕೊನೆಯ ದಿನಾಂಕ ನಿಗಧಿಪಡಿಸಿದೆ. ಯೋಜನೆಯ ಅರ್ಹತೆ ಮತ್ತು ಸಲ್ಲಿಸುವ ದಾಖಲಾತಿಗಳ ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ಒಕ್ಕಲಿಗ ನಿಗಮದ ವೆಬ್‍ಸೈಟ್ https://kvcdc.karnataka.gov.in ಇಲ್ಲಿ ಸಂಪರ್ಕಿಸಿ ಹೆಚ್ಚಿನ ಮಾಹಿತಿ ಪಡೆಯಬಹುದಾಗಿದೆ. ನಿಗಮದ ಸಹಾಯವಾಣಿ ಸಂಖ್ಯೆ: 080-29904350 ಮತ್ತು 29904268 ಅಥವಾ ಜಿಲ್ಲಾ ವ್ಯವಸ್ಥಾಪಕರು, ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ(ನಿ), ಕೊಡಗು ಜಿಲ್ಲೆ, ಮಡಿಕೇರಿ ಇವರನ್ನು ಖುದ್ಧಾಗಿ ಅಥವಾ ದೂರವಾಣಿ ಸಂಖ್ಯೆ:08272-221656 ರ ಮೂಲಕ ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದು.








