ಮಡಿಕೇರಿ NEWS DESK ಫೆ.10 : ಮಡಿಕೇರಿ ತಾಲ್ಲೂಕಿನ ಅರೆಕಾಡ್ ಹೊಸ್ಕೇರಿಯಲ್ಲಿ ಕೊಡವ ವೆಲ್ ಫೇರ್ ಐಂಡ್ ರಿಕ್ರಿಯೇಷನ್ ಅಸೋಸಿಯೇಷನ್ ವತಿಯಿಂದ ನೂತನವಾಗಿ ನಿರ್ಮಾಣಗೊಂಡಿರುವ ‘ಕೊಡವ ಭವನ’ದ ಉದ್ಘಾಟನಾ ಸಮಾರಂಭ ಫೆ.14 ರಂದು ನಡೆಯಲಿದೆ. ಕೊಡವ ವೆಲ್ ಫೇರ್ ಐಂಡ್ ರಿಕ್ರಿಯೇಷನ್ ಅಸೋಸಿಯೇಷನ್ ನ ಅಧ್ಯಕ್ಷ ಕುಕ್ಕೇರ ಜಯ ಚಿಣ್ಣಪ್ಪ ಅವರ ಅಧ್ಯಕ್ಷತೆಯಲ್ಲಿ ಬೆಳಿಗ್ಗೆ 10 ಗಂಟೆಗೆ ನಡೆಯುವ ಕಾರ್ಯಕ್ರಮದಲ್ಲಿ ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಅವರು ‘ಕೊಡವ ಭವನ’ವನ್ನು ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ, ವಿರಾಜಪೇಟೆ ಕ್ಷೇತ್ರದ ಶಾಸಕ ಅಜ್ಜಿಕುಟ್ಟಿರ.ಎಸ್.ಪೊನ್ನಣ್ಣ ಹಾಗೂ ಮೈಸೂರು, ಕೊಡಗು ಕ್ಷೇತ್ರದ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಪಾಲ್ಗೊಳ್ಳಲಿದ್ದಾರೆ. ಅತಿಥಿಗಳಾಗಿ ವಿಧಾನ ಪರಿಷತ್ ಸದಸ್ಯ ಮಂಡೇಪಂಡ ಸುಜಾ ಕುಶಾಲಪ್ಪ, ರಾಜ್ಯ ಕ್ರೀಡಾ ಪ್ರಾಧಿಕಾರದ ಉಪಾಧ್ಯಕ್ಷ ಚೆಪ್ಪುಡಿರ ಅರುಣ್ ಮಾಚಯ್ಯ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಜಿಲ್ಲಾಧ್ಯಕ್ಷ ತೀತಿರ ಧರ್ಮಜ ಉತ್ತಪ್ಪ, ಕೊಡವ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ಅಜ್ಜಿನಿಕಂಡ ಸಿ.ಮಹೇಶ್ ನಾಚಯ್ಯ ಹಾಗೂ ಬೆಳೆಗಾರ ನಡಿಕೇರಿಯಂಡ ಪಿ.ಮೋಹನ್ ಮಾಚಯ್ಯ ಉಪಸ್ಥಿತರಿರುವರು ಎಂದು ಕೊಡವ ವೆಲ್ ಫೇರ್ ಐಂಡ್ ರಿಕ್ರಿಯೇಷನ್ ಅಸೋಸಿಯೇಷನ್ ನ ಅಧ್ಯಕ್ಷ ಕುಕ್ಕೇರ ಜಯ ಚಿಣ್ಣಪ್ಪ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.








