Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಪಿ.ಕೃಷ್ಣೇಗೌಡ ನೇತೃತ್ವದ ಕರವೇ ಸ್ವಾಭಿಮಾನಿ ಬಣದ ಜಿಲ್ಲಾಧ್ಯಕ್ಷರಾಗಿ ಪಿ.ಕೆ.ಉದಯಕುಮಾರ್ ಆಯ್ಕೆ*
  • *ಆಹಾರ ಭದ್ರತಾ ಕಾಯ್ದೆ ಪರಿಣಾಮಕಾರಿಯಾಗಿ ಜಾರಿಗೊಳಿಸಿ: ಡಾ.ಎಚ್.ಕೃಷ್ಣ*
  • *ಅರಣ್ಯ ಹಕ್ಕು ಕಾಯ್ದೆ ಆದಿವಾಸಿಗಳಿಗೆ ತಲುಪಿಸಿ: ಗಿರಿಧರ*
  • *ಕಾರ್ಮಿಕ ವರ್ಗದ ತುರ್ತು ರೋಗಿಗಳಿಗೆ ಸರತಿ ಸಾಲು ಬೇಡ : ಜಿಲ್ಲಾ ಸರ್ಜನ್ ಗೆ ಮನವಿ ಸಲ್ಲಿಸಿದ ಎಸ್‌ಡಿಟಿಯು*
  • *ಮೈಸೂರಿನಲ್ಲಿ ಪೂರ್ಣ ಪ್ರಮಾಣದ ಪಾಸ್‌ಪೋರ್ಟ್‌ ಸೇವಾ ಕೇಂದ್ರ ಆರಂಭಕ್ಕೆ ಯದುವೀರ್‌ ಒತ್ತಡ ಕೇಂದ್ರ ವಿದೇಶಾಂಗ ಸಚಿವರಿಗೆ ಮನವಿ ಸಲ್ಲಿಸಿರುವ ಮೈಸೂರು-ಕೊಡಗು ಸಂಸದರು*
  • *ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿಯಿಂದ ಮಡಿಕೇರಿಯಲ್ಲಿ ಪ್ರತಿಭಟನೆ*
  • *ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5657 ಪ್ರಕರಣಗಳು ಇತ್ಯರ್ಥ*
  • *ಕಾಯಕ ಶರಣರ ಜಯಂತಿ ಸಮ ಸಮಾಜ ನಿರ್ಮಾಣದಲ್ಲಿ ಕಾಯಕ ಶರಣರ ಕೊಡುಗೆ ಅಪಾರ: ಹೇಮಲತಾ*
  • *ಸೌಂದರ್ಯ ತಜ್ಞರು ನಿತ್ಯ ವ್ಯಾಯಾಮದೊಂದಿಗೆ ತಮ್ಮ ಆರೋಗ್ಯ ವೃದ್ಧಿಸಿಕೊಳ್ಳುವ ಬಗ್ಗೆ ಗಮನಹರಿಸಬೇಕು ಎಂದು ಅಂತರರಾಷ್ಟ್ರೀಯ ಬ್ಯಾಡ್ಮಿಂಟನ್ ಕ್ರೀಡಾಪಟು ತಾತಪಂಡ ಜ್ಯೋತಿ ಸೋಮಯ್ಯ ಕಿವಿಮಾತು ಹೇಳಿದರು*
  • *ಮೈಸೂರು-ಕುಶಾಲನಗರ ರೈಲ್ವೆ ಯೋಜನೆ ಪುನಾರಂಭಿಸಲು ಅಶ್ವಿನ್‌ ವೈಷ್ಣವ್‌ಗೆ ಯದುವೀರ್‌ ಮನವಿ ಭೂ ಸ್ವಾಧೀನ ಪ್ರಕ್ರಿಯೆಗೆ ಚಾಲನೆ ನೀಡಲು ಕ್ರಮ ಕೈಗೊಳ್ಳಬೇಕೆಂದು ಸಂಸದರ ಪತ್ರ*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿಯಿಂದ ಮಡಿಕೇರಿಯಲ್ಲಿ ಪ್ರತಿಭಟನೆ*
ಇತ್ತೀಚಿನ ಸುದ್ದಿಗಳು

*ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿಯಿಂದ ಮಡಿಕೇರಿಯಲ್ಲಿ ಪ್ರತಿಭಟನೆ*

February 11, 20263 Mins Read
Share
Facebook Twitter LinkedIn Pinterest WhatsApp Email

ಮಡಿಕೇರಿ NEWS DESK ಫೆ.11 : 2026-27ರ ಒಟ್ಟು ಬಜೆಟ್ ನಲ್ಲಿ ದಲಿತರ ಜನಸಂಖ್ಯೆ ಅನುಗುಣವಾಗಿ ಶೇ.24.1ರಷ್ಟು ಅನುದಾನ ಮೀಸಲಿರಿಸಬೇಕು, ಮೀಸಲಿರಿಸಿದ ಅನುದಾನ ದುರ್ಬಳಕೆ ತಡೆಯಲು  SCSP/TSP  ಕಾಯ್ದೆ 2013ರ ಸೆಕ್ಷನ್ 7 (ಡಿ) ರದ್ದುಪಡಿಸಿದಂತೆ ಸೆಕ್ಷನ್ 7 (ಸಿ) ರದ್ದುಪಡಿಸಿ ಆದೇಶ ಹೊರಡಿಸಬೇಕು ಹಾಗೂ  SCSP/TSP ಯ ಅನುದಾನ ನಿಯಮ ಬಾಹಿರವಾಗಿ ಗ್ಯಾರಂಟಿ ಯೋಜನೆಗಳಿಗೆ ವರ್ಗಾಯಿಸಿದ 25 ಸಾವಿರ ಕೋಟಿ ಹಣವನ್ನು ಹಿಂತಿರುಗಿಸಬೇಕು ಎಂದು ಒತ್ತಾಯಿಸಿ ಪ್ರೊ.ಬಿ.ಕೃಷ್ಣಪ್ಪ ಸ್ಥಾಪಿತ ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಕೊಡಗು ಜಿಲ್ಲಾ ಸಮಿತಿ ವತಿಯಿಂದ ರಾಜ್ಯ ಸಂಚಾಲಕÀ ಎಂ.ಗುರುಮೂರ್ತಿ ಶಿವಮೊಗ್ಗ ಅವರ ನೇತೃತ್ವದಲ್ಲಿ, ಜಿಲ್ಲಾ ಸಂಚಾಲಕಿ ಗಾಯತ್ರಿ ನರಸಿಂಹ ಅವರ ಮುಂದಾಳತ್ವದಲ್ಲಿ ನಗರದ ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಯಿತು. ವಿವಿಧ ಬೇಡಿಕೆಗಳ ಮನವಿ ಪತ್ರವನ್ನು ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಸಲ್ಲಿಸಿದ ಪ್ರತಿಭಟನಾಕಾರರು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳಿಗೆ ಅನ್ಯಾಯವಾಗದಂತೆ ಸರಕಾರ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು. ಶೋಷಿತ ಸಮುದಾಯಗಳನ್ನು ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕವಾಗಿ ಸಬಲೀಕರಣಗೊಳಿಸಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಮಂಡಿಸುವ ಒಟ್ಟು ಬಜೆಟ್ ಗಾತ್ರದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಜನಸಂಖ್ಯೆಯ ಅನುಗುಣವಾಗಿ ಅನುದಾನ ಮೀಸಲಿಡಬೇಕು. ಮೀಸಲಿರಿಸಿದ ಅನುದಾನವನ್ನು ರದ್ದಾಗದಂತೆ ಮತ್ತು ಇತರೆ ಯೋಜನೆಗಳಿಗೆ ವರ್ಗಾಯಿಸದಂತೆ ಕ್ರಮ ಕೈಗೊಳ್ಳಬೇಕು. ಸರಕಾರದ ವಿವಿಧ ವಸತಿ ಯೋಜನೆಗಳಡಿ ವಸತಿ ಸೌಲಭ್ಯ ಪಡೆಯಲು ನಿವೇಶನ ಹೊಂದಿರಬೇಕು. ಸ್ವಂತ ನಿವೇಶನ ಇಲ್ಲದ ಬಡವರಿಗೆ ನಿವೇಶನ ಖರೀದಿಸಲು ರೂ.5 ಲಕ್ಷ ಆರ್ಥಿಕ ನೆರವು ನೀಡಬೇಕು ಹಾಗೂ ವಿವಿಧ ವಸತಿ ಯೋಜನೆಗಳಿಗೆ ನೀಡುವ ಮನೆಗಳ ನಿರ್ಮಾಣ ವೆಚ್ಚ ಕನಿಷ್ಟ ರೂ. 5 ಲಕ್ಷ ವರೆಗೆ ಹೆಚ್ಚಿಸಬೇಕು. ನಿವೇಶನ ರಹಿತರಿಗೆ ನಿವೇಶನ ಒದಗಿಸಲು ವಸತಿಗೆ ಯೋಗ್ಯವಾದ ಸರ್ಕಾರಿ ಭೂಮಿ ಮಂಜೂರು ಮಾಡಬೇಕು. ಸರ್ಕಾರಿ ಭೂಮಿ ಲಭ್ಯವಿರದಿದ್ದರೆ ಖಾಸಗಿ ಭೂಮಿ ಖರೀದಿಸಿ ನಿವೇಶನ ಹಂಚಿಕೆ ಮಾಡಬೇಕು. ಬಗರ್ ಹುಕುಂ ಸಾಗುವಳಿದಾರರು ಸಕ್ರಮಕ್ಕಾಗಿ ಸಲ್ಲಿಸಿರುವ ನಮೂನೆ- 57ರ ಅರ್ಜಿಗಳನ್ನು ಸೂಕ್ತಡಿ ಕಾರಣವನ್ನು ನೀಡದೆ ಏಕಪಕ್ಷೀಯವಾಗಿ ತಿರಸ್ಕಾರ ಮಾಡುತ್ತಿರುವುದರಿಂದ ಬೇರೆ ಭೂಮಿ ಇಲ್ಲದೆ, ಇದೇ ಭೂಮಿಯಲ್ಲಿ ಸಾಗುವಳಿ ಮಾಡಿ ಉಪ ಜೀವನ ಸಾಗಿಸುತ್ತಿರುವ ಬಡವರನ್ನು ಭೂ ಹಕ್ಕಿನಿಂದ ಒಕ್ಕಲೆಬ್ಬಿಸದೆ, ಸಕ್ರಮಗೊಳಿಸಿ ಹಕ್ಕು ಪತ್ರ ನೀಡಬೇಕು. ಕರ್ನಾಟಕ ದಲಿತ ಸಂಘರ್ಷ ಸಮಿತಿ ಸಂಸ್ಥಾಪಕರು ಪ್ರೊ.ಬಿ.ಕೃಷ್ಣಪ್ಪ ಅವರಿಗೆ ಸರ್ಕಾರ ಕರ್ನಾಟಕ ರತ್ನ ಪ್ರಶಸ್ತಿ ಘೋಷಣೆ ಮಾಡಬೇಕು ಹಾಗೂ ಅವರ ಜನ್ಮದಿನ ಜೂ.9 ನ್ನು ರಜಾರಹಿತ ದಿನ ವನ್ನಾಗಿ ಆಚರಣೆ ಮಾಡಬೇಕು. ಪರಿಶಿಷ್ಟ ಜಾತಿ /ಪರಿಶಿಷ್ಟ ವರ್ಗಗಳ ಭೂ ಪರಭಾರೆ ನಿಷೇಧ ಕಾಯ್ದೆ ( (PTCL) ) ಸೆಕ್ಷನ್ 3(1) (B)    ಅಲ್ಲಿರುವ ಉಡಿಚಿಟಿಣeಜ ಐಚಿಟಿಜ ಎಂಬ ಪದವನ್ನು ಬದಲಾಯಿಸಿ  Certain Land  ಎಂದು ತಿದ್ದುಪಡಿ ಮಾಡಬೇಕು.
ಅರಣ್ಯ ಮತ್ತು ಅರಣ್ಯಾಧಾರಿತ ಆದಿವಾಸಿ ಕುಟುಂಬಗಳ ವಸತಿ ರಹಿತರಿಗಾಗಿ ಮಾನ್ಯ ಮುಖ್ಯಮಂತ್ರಿ ಆದಿವಾಸಿ ಗೃಹಭಾಗ್ಯ ಯೋಜನೆಯಡಿ ವಸತಿ ಸೌಲಭ್ಯ ಕಲ್ಪಿಸಬೇಕು. ಚುನಾಯಿತ ಪ್ರತಿನಿಧಿಗಳಿಗೆ ಹೆಚ್ಚಿಸಿದಂತೆ ದೇವದಾಸಿ, ವಿಧವಾ ಮಹಿಳೆಯರು, ವೃದ್ಧರು, ಹಾಗೂ ವಿಕಲ ಚೇತನರಿಗೆ ನೀಡುತ್ತಿರುವ ಮಾಸಿಕ ವೇತನ ರೂ.5000 ವರೆಗೆ ಹೆಚ್ಚಿಸಬೇಕು.
ಸಮಾಜ ಕಲ್ಯಾಣ ಇಲಾಖೆ ಅಧೀನದಲ್ಲಿನ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗಗಳ ಆರ್ಥಿಕ ಅಭಿವೃದ್ಧಿಗಾಗಿ ಅನುಷ್ಠಾನಗೊಳಿಸುತ್ತಿರುವ ಗಂಗಾ ಕಲ್ಯಾಣ, ಭೂ ಒಡೆತನ, ನೇರಸಾಲ, ಉದ್ಯಮ ಶೀಲತಾ, ಸ್ವಾವಲಂಬಿ ಸಾರಥಿ ಯೋಜನೆ ಸಾಲ ಸೌಲಭ್ಯ ಯೋಜನೆಗಳ ಘಟಕ ವೆಚ್ಚ ದ್ವಿಗುಣವಾಗಿಸಿ, ಗುರಿ ಹೆಚ್ಚಳ ಮಾಡಬೇಕು. ಡಾ.ಬಾಬು ಜಗಜೀವನ ರಾಂ ಚರ್ಮ ಕೈಗಾರಿಕಾ ಅಭಿವೃದ್ಧಿ (ಲಿಡ್‌ಕರ್) ನಿಗಮಕ್ಕೆ ರೂ.500 ಕೋಟಿ ಅನುದಾನ ಬಿಡುಗಡೆ ಮಾಡಬೇಕು. ಪ.ಜಾತಿಯ ಚರ್ಮ ಕುಶಲ ಕರ್ಮಿಗಳ ಉತ್ಪನ್ನಗಳ ಮಾರುಕಟ್ಟೆಯ ಪ್ರಗತಿಗಾಗಿ ಆರ್ಥಿಕ. ಇಲಾಖೆಯಿಂದ ಟೆಂಡರ್ ವಿನಾಯಿತಿಗಾಗಿ ರೂ.100 ಕೋಟಿಗೆ ಮೀಸಲಿರಿಸಿ ಆದೇಶ ಹೊರಡಿಸಬೇಕು ಹಾಗೂ ನಿಗಮದ ಎಲ್ಲಾ ಟೆಂಡರ್ ಗಳನ್ನು ಪ.ಜಾತಿಯ ಚರ್ಮ ಕುಶಲ ಕರ್ಮಿಗಳ ಘಟಕಕ್ಕೆ ವಿನಾಯಿತಿಯೊಂದಿಗೆ ನೀಡಬೇಕು. ಸರ್ಕಾರಿ ಉದ್ಯೋಗ ಅಥವಾ ಸ್ವಂತ ಭೂಮಿ ಹೊಂದಿರದೆ ತೀವ್ರ ಆರ್ಥಿಕ ಸಮಸ್ಯೆ ಎದುರಿಸುತ್ತಿರುವ ಬಡ ಕುಟುಂಬಗಳಿಗೆ ಮಾಸಿಕ ರೂ.5000 ಆರ್ಥಿಕ ನೆರವು ನೀಡಬೇಕು.
ಸಮಾಜ ಕಲ್ಯಾಣ ಇಲಾಖೆ ಅಧೀನ ಬರುವ ವಸತಿ ಶಾಲೆ ಮತ್ತು ವಸತಿ ನಿಲಯಗಳಲ್ಲಿ ಕಳೆದ 5 ವರ್ಷಗಳ ಮೇಲ್ಪಟ್ಟು ನಿರಂತರವಾಗಿ ಕರ್ತವ್ಯ ನಿರ್ವಹಿಸುತ್ತಿರುವ ಗುತ್ತಿಗೆ/ಹೊರಗುತ್ತಿಗೆ ನೌಕರರನ್ನು ಕಾಯಂಗೊಳಿಸಬೇಕು.
ಬೆಲೆ ಏರಿಕೆಗೆ ತಕ್ಕಂತೆ ಹಾಸ್ಟೆಲ್ ವಿದ್ಯಾರ್ಥಿಗಳಿಗೆ ನೀಡುತ್ತಿರುವ ಮಾಸಿಕ ಭೋಜನ ವೆಚ್ಚ ರೂ.3000 ವರೆಗೆ ಹೆಚ್ಚಳ ಮಾಡಬೇಕು. ಸಮಾಜ ಕಲ್ಯಾಣ ಇಲಾಖೆಯ ವಸತಿ ಶಾಲೆಗಳನ್ನು ವಸತಿ ಕಾಲೇಜುಗಳನ್ನಾಗಿ ಮೇಲ್ದರ್ಜೆಗೇರಿಸಬೇಕು. ರಾಯಚೂರು ಜಿಲ್ಲೆಯ ದೇವದುರ್ಗ ತಾಲ್ಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ಜಾಗೀರ್ ಜಾಡಲದಿನ್ನಿ ಗ್ರಾಮದ ಗರ್ಭಿಣಿ ಮಹಿಳೆ ರೇಖಾ ಗಂಡ ರಾಜು (26ವರ್ಷ) ವೈದ್ಯರ ನಿರ್ಲಕ್ಷ ದಿಂದ ಮೃತಳಾಗಿದ್ದು, ಅದಕ್ಕೆ ಕಾರಣರಾದ ಅಂದಿನ ಮುಖ್ಯ ವೈಧ್ಯಾಧಿಕಾರಿ ಡಾ. ಶಿವಾನಂದ, ಡಾ.ಗಂಗಾಧರ, ಸ್ಟಾಫ್ ನರ್ಸಗಳಾದ ಶ್ರೀಮತಿ ಲಕ್ಷ್ಮೀ ಮತ್ತು ಜ್ಯೋತಿ ವಿರುದ್ಧ ಕೊಲೆ ಪ್ರಕರಣ ದಾಖಲಿಸಿ ಸೇವೆಯಿಂದ ವಜಾ ಮಾಡಬೇಕು. ಹಿಂದಿನ ಸರ್ಕಾರದ ಅವಧಿಯಲ್ಲಿ ಜಾರಿಗೊಳಿಸಿದ “ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ವಿಧೇಯಕ-2020″ಅನ್ನು ತಕ್ಷಣವೇ ರದ್ದುಪಡಿಸಬೇಕು ಹಾಗೂ ಭಾರತದಿಂದ ವಿದೇಶಗಳಿಗೆ ಮಾಡುತ್ತಿರುವ ದನದ ಮಾಂಸ ರಫ್ತು ನಿಲ್ಲಿಸಬೇಕು ಎಂದು ಮನವಿ ಪತ್ರದಲ್ಲಿ ಒತ್ತಾಯಿಸಲಾಗಿದೆ. ಜಿಲ್ಲಾ ಸಂಚಾಲಕಿ ಗಾಯತ್ರಿ ನರಸಿಂಹ ಅವರು ಮಾತನಾಡಿ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಏಕಕಾಲಕ್ಕೆ ಪ್ರತಿಭಟನೆ ನಡೆಸಿ ಸರಕಾರಕ್ಕೆ ಮನವಿ ಸಲ್ಲಿಸಲಾಗಿದೆ ಎಂದರು. ಮನವಿ ಸಲ್ಲಿಸುವ ಸಂದರ್ಭ ಜಿಲ್ಲಾ ಸಂಘಟನಾ ಸಂಚಾಲಕರುಗಳಾದ ಬೋಜ, ಗೌರಮ್ಮ, ಗಣೇಶ, ಚಿಪ್ಪ, ಕಾಳ, ನಿತಿನ್ ಮತ್ತಿತರರು ಹಾಜರಿದ್ದರು.

Share. Facebook Twitter Pinterest LinkedIn Tumblr Email WhatsApp
Previous Article*ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5657 ಪ್ರಕರಣಗಳು ಇತ್ಯರ್ಥ*
Next Article *ಮೈಸೂರಿನಲ್ಲಿ ಪೂರ್ಣ ಪ್ರಮಾಣದ ಪಾಸ್‌ಪೋರ್ಟ್‌ ಸೇವಾ ಕೇಂದ್ರ ಆರಂಭಕ್ಕೆ ಯದುವೀರ್‌ ಒತ್ತಡ ಕೇಂದ್ರ ವಿದೇಶಾಂಗ ಸಚಿವರಿಗೆ ಮನವಿ ಸಲ್ಲಿಸಿರುವ ಮೈಸೂರು-ಕೊಡಗು ಸಂಸದರು*

Related Posts

*ಪಿ.ಕೃಷ್ಣೇಗೌಡ ನೇತೃತ್ವದ ಕರವೇ ಸ್ವಾಭಿಮಾನಿ ಬಣದ ಜಿಲ್ಲಾಧ್ಯಕ್ಷರಾಗಿ ಪಿ.ಕೆ.ಉದಯಕುಮಾರ್ ಆಯ್ಕೆ*

February 11, 2026

*ಆಹಾರ ಭದ್ರತಾ ಕಾಯ್ದೆ ಪರಿಣಾಮಕಾರಿಯಾಗಿ ಜಾರಿಗೊಳಿಸಿ: ಡಾ.ಎಚ್.ಕೃಷ್ಣ*

February 11, 2026

*ಅರಣ್ಯ ಹಕ್ಕು ಕಾಯ್ದೆ ಆದಿವಾಸಿಗಳಿಗೆ ತಲುಪಿಸಿ: ಗಿರಿಧರ*

February 11, 2026

*ಆಹಾರ ಭದ್ರತಾ ಕಾಯ್ದೆ ಪರಿಣಾಮಕಾರಿಯಾಗಿ ಜಾರಿಗೊಳಿಸಿ: ಡಾ.ಎಚ್.ಕೃಷ್ಣ*

February 11, 2026

ಮಡಿಕೇರಿ, NEWS DESK ಫೆ.11 :-ಆಹಾರ ಭದ್ರತಾ ಕಾಯ್ದೆಯನ್ನು ಪರಿಣಾಮಕಾರಿಯಾಗಿ ಅನುಷಾ್ಠನಗೊಳಿಸುವಂತೆ ರಾಜ್ಯ ಆಹಾರ ಆಯೋಗದ ಅಧ್ಯಕ್ಷರಾದ ಡಾ.ಎಚ್.ಕೃಷ್ಣ ಅವರು…

*ಅರಣ್ಯ ಹಕ್ಕು ಕಾಯ್ದೆ ಆದಿವಾಸಿಗಳಿಗೆ ತಲುಪಿಸಿ: ಗಿರಿಧರ*

February 11, 2026

*ಕಾರ್ಮಿಕ ವರ್ಗದ ತುರ್ತು ರೋಗಿಗಳಿಗೆ ಸರತಿ ಸಾಲು ಬೇಡ : ಜಿಲ್ಲಾ ಸರ್ಜನ್ ಗೆ ಮನವಿ ಸಲ್ಲಿಸಿದ ಎಸ್‌ಡಿಟಿಯು*

February 11, 2026

*ಮೈಸೂರಿನಲ್ಲಿ ಪೂರ್ಣ ಪ್ರಮಾಣದ ಪಾಸ್‌ಪೋರ್ಟ್‌ ಸೇವಾ ಕೇಂದ್ರ ಆರಂಭಕ್ಕೆ ಯದುವೀರ್‌ ಒತ್ತಡ ಕೇಂದ್ರ ವಿದೇಶಾಂಗ ಸಚಿವರಿಗೆ ಮನವಿ ಸಲ್ಲಿಸಿರುವ ಮೈಸೂರು-ಕೊಡಗು ಸಂಸದರು*

February 11, 2026

*ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿಯಿಂದ ಮಡಿಕೇರಿಯಲ್ಲಿ ಪ್ರತಿಭಟನೆ*

February 11, 2026

*ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5657 ಪ್ರಕರಣಗಳು ಇತ್ಯರ್ಥ*

February 11, 2026

*ಕಾಯಕ ಶರಣರ ಜಯಂತಿ ಸಮ ಸಮಾಜ ನಿರ್ಮಾಣದಲ್ಲಿ ಕಾಯಕ ಶರಣರ ಕೊಡುಗೆ ಅಪಾರ: ಹೇಮಲತಾ*

February 10, 2026

*ಸೌಂದರ್ಯ ತಜ್ಞರು ನಿತ್ಯ ವ್ಯಾಯಾಮದೊಂದಿಗೆ ತಮ್ಮ ಆರೋಗ್ಯ ವೃದ್ಧಿಸಿಕೊಳ್ಳುವ ಬಗ್ಗೆ ಗಮನಹರಿಸಬೇಕು ಎಂದು ಅಂತರರಾಷ್ಟ್ರೀಯ ಬ್ಯಾಡ್ಮಿಂಟನ್ ಕ್ರೀಡಾಪಟು ತಾತಪಂಡ ಜ್ಯೋತಿ ಸೋಮಯ್ಯ ಕಿವಿಮಾತು ಹೇಳಿದರು*

February 10, 2026

*ಮೈಸೂರು-ಕುಶಾಲನಗರ ರೈಲ್ವೆ ಯೋಜನೆ ಪುನಾರಂಭಿಸಲು ಅಶ್ವಿನ್‌ ವೈಷ್ಣವ್‌ಗೆ ಯದುವೀರ್‌ ಮನವಿ ಭೂ ಸ್ವಾಧೀನ ಪ್ರಕ್ರಿಯೆಗೆ ಚಾಲನೆ ನೀಡಲು ಕ್ರಮ ಕೈಗೊಳ್ಳಬೇಕೆಂದು ಸಂಸದರ ಪತ್ರ*

February 10, 2026

*ಕೊಡವ ಭಾಷೆಗೂ ಸಾಂವಿಧಾನಿಕ ಭದ್ರತೆ ನೀಡಬೇಕು : ಸಣ್ಣ ಸಣ್ಣ ಭಾಷೆಗಳನ್ನು ಹತ್ತಿಕಿದರೆ ಏಕತೆಗೆ ದಕ್ಕೆ : ಸಿಎನ್‌ಸಿ ಪ್ರತಿಪಾದನೆ*

February 10, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.