ಮಡಿಕೇರಿ, NEWS DESK ಫೆ.11 : ಚಿಕಿತ್ಸೆಗೆಂದು ಜಿಲ್ಲಾಸ್ಪತ್ರೆಗೆ ಆಗಮಿಸುವ ಕಾರ್ಮಿಕ ವರ್ಗದ ತುರ್ತು ರೋಗಿಗಳಿಗೆ ಸರತಿ ಸಾಲಿನ ವ್ಯವಸ್ಥೆಯಿಂದ ಮುಕ್ತಿ ನೀಡಬೇಕೆಂದು ಒತ್ತಾಯಿಸಿ ಕೊಡಗು ಜಿಲ್ಲಾ ಸೋಶಿಯಲ್ ಡೆಮಾಕ್ರಟಿಕ್ ಟ್ರೇಡ್ ಯೂನಿಯನ್ ಜಿಲ್ಲಾ ಸರ್ಜನ್ ನಂಜುAಡಯ್ಯ ಅವರಿಗೆ ಮನವಿ ಸಲ್ಲಿಸಿತು.
ಜಿಲ್ಲಾಸ್ಪತ್ರೆಯ ಕಚೇರಿಯಲ್ಲಿ ಜಿಲ್ಲಾ ಸರ್ಜನ್ ಅವರನ್ನು ಭೇಟಿಯಾದ ಎಸ್‌ಡಿಟಿಯು ಪ್ರಮುಖರು ಅನಾರೋಗ್ಯದಿಂದ ಬಳಲುವ ಕಾರ್ಮಿಕರು ಆಸ್ಪತ್ರೆಗೆ ಬಂದಾಗ ತಕ್ಷಣ ಚಿಕಿತ್ಸೆ ನೀಡಬೇಕು. ಸರತಿ ಸಾಲಿನಲ್ಲಿ ನಿಲ್ಲುವುದರಿಂದ ಮತ್ತು ಬೇಕಾದ ದಾಖಲಾತಿಗಳನ್ನು ತಕ್ಷಣ ನೀಡಲು ತೊಂದರೆಯಾಗುವುದರಿAದ ಕಾರ್ಮಿಕ ವರ್ಗಕ್ಕೆ ವಿನಾಯಿತಿ ನೀಡಬೇಕೆಂದು ಮನವಿ ಮಾಡಿದರು.
ಮನವಿ ಸಲ್ಲಿಸಿದ ನಂತರ ಮಾತನಾಡಿದ ಎಸ್‌ಡಿಟಿಯು ಜಿಲ್ಲಾಧ್ಯಕ್ಷ ಕೆ.ಹೆಚ್.ಅಣ್ಣ ಷರೀಫ್ ಹಾಗೂ ಪ್ರಧಾನ ಕಾರ್ಯದರ್ಶಿ ಅಬ್ದುಲ್ ರಜಾಕ್ ಎಂ.ಎ ಅವರು ಜಿಲ್ಲಾಸ್ಪತ್ರೆಯಲ್ಲಿ ಕಾರ್ಮಿಕರು ಎದುರಿಸುತ್ತಿರುವ ಸಮಸ್ಯೆಯನ್ನು ಮನಗಂಡು ನಾವು ನೀಡಿದ ಮನವಿಗೆ ಜಿಲ್ಲಾ ಸರ್ಜನ್ ಅವರು ಉತ್ತಮ ರೀತಿಯಲ್ಲಿ ಸ್ಪಂದಿಸಿದ್ದಾರೆ. ಅಲ್ಲದೆ ಕಾರ್ಮಿಕ ವರ್ಗಕ್ಕೆ ವಿನಾಯಿತಿ ನೀಡುವುದಾಗಿ ಭರವಸೆ ನೀಡಿದ್ದಾರೆ ಎಂದರು.
ಮನವಿ ಸಲ್ಲಿಸುವ ಸಂದರ್ಭ ಎಸ್‌ಡಿಟಿಯು ಸದಸ್ಯರಾದ ಹಸೀನ, ಸಾಮಾಜಿಕ ಕಾರ್ಯಕರ್ತ ಸಾಜಿದ್ ಹಾಗೂ ಸದಸ್ಯರು ಹಾಜರಿದ್ದರು.








