Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಹುಲಿ ಸೆರೆ*
  • ನಾಳೆ ದೇಶಾದ್ಯಂತ ಕಾರ್ಮಿಕ ಸಂಘಟನೆಗಳ ಮುಷ್ಕರ: ಬಸ್, ಬ್ಯಾಂಕ್, ಶಾಲಾ-ಕಾಲೇಜುಗಳ ಸ್ಥಿತಿ ಏನು? ಹೊರಗಡೆ ಹೋಗುವ ಮುನ್ನ ಈ ಸುದ್ದಿ ಓದಿ!
  • *ಪಿ.ಕೃಷ್ಣೇಗೌಡ ನೇತೃತ್ವದ ಕರವೇ ಸ್ವಾಭಿಮಾನಿ ಬಣದ ಜಿಲ್ಲಾಧ್ಯಕ್ಷರಾಗಿ ಪಿ.ಕೆ.ಉದಯಕುಮಾರ್ ಆಯ್ಕೆ*
  • *ಆಹಾರ ಭದ್ರತಾ ಕಾಯ್ದೆ ಪರಿಣಾಮಕಾರಿಯಾಗಿ ಜಾರಿಗೊಳಿಸಿ: ಡಾ.ಎಚ್.ಕೃಷ್ಣ*
  • *ಅರಣ್ಯ ಹಕ್ಕು ಕಾಯ್ದೆ ಆದಿವಾಸಿಗಳಿಗೆ ತಲುಪಿಸಿ: ಗಿರಿಧರ*
  • *ಕಾರ್ಮಿಕ ವರ್ಗದ ತುರ್ತು ರೋಗಿಗಳಿಗೆ ಸರತಿ ಸಾಲು ಬೇಡ : ಜಿಲ್ಲಾ ಸರ್ಜನ್ ಗೆ ಮನವಿ ಸಲ್ಲಿಸಿದ ಎಸ್‌ಡಿಟಿಯು*
  • *ಮೈಸೂರಿನಲ್ಲಿ ಪೂರ್ಣ ಪ್ರಮಾಣದ ಪಾಸ್‌ಪೋರ್ಟ್‌ ಸೇವಾ ಕೇಂದ್ರ ಆರಂಭಕ್ಕೆ ಯದುವೀರ್‌ ಒತ್ತಡ ಕೇಂದ್ರ ವಿದೇಶಾಂಗ ಸಚಿವರಿಗೆ ಮನವಿ ಸಲ್ಲಿಸಿರುವ ಮೈಸೂರು-ಕೊಡಗು ಸಂಸದರು*
  • *ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿಯಿಂದ ಮಡಿಕೇರಿಯಲ್ಲಿ ಪ್ರತಿಭಟನೆ*
  • *ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5657 ಪ್ರಕರಣಗಳು ಇತ್ಯರ್ಥ*
  • *ಕಾಯಕ ಶರಣರ ಜಯಂತಿ ಸಮ ಸಮಾಜ ನಿರ್ಮಾಣದಲ್ಲಿ ಕಾಯಕ ಶರಣರ ಕೊಡುಗೆ ಅಪಾರ: ಹೇಮಲತಾ*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ಆಹಾರ ಭದ್ರತಾ ಕಾಯ್ದೆ ಪರಿಣಾಮಕಾರಿಯಾಗಿ ಜಾರಿಗೊಳಿಸಿ: ಡಾ.ಎಚ್.ಕೃಷ್ಣ*
ಇತ್ತೀಚಿನ ಸುದ್ದಿಗಳು

*ಆಹಾರ ಭದ್ರತಾ ಕಾಯ್ದೆ ಪರಿಣಾಮಕಾರಿಯಾಗಿ ಜಾರಿಗೊಳಿಸಿ: ಡಾ.ಎಚ್.ಕೃಷ್ಣ*

February 11, 20262 Mins Read
Share
Facebook Twitter LinkedIn Pinterest WhatsApp Email

ಮಡಿಕೇರಿ, NEWS DESK ಫೆ.11 :-ಆಹಾರ ಭದ್ರತಾ ಕಾಯ್ದೆಯನ್ನು ಪರಿಣಾಮಕಾರಿಯಾಗಿ ಅನುಷಾ್ಠನಗೊಳಿಸುವಂತೆ ರಾಜ್ಯ ಆಹಾರ ಆಯೋಗದ ಅಧ್ಯಕ್ಷರಾದ ಡಾ.ಎಚ್.ಕೃಷ್ಣ ಅವರು ನಿರ್ದೇಶನ ನೀಡಿದ್ದಾರೆ.
ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳ ಜೊತೆ ನಡೆದ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು.
ಆಹಾರ ಇಲಾಖೆ ವ್ಯಾಪ್ತಿಯ ನ್ಯಾಯಬೆಲೆ ಅಂಗಡಿಯಲ್ಲಿ ಸಾರ್ವಜನಿಕ ವಿತರಣಾ ವ್ಯವಸ್ಥೆ ದುರುಪಯೋಗ ಆಗದಂತೆ ತಡೆಯಬೇಕು. ಮಧ್ಯಾಹ್ನದ ಉಪಹಾರ ಯೋಜನೆಯನ್ನು ವಿದ್ಯಾರ್ಥಿಗಳಿಗೆ ಸರಿಯಾಗಿ ತಲುಪಿಸಬೇಕು. ಪೂರಕ ಪೌಷ್ಠಿಕ ಆಹಾರ ವಿತರಿಸಬೇಕೆಂದು ಸೂಚಿಸಿದರು.
ಜಿಲ್ಲೆಯ ಹಾಡಿಗಳಲ್ಲಿರುವ ಮಕ್ಕಳಿಗೆ ಗುಣಮಟ್ಟದ ಪೌಷ್ಠಿಕ ಆಹಾರ ಪೂರೈಸಬೇಕು. ಅಪೌಷ್ಠಿಕತೆ ಉಂಟಾಗದಂತೆ ಗಮನ ಹರಿಸುವುದು ಸಂಬಂಧಪಟ್ಟ ಇಲಾಖೆ ಅಧಿಕಾರಿಗಳ ಕರ್ತವ್ಯ ಆಗಿದೆ ಎಂದು ರಾಜ್ಯ ಆಹಾರ ಆಯೋಗದ ಅಧ್ಯಕ್ಷರು ಸ್ಪಷ್ಟ ನಿರ್ದೇಶನ ನೀಡಿದರು.
ಅಪೌಷ್ಠಿಕತೆ ಹೋಗಲಾಡಿಸುವ ನಿಟ್ಟಿನಲ್ಲಿ ಸರ್ಕಾರ ಅನ್ನಭಾಗ್ಯ ಯೋಜನೆ ಅಡಿ ಪಡಿತರ ವಿತರಿಸುತ್ತಿದೆ. ಇವುಗಳ ಸಮರ್ಪಕ ಬಳಕೆ ಆಗಬೇಕು ಎಂದು ಕೃಷ್ಣ ಅವರು ಹೇಳಿದರು.


ದುರ್ಬಲ ವರ್ಗಗಳಿಗೆ ಸರ್ಕಾರದ ಕಾರ್ಯಕ್ರಮ ತಲುಪಿಸುವುದು ಅತೀ ಮುಖ್ಯವಾಗಿದೆ. ವಿದ್ಯಾರ್ಥಿ ನಿಲಯಗಳು, ವಸತಿ ಶಾಲೆಗಳು, ಅಂಗನವಾಡಿ ಸೇರಿದಂತೆ ಎಲ್ಲೆಡೆ ಪೌಷ್ಠಿಕ ಆಹಾರ ಪೂರೈಕೆ ಆಗಬೇಕು ಎಂದರು.
ವಿದ್ಯಾರ್ಥಿಗಳಿಗೆ ಕಾಲಕಾಲಕ್ಕೆ ಆರೋಗ್ಯ ತಪಾಸಣೆ ಮಾಡಿಸಬೇಕು. ಸಮವಸ್ತ್ರ, ಲೇಖನ ಸಾಮಾಗ್ರಿ ವಿತರಿಸಬೇಕು. ಶಾಲಾ ಹಾಜರಾತಿ ವಹಿ ನಿರ್ವಹಣೆ ಸರಿಯಾಗಿ ಇರಬೇಕು. ಪೆÇೀಷಕರ ಸಭೆ ನಡೆಸಬೇಕು, ಚಲನವಲನ ವಹಿ ಸಮರ್ಪಕ ನಿರ್ವಹಣೆ ಮಾಡಬೇಕು. ಜೊತೆಗೆ ದಾಸ್ತಾನು ವಹಿ ಕ್ರಮಬದ್ಧವಾಗಿರಬೇಕು ಎಂದು ಕೃಷ್ಣ ಅವರು ಹೇಳಿದರು.
ವಿದ್ಯಾರ್ಥಿಗಳಿಗೆ ಐಚ್ಛಿಕ ವಿಷಯಗಳು ಸೇರಿದಂತೆ ಅಧ್ಯಯನ ವಿಷಯದಲ್ಲಿ ಆಸಕ್ತಿ ಬೆಳೆಸಿಕೊಳ್ಳುವಂತೆ ಮಾರ್ಗದರ್ಶನ ಮಾಡಬೇಕು ಎಂದು ಅವರು ತಿಳಿಸಿದರು.


ಸ್ವಚ್ಛತೆಗೆ ಒತ್ತು ನೀಡಬೇಕು. ಅಡುಗೆ ಕೋಣೆ ಮತ್ತು ಶೌಚಾಲಯ ಸ್ವಚ್ಛವಾಗಿಡಬೇಕು. ಸರಿಯಾದ ಸಮಯಕ್ಕೆ ಮಕ್ಕಳಿಗೆ ಆಹಾರ ನೀಡಬೇಕು. ಶಾಲಾ ಆವರಣದಲ್ಲಿ ಶುಚಿತ್ವಕ್ಕೆ ಗಮನ ಹರಿಸಬೇಕು ಎಂದು ಕೃಷ್ಣ ಅವರು ಹೇಳಿದರು.
ಈ ಸಂದರ್ಭ ಮಾತನಾಡಿದ ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಅವರು, ಅಂಗನವಾಡಿ, ಶಾಲೆಗಳು, ವಿದ್ಯಾರ್ಥಿ ನಿಲಯಗಳು, ವಸತಿ ಶಾಲೆಯಲ್ಲಿ ಶುದ್ಧ ಕುಡಿಯುವ ನೀರು ಪೂರೈಸಬೇಕು. ಗ್ರಂಥಾಲಯದಲ್ಲಿ ಅಗತ್ಯ ಪುಸ್ತಕಗಳು ಇರಬೇಕು. ಕಂಪ್ಯೂಟರ್ ಸೇರಿದಂತೆ ಅಗತ್ಯ ಮೂಲ ಸೌಕರ್ಯಗಳು ಇರಬೇಕು ಎಂದು ಸಲಹೆ ಮಾಡಿದರು.
ಸಮಿತಿ ಸದಸ್ಯರಾದ ಮಾರುತಿ ಅವರು ಮಾತನಾಡಿ, ಆಹಾರ ಸುರಕ್ಷತೆ ಬಗ್ಗೆ ಹೆಚ್ಚಿನ ಜಾಗೃತಿ ಮೂಡಿಸಬೇಕು. ಕೂರ್ಗ್‍ಹನಿ ಹೆಸರಿನಲ್ಲಿ ನಕಲಿ ಜೇನುತುಪ್ಪ ಮಾರಾಟ ಬಗ್ಗೆ ದೂರುಗಳು ಕೇಳಿಬರುತ್ತಿದ್ದು, ಈ ಬಗ್ಗೆ ಪರಿಶೀಲಿಸಬೇಕು ಎಂದರು.
ಏಕಲವ್ಯ ಮಾದರಿ ವಸತಿ ಶಾಲೆಯಲ್ಲಿ ಇನ್ನಷ್ಟು ಮೂಲಭೂತ ಸೌಲಭ್ಯಕ್ಕೆ ಒತ್ತು ನೀಡಬೇಕು. ಮಕ್ಕಳ ಶಿಕ್ಷಣ ಮತ್ತು ಆರೋಗ್ಯಕ್ಕೆ ಹೆಚ್ಚಿನ ಒತ್ತು ನೀಡಬೇಕು ಎಂದರು.


ಸಮಿತಿ ಸದಸ್ಯರಾದ ಸುಮಂತ್ ರಾವ್, ವಿಜಯಲಕ್ಷ್ಮಿ, ರೋಹಿಣಿ ಪ್ರಿಯ, ಲಿಂಗರಾಜು ಕೋಟೆ ಅವರು ಆಹಾರ ಸುರಕ್ಷತೆ, ವಿದ್ಯಾರ್ಥಿಗಳಿಗೆ ಕಲಿಕಾ ಗುಣಮಟ್ಟ ಹೆಚ್ಚಳ, ಪೌಷ್ಠಿಕ ಆಹಾರ ವಿತರಣೆ ಸೇರಿದಂತೆ ಹಲವು ವಿಚಾರದ ಬಗ್ಗೆ ಸಲಹೆ ಸೂಚನೆ ನೀಡಿದರು.
ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ, ಆಹಾರ ಸುರಕ್ಷತೆ ಅಂಕಿತಾಧಿಕಾರಿ ಅನಿಲ್ ಧಾವನ್, ಆರ್‍ಸಿಹೆಚ್ ಅಧಿಕಾರಿ ಡಾ.ಮಧುಸೂದನ್, ಜಿಲ್ಲಾ ಸರ್ಜನ್ ಡಾ.ನಂಜುಂಡಯ್ಯ, ಡಾ.ಸೋಮಶೇಖರ್, ಆಹಾರ ಇಲಾಖೆಯ ಉಪ ನಿರ್ದೇಶಕರಾದ ಎಂ.ಭೀಮರಾಯ, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಾದ ಶೇಖರ್, ಐಟಿಡಿಪಿ ಇಲಾಖೆ ಅಧಿಕಾರಿ ಎಸ್.ಹೊನ್ನೆಗೌಡ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಾದ ಪ್ರಸನ್ನ ಕುಮಾರ, ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕರಾದ ಬಸವರಾಜು, ನಗರಾಭಿವೃದ್ಧಿ ಯೋಜನಾ ಕೋಶದ ಯೋಜನಾ ನಿರ್ದೇಶಕರಾದ ಬಿ.ಬಸಪ್ಪ, ಪೌರಾಯುಕ್ತರಾದ ಎಚ್.ಆರ್.ರಮೇಶ್,
ವಿಕಲಚೇತನ ಅಧಿಕಾರಿ ವಿಮಲಾ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಪತ್ರಾಂಕಿತ ಅಧಿಕಾರಿ ಪಿ.ಟಿ.ಕವಿತಾ, ಅಲ್ಪಸಂಖ್ಯಾತ ಕಲ್ಯಾಣಾಧಿಕಾರಿ ಡಾ.ದಿವಾಕರ ಇತರರು ತಮ್ಮ ಇಲಾಖೆಗೆ ಸಂಬಂಧಿಸಿದಂತೆ ಮಾಹಿತಿ ನೀಡಿದರು.

Share. Facebook Twitter Pinterest LinkedIn Tumblr Email WhatsApp
Previous Article*ಅರಣ್ಯ ಹಕ್ಕು ಕಾಯ್ದೆ ಆದಿವಾಸಿಗಳಿಗೆ ತಲುಪಿಸಿ: ಗಿರಿಧರ*
Next Article *ಪಿ.ಕೃಷ್ಣೇಗೌಡ ನೇತೃತ್ವದ ಕರವೇ ಸ್ವಾಭಿಮಾನಿ ಬಣದ ಜಿಲ್ಲಾಧ್ಯಕ್ಷರಾಗಿ ಪಿ.ಕೆ.ಉದಯಕುಮಾರ್ ಆಯ್ಕೆ*

Related Posts

*ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಹುಲಿ ಸೆರೆ*

February 11, 2026

ನಾಳೆ ದೇಶಾದ್ಯಂತ ಕಾರ್ಮಿಕ ಸಂಘಟನೆಗಳ ಮುಷ್ಕರ: ಬಸ್, ಬ್ಯಾಂಕ್, ಶಾಲಾ-ಕಾಲೇಜುಗಳ ಸ್ಥಿತಿ ಏನು? ಹೊರಗಡೆ ಹೋಗುವ ಮುನ್ನ ಈ ಸುದ್ದಿ ಓದಿ!

February 11, 2026

*ಪಿ.ಕೃಷ್ಣೇಗೌಡ ನೇತೃತ್ವದ ಕರವೇ ಸ್ವಾಭಿಮಾನಿ ಬಣದ ಜಿಲ್ಲಾಧ್ಯಕ್ಷರಾಗಿ ಪಿ.ಕೆ.ಉದಯಕುಮಾರ್ ಆಯ್ಕೆ*

February 11, 2026

ನಾಳೆ ದೇಶಾದ್ಯಂತ ಕಾರ್ಮಿಕ ಸಂಘಟನೆಗಳ ಮುಷ್ಕರ: ಬಸ್, ಬ್ಯಾಂಕ್, ಶಾಲಾ-ಕಾಲೇಜುಗಳ ಸ್ಥಿತಿ ಏನು? ಹೊರಗಡೆ ಹೋಗುವ ಮುನ್ನ ಈ ಸುದ್ದಿ ಓದಿ!

February 11, 2026

ನವದೆಹಲಿ/ಬೆಂಗಳೂರು NEWS DESK ಫೆ.11: ಕೇಂದ್ರ ಸರ್ಕಾರದ ಕಾರ್ಮಿಕ ವಿರೋಧಿ ನೀತಿಗಳು, ಹೊಸ ಕಾರ್ಮಿಕ ಸಂಹಿತೆಗಳು ಮತ್ತು ಆರ್ಥಿಕ ಸುಧಾರಣೆಗಳನ್ನು…

*ಪಿ.ಕೃಷ್ಣೇಗೌಡ ನೇತೃತ್ವದ ಕರವೇ ಸ್ವಾಭಿಮಾನಿ ಬಣದ ಜಿಲ್ಲಾಧ್ಯಕ್ಷರಾಗಿ ಪಿ.ಕೆ.ಉದಯಕುಮಾರ್ ಆಯ್ಕೆ*

February 11, 2026

*ಆಹಾರ ಭದ್ರತಾ ಕಾಯ್ದೆ ಪರಿಣಾಮಕಾರಿಯಾಗಿ ಜಾರಿಗೊಳಿಸಿ: ಡಾ.ಎಚ್.ಕೃಷ್ಣ*

February 11, 2026

*ಅರಣ್ಯ ಹಕ್ಕು ಕಾಯ್ದೆ ಆದಿವಾಸಿಗಳಿಗೆ ತಲುಪಿಸಿ: ಗಿರಿಧರ*

February 11, 2026

*ಕಾರ್ಮಿಕ ವರ್ಗದ ತುರ್ತು ರೋಗಿಗಳಿಗೆ ಸರತಿ ಸಾಲು ಬೇಡ : ಜಿಲ್ಲಾ ಸರ್ಜನ್ ಗೆ ಮನವಿ ಸಲ್ಲಿಸಿದ ಎಸ್‌ಡಿಟಿಯು*

February 11, 2026

*ಮೈಸೂರಿನಲ್ಲಿ ಪೂರ್ಣ ಪ್ರಮಾಣದ ಪಾಸ್‌ಪೋರ್ಟ್‌ ಸೇವಾ ಕೇಂದ್ರ ಆರಂಭಕ್ಕೆ ಯದುವೀರ್‌ ಒತ್ತಡ ಕೇಂದ್ರ ವಿದೇಶಾಂಗ ಸಚಿವರಿಗೆ ಮನವಿ ಸಲ್ಲಿಸಿರುವ ಮೈಸೂರು-ಕೊಡಗು ಸಂಸದರು*

February 11, 2026

*ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿಯಿಂದ ಮಡಿಕೇರಿಯಲ್ಲಿ ಪ್ರತಿಭಟನೆ*

February 11, 2026

*ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5657 ಪ್ರಕರಣಗಳು ಇತ್ಯರ್ಥ*

February 11, 2026

*ಕಾಯಕ ಶರಣರ ಜಯಂತಿ ಸಮ ಸಮಾಜ ನಿರ್ಮಾಣದಲ್ಲಿ ಕಾಯಕ ಶರಣರ ಕೊಡುಗೆ ಅಪಾರ: ಹೇಮಲತಾ*

February 10, 2026

*ಸೌಂದರ್ಯ ತಜ್ಞರು ನಿತ್ಯ ವ್ಯಾಯಾಮದೊಂದಿಗೆ ತಮ್ಮ ಆರೋಗ್ಯ ವೃದ್ಧಿಸಿಕೊಳ್ಳುವ ಬಗ್ಗೆ ಗಮನಹರಿಸಬೇಕು ಎಂದು ಅಂತರರಾಷ್ಟ್ರೀಯ ಬ್ಯಾಡ್ಮಿಂಟನ್ ಕ್ರೀಡಾಪಟು ತಾತಪಂಡ ಜ್ಯೋತಿ ಸೋಮಯ್ಯ ಕಿವಿಮಾತು ಹೇಳಿದರು*

February 10, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.