Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಚಿನ್ನಸ್ವಾಮಿಯಲ್ಲಿ ಮತ್ತೆ ಮೊಳಗಲಿದೆ RCB.. RCB.. ಸದ್ದು! ಸರ್ಕಾರದ ಗ್ರೀನ್ ಸಿಗ್ನಲ್ ಸಿಕ್ಕಿದ್ದು ಹೇಗೆ? ಅಭಿಮಾನಿಗಳೇ ಈಗಲೇ ರೆಡಿಯಾಗಿ!*
  • *ಕರೆಂಟ್ ಬಿಲ್ ನೋಡಿ ಬೆಚ್ಚಿಬೀಳಬೇಡಿ! ರಾಜ್ಯದಲ್ಲಿ ವಿದ್ಯುತ್ ದರ ಏರಿಕೆಗೆ ಕ್ಷಣಗಣನೆ; ಯಾರಿಗೆ ಎಷ್ಟು ಹೊರೆ?*
  • *ಶಾಲೆ ಪ್ರವಾಸಕ್ಕೆ ಟ್ರಕ್ ಬಳಕೆ: ಪೋಷಕರು ಫುಲ್ ಗರಂ! ಹೆಡ್‌ಮಾಸ್ಟರ್ ಅಮಾನತು ಹಿಂದಿನ ಅಸಲಿ ಕಥೆ ಇಲ್ಲಿದೆ*
  • *ಕೊಡಗಿಗೆ ಭೇಟಿ ನೀಡಿದ ಪೊಲೀಸ್ ಮಹಾ ನಿರೀಕ್ಷಕರು*
  • *ಕುಶಾಲನಗರದಲ್ಲಿ ಒಣ ಕಸ ಸಂಗ್ರಹ ಘಟಕ ಉದ್ಘಾಟನೆ*
  • *ಭ್ರಷ್ಟಾಚಾರದ ಪ್ರಮಾಣ ಹೆಚ್ಚಾಗಿದೆ : ಗುತ್ತಿಗೆದಾರರ ಸಂಘ ಗಂಭೀರ ಆರೋಪ*
  • *ಕೇಂದ್ರ ಸರಕಾರದ ವಿರುದ್ಧ ಮಡಿಕೇರಿಯಲ್ಲಿ ಕಾರ್ಮಿಕ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ*
  • *ಮಾಂದಲ್ ಪಟ್ಟಿ; ಸಾರ್ವಜನಿಕರು ಮತ್ತು ಪ್ರವಾಸಿಗರ ಗಮನಕ್ಕೆ*
  • *ಅಂತರ್ಜಾಲ ಬಳಕೆ ಮತ್ತು ಸುರಕ್ಷತೆ ಬಗ್ಗೆ ಜಾಗೃತಿ ಅಗತ್ಯ: ಆರ್.ಐಶ್ವರ್ಯ *
  • *ಶ್ರೀವೀರಭದ್ರ ಮುನೇಶ್ವರ ದೇವಾಲಯದಲ್ಲಿ ಫೆ.15ರಂದು ಮಹಾಶಿವರಾತ್ರಿಯ ಸಂಭ್ರಮ*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ಅಂತರ್ಜಾಲ ಬಳಕೆ ಮತ್ತು ಸುರಕ್ಷತೆ ಬಗ್ಗೆ ಜಾಗೃತಿ ಅಗತ್ಯ: ಆರ್.ಐಶ್ವರ್ಯ *
Uncategorized

*ಅಂತರ್ಜಾಲ ಬಳಕೆ ಮತ್ತು ಸುರಕ್ಷತೆ ಬಗ್ಗೆ ಜಾಗೃತಿ ಅಗತ್ಯ: ಆರ್.ಐಶ್ವರ್ಯ *

February 12, 20262 Mins Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ಮಡಿಕೇರಿ, NEWS DESK ಫೆ.12:-ಮಾಹಿತಿ ತಂತ್ರಜ್ಞಾನದ ಬಳಕೆಯಿಂದ ಸರಕಾರಿ ಸೇವೆಗಳು ಹಾಗೂ ಕೆಲಸಗಳನ್ನು ಸುಲಭವಾಗಿ ಹಾಗೂ ಶೀಘ್ರವಾಗಿ ಜನಸಾಮಾನ್ಯರಿಗೆ ಒದಗಿಸಲು ಪೂರಕವಾಗಿದೆ. ಅವುಗಳ ಮಾಹಿತಿಗಳು ಅಂತರ್ಜಾಲದಲ್ಲಿ ಸೋರಿಕೆಯಾಗದಂತೆ ಸುರಕ್ಷಿತ ಕ್ರಮ ಅನುಸರಿಸುವುದು ಅತ್ಯಗತ್ಯ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಆರ್. ಐಶ್ವರ್ಯ ಅವರು ತಿಳಿಸಿದ್ದಾರೆ.
ಸುರಕ್ಷಿತ ಅಂತರ್ಜಾಲ ದಿನಾಚರಣೆ ಅಂಗವಾಗಿ ಜಿಲ್ಲಾಡಳಿತ ವತಿಯಿಂದ ನಗರದ ಜಿಲ್ಲಾಧಿಕಾರಿ ಅವರ ಸಭಾಂಗಣದಲ್ಲಿ ಸರ್ಕಾರಿ ಅಧಿಕಾರಿಗಳು ಹಾಗೂ ನೌಕರರಿಗೆ ಅಂತರ್ಜಾಲ ಸುರಕ್ಷತೆಯ ಕುರಿತು ಏರ್ಪಡಿಸಲಾಗಿದ್ದ ಜಾಗೃತಿ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು.
ಸಾಮಾಜಿಕ ಜಾಲತಾಣಗಳ ಮೂಲಕ ಸಾರ್ವಜನಿಕರೊಂದಿಗೆ ಸಂವಹನ ಅತ್ಯಂತ ಸುಲಭವಾಗಿದೆ. ಸರಕಾರಿ ವೆಬ್‍ಸೈಟ್ ಗಳನ್ನು ಹ್ಯಾಕರ್ ಗಳು ಸುಲಭವಾಗಿ ದುರುಪಯೋಗ ಪಡಿಸಿಕೊಳ್ಳುವ ಸಾಧ್ಯತೆ ಇದೆ. ಆದ್ದರಿಂದ ಸೈಬರ್ ಅಪರಾಧಗಳ ಬಗ್ಗೆ ಅರಿವು ಹೊಂದಿದಾಗ ತಮಗಾದ ಮೋಸದ ಬಗ್ಗೆ ದೂರು ನೀಡಿ ನ್ಯಾಯ ಪಡೆಯಲು ಅನುಕೂಲವಾಗುತ್ತದೆ ಎಂದು ಆರ್.ಐಶ್ವರ್ಯ ಅವರು ವಿವರಿಸಿದರು.
ಅಧಿಕಾರಿಗಳು ಕಚೇರಿಯ ಕಂಪ್ಯೂಟರ್, ಮೊಬೈಲ್‍ಗಳಲ್ಲಿ ಅಂತರ್ಜಾಲ ಬಳಕೆಯ ಉಪಯೋಗ ಪಡೆದುಕೊಳ್ಳಬೇಕು. ಜೊತೆಗೆ ಅದರ ಅನಾನುಕೂಲತೆಗಳ ಬಗ್ಗೆ ಜಾಗೃತಿ ವಹಿಸಬೇಕು ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಅವರು ಸಲಹೆ ಮಾಡಿದರು.


ಆನ್‍ಲೈನ್ ವ್ಯವಹಾರ, ಬ್ಯಾಂಕಿಂಗ್ ಉಪಯೋಗಿಸುವಾಗ ಎಚ್ಚರ ವಹಿಸಬೇಕು. ಕೆಲವೊಮ್ಮೆ ಅಪರಿಚಿತ ಮೊಬೈಲ್ ನಂಬರ್ ಗಳ ಬಗ್ಗೆಯೂ ಅಧಿಕಾರಿಗಳು ಗಮನವಹಿಸಬೇಕು. ಯಾವುದೇ ಮಾಹಿತಿ ನೀಡುವಾಗ ಎಚ್ಚರ ವಹಿಸಬೇಕು ಎಂದರು.
ಎನ್‍ಐಸಿ ಅಧಿಕಾರಿ ಸಂಗೀತಾ ಮಾತನಾಡಿ, ಸುರಕ್ಷಿತ ಅಂತರ್ಜಾಲ ದಿನ ಪ್ರಯುಕ್ತ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ಜಾಗೃತಿ ಮೂಡಿಸಲಾಗುತ್ತಿದೆ ಎಂದರು.
ಇತ್ತೀಚಿನ ದಿನಗಳಲ್ಲಿ ಪ್ರತಿಯೊಬ್ಬರೂ ಸಾಮಾಜಿಕ ಜಾಲತಾಣಗಳಾದ ವಾಟ್ಸಾಪ್, ಪೇಸ್‍ಬುಕ್, ಇನ್ಸ್ಟ್ಸಾಗ್ರಾಮ್ ಬಳಸುತ್ತಿದ್ದಾರೆ. ಕ್ರೆಡಿಟ್ ಕಾರ್ಡ್ ಮತ್ತು ಡೆಬಿಟ್ ಕಾರ್ಡ್ ಪಾಸ್‍ವರ್ಡ್‍ಗಳನ್ನು ಯಾರ ಬಳಿಯು ಹಂಚಿಕೊಳ್ಳಬಾರದು. ಇದರಿಂದ ವಂಚಕರು ಮಾಹಿತಿ ಕದಿಯುವ ಸಂದರ್ಭಗಳು ಬರುತ್ತವೆ ಎಂದರು.


ಸಾರ್ವಜನಿಕ ಸ್ಥಳಗಳಲ್ಲಿ ಲಭ್ಯವಾಗುವ ಡಿವೈಸ್‍ಗಳನ್ನು ಬಳಸಬೇಡಿ, ಇತರರ ಮೊಬೈಲ್ ಯುಎಸ್‍ಬಿ ಕೇಬಲ್ ಗಳನ್ನು ಉಪಯೋಗಿಸುವಾಗ ಎಚ್ಚರ ವಹಿಸಿ ಎಂದು ಎನ್‍ಐಸಿ ಅಧಿಕಾರಿ ಅವರು ಹೇಳಿದರು.
ಅಲ್ಲದೇ ನಮ್ಮ ದಿನನಿತ್ಯದ ಜೀವನದಲ್ಲಿ ಇಂಟರ್ನೆಟ್ ಬಳಕೆ, ಅಂತರ್ಜಾಲದ ಸುರಕ್ಷಿತ ಬಳಕೆ, ಸಾಮಾನ್ಯ ಸೈಬರ್ ಬೆದರಿಕೆಗಳು, ಸೈಬರ್ ನೈರ್ಮಲ್ಯ ಅಭ್ಯಾಸಗಳು, ಸೈಬರ್ ಅಪರಾಧಗಳನ್ನು ವರದಿ ಮಾಡುವ ಕಾರ್ಯವಿಧಾನ, ಆನ್‍ಲೈನ್‍ನಲ್ಲಿ ಸುರಕ್ಷಿತವಾಗಿರಲು ಜಾಗೃತಿ ಸಂಪನ್ಮೂಲಗಳ ಕುರಿತು ವಿವರಿಸಿದರು. .
ಕಾರ್ಯಾಗಾರದಲ್ಲಿ ಡಿವೈಎಸ್ಪಿ ಲಕ್ಷ್ಮೀಕಾಂತ ತಳವಾರ್, ಡಿವೈಒ ಸಿಂಧೂರ್ ರಾಮಯ್ಯ ತಳವಾರ್, ಎಂಜಿನಿಯರ್ ತೇಜಶ್ ಎಸ್., ನೆಟ್‍ವರ್ಕ್ ಎಂಜಿನಿಯರ್ ಆಕಾಶ್ ಕೆ.ಆರ್., ಸುಯೋಗ್ ಸ್ಪಿನ್ಸನ್, ಈ-ಆಫೀಸ್ ಇಲಾಖಾಧಿಕಾರಿ ಅಜಯ್ ಹಾಗೂ ವಿವಿಧ ಇಲಾಖಾ ಅಧಿಕಾರಿಗಳು, ಸಿಬ್ಬಂದಿಗಳು ಇದ್ದರು.

Share. Facebook Twitter Pinterest LinkedIn Tumblr Email WhatsApp
Previous Article*ಶ್ರೀವೀರಭದ್ರ ಮುನೇಶ್ವರ ದೇವಾಲಯದಲ್ಲಿ ಫೆ.15ರಂದು ಮಹಾಶಿವರಾತ್ರಿಯ ಸಂಭ್ರಮ*
Next Article *ಮಾಂದಲ್ ಪಟ್ಟಿ; ಸಾರ್ವಜನಿಕರು ಮತ್ತು ಪ್ರವಾಸಿಗರ ಗಮನಕ್ಕೆ*

Recommended: Website design development company services in Mangalore Forex Trading Teacher in India

Related Posts

*ಚಿನ್ನಸ್ವಾಮಿಯಲ್ಲಿ ಮತ್ತೆ ಮೊಳಗಲಿದೆ RCB.. RCB.. ಸದ್ದು! ಸರ್ಕಾರದ ಗ್ರೀನ್ ಸಿಗ್ನಲ್ ಸಿಕ್ಕಿದ್ದು ಹೇಗೆ? ಅಭಿಮಾನಿಗಳೇ ಈಗಲೇ ರೆಡಿಯಾಗಿ!*

February 12, 2026

*ಕರೆಂಟ್ ಬಿಲ್ ನೋಡಿ ಬೆಚ್ಚಿಬೀಳಬೇಡಿ! ರಾಜ್ಯದಲ್ಲಿ ವಿದ್ಯುತ್ ದರ ಏರಿಕೆಗೆ ಕ್ಷಣಗಣನೆ; ಯಾರಿಗೆ ಎಷ್ಟು ಹೊರೆ?*

February 12, 2026

*ಶಾಲೆ ಪ್ರವಾಸಕ್ಕೆ ಟ್ರಕ್ ಬಳಕೆ: ಪೋಷಕರು ಫುಲ್ ಗರಂ! ಹೆಡ್‌ಮಾಸ್ಟರ್ ಅಮಾನತು ಹಿಂದಿನ ಅಸಲಿ ಕಥೆ ಇಲ್ಲಿದೆ*

February 12, 2026

*ಕರೆಂಟ್ ಬಿಲ್ ನೋಡಿ ಬೆಚ್ಚಿಬೀಳಬೇಡಿ! ರಾಜ್ಯದಲ್ಲಿ ವಿದ್ಯುತ್ ದರ ಏರಿಕೆಗೆ ಕ್ಷಣಗಣನೆ; ಯಾರಿಗೆ ಎಷ್ಟು ಹೊರೆ?*

February 12, 2026

ಬೆಂಗಳೂರು ಫೆ.12: ಈಗಾಗಲೇ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಕಂಗೆಟ್ಟಿರುವ ರಾಜ್ಯದ ಜನತೆಗೆ ಈಗ ಮತ್ತೊಂದು ಆರ್ಥಿಕ ಹೊರೆ ಬೀಳುವ…

*ಶಾಲೆ ಪ್ರವಾಸಕ್ಕೆ ಟ್ರಕ್ ಬಳಕೆ: ಪೋಷಕರು ಫುಲ್ ಗರಂ! ಹೆಡ್‌ಮಾಸ್ಟರ್ ಅಮಾನತು ಹಿಂದಿನ ಅಸಲಿ ಕಥೆ ಇಲ್ಲಿದೆ*

February 12, 2026

*ಕೊಡಗಿಗೆ ಭೇಟಿ ನೀಡಿದ ಪೊಲೀಸ್ ಮಹಾ ನಿರೀಕ್ಷಕರು*

February 12, 2026

*ಕುಶಾಲನಗರದಲ್ಲಿ ಒಣ ಕಸ ಸಂಗ್ರಹ ಘಟಕ ಉದ್ಘಾಟನೆ*

February 12, 2026

*ಭ್ರಷ್ಟಾಚಾರದ ಪ್ರಮಾಣ ಹೆಚ್ಚಾಗಿದೆ : ಗುತ್ತಿಗೆದಾರರ ಸಂಘ ಗಂಭೀರ ಆರೋಪ*

February 12, 2026

*ಕೇಂದ್ರ ಸರಕಾರದ ವಿರುದ್ಧ ಮಡಿಕೇರಿಯಲ್ಲಿ ಕಾರ್ಮಿಕ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ*

February 12, 2026

*ಮಾಂದಲ್ ಪಟ್ಟಿ; ಸಾರ್ವಜನಿಕರು ಮತ್ತು ಪ್ರವಾಸಿಗರ ಗಮನಕ್ಕೆ*

February 12, 2026

*ಅಂತರ್ಜಾಲ ಬಳಕೆ ಮತ್ತು ಸುರಕ್ಷತೆ ಬಗ್ಗೆ ಜಾಗೃತಿ ಅಗತ್ಯ: ಆರ್.ಐಶ್ವರ್ಯ *

February 12, 2026

*ಶ್ರೀವೀರಭದ್ರ ಮುನೇಶ್ವರ ದೇವಾಲಯದಲ್ಲಿ ಫೆ.15ರಂದು ಮಹಾಶಿವರಾತ್ರಿಯ ಸಂಭ್ರಮ*

February 12, 2026

*ಫೆ.15 ರಂದು ಸುಳ್ಯ ಶ್ರೀ ವೆಂಕಟರಮಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಮೂರ್ನಾಡು ಶಾಖೆ ಉದ್ಘಾಟನೆ*

February 12, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.