ಮಡಿಕೇರಿ, NEWS DESK ಫೆ.16:-ಕರ್ನಾಟಕ ರಾಜ್ಯ ಕಾಡುಗೊಲ್ಲ ಅಭಿವೃದ್ಧಿ ನಿಗಮದಿಂದ 2025-26ನೇ ಸಾಲಿನಲ್ಲಿ ಆಹಾರ ವಾಹಿನಿ(ಆಹಾರ ಕಿಯೋಸ್ಕ್) ಯೋಜನೆಯಡಿ ಅರ್ಜಿ ಆಹ್ವಾನಿಸಲಾಗಿದೆ. ಆಹಾರ ವಾಹಿನಿ(ಆಹಾರ ಕಿಯೋಸ್ಕ್) ಯೋಜನೆಯಡಿ ಸ್ಥಳಾಂತರಿಸಬಹುದಾದ ತಿಂಡಿ ಮಳಿಗೆಗಳನ್ನು ನಾಲ್ಕು ಚಕ್ರಗಳ ಇಗಿ-ಗೂಡ್ಸ್ ವಾಹನಗಳನ್ನು ಅಗತ್ಯಕ್ಕೆ ತಕ್ಕಂತೆ ನವೀಕರಿಸಿ ಫಲಾನುಭವಿಗಳಿಗೆ ವಿತರಿಸುವ ಯೋಜನೆಯಾಗಿದೆ. ನಿಗಮದಿಂದ ವಾಹನ ಖರೀದಿಗೆ ರೂ.3 ಲಕ್ಷಗಳ ಸಹಾಯಧನವನ್ನು ಬಿಡುಗಡೆ ಮಾಡಲಾಗುವುದು. ಉಳಿಕೆ ಮೊತ್ತವನ್ನು ಬ್ಯಾಂಕ್‍ಗಳು/ ಹಣಕಾಸು ಸಂಸ್ಥೆಗಳಿಂದ ಸಾಲ ಪಡೆಯಬಹುದಾಗಿದೆ.
ನಗರ ಪ್ರದೇಶದ ವಿಧಾನಸಭಾ ಕ್ಷೇತ್ರವಾದ ಮಡಿಕೇರಿ ವಿಧಾನಸಭಾ ಕ್ಷೇತ್ರದ ಹಿಂದುಳಿದ ವರ್ಗಗಳ ಪ್ರವರ್ಗ-1 ರ ಕಾಡುಗೊಲ್ಲ ಜನಾಂಗದ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಬಹುದಾಗಿದೆ. ಸೌಲಭ್ಯ ಪಡೆಯಬಯಸುವವರು ಹಿಂದುಳಿದ ವರ್ಗಗಳ ಪ್ರವರ್ಗ-1 ರ ಕಾಡುಗೊಲ್ಲ ಜನಾಂಗಕ್ಕೆ ಸೇರಿದವರಾಗಿರಬೇಕು. ಕುಟುಂಬದ ವಾರ್ಷಿಕ ವರಮಾನ ರೂ. 3 ಲಕ್ಷಗಳ ಒಳಗಿರಬೇಕು. ಅರ್ಜಿದಾರರ ವಯಸ್ಸು 21 ರಿಂದ 45 ವರ್ಷಗಳ ಮಿತಿಯಲ್ಲಿರಬೇಕು.
ಈ ಯೋಜನೆಗಳಡಿಯಲ್ಲಿ ಸೌಲಭ್ಯ ಒದಗಿಸಲು ಸೇವಾ ಸಿಂಧು ತಂತ್ರಾಂಶದಲ್ಲಿ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸುವಾಗ ಅರ್ಜಿದಾರರು ಆಧಾರ್ ಜೋಡಣೆಯಾದ ಚಾಲ್ತಿಯಲ್ಲಿರುವ ಬ್ಯಾಂಕ್ ಖಾತೆ ಹೊಂದಿರಬೇಕು. ಆಧಾರ್ ಕಾರ್ಡ್ ನಲ್ಲಿರುವಂತೆ ಅರ್ಜಿದಾರರ ಹೆಸರು (ಶ್ರೀ/ಶ್ರೀಮತಿ ಕುಮಾರಿ ಮುಂತಾದ ದಾಖಲಾತಿಗಳೆಲ್ಲವು) ಇತರೆ ದಾಖಲಾತಿಗಳಾದ ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಬ್ಯಾಂಕ್ ಪಾಸ್ ಪುಸ್ತಕದಲ್ಲಿಯೂ ಇದ್ದು, ಹೊಂದಾಣಿಕೆಯಾಗಬೇಕು.
ಒಂದು ಬಾರಿ ನಿಗಮದ ಯಾವುದಾದರೂ ಯೋಜನೆಯಲ್ಲಿ ಪ್ರಯೋಜನ ಪಡೆದಿದ್ದಲ್ಲಿ ಅಂತಹವರು ಹಾಗೂ ಅವರ ಕುಟುಂಬದವರು ಮತ್ತೊಮ್ಮೆ ಸೌಲಭ್ಯ ಕೋರಿ ಅರ್ಜಿ ಸಲ್ಲಿಸಲು ಅರ್ಹರಿರುವುದಿಲ್ಲ.
ಈ ಸೌಲಭ್ಯಗಳನ್ನು ಪಡೆಯಲು ಇಚ್ಚಿಸುವ ಕಾಡುಗೊಲ್ಲ ಜನಾಂಗದ ಹಿಂದುಳಿದ ವರ್ಗಗಳ ಅರ್ಜಿದಾರರು ಅರ್ಜಿಗಳನ್ನು ಸೇವಾಸಿಂಧು ಪೆÇೀರ್ಟಲ್ https://sevasindhu.karnataka.gov.in ಮುಖಾಂತರ ಗ್ರಾಮ ಒನ್, ಬೆಂಗಳೂರು ಒನ್ ಮತ್ತು ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಮಾರ್ಚ್ 6 ಕೊನೆ ದಿನವಾಗಿದೆ. ಯೋಜನೆಯ ಅರ್ಹತೆ ಮತ್ತು ಸಲ್ಲಿಸುವ ದಾಖಲಾತಿಗಳ ಹೆಚ್ಚಿನ ಮಾಹಿತಿಗಾಗಿ ನಿಗಮದ ಸಹಾಯವಾಣಿ ಸಂಖ್ಯೆ: 080-22374832, 8050770004 ಮತ್ತು 8050770005 ಅಥವಾ ಜಿಲ್ಲಾ ವ್ಯವಸ್ಥಾಪಕರು, ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ(ನಿ), ಕೊಡಗು ಜಿಲ್ಲೆ, ಮಡಿಕೇರಿ ಇವರನ್ನು ಖುದ್ಧಾಗಿ ಅಥವಾ ದೂರವಾಣಿ ಸಂಖ್ಯೆ:08272-221656 ರ ಮೂಲಕ ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದು.








