Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ವಿರಾಜಪೇಟೆ : ಗಣೇಶ ವಿಸರ್ಜನೆ ಶೋಭಾಯಾತ್ರೆ ಸಂದರ್ಭ ವಿದ್ಯುತ್ ಅವಘಡ : ಐವರಿಗೆ ಗಾಯ : ಇಬ್ಬರ ಸ್ಥಿತಿ ಗಂಭೀರ*
  • *ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕೊಡಗಿನಲ್ಲಿ ಜನಜಾಗೃತಿ : 50 ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ವಾಹನ ಜಾಥಾ*
  • *ಪ್ರತಾಪ್ ಸಿಂಹ ಹೇಳಿಕೆ ವಿರುದ್ಧ ಮಡಿಕೇರಿಯಲ್ಲಿ ಪ್ರತಿಭಟನೆ*
  • *ಗುತ್ತಿಗೆ ನೌಕರರನ್ನು ಖಾಯಂಗೊಳಿಸಬೇಕು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹ : ಮಡಿಕೇರಿಯಲ್ಲಿ ಪ್ರತಿಭಟನೆ*
  • *ಕಡಿಯತನಾಡ್‌ನ ಕುರಿತು ಬೃಹತ್ ಅಧ್ಯಯನ ಕೃತಿ ಬಿಡುಗಡೆ : ಮೊದಲ ಬಾರಿಗೆ ನಾಡಿನ ಸಮಗ್ರ ಅಧ್ಯಯನ : ಬೆಂಗಳೂರಿನಲ್ಲಿ ಸೆ.27 ರಂದು ಲೋಕಾರ್ಪಣೆ*
  • *ಸೆ.27ರಂದು ಸ್ವಚ್ಛತಾ ಕಾರ್ಯಕ್ರಮ*
  • *ಸುಂದರನಗರದಲ್ಲಿ ಬೀದಿ ನಾಯಿಗಳ ಹಾವಳಿ : ವೃದ್ಧರ ಮೇಲೆ ದಾಳಿ : ಕ್ರಮಕ್ಕೆ ಒತ್ತಾಯ*
  • *ಮಡಿಕೇರಿ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಸಮಗ್ರ ಉಚಿತ ಆರೋಗ್ಯ ಶಿಬಿರ*
  • *ಸಿವಿಲ್ ಪೊಲೀಸ್ ಕಾನ್‌ಸ್ಟೇಬಲ್ ನೇಮಕಾತಿ: ಸೆ.28ರಿಂದ ದೈಹಿಕ ಪರೀಕ್ಷೆ ಆರಂಭ*
  • *ಮಡಿಕೇರಿ ನಗರ ಯುವ ಕಾಂಗ್ರೆಸ್ ನೂತನ ಪದಾಧಿಕಾರಿಗಳ ಅಧಿಕಾರ ಸ್ವೀಕಾರ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕೊಡಗು ಜಿಲ್ಲೆಯ 18 ಕೇಂದ್ರಗಳಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ : ಒಟ್ಟು 5,255 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕೊಡಗು ಜಿಲ್ಲೆಯ 18 ಕೇಂದ್ರಗಳಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ : ಒಟ್ಟು 5,255 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ*

ಫೆಬ್ರವರಿ 16, 20263 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ NEWS DESK ಫೆ.16 : ಕೊಡಗು ಜಿಲ್ಲೆಯ 18 ಕೇಂದ್ರಗಳಲ್ಲಿ ಫೆ.28ರಿಂದ ಮಾ.17 ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯಲಿದ್ದು, ಒಟ್ಟು 5,255 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಪರೀಕ್ಷೆಯನ್ನು ವ್ಯವಸ್ಥಿತವಾಗಿ ನಡೆಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಅವರು ನಿರ್ದೇಶನ ನೀಡಿದ್ದಾರೆ. ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ಸಿದ್ಧತೆ ಸಂಬಂಧ ಸೋಮವಾರ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯನ್ನು ಯಾವುದೇ ರೀತಿ ಗೊಂದಲ ಉಂಟಾಗದೆ ಸುಗಮ ಹಾಗೂ ಸುವ್ಯವಸ್ಥಿತವಾಗಿ ನಡೆಸುವಂತೆ ಜಿಲ್ಲಾಧಿಕಾರಿ ಅವರು ಸೂಚಿಸಿದರು.
ಪರೀಕ್ಷೆಗೆ ಮೇಲ್ವಿಚಾರಕರ ನಿಯೋಜನೆ, ಪೊಲೀಸರು ಹಾಗೂ ಆರೋಗ್ಯ ಸಿಬ್ಬಂದಿಗಳ ನಿಯೋಜನೆ ಸೇರಿದಂತೆ ಪಿಯು ಪರೀಕ್ಷಾ ಪ್ರಾಧಿಕಾರದ ನಿರ್ದೇಶನವನ್ನು ಚಾಚೂ ತಪ್ಪದೆ ಪಾಲಿಸುವಂತೆ ಜಿಲ್ಲಾಧಿಕಾರಿ ಅವರು ತಿಳಿಸಿದರು. ದ್ವಿತೀಯ ಪಿಯುಸಿ ಪರೀಕ್ಷೆಯನ್ನು ಪಾರದರ್ಶಕವಾಗಿ ನಡೆಸಬೇಕು. ಪರೀಕ್ಷಾ ಕೊಠಡಿಗಳಲ್ಲಿ ಸಿಸಿಟಿವಿ ಅಳವಡಿಸುವುದು ಸೇರಿದಂತೆ ಪರೀಕ್ಷಾ ಪಾವಿತ್ರ್ಯತೆಯನ್ನು ಕಾಪಾಡಬೇಕು ಎಂದು ಜಿಲ್ಲಾಧಿಕಾರಿ ಅವರು ಹೇಳಿದರು. ಪರೀಕ್ಷಾ ಕೇಂದ್ರಗಳ ಚಲನವಲನ ಸಂಬಂಧಿಸಿದಂತೆ ವೆಬ್‌ಕಾಸ್ಟಿಂಗ್ ವ್ಯವಸ್ಥೆ ಮಾಡಬೇಕು. ವಿದ್ಯಾರ್ಥಿಗಳು ನೋಂದಣಿ ಸಂಖ್ಯೆ ಹಾಗೂ ಕೊಠಡಿ ಸಂಖ್ಯೆ ಖಾತರಿ ಪಡಿಸಿಕೊಳ್ಳಲು ಪರೀಕ್ಷಾ ಕೇಂದ್ರದ ನಾಲ್ಕೆöÊದು ಕಡೆಗಳಲ್ಲಿ ಮಾಹಿತಿ ಒದಗಿಸುವಂತಾಗಬೇಕು ಎಂದು ಎಸ್.ಜೆ.ಸೋಮಶೇಖರ್ ಅವರು ಸಲಹೆ ಮಾಡಿದರು.  ಪರೀಕ್ಷಾ ದಿನಗಳಲ್ಲಿ ಅಗತ್ಯ ವಾಹನ ನಿಯೋಜಿಸುವುದು, ಜೊತೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗದಂತೆ ನೋಡಿಕೊಳ್ಳುವುದು, ಶುಶ್ರೂಷಕರನ್ನು ನೇಮಿಸುವಂತೆ ಸಂಬAಧಪಟ್ಟ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಅವರು ಸೂಚಿಸಿದರು. ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ ಅವರು ಮಾತನಾಡಿ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯನ್ನು ಕಳೆದ ಬಾರಿಯಂತೆ ಸುಗಮವಾಗಿ ನಡೆಸಲು ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದರು. ಪದವಿ ಪೂರ್ವ ಶಿಕ್ಷಣ, ಕಂದಾಯ, ಪೊಲೀಸ್, ಖಜಾನೆ, ಸಾರಿಗೆ, ಸೆಸ್ಕ್, ಆರೋಗ್ಯ ಹೀಗೆ ವಿವಿಧ ಇಲಾಖೆಗಳು ತಂಡವಾಗಿ ಕಾರ್ಯನಿರ್ವಹಿಸಲಾಗುತ್ತದೆ ಎಂದು ಹೇಳಿದರು.


ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕರಾದ ವಿಜಯ್ ಅವರು ಮಾತನಾಡಿ ಜಿಲ್ಲೆಯಲ್ಲಿ ಈ ಬಾರಿ 5255 ವಿದ್ಯಾರ್ಥಿಗಳು ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ಬರೆಯಲಿದ್ದು, ಮೊದಲ ಬಾರಿಗೆ 4,809 ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದಾರೆ. 250 ಖಾಸಗಿಯಾಗಿ ಹಾಗೂ 196 ಪುನರಾವರ್ತಿತ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ ಎಂದು ವಿಜಯ್ ಅವರು ಮಾಹಿತಿ ನೀಡಿದರು.   ಕಲಾ ವಿಭಾಗದಲ್ಲಿ 1,054 ವಿದ್ಯಾರ್ಥಿಗಳು, ವಾಣಿಜ್ಯ ವಿಭಾಗದಲ್ಲಿ 2603 ವಿದ್ಯಾರ್ಥಿಗಳು, ವಿಜ್ಞಾನ ವಿಭಾಗದಲ್ಲಿ 1598 ವಿದ್ಯಾರ್ಥಿಗಳು ಒಟ್ಟು 5,255 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕರಾದ ವಿಜಯ್ ಅವರು ತಿಳಿಸಿದ್ದಾರೆ. ಪರೀಕ್ಷಾ ದಿನದಂದು ಪರೀಕ್ಷಾ ಕೇಂದ್ರದ ಸುತ್ತ 200 ಮೀ ವ್ಯಾಪ್ತಿಯಲ್ಲಿ ಪ್ರತಿಬಂಧಕ ಜಾರಿಗೊಳಿಸಬೇಕಿದೆ. ಹಾಗೆಯೇ ಪರೀಕ್ಷಾ ದಿನಗಳಂದು ಜೆರಾಕ್ಸ್ ಅಂಗಡಿಗಳನ್ನು ಸಹ ಮುಚ್ಚಿಸಲಾಗುತ್ತದೆ ಎಂದರು. ಜಿಲ್ಲೆಯ 18 ಕೇಂದ್ರಗಳಲ್ಲಿ ದ್ವಿತೀಯ ಪಿಯು ಪರೀಕ್ಷೆ ನಡೆಯಲಿದೆ, ಮಡಿಕೇರಿ ತಾಲ್ಲೂಕಿನ 5, ಸೋಮವಾರಪೇಟೆ ತಾಲ್ಲೂಕಿನ 8 ಮತ್ತು ವಿರಾಜಪೇಟೆ ತಾಲ್ಲೂಕಿನ 5 ಕಡೆಗಳಲ್ಲಿ ಪರೀಕ್ಷೆ ನಡೆಯಲಿದೆ ಎಂದು ತಿಳಿಸಿದರು. ಪರೀಕ್ಷಾ ಕೇಂದ್ರಗಳ ವಿವರ: ಮಡಿಕೇರಿ ತಾಲ್ಲೂಕಿನ ಮಡಿಕೇರಿ ಸರ್ಕಾರಿ ಪದವಿ ಪೂರ್ವ ಕಾಲೇಜು, ಸಂತ ಮೈಕಲರ ಪದವಿ ಪೂರ್ವ ಕಾಲೇಜು, ನಾಪೋಕ್ಲು ಸರ್ಕಾರಿ ಪದವಿ ಪೂರ್ವ ಕಾಲೇಜು, ಮೂರ್ನಾಡು ಪದವಿ ಪೂರ್ವ ಕಾಲೇಜು, ಚೇರಂಬಾಣೆ ಅರುಣ ಪದವಿ ಪೂರ್ವ ಕಾಲೇಜು.
ಸೋಮವಾರಪೇಟೆ ತಾಲ್ಲೂಕಿನ ಸೋಮವಾರಪೇಟೆ ಸರ್ಕಾರಿ ಪದವಿ ಪೂರ್ವ ಕಾಲೇಜು, ಸುಂಟಿಕೊಪ್ಪ, ಕುಶಾಲನಗರ, ಕೂಡಿಗೆ ಹಾಗೂ ನೆಲ್ಯಹುದಿಕೇರಿ ಸರ್ಕಾರಿ ಪದವಿ ಪೂರ್ವ ಕಾಲೇಜುಗಳು, ಕೊಡ್ಲಿಪೇಟೆ ಮತ್ತು ಶನಿವಾರಂತೆ ಪದವಿ ಪೂರ್ವ ಕಾಲೇಜು ಹಾಗೂ ಕುಶಾಲನಗರ ಕನ್ನಡ ಭಾರತಿ ಪದವಿ ಪೂರ್ವ ಕಾಲೇಜುಗಳಲ್ಲಿ ಪರೀಕ್ಷೆ ನಡೆಯಲಿದೆ.  ವಿರಾಜಪೇಟೆ ತಾಲ್ಲೂಕಿನಲ್ಲಿ ವಿರಾಜಪೇಟೆ ಸರ್ಕಾರಿ ಪದವಿ ಪೂರ್ವ ಕಾಲೇಜು. ಸಂತ ಅನ್ನಮ್ಮ ಪದವಿ ಪೂರ್ವ ಕಾಲೇಜು, ವಿರಾಜಪೇಟೆ ಕಾವೇರಿ ಪದವಿ ಪೂರ್ವ ಕಾಲೇಜು, ಪೊನ್ನಂಪೇಟೆ ಸರ್ಕಾರಿ ಪದವಿ ಪೂರ್ವ ಕಾಲೇಜು, ಗೋಣಿಕೊಪ್ಪ ವಿದ್ಯಾನಿಕೇತನ ಪದವಿ ಪೂರ್ವ ಕಾಲೇಜು ಈ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕರು ಮಾಹಿತಿ ನೀಡಿದರು. ಜಿಲ್ಲಾ ಖಜಾನಾಧಿಕಾರಿ ರಘುನಾಥ್, ಭಾಗಮಂಡಲ ಕಾವೇರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಕೆ.ಜೆ.ದಿವಾಕರ, ಕ್ಷೇತ್ರ ಶಿಕ್ಷಣಾಧಿಕಾರಿ ಕೃಷ್ಣಪ್ಪ, ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಸದಾಶಿವ ಪಲ್ಲೇದ್, ಸಿದ್ಧರಾಜು ಬೆಳ್ಳಯ್ಯ, ನಾಗರಾಜು ಅವರು ಮಾತನಾಡಿದರು.
ಪ್ರಾದೇಶಿಕ ಸಾರಿಗೆ ಅಧಿಕಾರಿ ಸತೀಶ್, ತಹಶೀಲ್ದಾರರಾದ ಶ್ರೀಧರ, ಕಿರಣ್ ಗೌರಯ್ಯ, ಪೊಲೀಸ್ ಇನ್ಸ್‌ ಪೆಕ್ಟರ್ ರಾಜು, ವಿವಿಧ ಕಾಲೇಜಿನ ಪ್ರಾಂಶುಪಾಲರು, ಮೇಲ್ವಿಚಾರಕರು ಇತರರು ಇದ್ದರು.

Follow us Follow us
Share. WhatsApp Facebook Twitter Email Telegram Copy Link

Related Posts

*ವಿರಾಜಪೇಟೆ : ಗಣೇಶ ವಿಸರ್ಜನೆ ಶೋಭಾಯಾತ್ರೆ ಸಂದರ್ಭ ವಿದ್ಯುತ್ ಅವಘಡ : ಐವರಿಗೆ ಗಾಯ : ಇಬ್ಬರ ಸ್ಥಿತಿ ಗಂಭೀರ*

ಸೆಪ್ಟೆಂಬರ್ 26, 2026

*ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕೊಡಗಿನಲ್ಲಿ ಜನಜಾಗೃತಿ : 50 ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ವಾಹನ ಜಾಥಾ*

ಸೆಪ್ಟೆಂಬರ್ 25, 2026

*ಪ್ರತಾಪ್ ಸಿಂಹ ಹೇಳಿಕೆ ವಿರುದ್ಧ ಮಡಿಕೇರಿಯಲ್ಲಿ ಪ್ರತಿಭಟನೆ*

ಸೆಪ್ಟೆಂಬರ್ 25, 2026

*ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕೊಡಗಿನಲ್ಲಿ ಜನಜಾಗೃತಿ : 50 ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ವಾಹನ ಜಾಥಾ*

ಸೆಪ್ಟೆಂಬರ್ 25, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಸೆ.25 NEWS DESK : ದೇಶದ ಅಖಂಡತೆ, ಏಕತೆ ಹಾಗೂ ಆಂತರಿಕ ಸುರಕ್ಷತೆ ಕುರಿತು ಜನಜಾಗೃತಿ ಮೂಡಿಸುವ ಉದ್ದೇಶದಿಂದ…

*ಪ್ರತಾಪ್ ಸಿಂಹ ಹೇಳಿಕೆ ವಿರುದ್ಧ ಮಡಿಕೇರಿಯಲ್ಲಿ ಪ್ರತಿಭಟನೆ*

ಸೆಪ್ಟೆಂಬರ್ 25, 2026

*ಗುತ್ತಿಗೆ ನೌಕರರನ್ನು ಖಾಯಂಗೊಳಿಸಬೇಕು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹ : ಮಡಿಕೇರಿಯಲ್ಲಿ ಪ್ರತಿಭಟನೆ*

ಸೆಪ್ಟೆಂಬರ್ 25, 2026

*ಕಡಿಯತನಾಡ್‌ನ ಕುರಿತು ಬೃಹತ್ ಅಧ್ಯಯನ ಕೃತಿ ಬಿಡುಗಡೆ : ಮೊದಲ ಬಾರಿಗೆ ನಾಡಿನ ಸಮಗ್ರ ಅಧ್ಯಯನ : ಬೆಂಗಳೂರಿನಲ್ಲಿ ಸೆ.27 ರಂದು ಲೋಕಾರ್ಪಣೆ*

ಸೆಪ್ಟೆಂಬರ್ 25, 2026

*ಸೆ.27ರಂದು ಸ್ವಚ್ಛತಾ ಕಾರ್ಯಕ್ರಮ*

ಸೆಪ್ಟೆಂಬರ್ 25, 2026

*ಸುಂದರನಗರದಲ್ಲಿ ಬೀದಿ ನಾಯಿಗಳ ಹಾವಳಿ : ವೃದ್ಧರ ಮೇಲೆ ದಾಳಿ : ಕ್ರಮಕ್ಕೆ ಒತ್ತಾಯ*

ಸೆಪ್ಟೆಂಬರ್ 25, 2026

*ಮಡಿಕೇರಿ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಸಮಗ್ರ ಉಚಿತ ಆರೋಗ್ಯ ಶಿಬಿರ*

ಸೆಪ್ಟೆಂಬರ್ 25, 2026

*ಸಿವಿಲ್ ಪೊಲೀಸ್ ಕಾನ್‌ಸ್ಟೇಬಲ್ ನೇಮಕಾತಿ: ಸೆ.28ರಿಂದ ದೈಹಿಕ ಪರೀಕ್ಷೆ ಆರಂಭ*

ಸೆಪ್ಟೆಂಬರ್ 25, 2026

*ಮಡಿಕೇರಿ ನಗರ ಯುವ ಕಾಂಗ್ರೆಸ್ ನೂತನ ಪದಾಧಿಕಾರಿಗಳ ಅಧಿಕಾರ ಸ್ವೀಕಾರ*

ಸೆಪ್ಟೆಂಬರ್ 25, 2026

*ವಿರಾಜಪೇಟೆ ಅರಣ್ಯ ಇಲಾಖೆಗೆ ನೂತನ ಬೊಲೆರೋ ವಾಹನ ಹಸ್ತಾಂತರ*

ಸೆಪ್ಟೆಂಬರ್ 25, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.