Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಯುಕೊ ಅಧ್ಯಕ್ಷ ಮಂಜು ಚಿಣ್ಣಪ್ಪಗೆ ಸನ್ಮಾನ*
  • *ವಿಶ್ವ ಪರಂಪರೆಯ ತಾಣಗಳು ನಮ್ಮ ಇತಿಹಾಸದ ಸಾಕ್ಷಿಗಳು : ಬರಹ : ಗೀತಾಂಜಲಿ ಎನ್.ಎಂ. ಸೋಮವಾರಪೇಟೆ*
  • *3000 ಉದ್ಯೋಗ ಸೃಷ್ಟಿ: ಕೊಡಗು ಉದ್ಯೋಗ ಮೇಳಕ್ಕೆ ಚಾಲನೆ*
  • *ಕುಶಾಲನಗರ ಬಲಿಜ ಸಮಾಜದಿಂದ ಕೈವಾರ ತಾತಯ್ಯ ಜಯಂತಿ ಆಚರಣೆ*
  • *ಕುಶಾಲನಗರ : ವಿವೇಕಾನಂದ ವಿದ್ಯಾಸಂಸ್ಥೆಯಲ್ಲಿ ವಿದ್ಯಾರ್ಥಿಗಳಿಗೆ ಅಗ್ನಿ ‌ಅವಘಡಗಳ‌ ಕುರಿತು ವಿಶೇಷ ಕಾರ್ಯಾಗಾರ*
  • *ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಏ.19 ರಂದು ನಡೆಯುವ ಪಂದ್ಯಗಳು*
  • ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಏ.18 ರಂದು ಗೆಲುವು ಸಾಧಿಸಿದ ತಂಡಗಳು
  • *ಮಡಿಕೇರಿ : ರಾಜ್ಯ ಮಟ್ಟದ “ಮೊಗೇರ ಕ್ರೀಡಾಕೂಟ” ಉದ್ಘಾಟನೆ*
  • *ಕಾಂಗ್ರೆಸ್ ಮುಖವಾಡ ಕಳಚಿಬಿದ್ದಿದೆ : ಕೊಡಗು ಬಿಜೆಪಿ ಅಸಮಾಧಾನ*
  • *ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಕ್ರಮವಹಿಸಿ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಸೂಚನೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕೊಡಗು ವಿಶ್ವವಿದ್ಯಾಲಯದ ಬಿ.ಎಡ್ ಪದವಿ ಮತ್ತು ಸ್ನಾತಕ ಪದವಿಗಳ ಫಲಿತಾಂಶ ಪ್ರಕಟ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕೊಡಗು ವಿಶ್ವವಿದ್ಯಾಲಯದ ಬಿ.ಎಡ್ ಪದವಿ ಮತ್ತು ಸ್ನಾತಕ ಪದವಿಗಳ ಫಲಿತಾಂಶ ಪ್ರಕಟ*

ಫೆಬ್ರವರಿ 17, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಕುಶಾಲನಗರ ಫೆ.17 NEWS DESK : ಕೊಡಗು ವಿಶ್ವವಿದ್ಯಾಲಯದ ದ್ವಿತೀಯ ಮತ್ತು ಚತುರ್ಥ ಸೆಮಿಸ್ಟರ್ ಬಿ.ಎಡ್ ಪದವಿ ಮತ್ತು ಸ್ನಾತಕ ಪದವಿ ಪರೀಕ್ಷಾ ಫಲಿತಾಂಶವನ್ನು ಪರೀಕ್ಷಾ ಫಲಿತಾಂಶವನ್ನು ಕೊಡಗು ವಿಶ್ವವಿದ್ಯಾಲಯದ ಕುಲಪತಿಗಳಾದ ಪ್ರೊ. ಅಶೋಕ ಸಂಗಪ್ಪ ಆಲೂರ ಅವರು ಆನ್ಲೈನ್ ತಂತ್ರಾಂಶದಲ್ಲಿ ವಿಶ್ವವಿದ್ಯಾಲಯದ ವೆಬ್‌ಸೈಟ್‌ನಲ್ಲಿ ಅಧಿಕೃತವಾಗಿ ಪ್ರಕಟಿಸಿದರು. ಕೊಡಗು ವಿಶ್ವವಿದ್ಯಾಲಯದ ಘಟಕ ಮತ್ತು ಸಂಯೋಜಿತ ಮಹಾವಿದ್ಯಾಲಯಗಳ 2025-26ನೇ ಶೈಕ್ಷಣಿಕ ಸಾಲಿನ ಬಿಕಾಂ, ಬಿಬಿಎ ಮತ್ತು ಬಿಎಸ್ಸಿ ಪದವಿಗಳ ಪ್ರಥಮ/ತೃತೀಯ/ ಪಂಚಮ ಸೆಮಿಸ್ಟರ್‌ನ (ಆವರ್ತನ ಮತ್ತು ಪುನರಾವರ್ತನ) ಪರೀಕ್ಷೆಗಳು ಮುಗಿದ ನಾಲ್ಕು ದಿನಗಳಲ್ಲಿ ಫಲಿತಾಂಶವನ್ನು ಪ್ರಕಟಿಸುವ ಮೂಲಕ ಅತೀ ಕಡಿಮೆ ಅವಧಿಯಲ್ಲಿ ಪರೀಕ್ಷೆಗಳನ್ನು ನಡೆಸಿ ಫಲಿತಾಂಶವನ್ನು ಪ್ರಕಟಿಸಿದ ಕೀರ್ತಿಗೆ ಕೊಡಗು ವಿಶ್ವವಿದ್ಯಾಲಯ ಭಾಜನವಾಗಿದೆ. ರಾಜ್ಯ ಶಿಕ್ಷಣ ನೀತಿ -2024/ರಾಷ್ಟ್ರೀಯ ಶಿಕ್ಷಣ ನೀತಿ 2020 ರ ಅಡಿಯಲ್ಲಿ ನಡೆದ ಪ್ರಥಮ/ ತೃತೀಯ/ಪಂಚಮ ವರ್ಷದ ಸ್ನಾತಕ ಪದವಿ ಪರೀಕ್ಷಾ ಫಲಿತಾಂಶವನ್ನು ಅತೀ ಶೀಘ್ರವಾಗಿ ಪ್ರಕಟಿಸಿದೆ. ವಿಶ್ವವಿದ್ಯಾಲಯವು ಸ್ನಾತಕ ಪದವಿ ಪರೀಕ್ಷೆಗಳು ಮುಗಿದ 20 ದಿನಗಳೊಳಗೆ ಫಲಿತಾಂಶವನ್ನು ಪ್ರಕಟಿಸಬೇಕು ಎಂಬ ಯುಜಿಸಿಯ ನಿರ್ದೇಶನದಂತೆ ಕೇವಲ ನಾಲ್ಕು ದಿನಗಳಲ್ಲಿ ಫಲಿತಾಂಶವನ್ನು ಪ್ರಕಟಿಸುವ ಮೂಲಕ ಕೊಡಗು ವಿಶ್ವವಿದ್ಯಾಲಯವು ಈ ಹಿಂದೆಯೂ ಸಾರ್ವಜನಿಕ ಮೆಚ್ಚುಗೆಗೆ ಪಾತ್ರವಾಗಿತ್ತು. ಇದೇ ಜನವರಿ ಮತ್ತು ಫೆಬ್ರವರಿ ತಿಂಗಳಲ್ಲಿ ನಡೆದ ಪರೀಕ್ಷೆಯಲ್ಲಿ ಕೊಡಗಿನ 22 ಕಾಲೇಜುಗಳ ಸುಮಾರು 6000 ವಿದ್ಯಾರ್ಥಿಗಳು ಹಾಜರಾಗಿದ್ದರು. ಹಾಗೆಯೇ ಫೆಬ್ರವರಿ ತಿಂಗಳಲ್ಲಿ ನಡೆದ ಪರೀಕ್ಷೆಯಲ್ಲಿ ವಿರಾಜಪೇಟೆಯ ಸರ್ವೋದಯ ಬಿ.ಎಡ್ ಕಾಲೇಜು ಮತ್ತು ಪೊನ್ನಂಪೇಟೆಯ ಸಾಯಿ ಶಂಕರ್ ಕಾಲೇಜುಗಳ ಒಟ್ಟು 95 ವಿದ್ಯಾರ್ಥಿಗಳು ಹಾಜರಾಗಿದ್ದರು. ಬಿಎಡ್ ಪರೀಕ್ಷೆ ಮುಗಿದು ಎಂಟು ದಿನಗಳಲ್ಲಿ ಮತ್ತು ಮೌಲ್ಯಮಾಪನ ಪೂರ್ಣವಾಗಿ ಒಂದು ದಿನದಲ್ಲಿ ಅತೀ ಶೀಘ್ರವಾಗಿ ಪ್ರಕಟಿಸಿದ ಹಿರಿಮೆಗೆ ಪಾತ್ರವಾಗಿದೆ. ಕೊಡಗು ವಿಶ್ವವಿದ್ಯಾಲಯದ ಸ್ನಾತಕ ವಿದ್ಯಾರ್ಥಿಗಳ ಸೆಮಿಸ್ಟರ್ ಪರೀಕ್ಷೆಗಳ ಮೌಲ್ಯಮಾಪನ ಪ್ರಕ್ರಿಯೆಯನ್ನು ಘಟಕ ಮಹಾವಿದ್ಯಾಲಯವಾಗಿರುವ ಮಡಿಕೇರಿಯ ಫೀಲ್ಡ್ ಮಾರ್ಷಲ್ ಕೆ ಎಂ ಕಾರ್ಯಪ್ಪ ಕಾಲೇಜಿನಲ್ಲಿ ವ್ಯವಸ್ಥಿತವಾಗಿ ಮೌಲ್ಯಮಾಪನ ಕೇಂದ್ರವನ್ನು ಸಿದ್ಧಪಡಿಸಿಕೊಂಡು, ಜಿಲ್ಲೆಯ ವಿವಿಧ ಸ್ನಾತಕ ಪದವಿ ಕಾಲೇಜುಗಳ ವಿಷಯವಾರು ಮೌಲ್ಯಮಾಪಕರು ಸಕ್ರಿಯವಾಗಿ ಭಾಗವಹಿಸಿ ಮೌಲ್ಯಮಾಪನ ಕಾರ್ಯವನ್ನು ಯಶಸ್ವಿಯಾಗಿ ನಿರ್ವಹಿಸಿದ್ದಾರೆ. ಸೆಮಿಸ್ಟರ್ ಪರೀಕ್ಷೆಗಳಿಗೆ ಸಂಬಂಧಿಸಿದ ಎಲ್ಲಾ ಪ್ರಕ್ರಿಯೆಗಳನ್ನು ಸಮಗ್ರ ವಿಶ್ವವಿದ್ಯಾಲಯ ಮತ್ತು ಕಾಲೇಜು ನಿರ್ವಹಣಾ ವ್ಯವಸ್ಥೆ (UUMS) ಮೂಲಕ ಯಶಸ್ವಿಯಾಗಿ ನಡೆಸಲಾಗಿದ್ದು, ಬಿಎಡ್ ಮತ್ತು ಸ್ನಾತಕ ಪದವಿ ವಿದ್ಯಾರ್ಥಿಗಳು ಪರೀಕ್ಷಾ ಫಲಿತಾಂಶವನ್ನು UUCMS ಅಥವಾ ಕೊಡಗು ವಿಶ್ವವಿದ್ಯಾಲಯದ ವೆಬ್‌ಸೈಟ್ KUK.Karnataka.gov.in ಮುಖಾಂತರ ವಿದ್ಯಾರ್ಥಿಗಳ ನೋಂದಣಿ ಸಂಖ್ಯೆ ಮೂಲಕ ನೋಡಲು ಲಭ್ಯವಿದೆ. ಇದೇ ಸಂದರ್ಭದಲ್ಲಿ ಕೊಡಗು ವಿಶ್ವವಿದ್ಯಾಲಯದ ಕುಲಸಚಿವರು (ಮೌಲ್ಯಮಾಪನ) ಆದ ಡಾ. ಸುರೇಶ್ ಎಂ., ಕೊಡಗು ವಿವಿ ಪರೀಕ್ಷಾಂಗದ ವಿಶೇಷಾಧಿಕಾರಿ ದ ಪ್ರೊ. ರವಿಶಂಕರ್ ಎಂ ಎನ್, uucms ಸಿಬ್ಬಂದಿಗಳು ಮತ್ತು ಉಪನ್ಯಾಸಕರುಗಳು ಉಪಸ್ಥಿತರಿದ್ದರು.

 

 

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಯುಕೊ ಅಧ್ಯಕ್ಷ ಮಂಜು ಚಿಣ್ಣಪ್ಪಗೆ ಸನ್ಮಾನ*

ಏಪ್ರಿಲ್ 18, 2026

*ವಿಶ್ವ ಪರಂಪರೆಯ ತಾಣಗಳು ನಮ್ಮ ಇತಿಹಾಸದ ಸಾಕ್ಷಿಗಳು : ಬರಹ : ಗೀತಾಂಜಲಿ ಎನ್.ಎಂ. ಸೋಮವಾರಪೇಟೆ*

ಏಪ್ರಿಲ್ 18, 2026

*3000 ಉದ್ಯೋಗ ಸೃಷ್ಟಿ: ಕೊಡಗು ಉದ್ಯೋಗ ಮೇಳಕ್ಕೆ ಚಾಲನೆ*

ಏಪ್ರಿಲ್ 18, 2026

*ವಿಶ್ವ ಪರಂಪರೆಯ ತಾಣಗಳು ನಮ್ಮ ಇತಿಹಾಸದ ಸಾಕ್ಷಿಗಳು : ಬರಹ : ಗೀತಾಂಜಲಿ ಎನ್.ಎಂ. ಸೋಮವಾರಪೇಟೆ*

ಏಪ್ರಿಲ್ 18, 2026 ಇತ್ತೀಚಿನ ಸುದ್ದಿಗಳು ಕರ್ನಾಟಕ ವಿಶೇಷ

(*ಬರಹ : ಗೀತಾಂಜಲಿ ಎನ್.ಎಂ ಸೋಮವಾರಪೇಟೆ ) ಮಡಿಕೇರಿ ಏ.18 NEWS DESK : ಮಾನವ ಸಮಾಜದ ಬೆಳವಣಿಗೆ ಕೇವಲ…

*3000 ಉದ್ಯೋಗ ಸೃಷ್ಟಿ: ಕೊಡಗು ಉದ್ಯೋಗ ಮೇಳಕ್ಕೆ ಚಾಲನೆ*

ಏಪ್ರಿಲ್ 18, 2026

*ಕುಶಾಲನಗರ ಬಲಿಜ ಸಮಾಜದಿಂದ ಕೈವಾರ ತಾತಯ್ಯ ಜಯಂತಿ ಆಚರಣೆ*

ಏಪ್ರಿಲ್ 18, 2026

*ಕುಶಾಲನಗರ : ವಿವೇಕಾನಂದ ವಿದ್ಯಾಸಂಸ್ಥೆಯಲ್ಲಿ ವಿದ್ಯಾರ್ಥಿಗಳಿಗೆ ಅಗ್ನಿ ‌ಅವಘಡಗಳ‌ ಕುರಿತು ವಿಶೇಷ ಕಾರ್ಯಾಗಾರ*

ಏಪ್ರಿಲ್ 18, 2026

*ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಏ.19 ರಂದು ನಡೆಯುವ ಪಂದ್ಯಗಳು*

ಏಪ್ರಿಲ್ 18, 2026

ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಏ.18 ರಂದು ಗೆಲುವು ಸಾಧಿಸಿದ ತಂಡಗಳು

ಏಪ್ರಿಲ್ 18, 2026

*ಮಡಿಕೇರಿ : ರಾಜ್ಯ ಮಟ್ಟದ “ಮೊಗೇರ ಕ್ರೀಡಾಕೂಟ” ಉದ್ಘಾಟನೆ*

ಏಪ್ರಿಲ್ 18, 2026

*ಕಾಂಗ್ರೆಸ್ ಮುಖವಾಡ ಕಳಚಿಬಿದ್ದಿದೆ : ಕೊಡಗು ಬಿಜೆಪಿ ಅಸಮಾಧಾನ*

ಏಪ್ರಿಲ್ 18, 2026

*ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಕ್ರಮವಹಿಸಿ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಸೂಚನೆ*

ಏಪ್ರಿಲ್ 18, 2026

*ಮಹಿಳೆಯರಿಗೆ ಅಧಿಕಾರ ನೀಡುವುದನ್ನು ಸಹಿಸದ ಕಾಂಗ್ರೆಸ್ : ಸೋಮವಾರಪೇಟೆ ಬಿಜೆಪಿ ಅಸಮಾಧಾನ*

ಏಪ್ರಿಲ್ 18, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.