Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಯುಕೊ ಅಧ್ಯಕ್ಷ ಮಂಜು ಚಿಣ್ಣಪ್ಪಗೆ ಸನ್ಮಾನ*
  • *ವಿಶ್ವ ಪರಂಪರೆಯ ತಾಣಗಳು ನಮ್ಮ ಇತಿಹಾಸದ ಸಾಕ್ಷಿಗಳು : ಬರಹ : ಗೀತಾಂಜಲಿ ಎನ್.ಎಂ. ಸೋಮವಾರಪೇಟೆ*
  • *3000 ಉದ್ಯೋಗ ಸೃಷ್ಟಿ: ಕೊಡಗು ಉದ್ಯೋಗ ಮೇಳಕ್ಕೆ ಚಾಲನೆ*
  • *ಕುಶಾಲನಗರ ಬಲಿಜ ಸಮಾಜದಿಂದ ಕೈವಾರ ತಾತಯ್ಯ ಜಯಂತಿ ಆಚರಣೆ*
  • *ಕುಶಾಲನಗರ : ವಿವೇಕಾನಂದ ವಿದ್ಯಾಸಂಸ್ಥೆಯಲ್ಲಿ ವಿದ್ಯಾರ್ಥಿಗಳಿಗೆ ಅಗ್ನಿ ‌ಅವಘಡಗಳ‌ ಕುರಿತು ವಿಶೇಷ ಕಾರ್ಯಾಗಾರ*
  • *ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಏ.19 ರಂದು ನಡೆಯುವ ಪಂದ್ಯಗಳು*
  • ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಏ.18 ರಂದು ಗೆಲುವು ಸಾಧಿಸಿದ ತಂಡಗಳು
  • *ಮಡಿಕೇರಿ : ರಾಜ್ಯ ಮಟ್ಟದ “ಮೊಗೇರ ಕ್ರೀಡಾಕೂಟ” ಉದ್ಘಾಟನೆ*
  • *ಕಾಂಗ್ರೆಸ್ ಮುಖವಾಡ ಕಳಚಿಬಿದ್ದಿದೆ : ಕೊಡಗು ಬಿಜೆಪಿ ಅಸಮಾಧಾನ*
  • *ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಕ್ರಮವಹಿಸಿ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಸೂಚನೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»ಕೊಡಗು : ಅರೆಕಾಲಿಕ ಕಾನೂನು ಸ್ವಯಂ ಸೇವಕರಿಗೆ ತರಬೇತಿ ಕಾರ್ಯಾಗಾರ : ನೊಂದವರಿಗೆ ಕಾನೂನಿನ ಮಾಹಿತಿ ನೀಡಿ : ನ್ಯಾಯಾಧೀಶ ಹೊಸಮನಿ ಸಲಹೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಕೊಡಗು : ಅರೆಕಾಲಿಕ ಕಾನೂನು ಸ್ವಯಂ ಸೇವಕರಿಗೆ ತರಬೇತಿ ಕಾರ್ಯಾಗಾರ : ನೊಂದವರಿಗೆ ಕಾನೂನಿನ ಮಾಹಿತಿ ನೀಡಿ : ನ್ಯಾಯಾಧೀಶ ಹೊಸಮನಿ ಸಲಹೆ*

ಫೆಬ್ರವರಿ 18, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link


ಮಡಿಕೇರಿ ಫೆ.18 NEWS DESK : ಆಸಹಾಯಕರು ಹಾಗೂ ಮುಖ್ಯವಾಹಿನಿಯಿಂದ ದೂರವಿರುವ ನಾಗರಿಕರಿಗೆ ಕಾನೂನಿನ ಮಾಹಿತಿ ನೀಡುವುದು ಅರೆಕಾಲಿಕ ಕಾನೂನು ಸ್ವಯಂಸೇವಕರ ಕರ್ತವ್ಯವಾಗಿದೆ ಎಂದು ಪ್ರಧಾನ ಮತ್ತು ಜಿಲ್ಲಾ ಸೆಷನ್ಸ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಅಧ್ಯಕ್ಷರಾದ ಹೊಸಮನಿ ಪುಂಡಲಿಕ ಅವರು ತಿಳಿಸಿದ್ದಾರೆ. ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಔಟಲಾ ಇಂಡಿಯಾ ಸಂಸ್ಥೆ ಹಾಗೂ ಮಡಿಕೇರಿ ವಕೀಲರ ಸಂಘ ಇವರ ಸಂಯುಕ್ತ ಆಶ್ರಯದಲ್ಲಿ ಅರೆಕಾಲಿಕ ಕಾನೂನು ಸ್ವಯಂ ಸೇವಕರಿಗೆ ನಗರದ ಜಿಲ್ಲಾ ನ್ಯಾಯಾಲಯ ಆವರಣದಲ್ಲಿ ನಾಲ್ಕು ದಿನಗಳ ಕಾಲ ಏರ್ಪಡಿಸಲಾಗಿರುವ ತರಬೇತಿ ಕಾರ್ಯಾಗಾರಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಕಾನೂನು ಸೇವಾ ಪ್ರಾಧಿಕಾರದ ಜೊತೆ ಸೇರಿ ನೊಂದವರಿಗೆ ಕಾನೂನಿನ ಮಾಹಿತಿ ನೀಡುವುದು ಅರೆಕಾಲಿಕ ಕಾನೂನು ಸ್ವಯಂ ಸೇವಕರ ಜವಾಬ್ದಾರಿಯಾಗಿದ್ದು, ಆ ನಿಟ್ಟಿನಲ್ಲಿ ತಮ್ಮ ಕರ್ತವ್ಯವನ್ನು ನಿರ್ವಹಿಸಿ ಉತ್ತಮ ಸಮಾಜ ನಿರ್ಮಾಣಕ್ಕೆ ಕೈಜೋಡಿಸುವಂತೆ ಅವರು ಸಲಹೆ ಮಾಡಿದರು. ನಿಸರ್ಗದತ್ತ ಹಾಗೂ ಮನುಷ್ಯ ಮಾಡಿದ ಈ ಎರಡು ರೀತಿಯ ಕಾನೂನನ್ನು ಕಾಣಬಹುದಾಗಿದ್ದು, ನೈಸರ್ಗಿಕವಾಗಿ ದೊರೆಯುವ ಗಾಳಿ, ನೀರು, ಹಾಗೆಯೇ ಮನುಷ್ಯ ಮಾಡಿದ ಕಾನೂನು ಸಂವಿಧಾನಾತ್ಮಕವಾಗಿದೆ. ಆ ನಿಟ್ಟಿನಲ್ಲಿ ಪ್ರತಿಯೊಬ್ಬ ಮನುಷ್ಯನಿಗೆ ಗಾಳಿ, ನೀರು ಪ್ರಕೃತಿದತ್ತವಾಗಿ ದೊರೆಯಲಿದೆ. ಜೊತೆಗೆ ಮನುಷ್ಯನಿಗೆ ಹಸಿವು ನೀಗಿಸುವುದು ಅತ್ಯಗತ್ಯ ಎಂದು ಅವರು ವಿವರಿಸಿದರು. ಮನುಷ್ಯ ಮಾಡಿದ ಕಾನೂನು ನಿಯಮಗಳನ್ನು ಸಂವಿಧಾನ ವ್ಯವಸ್ಥೆಯಲ್ಲಿ ಅನುಸರಿಸಬೇಕಿದ್ದು, ಆ ದಿಸೆಯಲ್ಲಿ ಎರಡು ರೀತಿಯ ಕಾನೂನುನನ್ನು ಪಾಲಿಸಬೇಕಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರು ನುಡಿದರು. ನಿಯಮಗಳನ್ನು ಪಾಲಿಸದಿದ್ದರೆ ಸಂಕಷ್ಟಕ್ಕೆ ಒಳಗಾಗಬೇಕಾಗುತ್ತದೆ. ಆದ್ದರಿಂದ ಕಾನೂನಿನ ಅರಿವು ಇಲ್ಲದವರಿಗೆ ಮತ್ತು ನೊಂದವರಿಗೆ ಕಾನೂನಿನ ಮಾಹಿತಿ ನೀಡುವುದೇ ಅರೆಕಾಲಿಕ ಕಾನೂನು ಸ್ವಯಂ ಸೇವಕರ ಜವಾಬ್ದಾರಿಯಾಗಿದೆ. ಆ ನಿಟ್ಟಿನಲ್ಲಿ ಕಾನೂನು ಸೇವೆಗಳ ಬಗ್ಗೆ ಮಾಹಿತಿ ನೀಡುವಂತಾಗಬೇಕು ಎಂದು ಹೊಸಮನಿ ಪುಂಡಲೀಕ ಅವರು ಹೇಳಿದರು. ಮಡಿಕೇರಿ ವಕೀಲರ ಸಂಘದ ಅಧ್ಯಕ್ಷರಾದ ಸಿ.ಟಿ.ಜೋಸೆಫ್ ಅವರು ಮಾತನಾಡಿ ಕಾನೂನು ಸೇವಾ ಪ್ರಾಧಿಕಾರದಿಂದ ಮಾಹಿತಿ ಪಡೆದು ಇತರರಿಗೂ ಮಾಹಿತಿ ನೀಡುವಂತಾಗಬೇಕು. ಆ ದಿಸೆಯಲ್ಲಿ ಸಮಾಜದಲ್ಲಿ ಉತ್ತಮ ವಾತಾವರಣ ನಿರ್ಮಿಸುವಲ್ಲಿ ಅರೆಕಾಲಿಕ ಕಾನೂನು ಸ್ವಯಂ ಸೇವಕರ ಪಾತ್ರ ಹೆಚ್ಚಿನದ್ದಾಗಿದೆ ಎಂದರು. ಹಿರಿಯ ವಕೀಲರಾದ ಕೆ.ಪಿ.ಬಾಲಸುಬ್ರಹ್ಮಣ್ಣಂ ಅವರು ಮಾತನಾಡಿ ಕಾನೂನು ಒಂದು ದೊಡ್ಡ ವಿಸ್ತಾರವಿದ್ದಂತೆ, ಅರಿವೇ ಗುರುವೇ ಎಂಬಂತೆ ಎಲ್ಲರೂ ಉತ್ತಮ ಬದುಕು ನಡೆಸುವಂತಾಗಬೇಕು ಎಂದು ಅವರು ಸಲಹೆ ಮಾಡಿದರು. ಕಾನೂನಿನ ಬೆಳಕು ಎಲ್ಲೆಡೆ ಇರಬೇಕು. ಸ್ವಲ್ಪವಾದರೂ ಕಾನೂನಿನ ಜ್ಞಾನವಿದ್ದರೆ ಇತರರಿಗೆ ನೋವು ಉಂಟು ಆಗದಂತೆ ನಡೆದುಕೊಳ್ಳಬಹುದು ಎಂದು ಅಭಿಪ್ರ್ರಾಯ ವ್ಯಕ್ತಪಡಿಸಿದರು. ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ಶುಭ ಅವರು ಮಾತನಾಡಿ ಗ್ರಾಮೀಣ ಜನರಿಗೆ ನ್ಯಾಯದಾನ ದೊರೆಯಬೇಕು ಎಂಬ ಉದ್ದೇಶದಿಂದ ಅರೆಕಾಲಿಕ ಕಾನೂನು ಸ್ವಯಂ ಸೇವಕರಿಗೆ ತರಬೇತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಅವರು ತಿಳಿಸಿದರು. ಜಿಲ್ಲೆಯಲ್ಲಿ ಅರೆಕಾಲಿಕ ಸ್ವಯಂ ಸೇವಕರು 97 ಮಂದಿ ನೋಂದಣಿ ಮಾಡಿದ್ದು, ಇವರಲ್ಲಿ 70 ಕ್ಕೂ ಹೆಚ್ಚು ಮಂದಿ ಕಾರ್ಯಾಗಾರಕ್ಕೆ ಆಗಮಿಸಿದ್ದಾರೆ ಎಂದರು. ವಕೀಲರಾದ ಎಂ,ಎ.ನಿರಂಜನ್ ಅವರು ಕೌಟುಂಬಿಕ ಕಾನೂನುಗಳ ಕುರಿತು ಮಾತನಾಡಿದರು. 1ನೇ ಅಪರ ಜಿಲ್ಲಾ ಮತ್ತು ಸೆಷನ್ ನ್ಯಾಯಾಧೀಶರಾದ ಜಿ.ಸುರೇಂದ್ರ ಅವರು ಪರಿಶಿಷ್ಟ ಜಾತಿ ಪರಿಶಿಷ್ಟ ಜಾತಿ ಮತ್ತು ಪಂಗಡದವರ ಮೇಲೆ ದೌರ್ಜನ್ಯ ಕಾಯ್ದೆ ಕುರಿತು ಮಾತನಾಡಿದರು. ಔಟಲಾ ಇಂಡಿಯಾ ಸಂಸ್ಥೆಯುವರು ಕಾನೂನು ಅರಿವು ಕುರಿತು ಮಾತನಾಡಿದರು. ಕೌಟುಂಬಿಕ ನ್ಯಾಯಾಲಯದ ಪ್ರಧಾನ ನ್ಯಾಯಾಧೀಶರಾದ ಸಿ.ಕೆ.ಬಸವರಾಜ್, ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಸಿ.ಜೆ.ಎಂ ಸಿ.ವೀರಭದ್ರಯ್ಯ, ಪ್ರಧಾನ ಸಿವಿಲ್ ನ್ಯಾಯಾಧೀಶರು ಮತ್ತು ಜೆಎಂಎಫ್‍ಸಿ ಡಿ.ಎಸ್.ವಿನುತ, ತರಬೇತುದಾರರಾದ ಮೀಮಾನ್ಸ ಸಿಂಗ್, ಶಮಾ ಡಿ., ನಿಹಾರಿಕಾ ನಾಯ್ಡು, ಕಾನೂನು ನೆರವು ಅಭಿರಕ್ಷಕರಾದ ಮೈಮುನಾ, ಕಾನೂನು ಸೇವಾ ಪ್ರಾಧಿಕಾರದ ಆಡಳಿತ ಸಹಾಯಕರಾದ ಜಯಪ್ಪ ಇತರರು ಇದ್ದರು.

 

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಯುಕೊ ಅಧ್ಯಕ್ಷ ಮಂಜು ಚಿಣ್ಣಪ್ಪಗೆ ಸನ್ಮಾನ*

ಏಪ್ರಿಲ್ 18, 2026

*ವಿಶ್ವ ಪರಂಪರೆಯ ತಾಣಗಳು ನಮ್ಮ ಇತಿಹಾಸದ ಸಾಕ್ಷಿಗಳು : ಬರಹ : ಗೀತಾಂಜಲಿ ಎನ್.ಎಂ. ಸೋಮವಾರಪೇಟೆ*

ಏಪ್ರಿಲ್ 18, 2026

*3000 ಉದ್ಯೋಗ ಸೃಷ್ಟಿ: ಕೊಡಗು ಉದ್ಯೋಗ ಮೇಳಕ್ಕೆ ಚಾಲನೆ*

ಏಪ್ರಿಲ್ 18, 2026

*ವಿಶ್ವ ಪರಂಪರೆಯ ತಾಣಗಳು ನಮ್ಮ ಇತಿಹಾಸದ ಸಾಕ್ಷಿಗಳು : ಬರಹ : ಗೀತಾಂಜಲಿ ಎನ್.ಎಂ. ಸೋಮವಾರಪೇಟೆ*

ಏಪ್ರಿಲ್ 18, 2026 ಇತ್ತೀಚಿನ ಸುದ್ದಿಗಳು ಕರ್ನಾಟಕ ವಿಶೇಷ

(*ಬರಹ : ಗೀತಾಂಜಲಿ ಎನ್.ಎಂ ಸೋಮವಾರಪೇಟೆ ) ಮಡಿಕೇರಿ ಏ.18 NEWS DESK : ಮಾನವ ಸಮಾಜದ ಬೆಳವಣಿಗೆ ಕೇವಲ…

*3000 ಉದ್ಯೋಗ ಸೃಷ್ಟಿ: ಕೊಡಗು ಉದ್ಯೋಗ ಮೇಳಕ್ಕೆ ಚಾಲನೆ*

ಏಪ್ರಿಲ್ 18, 2026

*ಕುಶಾಲನಗರ ಬಲಿಜ ಸಮಾಜದಿಂದ ಕೈವಾರ ತಾತಯ್ಯ ಜಯಂತಿ ಆಚರಣೆ*

ಏಪ್ರಿಲ್ 18, 2026

*ಕುಶಾಲನಗರ : ವಿವೇಕಾನಂದ ವಿದ್ಯಾಸಂಸ್ಥೆಯಲ್ಲಿ ವಿದ್ಯಾರ್ಥಿಗಳಿಗೆ ಅಗ್ನಿ ‌ಅವಘಡಗಳ‌ ಕುರಿತು ವಿಶೇಷ ಕಾರ್ಯಾಗಾರ*

ಏಪ್ರಿಲ್ 18, 2026

*ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಏ.19 ರಂದು ನಡೆಯುವ ಪಂದ್ಯಗಳು*

ಏಪ್ರಿಲ್ 18, 2026

ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಏ.18 ರಂದು ಗೆಲುವು ಸಾಧಿಸಿದ ತಂಡಗಳು

ಏಪ್ರಿಲ್ 18, 2026

*ಮಡಿಕೇರಿ : ರಾಜ್ಯ ಮಟ್ಟದ “ಮೊಗೇರ ಕ್ರೀಡಾಕೂಟ” ಉದ್ಘಾಟನೆ*

ಏಪ್ರಿಲ್ 18, 2026

*ಕಾಂಗ್ರೆಸ್ ಮುಖವಾಡ ಕಳಚಿಬಿದ್ದಿದೆ : ಕೊಡಗು ಬಿಜೆಪಿ ಅಸಮಾಧಾನ*

ಏಪ್ರಿಲ್ 18, 2026

*ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಕ್ರಮವಹಿಸಿ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಸೂಚನೆ*

ಏಪ್ರಿಲ್ 18, 2026

*ಮಹಿಳೆಯರಿಗೆ ಅಧಿಕಾರ ನೀಡುವುದನ್ನು ಸಹಿಸದ ಕಾಂಗ್ರೆಸ್ : ಸೋಮವಾರಪೇಟೆ ಬಿಜೆಪಿ ಅಸಮಾಧಾನ*

ಏಪ್ರಿಲ್ 18, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.