ಮಡಿಕೇರಿ, NEWS DESK ಫೆ.19:-ವಿದ್ಯುತ್ ಇಲಾಖೆಗೆ ಸಂಬಂಧಿಸಿದಂತೆ ಕಾರ್ಯ ಮತ್ತು ಪಾಲನೆ ಕ್ಷೇತ್ರ ಮಟ್ಟದಲ್ಲಿ ಗ್ರಾಹಕರಿಗೆ/ ಸಾರ್ವಜನಿಕರಿಗೆ/ ಸಿಬ್ಬಂದಿಗಳಿಗೆ ವಿದ್ಯುತ್ ಸೇವೆಗಳ ಹಾಗೂ ವಿದ್ಯುತ್ ಸುರಕ್ಷಿತಾ ಅರಿವನ್ನು ಮೂಡಿಸಲು ಅರಿವು ಸಪ್ತಾಹ ಕಾರ್ಯಕ್ರಮವನ್ನು ಉಪ ವಿಭಾಗ ಮಟ್ಟದಲ್ಲಿ ಆಯೋಜಿಸಲು ನಿರ್ಧರಿಸಿದ್ದು, ಕುಶಾಲನಗರ ಉಪ ವಿಭಾಗ ವ್ಯಾಪ್ತಿಯಲ್ಲಿ ವಿದ್ಯುತ್ ಅವಘಡ ಹಾಗೂ ಸುರಕ್ಷಿತಾ ಕ್ರಮಗಳ ಬಗ್ಗೆ ಗ್ರಾಹಕರಲ್ಲಿ ಅರಿವು ಮೂಡಿಸುವ ಸಲುವಾಗಿ ಫೆಬ್ರವರಿ, 21 ರಂದು ಬೆಳಗ್ಗೆ 11 ಗಂಟೆಗೆ ಕುಶಾಲನಗರ ಉಪ ವಿಭಾಗ ಕಚೇರಿ ಆವರಣದಲ್ಲಿ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ಚಾವಿಸನಿನಿ ಕಾರ್ಯ ಮತ್ತು ಪಾಲನೆ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ರಾಮಚಂದ್ರ ಅವರು ತಿಳಿಸಿದ್ದಾರೆ.







