Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕೊಡಗಿನಲ್ಲಿ ಜನಜಾಗೃತಿ : 50 ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ವಾಹನ ಜಾಥಾ*
  • *ಪ್ರತಾಪ್ ಸಿಂಹ ಹೇಳಿಕೆ ವಿರುದ್ಧ ಮಡಿಕೇರಿಯಲ್ಲಿ ಪ್ರತಿಭಟನೆ*
  • *ಗುತ್ತಿಗೆ ನೌಕರರನ್ನು ಖಾಯಂಗೊಳಿಸಬೇಕು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹ : ಮಡಿಕೇರಿಯಲ್ಲಿ ಪ್ರತಿಭಟನೆ*
  • *ಕಡಿಯತನಾಡ್‌ನ ಕುರಿತು ಬೃಹತ್ ಅಧ್ಯಯನ ಕೃತಿ ಬಿಡುಗಡೆ : ಮೊದಲ ಬಾರಿಗೆ ನಾಡಿನ ಸಮಗ್ರ ಅಧ್ಯಯನ : ಬೆಂಗಳೂರಿನಲ್ಲಿ ಸೆ.27 ರಂದು ಲೋಕಾರ್ಪಣೆ*
  • *ಸೆ.27ರಂದು ಸ್ವಚ್ಛತಾ ಕಾರ್ಯಕ್ರಮ*
  • *ಸುಂದರನಗರದಲ್ಲಿ ಬೀದಿ ನಾಯಿಗಳ ಹಾವಳಿ : ವೃದ್ಧರ ಮೇಲೆ ದಾಳಿ : ಕ್ರಮಕ್ಕೆ ಒತ್ತಾಯ*
  • *ಮಡಿಕೇರಿ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಸಮಗ್ರ ಉಚಿತ ಆರೋಗ್ಯ ಶಿಬಿರ*
  • *ಸಿವಿಲ್ ಪೊಲೀಸ್ ಕಾನ್‌ಸ್ಟೇಬಲ್ ನೇಮಕಾತಿ: ಸೆ.28ರಿಂದ ದೈಹಿಕ ಪರೀಕ್ಷೆ ಆರಂಭ*
  • *ಮಡಿಕೇರಿ ನಗರ ಯುವ ಕಾಂಗ್ರೆಸ್ ನೂತನ ಪದಾಧಿಕಾರಿಗಳ ಅಧಿಕಾರ ಸ್ವೀಕಾರ*
  • *ವಿರಾಜಪೇಟೆ ಅರಣ್ಯ ಇಲಾಖೆಗೆ ನೂತನ ಬೊಲೆರೋ ವಾಹನ ಹಸ್ತಾಂತರ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಹೊಸೂರು ಮಂಡಲದಲ್ಲಿ ಹಿಂದೂ ಸಂಗಮ ಬೃಹತ್ ಸಮಾವೇಶ : ಹಿಂದೂ ಸಮಾಜ ಸಂಘಟಿತವಾದರೆ ಮಾತ್ರ ಸದೃಢ ಮತ್ತು ಸುರಕ್ಷಿತ ರಾಷ್ಟ್ರ ನಿರ್ಮಾಣ ಸಾಧ್ಯ : ಮೋಹನ್ ಗೌಡ* *ಶೋಭಾಯಾತ್ರೆಯಲ್ಲಿ ಕೇಸರಿ ಶಲ್ಯ ಧರಿಸಿ ಬಾವುಟ ಹಿಡಿದು ಮೆರವಣಿಗೆ ಸಾಗಿದ ಹಿಂದೂ ಬಾಂಧವರು*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಹೊಸೂರು ಮಂಡಲದಲ್ಲಿ ಹಿಂದೂ ಸಂಗಮ ಬೃಹತ್ ಸಮಾವೇಶ : ಹಿಂದೂ ಸಮಾಜ ಸಂಘಟಿತವಾದರೆ ಮಾತ್ರ ಸದೃಢ ಮತ್ತು ಸುರಕ್ಷಿತ ರಾಷ್ಟ್ರ ನಿರ್ಮಾಣ ಸಾಧ್ಯ : ಮೋಹನ್ ಗೌಡ* *ಶೋಭಾಯಾತ್ರೆಯಲ್ಲಿ ಕೇಸರಿ ಶಲ್ಯ ಧರಿಸಿ ಬಾವುಟ ಹಿಡಿದು ಮೆರವಣಿಗೆ ಸಾಗಿದ ಹಿಂದೂ ಬಾಂಧವರು*

ಫೆಬ್ರವರಿ 22, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಸಿದ್ದಾಪುರ, NEWS DESK  ಫೆ.22: ಹಿಂದೂ ಸಮಾಜ ಸಂಘಟಿತವಾದರೆ ಮಾತ್ರ ಸದೃಢ ಮತ್ತು ಸುರಕ್ಷಿತ ರಾಷ್ಟ್ರ ನಿರ್ಮಾಣ ಸಾಧ್ಯ ಎಂದು ಹಿಂದೂ ಜನ ಜಾಗೃತಿ ಸಮಿತಿಯ ರಾಜ್ಯ ವಕ್ತಾರ ಮೋಹನ್ ಗೌಡ ತಿಳಿಸಿದ್ದಾರೆ. ಹಿಂದೂ ಸಂಗಮ ಆಯೋಜನಾ ಸಮಿತಿ ವಿರಾಜಪೇಟೆ ತಾಲ್ಲೂಕು, ಹೊಸೂರು ಮಂಡಲ ವತಿಯಿಂದ ಭಾನುವಾರ ಆಯೋಜಿಸಲಾಗಿದ್ದ ಹಿಂದೂ ಸಂಗಮ ಅಂಗವಾಗಿ ಆಯೋಜಿಸಿದ್ದ ಬೃಹತ್ ಶೋಭಾಯಾತ್ರೆ ಹಾಗೂ ಸಭಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ದಿಕ್ಸೂಚಿ ಭಾಷಣ ಮಾಡಿದರು. ಭಾರತೀಯರು ಜಗತ್ತಿಗೆ ಸಂಸ್ಕೃತಿ, ನಾಗರಿಕತೆ ಹಾಗೂ ಬದುಕುವ ಕಲೆ ಹೇಳಿಕೊಟ್ಟಿದ್ದು, ನಮ್ಮ ದೇಶ ಉಳಿಯಬೇಕೆಂದರೇ ನಮ್ಮ ಹಿಂದೂ ಧರ್ಮ ಉಳಿಯಬೇಕು. ಆ ನಿಟ್ಟಿನಲ್ಲಿ ಹಿಂದೂಗಳು ಸಂಘಟಿತರಾಗಬೇಕು ಎಂದರು.

ಸಭಾ ಕಾರ್ಯಕ್ರಮಕ್ಕೂ ಮುನ್ನ ಭದ್ರಕಾಳಿ ದೇವಾಲಯದಿಂದ ಶ್ರೀ ಮಹಾದೇವರ ದೇವಸ್ಥಾನದವರೆಗೂ ಭವ್ಯ ಶೋಭಾಯಾತ್ರೆ ನಡೆಯಿತು. ಶ್ರೀ ಭದ್ರಕಾಳಿ ದೇವಸ್ಥಾನದಿಂದ ಆರಂಭಗೊಂಡ ಶೋಭಾ ಯಾತ್ರೆಗೆ ಭಾರತಾಂಬೆಯ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಹಿಂದೂ ಸಮಾಜದ ಮುಖಂಡರು ಚಾಲನೆ ನೀಡಿದರು. ನೂರಾರು ಸಂಖ್ಯೆಯಲ್ಲಿ ಆಗಮಿಸಿದ ಹಿಂದೂ ಬಾಂಧವರು ಕೇಸರಿ ಶಲ್ಯ ಧರಿಸಿ ಬಾವುಟ ಹಿಡಿದು ಮೆರವಣಿಗೆ ಸಾಗಿದರು. ಚಂಡೆವಾದ್ಯ, ಕೊಡಗಿನ ವಾಲಗ, ಗೊಂಬೆ ಕುಣಿತ ಸಮ್ಮುಖದಲ್ಲಿ ಕಳಸ ಹೊತ್ತು ಮಹಿಳೆಯರು ಮೆರವಣಿಗೆಯಲ್ಲಿ ಭಾಗಿಯಾಗಿ ಮೆರಗು ನೀಡಿದರೆ. ಸುವೃತ ನಾಟ್ಯಾಲಯದ ವಿದ್ಯಾರ್ಥಿಗಳ ಭಜನಾ ನೃತ್ಯ ಗಮನ ಸೆಳೆಯಿತು. ಬಳಿಕ ಮಹಾದೇವರ ದೇವಾಲಯ ಆವರಣದಲ್ಲಿರುವ ಸಮುದಾಯ ಭವನದಲ್ಲಿ ನಡೆದ ಸಭಾ ಕಾರ್ಯಕ್ರಮದಲ್ಲಿ ಹಿಂದೂ ಸಮಾಜದ ಮುಖಂಡರುಗಳು ಮಾತನಾಡಿ “ಪ್ರತಿ ಹಿಂದೂ ನಾವೆಲ್ಲ ಒಂದು” ಎಂಬ ಪರಿಕಲ್ಪನೆಯಲ್ಲಿ ಒಗ್ಗೂಡಬೇಕಾಗಿದೆ’ ಎಂದು ಕರೆ ನೀಡಿದರು.

ಕಾರ್ಯಕ್ರಮದಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಪ್ರಮುಖ ಸುಬ್ರಮಣ್ಯ ಭರಣಿಕೆರೆ, ಮೊಳ್ಳೇರ ಸುಭಾಷ್ ಭೀಮಯ್ಯ, ಮೊಳ್ಳೇರ ರತ್ನ ಪೂಣಚ್ಚ, ಮೊಳ್ಳೇರ ಸದಾ ಅಪ್ಪಚ್ಚು, ಕತ್ರಿ ಕೊಲ್ಲಿ ದರ್ಶನ್, ಪ್ರಭು ಉತ್ತಪ್ಪ ಗೊಟ್ಟಡ, ಚೋವಂಡ ದರ್ಶನ್, ನಾರಾಯಣ, ತಂಗರಾಜ್, ಹೆಚ್ ಪ್ರಕಾಶ್, ಲಕ್ಷ್ಮಿ. ಹೆಚ್ ಸೇರಿದಂತೆ ಹಿಂದೂ ಸಮಾಜದ ಪ್ರಮುಖರು ಹಾಗೂ ಕಾರ್ಯಕರ್ತರು, ಮಹಿಳೆಯರು ಮತ್ತು ಮಕ್ಕಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು.

ಕಾರ್ಯಕ್ರಮವನ್ನು ಗ್ರಾ.ಪಂ ಸದಸ್ಯೆ ಸುಶೀಲಾ.ಟಿ ಹಾಗೂ ಲೇಖಕಿ ಹಾಗೂ ಸಾಹಿತಿ ಪಂದ್ಯಂಡ ರೇಣುಕಾ ಸೋಮಯ್ಯ ನಿರೂಪಿಸಿದರೆ. ಕೊಲ್ಲೀರ ಗೋಪಿ ಚಿನ್ನಪ್ಪ ಸ್ವಾಗತಿಸಿ ಕೊಲ್ಲೀರ ಧರ್ಮಜ ವಂದಿಸಿದರು. ಸಭಾ ಕಾರ್ಯಕ್ರಮದ ಬಳಿಕ ನಡೆದ ಮಕ್ಕಳ ಸಾಂಸ್ಕೃತಿಕ ನೃತ್ಯ ವೈಭವ ಆಕರ್ಷಣೀಯವಾಗಿತು.

ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದವರಿಗೆ ನೀರು ,ತಂಪು ಪಾನಿಯ ವಿತರಿಸಲಾಯಿತು. ಸಭಾ ಕಾರ್ಯಕ್ರಮದ ನಂತರ ನೆರೆದಿದ್ದವರಿಗೆ ಮಧ್ಯಾಹ್ನದ ಊಟಕ್ಕೆ ವ್ಯವಸ್ಥೆ ಮಾಡಲಾಗಿತ್ತು.

ಬಾಕ್ಸ್ (ಬೈಟ್)

ಹೊಸೂರು ಮಂಡಲದಿಂದ ಆಯೋಜಿಸಲಾಗಿದ್ದ ಹಿಂದೂ ಸಂಗಮ ಶೋಭಾಯಾತ್ರೆ ಹಾಗೂ ಸಭಾ ಕಾರ್ಯಕ್ರಮ ಯಶಸ್ವಿಯಾಗಿದೆ.ಕಳೆದ ಹತ್ತು ದಿನಗಳಿಂದ ಮನೆ ಮನೆಗೆ ತೆರಳಿ ಸಮಾಜ ಬಾಂಧವರನ್ನು ಆಹ್ವಾನಿಸಿ, ಪ್ರಮುಖ ಬೀದಿಗಳಲ್ಲಿ ಬಂಟಿಂಗ್ಸ್ ಹಾಗೂ ಫ್ಲೆಕ್ಸ್ ಗಳನ್ನ ಅಳವಡಿಸಿ ಶಿಸ್ತುಬದ್ಧವಾಗಿ ಕಾರ್ಯಕ್ರಮ ನಡೆಯಲು ಸಹಕರಿಸಿದ ಸರ್ವರಿಗೂ ಮನದಾಳದ ಧನ್ಯವಾದಗಳು. ಧರ್ಮದ ರಕ್ಷಣೆ ಪ್ರತಿಯೊಬ್ಬ ಹಿಂದೂವಿನ ಹೊಣೆ, ನಾವೆಲ್ಲ ಹಿಂದೂ ನಾವೆಲ್ಲ ಒಂದು ಎಂಬ ಭಾವನೆ ಪ್ರತಿಯೊಬ್ಬರಲ್ಲೂ ಮೂಡಬೇಕು.

ಕೊಲ್ಲೀರ ಗೋಪಿ ಚಿನ್ನಪ್ಪ, ಸಂಚಾಲಕರು ಹಿಂದೂ ಸಂಗಮ ಕಾರ್ಯಕ್ರಮ ಸಂಚಾಲಕರು ಹೊಸೂರು ಮಂಡಲ

Follow us Follow us
Share. WhatsApp Facebook Twitter Email Telegram Copy Link

Related Posts

*ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕೊಡಗಿನಲ್ಲಿ ಜನಜಾಗೃತಿ : 50 ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ವಾಹನ ಜಾಥಾ*

ಸೆಪ್ಟೆಂಬರ್ 25, 2026

*ಪ್ರತಾಪ್ ಸಿಂಹ ಹೇಳಿಕೆ ವಿರುದ್ಧ ಮಡಿಕೇರಿಯಲ್ಲಿ ಪ್ರತಿಭಟನೆ*

ಸೆಪ್ಟೆಂಬರ್ 25, 2026

*ಗುತ್ತಿಗೆ ನೌಕರರನ್ನು ಖಾಯಂಗೊಳಿಸಬೇಕು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹ : ಮಡಿಕೇರಿಯಲ್ಲಿ ಪ್ರತಿಭಟನೆ*

ಸೆಪ್ಟೆಂಬರ್ 25, 2026

*ಪ್ರತಾಪ್ ಸಿಂಹ ಹೇಳಿಕೆ ವಿರುದ್ಧ ಮಡಿಕೇರಿಯಲ್ಲಿ ಪ್ರತಿಭಟನೆ*

ಸೆಪ್ಟೆಂಬರ್ 25, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

  ಮಡಿಕೇರಿ ಸೆ.25 NEWS DESK : ದಲಿತ ಸಂಘಟನೆಗಳು ಹಾಗೂ ಡಾ.ಬಿ.ಆರ್.ಅಂಬೇಡ್ಕರ್ ಅವರ ವಿಚಾರಧಾರೆ ಕುರಿತು ಮಾಜಿ ಸಂಸದ…

*ಗುತ್ತಿಗೆ ನೌಕರರನ್ನು ಖಾಯಂಗೊಳಿಸಬೇಕು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹ : ಮಡಿಕೇರಿಯಲ್ಲಿ ಪ್ರತಿಭಟನೆ*

ಸೆಪ್ಟೆಂಬರ್ 25, 2026

*ಕಡಿಯತನಾಡ್‌ನ ಕುರಿತು ಬೃಹತ್ ಅಧ್ಯಯನ ಕೃತಿ ಬಿಡುಗಡೆ : ಮೊದಲ ಬಾರಿಗೆ ನಾಡಿನ ಸಮಗ್ರ ಅಧ್ಯಯನ : ಬೆಂಗಳೂರಿನಲ್ಲಿ ಸೆ.27 ರಂದು ಲೋಕಾರ್ಪಣೆ*

ಸೆಪ್ಟೆಂಬರ್ 25, 2026

*ಸೆ.27ರಂದು ಸ್ವಚ್ಛತಾ ಕಾರ್ಯಕ್ರಮ*

ಸೆಪ್ಟೆಂಬರ್ 25, 2026

*ಸುಂದರನಗರದಲ್ಲಿ ಬೀದಿ ನಾಯಿಗಳ ಹಾವಳಿ : ವೃದ್ಧರ ಮೇಲೆ ದಾಳಿ : ಕ್ರಮಕ್ಕೆ ಒತ್ತಾಯ*

ಸೆಪ್ಟೆಂಬರ್ 25, 2026

*ಮಡಿಕೇರಿ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಸಮಗ್ರ ಉಚಿತ ಆರೋಗ್ಯ ಶಿಬಿರ*

ಸೆಪ್ಟೆಂಬರ್ 25, 2026

*ಸಿವಿಲ್ ಪೊಲೀಸ್ ಕಾನ್‌ಸ್ಟೇಬಲ್ ನೇಮಕಾತಿ: ಸೆ.28ರಿಂದ ದೈಹಿಕ ಪರೀಕ್ಷೆ ಆರಂಭ*

ಸೆಪ್ಟೆಂಬರ್ 25, 2026

*ಮಡಿಕೇರಿ ನಗರ ಯುವ ಕಾಂಗ್ರೆಸ್ ನೂತನ ಪದಾಧಿಕಾರಿಗಳ ಅಧಿಕಾರ ಸ್ವೀಕಾರ*

ಸೆಪ್ಟೆಂಬರ್ 25, 2026

*ವಿರಾಜಪೇಟೆ ಅರಣ್ಯ ಇಲಾಖೆಗೆ ನೂತನ ಬೊಲೆರೋ ವಾಹನ ಹಸ್ತಾಂತರ*

ಸೆಪ್ಟೆಂಬರ್ 25, 2026

*ಕೊಡಗು ಜಿಲ್ಲಾ ವಾಣಿಜ್ಯೋದ್ಯಮಿಗಳ ವಿವಿಧೋದ್ದೇಶ ಸಹಕಾರ ಸಂಘದ 25ನೇ ವಾರ್ಷಿಕ ಮಹಾಸಭೆ*

ಸೆಪ್ಟೆಂಬರ್ 25, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.