
ಮಡಿಕೇರಿ NEWS DESK ಫೆ.24 : ದಕ್ಷಿಣ ಭಾರತ ಮಿಕ್ಸ್ ಬಾಕ್ಸಿಂಗ್ ಸಂಸ್ಥೆಯ ಉಪಾಧ್ಯಕ್ಷರಾಗಿ ಮಾದಾಪುರದ ಎನ್.ಸಿ.ಸುದರ್ಶನ್ ಆಯ್ಕೆಯಾಗಿದ್ದಾರೆ. ಕರ್ನಾಟಕ ರಾಜ್ಯ ಮಿಕ್ಸ್ ಬಾಕ್ಸಿಂಗ್ ಸಂಸ್ಥೆಯ ಪ್ರಧಾನ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸುತ್ತಿರುವ ಎನ್.ಸಿ.ಸುದರ್ಶನ್ ಅವರು ಕೊಡಗು ಜಿಲ್ಲೆಯ ನೂರಾರು ವಿದ್ಯಾರ್ಥಿಗಳಿಗೆ ಮಿಕ್ಸ್ ಬಾಕ್ಸಿಂಗ್ ತರಬೇತಿಯನ್ನು ನೀಡಿದ್ದಾರೆ. ಅಲ್ಲದೆ ರಾಜ್ಯ ಹಾಗೂ ರಾಷ್ಟ್ರಮಟ್ಟದಲ್ಲಿ ಪದಕಗಳನ್ನು ಗೆಲ್ಲಲು ಕಾರಣಕರ್ತರಾಗಿದ್ದಾರೆ.
ಇಂಡಿಯನ್ ಮಿಕ್ಸ್ ಬಾಕ್ಸಿಂಗ್ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ರಾಕೇಶ್ ಎಸ್. ಮಾಸ್ಕರ್ ಅವರು ಎನ್.ಸಿ.ಸುದರ್ಶನ್ ಅವರನ್ನು ಉಪಾಧ್ಯಕ್ಷರನ್ನಾಗಿ ಆಯ್ಕೆ ಮಾಡಿ ಆದೇಶ ಪತ್ರ ನೀಡಿದ್ದಾರೆ.








