Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಕ್ರಮವಹಿಸಿ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಸೂಚನೆ*
  • *ಮಹಿಳೆಯರಿಗೆ ಅಧಿಕಾರ ನೀಡುವುದನ್ನು ಸಹಿಸದ ಕಾಂಗ್ರೆಸ್ : ಸೋಮವಾರಪೇಟೆ ಬಿಜೆಪಿ ಅಸಮಾಧಾನ*
  • *ನಮ್ಮ ಧ್ವನಿಯ ಆರೈಕೆ : ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ‘ವಿಶ್ವ ಧ್ವನಿ’ ದಿನಾಚರಣೆ*
  • *ಸುಂಟಿಕೊಪ್ಪದಲ್ಲಿ ಕೊಡವ ಪುಸ್ತಕ ಪತ್ತಾಯ ಸ್ಥಾಪನೆ*
  • *ಫೀ.ಮಾ.ಕಾರ್ಯಪ್ಪ ಕಾಲೇಜ್ ನಲ್ಲಿ ಕೌಶಲ್ಯ ಕಾರ್ಯಾಗಾರ*
  • *ಆಟೋ ಹಾಗೂ ಮಾಂದಲ್ ಪಟ್ಟಿ ಬಾಡಿಗೆ ವಾಹನ ದರ ಪರಿಷ್ಕರಣೆ : ಉಪ ಸಮಿತಿ ರಚನೆಗೆ ನಿರ್ಧಾರ*
  • *ವಾಂಡರರ್ಸ್ ಶಿಬಿರ : ಕ್ರೀಡೆಯಲ್ಲಿ ಅಭ್ಯಾಸ ನಿರಂತರವಾಗಿರಬೇಕು :  ಒಲಂಪಿಯನ್ ಮನೆಯಪಂಡ ಸೋಮಯ್ಯ*
  • *ಚೆಟ್ಟಳ್ಳಿಯಲ್ಲಿ ವಿಜ್ಞಾನ ಆಧಾರಿತ ಪೋಷಕಾಂಶ ಜಾಗೃತಿ ಕಾರ್ಯಕ್ರಮ : ಸಾವಯವ ಕೃಷಿ, ಜೈವಿಕ ಕೀಟನಾಶಕ ಹಾಗೂ ಆಧುನಿಕ ತೋಟಗಾರಿಕಾ ತಂತ್ರಜ್ಞಾನ ಅಳವಡಿಕೆಗೆ ಒತ್ತು*
  • *ವಿರಾಜಪೇಟೆಯಲ್ಲಿ ರಕ್ತದಾನ ಹಾಗೂ ಉಚಿತ ಆರೋಗ್ಯ ತಪಾಸಣಾ ಶಿಬಿರ : ರಕ್ತದಾನವು ಸಾಮಾಜಿಕ ಜವಾಬ್ದಾರಿಯಾಗಿದೆ : ಡಾ.ಕರುಂಬಯ್ಯ*
  • *ಸಿದ್ದಾಪುರ : ಏ.18 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಜಿಲ್ಲೆಯ ಯುವ ಪ್ರತಿಭೆಗಳು ರಾಷ್ಟ್ರ ಮಟ್ಟದಲ್ಲಿ ಗುರುತಿಸಿಕೊಳ್ಳಲಿ: ಕುಲಪತಿ ಪ್ರೊ. ಅಶೋಕ ಸಂಗಪ್ಪ ಆಲೂರ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಜಿಲ್ಲೆಯ ಯುವ ಪ್ರತಿಭೆಗಳು ರಾಷ್ಟ್ರ ಮಟ್ಟದಲ್ಲಿ ಗುರುತಿಸಿಕೊಳ್ಳಲಿ: ಕುಲಪತಿ ಪ್ರೊ. ಅಶೋಕ ಸಂಗಪ್ಪ ಆಲೂರ*

ಫೆಬ್ರವರಿ 25, 20261 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ, NEWS DESK ಫೆ.25: ಕ್ರಿಯಾಶೀಲತೆ, ನೈಪುಣ್ಯತೆ, ಕಠಿಣ ಪರಿಶ್ರಮ ರೂಢಿಸಿಕೊಂಡಿರುವ ಕೊಡಗು ಜಿಲ್ಲೆಯ ಯುವ ಪ್ರತಿಭೆಗಳು ರಾಷ್ಟ್ರ ಮಟ್ಟದಲ್ಲಿ ತಮ್ಮ ಪ್ರತಿಭೆಯನ್ನು ಪ್ರದರ್ಶಿಸಬೇಕು. ಈ ನಿಟ್ಟಿನಲ್ಲಿ ವಿಕಸಿತ ಭಾರತ ಯುವ ಸಂಸತ್ತು 2026 ಅಡಿಯಲ್ಲಿ ವಿಶ್ವವಿದ್ಯಾಲಯದಲ್ಲಿ ಆಯೋಜಿಸಿರುವ ಜಿಲ್ಲಾ ಮಟ್ಟದ ಸ್ಪರ್ಧೆಗಳಲ್ಲಿ ಭಾಗವಹಿಸಿ ರಾಜ್ಯ ಮತ್ತು ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಲಿ ಎಂದು ಕೊಡಗು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ಅಶೋಕ ಸಂಗಪ್ಪ ಆಲೂರ ಅವರು ವಿದ್ಯಾರ್ಥಿಗಳಿಗೆ ಅಭಿನಂದಿಸಿದರು.

ಕೊಡಗು ವಿಶ್ವವಿದ್ಯಾನಿಲಯದ ಜ್ಞಾನ ಕಾವೇರಿ ಆವರಣದಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಭಾರತ ಸರ್ಕಾರ ಮತ್ತು ಕೊಡಗು  ವಿಶ್ವವಿದ್ಯಾಲಯ, ಹಾಗೂ ರಾಷ್ಟ್ರೀಯ ಸೇವಾ ಯೋಜನೆ ಘಟಕ, ಕೊಡಗು ಇವರ ಸಂಯುಕ್ತಾಶ್ರಯದಲ್ಲಿ ವಿಕಸಿತ ಭಾರತ ಯುವ ಸಂಸತ್ತು 2026 ಅಡಿಯಲ್ಲಿ ಹಮ್ಮಿಕೊಂಡಿದ್ದ ಜಿಲ್ಲಾ ಮಟ್ಟದ ಭಾಷಣ ಸ್ಪರ್ಧೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಎಲ್ಲರಲ್ಲೂ ಪ್ರತಿಭೆ ಮತ್ತು ಕೌಶಲ್ಯಗಳಿವೆ. ಆದರೆ ಅದಕ್ಕೆ ಸೂಕ್ತ ವೇದಿಕೆ ಸಿಗಬೇಕಿದೆ. ಅಂತಹ ಅಧ್ಬುತ ವೇದಿಕೆಗೆಯನ್ನು ನಮ್ಮ ಕೊಡಗು ವಿಶ್ವವಿದ್ಯಾನಿಲಯವು ಯುವಜನೆತೆಗಾಗಿ ಕಲ್ಪಿಸಿಕೊಡುವಲ್ಲಿ ಕಾರ್ಯನಿರತವಾಗಿದೆ. ಇಂತಹ ಅವಕಾಶಗಳನ್ನು ವಿದ್ಯಾರ್ಥಿಗಳು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಅವರು ತಿಳಿಸಿರು.

ವಿಶ್ವವಿದ್ಯಾಲಯದ ಕುಲಸಚಿವರು ಮೌಲ್ಯಮಾಪನ ಪ್ರೊ. ಸುರೇಶ್ ಎಂ ಅವರು ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದರು.ಕಾರ್ಯಕ್ರಮದಲ್ಲಿ ಸ್ಪರ್ಧೆಯ ತೀರ್ಪುಗಾರರಾಗಿ ಪ್ರಸ್ತುತ ಬೆಂಗಳೂರಿನ ಕುವೆಂಪು ಕಾನೂನು ಸಂಘದ ವಕೀಲರು ಮತ್ತು ನಿವೃತ್ತ ಹಿರಿಯ ನ್ಯಾಯಾಧೀಶರಾದ ಶಫೀರ್ ಅಹಮದ್ ಎ, ಏಕ್ ಭಾರತ್ ಅಬ್ಯಾನ್ ಫೌಂಡೇಶನ್‌ನ ಸ್ಥಾಪಕರು ಮತ್ತು ಅಧ್ಯಕ್ಷರಾದ ಡಾ. ಹೊಟ್ಟೆಂಗಡ ಎ ಜೋಯಪ್ಪ, ಎಚ್.ಡಿ. ಕೋಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ರಾಜ್ಯಶಾಸ್ತ್ರ ವಿಭಾಗದ ಸಹ ಪ್ರಾಧ್ಯಾಪಕರಾದ ಡಾ ಪುಟ್ಟರಾಜು ಸಿ, ಮಡಿಲು ಗ್ರಾಮಾಭಿವೃದ್ಧಿ ಸಂಸ್ಥೆಯ ಅಧ್ಯಕ್ಷರಾದ ತ್ರಿವೇಣಿ ಡಿ. ಎಂ, ಹಿರಿಯ ಪತ್ರಕರ್ತ ಮತ್ತು ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷರಾದ ಮೂರ್ತಿ ಕೆ. ಎಸ್ ಅವರು ಭಾಗವಹಿಸಿದ್ದರು.

ಕಾರ್ಯಕ್ರಮದಲ್ಲಿ ರಾಜ್ಯಶಾಸ್ತ್ರ ವಿಭಾಗದ ಉಪನ್ಯಾಸಕ ಸುದರ್ಶನ ಕೆ ಎನ್ ಸ್ವಾಗತಿಸಿದರು. ಕನ್ನಡ ಅಧ್ಯಯನ ವಿಭಾಗದ ಡಾ. ಜಮೀರ್ ಅಹಮದ್ ನಿರೂಪಿಸಿದರು. ಕೊಡಗು ರಾಷ್ಟ್ರೀಯ ಸೇವಾ ಯೋಜನೆ ಘಟಕದ ನೋಡಲ್ ಅಧಿಕಾರಿಗಳು ಡಾ. ದಯಾನಂದ ಕೆ. ಸಿ. ವಂದಿಸಿದರು.

ಸ್ಪರ್ಧೆಯಲ್ಲಿ ಕೊಡಗು ವಿಶ್ವವಿದ್ಯಾಲಯದ ಸಂಯೋಜಿತ ವಿವಿಧ ಪದವಿ ಕಾಲೇಜುಗಳಿಂದ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಅವರ ಪ್ರತಿಭೆಯ ಆಧಾರದ ಮೇಲೆ ನಿರ್ಣಾಯಕರು 5 ವಿದ್ಯಾರ್ಥಿಗಳನ್ನು ರಾಜ್ಯಮಟ್ಟದಲ್ಲಿ ಕೊಡಗು ವಿಶ್ವವಿದ್ಯಾನಿಲಯವನ್ನು ಪ್ರತಿನಿಧಿಸಲು ಆಯ್ಕೆ ಮಾಡಿದರು.

ರಾಜ್ಯಮಟ್ಟಕ್ಕೆ ಆಯ್ಕೆಯಾದ  ಕೊಡಗು ವಿಶ್ವವಿದ್ಯಾಲಯದ  ವಿದ್ಯಾರ್ಥಿಗಳು:

  1. ಬಿಕೆ ಇಶಾನಿ ದೇಚಮ್ಮ
  2. ರಕ್ಷಿತಾಬಿ ಎಸ್
  3. ಮುತ್ತಮ್ಮಎನ್ ಬಿ
  4. ದರ್ಶನ್ಬಿ ಎಂ
  5. ಮನಕೆ ಆರ್
Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಕ್ರಮವಹಿಸಿ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಸೂಚನೆ*

ಏಪ್ರಿಲ್ 18, 2026

*ಮಹಿಳೆಯರಿಗೆ ಅಧಿಕಾರ ನೀಡುವುದನ್ನು ಸಹಿಸದ ಕಾಂಗ್ರೆಸ್ : ಸೋಮವಾರಪೇಟೆ ಬಿಜೆಪಿ ಅಸಮಾಧಾನ*

ಏಪ್ರಿಲ್ 18, 2026

*ನಮ್ಮ ಧ್ವನಿಯ ಆರೈಕೆ : ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ‘ವಿಶ್ವ ಧ್ವನಿ’ ದಿನಾಚರಣೆ*

ಏಪ್ರಿಲ್ 18, 2026

*ಮಹಿಳೆಯರಿಗೆ ಅಧಿಕಾರ ನೀಡುವುದನ್ನು ಸಹಿಸದ ಕಾಂಗ್ರೆಸ್ : ಸೋಮವಾರಪೇಟೆ ಬಿಜೆಪಿ ಅಸಮಾಧಾನ*

ಏಪ್ರಿಲ್ 18, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ NEWS DESK ಏ.18 : ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮಹಿಳೆಯರಿಗೆ ಅಧಿಕಾರ ನೀಡುವುದನ್ನು ಸಹಿಸದ ಕಾಂಗ್ರೆಸ್ ಹಾಗೂ ಅದರ…

*ನಮ್ಮ ಧ್ವನಿಯ ಆರೈಕೆ : ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ‘ವಿಶ್ವ ಧ್ವನಿ’ ದಿನಾಚರಣೆ*

ಏಪ್ರಿಲ್ 18, 2026

*ಸುಂಟಿಕೊಪ್ಪದಲ್ಲಿ ಕೊಡವ ಪುಸ್ತಕ ಪತ್ತಾಯ ಸ್ಥಾಪನೆ*

ಏಪ್ರಿಲ್ 18, 2026

*ಫೀ.ಮಾ.ಕಾರ್ಯಪ್ಪ ಕಾಲೇಜ್ ನಲ್ಲಿ ಕೌಶಲ್ಯ ಕಾರ್ಯಾಗಾರ*

ಏಪ್ರಿಲ್ 18, 2026

*ಆಟೋ ಹಾಗೂ ಮಾಂದಲ್ ಪಟ್ಟಿ ಬಾಡಿಗೆ ವಾಹನ ದರ ಪರಿಷ್ಕರಣೆ : ಉಪ ಸಮಿತಿ ರಚನೆಗೆ ನಿರ್ಧಾರ*

ಏಪ್ರಿಲ್ 18, 2026

*ವಾಂಡರರ್ಸ್ ಶಿಬಿರ : ಕ್ರೀಡೆಯಲ್ಲಿ ಅಭ್ಯಾಸ ನಿರಂತರವಾಗಿರಬೇಕು :  ಒಲಂಪಿಯನ್ ಮನೆಯಪಂಡ ಸೋಮಯ್ಯ*

ಏಪ್ರಿಲ್ 17, 2026

*ಚೆಟ್ಟಳ್ಳಿಯಲ್ಲಿ ವಿಜ್ಞಾನ ಆಧಾರಿತ ಪೋಷಕಾಂಶ ಜಾಗೃತಿ ಕಾರ್ಯಕ್ರಮ : ಸಾವಯವ ಕೃಷಿ, ಜೈವಿಕ ಕೀಟನಾಶಕ ಹಾಗೂ ಆಧುನಿಕ ತೋಟಗಾರಿಕಾ ತಂತ್ರಜ್ಞಾನ ಅಳವಡಿಕೆಗೆ ಒತ್ತು*

ಏಪ್ರಿಲ್ 17, 2026

*ವಿರಾಜಪೇಟೆಯಲ್ಲಿ ರಕ್ತದಾನ ಹಾಗೂ ಉಚಿತ ಆರೋಗ್ಯ ತಪಾಸಣಾ ಶಿಬಿರ : ರಕ್ತದಾನವು ಸಾಮಾಜಿಕ ಜವಾಬ್ದಾರಿಯಾಗಿದೆ : ಡಾ.ಕರುಂಬಯ್ಯ*

ಏಪ್ರಿಲ್ 17, 2026

*ಸಿದ್ದಾಪುರ : ಏ.18 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ*

ಏಪ್ರಿಲ್ 17, 2026

*ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5729 ಪ್ರಕರಣಗಳು ಇತ್ಯರ್ಥ*

ಏಪ್ರಿಲ್ 17, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.