Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಬಿಟ್ಟಂಗಾಲದಲ್ಲಿ ಹಿಂದೂ ಸಂಗಮ ಕಾರ್ಯಕ್ರಮ*
  • *ಮೂರ್ನಾಡು : ಹಿಂದೂ ಸಂಗಮ ಬದುಕಿನ ಮೌಲ್ಯಗಳನ್ನು ಕೇಂದ್ರೀಕರಿಸಿದೆ : ಸ್ವತಂತ್ರ ಬಸವಲಿಂಗ ಶಿವಯೋಗಿ ಸ್ವಾಮೀಜಿ*
  • *ಕೊಡಗು ಅಂಚೆ ವಿಭಾಗದ ಕಚೇರಿಯ ಪಿನ್‍ಕೋಡ್ ಬದಲಾವಣೆ*
  • *ಮಾ.1 ರಂದು ಶ್ರೀ ರೇಣುಕಾಚಾರ್ಯ ಜಯಂತಿ*
  • *ಅತ್ಯುತ್ತಮ ಎಸ್.ಡಿ.ಎಂ.ಸಿ ಪ್ರಶಸ್ತಿಗೆ ಗೋಣಿಕೊಪ್ಪಲು ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆ ಆಯ್ಕೆ
  • *ಮಾ.3ರಂದು ಶ್ರೀ ಯೋಗಿ ನಾರೇಯಣಿ ಯತೀಂದ್ರರ 300ನೇ ಜಯಂತ್ಯುತ್ಸವ*
  • *ಏಮ್ಸ್‌ನಲ್ಲಿ ಬೃಹತ್ ನೇಮಕಾತಿ ಆರಂಭ; 2,551 ಪೋಸ್ಟ್‌ಗಳ ಭರ್ತಿಗೆ ಅಧಿಸೂಚನೆ ಪ್ರಕಟ, ಅರ್ಜಿ ಸಲ್ಲಿಸುವ ವಿಧಾನ ಇಲ್ಲಿದೆ*
  • *ಶ್ರೀ ವನಚಾಮುಂಡೇಶ್ವರಿ ಕ್ಷೇತ್ರದಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ಬಹ್ಮಕಳಶ ಅಷ್ಟಬಂಧ ಪುನರ್ ಪ್ರತಿಷ್ಠಾಪನಾ ಮಹೋತ್ಸವ*
  • *ಬೆಂಗಳೂರು ಕರಗಕ್ಕೆ ಕ್ಷಣಗಣನೆ: ಈ ಬಾರಿಯ ಉತ್ಸವದ ಪ್ರಮುಖ ಬದಲಾವಣೆಗಳೇನು? ಇಲ್ಲಿವೆ ಕಂಪ್ಲೀಟ್ ವಿವರಗಳು!*
  • *ಸ್ಕೂಟರ್ ಡಿಕ್ಕಿ : ಕಾರು ಹರಿದು ಓರ್ವ ಸಾವು*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home»ಇತ್ತೀಚಿನ ಸುದ್ದಿಗಳು»*ರಾಷ್ಟ್ರೀಯ ಮಕ್ಕಳ ಆಯೋಗದಿಂದ ಕಾರ್ಯಾಗಾರ; ಚಿಕ್ಕ ಮಕ್ಕಳಲ್ಲಿ ಒತ್ತಡ ಹೇರದೆ ಒಳ್ಳೆಯ ಸಲಹೆ ಮಾರ್ಗದರ್ಶನ ನೀಡಿ: ಶುಭ*
ಇತ್ತೀಚಿನ ಸುದ್ದಿಗಳು

*ರಾಷ್ಟ್ರೀಯ ಮಕ್ಕಳ ಆಯೋಗದಿಂದ ಕಾರ್ಯಾಗಾರ; ಚಿಕ್ಕ ಮಕ್ಕಳಲ್ಲಿ ಒತ್ತಡ ಹೇರದೆ ಒಳ್ಳೆಯ ಸಲಹೆ ಮಾರ್ಗದರ್ಶನ ನೀಡಿ: ಶುಭ*

February 27, 20263 Mins Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ಮಡಿಕೇರಿ, NEWS DESK ಫೆ.27:-ಮಕ್ಕಳ ಮೇಲೆ ಒತ್ತಡ ಹೇರದೆ, ಒಳ್ಳೆಯ ಸಲಹೆ-ಮಾರ್ಗದರ್ಶನ ನೀಡುವುದರ ಜತೆಗೆ ಧೈರ್ಯ ತುಂಬಿ ಮಕ್ಕಳ ಮನಸ್ಸನ್ನು ಪೋಷಕರು ಗೆಲ್ಲುವಂತಾಗಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶುಭ ಅವರು ಪ್ರತಿಪಾಧಿಸಿದ್ದಾರೆ.
ಕೊಡಗು ಜಿಲ್ಲಾಡಳಿತ, ನವದೆಹಲಿಯ ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಇವರ ಸಹಯೋಗದಲ್ಲಿ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳಿಗೆ ಹಾಗೂ ವಿವಿಧ ಇಲಾಖೆಯ ಭಾಗೀಧಾರರಿಗೆ ಮಕ್ಕಳ ಹಕ್ಕುಗಳನ್ನು ಅನುಷ್ಠಾನಗೊಳಿಸಲು ಎದುರಿಸುತ್ತಿರುವ ಸಮಸ್ಯೆಗಳು ಹಾಗೂ ಮಕ್ಕಳ ಹಕ್ಕುಗಳಿಗೆ ಸಂಬಂಧಿಸಿದ ವಿವಿಧ ಕಾಯ್ದೆಗಳ ಕುರಿತು ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಶುಕ್ರವಾರ ನಡೆದ ತರಬೇತಿ ಕಾರ್ಯಾಗಾರಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.


ಎಲ್ಲರ ಕುಟುಂಬದಲ್ಲೂ ಮಕ್ಕಳ ಮೇಲೆ ಪ್ರತೀ ನಿತ್ಯ ಒಂದಲ್ಲ ಒಂದು ರೀತಿಯಲ್ಲಿ ಒತ್ತಡ ಸೃಷ್ಟಿಸುತ್ತಿದ್ದು, ಇದರಿಂದ ಮಕ್ಕಳ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ. ಆದ್ದರಿಂದ ಮಕ್ಕಳಿಗೆ ಅಗತ್ಯ ಮಾರ್ಗದರ್ಶನ ನೀಡಬೇಕು ಎಂದು ಸಲಹೆ ಮಾಡಿದರು.
ಮಕ್ಕಳಿಗೆ ಪರೀಕ್ಷೆಯ ಫಲಿತಾಂಶದ ಅಂಕ ಮತ್ತು ಅಕ್ಕಪಕ್ಕದ ವಿದ್ಯಾರ್ಥಿಗಳ ಜೊತೆ ಹೋಲಿಕೆ ಮಾಡುವುದು ಸರಿಯಲ್ಲ, ಇಂತಹ ಹೋಲಿಕೆಯು ಚಿಕ್ಕ ಮಕ್ಕಳಲ್ಲಿ ಹೆಚ್ಚಿನ ಪ್ರಭಾವ ಬೀರುತ್ತದೆ. ಆದ್ದರಿಂದ ವಿಶಾಲ ಹಾಗೂ ವಿಸ್ತಾರವಾಗಿ ಮಕ್ಕಳನ್ನು ಸ್ನೇಹಿತರಂತೆ ಕಾಣಬೇಕು ಎಂದು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಅವರು ವಿವರಿಸಿದರು.
ಎಸ್‍ಎಸ್‍ಎಲ್‍ಸಿ ಮತ್ತು ಪಿಯುಸಿ ಫಲಿತಾಂಶವೇ ಕೊನೆಯಲ್ಲ ಎಂಬ ಬಗ್ಗೆ ಮಾಹಿತಿ ನೀಡಬೇಕು. ಯಾವುದೇ ಆದರೂ ಸಹ ಮಕ್ಕಳಲ್ಲಿ ಒತ್ತಡ ಹೇರಬಾರದು. ಆ ನಿಟ್ಟಿನಲ್ಲಿ ಪೋಷಕರು ಮತ್ತು ಸಮಾಜದ ಜವಾಬ್ದಾರಿ ಹೆಚ್ಚಿನದ್ದಾಗಿದ್ದು, ಮಕ್ಕಳ ಮನಸ್ಸನ್ನು ಗೆಲ್ಲಬೇಕು ಎಂದು ಅವರು ನುಡಿದರು.
ಆಧುನಿಕ ಜಗತ್ತಿನಲ್ಲಿ ಪ್ರತಿಯೊಬ್ಬರೂ ಓಡುತ್ತಿದ್ದು, ಮಕ್ಕಳ ಭವಿಷ್ಯಕ್ಕಾಗಿ ದುಡಿಯುತ್ತಿದ್ದೇವೆ. ಆದರೆ ನೆಮ್ಮದಿ ಇದೆಯೇ ಎಂಬುದನ್ನು ಆತ್ಮವಿಮರ್ಶೆ ಮಾಡಿಕೊಳ್ಳಬೇಕು ಎಂದು ಶುಭ ಅವರು ನುಡಿದರು.


ಮಕ್ಳಳ ಮೇಲೆ ಆಗುವ ದೌರ್ಜನ್ಯ ನಿಂತಿದೆಯೇ ಎಂಬ ಬಗ್ಗೆ ಪ್ರಶ್ನೆ ಮಾಡಿಕೊಳ್ಳಬೇಕಿದೆ. ಪೋಕ್ಸೋ ಪ್ರಕರಣಗಳು ಕಡಿಮೆ ಆಗಿಲ್ಲ, ಸಾಕಷ್ಟು ಅರಿವು ಮೂಡಿಸಿದರೂ ಸಹ ಕಡಿಮೆಯಾಗುತ್ತಿಲ್ಲ. ಸಮಾಜವು ಎಲ್ಲಿ ಎಡವುತಿದೆ ಎಂಬ ಬಗ್ಗೆ ನಾವುಗಳೇ ಪ್ರಶ್ನೆ ಮಾಡಿಕೊಳ್ಳಬೇಕಿದೆ ಎಂದು ಶುಭ ಅವರು ಬೇಸರ ವ್ಯಕ್ತಪಡಿಸಿದರು.
ಮಕ್ಕಳ ಮೇಲೆ ಆಗುವ ದೌರ್ಜನ್ಯ ತಡೆಯುವಲ್ಲಿ ಆಡಳಿತ ವ್ಯವಸ್ಥೆ ಮತ್ತು ಸಮಾಜ ಮನಸ್ಸು ಹೃದಯದಿಂದ ಕೆಲಸ ಮಾಡಬೇಕು ಎಂದು ಕೋರಿದರು. ಮಕ್ಕಳು ಭವಿಷ್ಯದ ಪ್ರಜೆಗಳಾಗಿದ್ದು, ಎಲ್ಲರಂತೆ ಬದುಕುವ ಹಕ್ಕು ಇದ್ದು, ಅದರಂತೆ ನಡೆದುಕೊಳ್ಳಬೇಕು ಎಂದರು.
ಪೋಕ್ಸೋ ಪ್ರಕರಣದಲ್ಲಿ ಸಣ್ಣ ಸಣ್ಣವರೆ ಜೈಲು ಸೇರುತ್ತಿದ್ದಾರೆ. ಇದರಿಂದ ಕುಟುಂಬದ ಆರ್ಥಿಕ ನಷ್ಟ ಮತ್ತು ಮಾನಸಿಕ ಹಿಂಸೆಗೆ ತುತ್ತಾಗುತ್ತಿದ್ದಾರೆ. ಆದ್ದರಿಂದ ಇಂತಹ ಪ್ರಕರಣಗಳನ್ನು ತಡೆಯುವಲ್ಲಿ ಮಕ್ಕಳಿಗೆ ಪೋಷಕರು ಸಮಯ ನೀಡಬೇಕು. ಮಕ್ಕಳಂತೆ ನಾವು ಯೋಚಿಸಬೇಕು. ಮಕ್ಕಳನ್ನು ಸ್ನೇಹಿತರಂತೆ ಕಾಣಬೇಕು ಎಂದು ಶುಭ ಅವರು ವಿವರಿಸಿದರು.

ಮಕ್ಕಳ ಮನಸ್ಸನ್ನು ಅರ್ಥ ಮಾಡಿಕೊಂಡು ಆರೈಕೆ ಮಾಡಬೇಕು. ವಿಶೇಷ ಗಮನ ಹರಿಸಬೇಕು. ಪ್ರತೀ ಮಗುವಿನಲ್ಲೂ ಸಹ ಒಂದಲ್ಲ ಒಂದು ರೀತಿಯ ವಿಶೇಷತೆ ಇದ್ದು, ವಿಶೇಷತೆಯ ಬೆಳವಣಿಗೆಗೆ ಪ್ರೋತ್ಸಾಹಿಸಬೇಕು. ಆ ನಿಟ್ಟಿನಲ್ಲಿ ಮಕ್ಕಳನ್ನು ಉತ್ತಮ ರೀತಿಯಲ್ಲಿ ಬೆಳೆಸಬೇಕು ಎಂದು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಅವರು ನುಡಿದರು.
ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರಾದ ವೆಂಕಟೇಶ್ ಅವರು ಮಾತನಾಡಿ ಪ್ರತಿಯೊಂದು ಕುಟುಂಬಕ್ಕೂ ಹಾಗೂ ಸಮಾಜಕ್ಕೂ ಮಕ್ಕಳೇ ಸಂಪತ್ತಾಗಿದ್ದು, ಮಕ್ಕಳ ಸೂಕ್ಷ್ಮತೆಯನ್ನು ಅರ್ಥ ಮಾಡಿಕೊಂಡು ಮಕ್ಕಳ ಬೆಳವಣಿಗೆಗೆ ಪೂರಕವಾಗಿ ಕೆಲಸ ಮಾಡಬೇಕಿದೆ ಎಂದರು.
ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಸಮಯಕ್ಕೆ ತಕ್ಕಂತೆ ಫಲಿತಾಂಶ ಪಡೆದು ಬದುಕುವುದು ಅತ್ಯಗತ್ಯ. ಆದರೆ ಮಕ್ಕಳಲ್ಲಿ ಯಾವುದೇ ಕಾರಣಕ್ಕೂ ಒತ್ತಡ ತರಬಾರದು ಎಂದರು.


ಸರ್ಕಾರಿ ಶಾಲೆಗೆ ಮಕ್ಕಳನ್ನು ಸೇರಿಸಬೇಕು. ಮಕ್ಕಳ ಅಭಿವೃದ್ಧಿ ಮತ್ತು ವಿಕಾಸಕ್ಕೆ ಒತ್ತು ನೀಡಬೇಕು. ಜೊತೆಗೆ ಮೂಲ ಸೌಲಭ್ಯವನ್ನು ಕಲ್ಪಿಸಬೇಕು ಎಂದು ವೆಂಕಟೇಶ್ ಅವರು ಹೇಳಿದರು.
ಮಕ್ಕಳ ಮೇಲೆ ನಡೆಯುವ ಲೈಂಗಿಕ ದೌರ್ಜನ್ಯ ನಿಲ್ಲಬೇಕು. ಕಾನೂನಿನ ಬಗ್ಗೆ ಎಲ್ಲೆಡೆ ಮಾಹಿತಿ ನೀಡಬೇಕು. ಮಕ್ಕಳ ಹಕ್ಕುಗಳ ಉಲ್ಲಂಘನೆಯಾಗದಂತೆ ಇನ್ನಷ್ಟು ಜಾಗೃತಿ ಕಾರ್ಯಕ್ರಮ ನಡೆಯಬೇಕು ಎಂದು ವೆಂಕಟೇಶ್ ಅವರು ಹೇಳಿದರು.
ಮಕ್ಕಳ ರಕ್ಷಣೆ ಮತ್ತು ಸುರಕ್ಷತೆಗೆ ಹೆಚ್ಚಿನ ಒತ್ತು ನೀಡುವಲ್ಲಿ, ವಿವಿಧ ಇಲಾಖೆಗಳು ಸಮನ್ವಯತೆಯಿಂದ ಕಾರ್ಯನಿರ್ವಹಿಸಬೇಕು. ಸಂವಿಧಾನದ ಆಶಯವನ್ನು ಎತ್ತಿ ಹಿಡಿಯಬೇಕು ಎಂದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಮಕ್ಕಳ ಹಕ್ಕುಗಳ ರಕ್ಷಣಾ ಘಟಕ, ಶಾಲಾ ಶಿಕ್ಷಣ ಇಲಾಖೆ, ಪೊಲೀಸ್, ಕಾರ್ಮಿಕ ಇಲಾಖೆ ಹೀಗೆ ವಿವಿಧ ಇಲಾಖೆಗಳು ಕೈಜೋಡಿಸಿ ಸಮನ್ವಯತೆಯಿಂದ ಕೆಲಸ ಮಾಡಬೇಕು. ಮಕ್ಕಳ ಸರ್ವತೋಮುಖ ಅಭಿವೃದ್ಧಿಗೆ ಎಲ್ಲರೂ ಕೈಜೋಡಿಸಬೇಕು ಎಂದು ಅವರು ಮನವಿ ಮಾಡಿದರು.

ಯುನಿಸೆಫ್ ಮಕ್ಕಳ ಸಂರಕ್ಷಣಾ ಯೋಜನೆಯ ಪ್ರಾದೇಶಿಕ ಸಂಯೋಜಕರಾದ ಡಾ.ಕೆ.ರಾಘವೇಂದ್ರ ಭಟ್ ಅವರು ಬಾಲನ್ಯಾಯ ಕಾಯಿದೆ ಹಾಗೂ ಪೆÇೀಕ್ಸೊ ಕಾಯಿದೆಯ ಕುರಿತು ಮತ್ತು ಮಕ್ಕಳ ಹಕ್ಕುಗಳ ಕುರಿತು ವಿವರವಾಗಿ ತಿಳಿಸಿದರು.
ನವದೆಹಲಿಯ ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸಲಹೆಗಾರರಾದ ಶುಭಿ ಶರ್ಮಾ ಅವರು ಮಕ್ಕಳ ಮೇಲೆ ದೈಹಿಕ ದಂಡನೆ ಕುರಿತ ಕಾಯ್ದೆ ಕುರಿತು ಮತ್ತು ಇದರಿಂದ ಮಕ್ಕಳ ಮೇಲಾಗುವ ದುಷ್ಪರಿಣಾಮಗಳ ಕುರಿತು ಮಾತನಾಡಿದರು. ಅದೇ ರೀತಿ ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಕಾರ್ಯವೈಖರಿಗಳ ಕುರಿತು ವಿವರಿಸಿದರು.
. ಜಿ.ಪಂ.ಉಪ ಕಾರ್ಯದರ್ಶಿ ಚಂದ್ರಶೇಖರ್, ತಹಶೀಲ್ದಾರ್ ಶ್ರೀಧರ, ಡಯಟ್ ಕೂಡಿಗೆ ಪ್ರಾಂಶುಪಾಲರಾದ ಅರಸ್, ಇತರರು ಇದ್ದರು. ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಎಸ್.ಹೊನ್ನೇಗೌಡ ಸ್ವಾಗತಿಸಿದರು. ಮಧು ಪ್ರಾರ್ಥಿಸಿದರು. ಕಾನೂನು ಸೇವಾ ಪ್ರಾಧಿಕಾರದ ಆಡಳಿತ ಸಹಾಯಕರಾದ ಬಿ.ಎಸ್.ಜಯಪ್ಪ ನಿರೂಪಿಸಿ, ವಂದಿಸಿದರು.

Share. Facebook Twitter Pinterest LinkedIn Tumblr Email WhatsApp
Previous Article*ವಿವಿಧ ಬೇಡಿಕೆಗಳ ಈಡೇರಿಕೆಗೆ ಆಶಾ ಕಾರ್ಯಕರ್ತೆಯರ ಆಗ್ರಹ : ಹೋರಾಟವನ್ನು ತೀವ್ರಗೊಳಿಸುವ ಎಚ್ಚರಿಕೆ*
Next Article *ಮಾ.1 ರಂದು ಕೊಡಗಿನ ವಿವಿಧೆಡೆ ವಿದ್ಯುತ್ ಇರಲ್ಲ*

Website design development company services in Mangalore

Forex Trading Teacher in India

Related Posts

*ಬಿಟ್ಟಂಗಾಲದಲ್ಲಿ ಹಿಂದೂ ಸಂಗಮ ಕಾರ್ಯಕ್ರಮ*

February 27, 2026

*ಮೂರ್ನಾಡು : ಹಿಂದೂ ಸಂಗಮ ಬದುಕಿನ ಮೌಲ್ಯಗಳನ್ನು ಕೇಂದ್ರೀಕರಿಸಿದೆ : ಸ್ವತಂತ್ರ ಬಸವಲಿಂಗ ಶಿವಯೋಗಿ ಸ್ವಾಮೀಜಿ*

February 27, 2026

*ಕೊಡಗು ಅಂಚೆ ವಿಭಾಗದ ಕಚೇರಿಯ ಪಿನ್‍ಕೋಡ್ ಬದಲಾವಣೆ*

February 27, 2026

*ಮೂರ್ನಾಡು : ಹಿಂದೂ ಸಂಗಮ ಬದುಕಿನ ಮೌಲ್ಯಗಳನ್ನು ಕೇಂದ್ರೀಕರಿಸಿದೆ : ಸ್ವತಂತ್ರ ಬಸವಲಿಂಗ ಶಿವಯೋಗಿ ಸ್ವಾಮೀಜಿ*

February 27, 2026

ವಿರಾಜಪೇಟೆ ಫೆ.27 NEWS DESK : ಮೂರ್ನಾಡುವಿನ ಹಿಂದೂ ಸಂಗಮ ಆಯೋಜನ ಸಮಿತಿ ವತಿಯಿಂದ ಹಿಂದೂ ಸಂಗಮ ಕಾರ್ಯಕ್ರಮ ಬೃಹತ್…

*ಕೊಡಗು ಅಂಚೆ ವಿಭಾಗದ ಕಚೇರಿಯ ಪಿನ್‍ಕೋಡ್ ಬದಲಾವಣೆ*

February 27, 2026

*ಮಾ.1 ರಂದು ಶ್ರೀ ರೇಣುಕಾಚಾರ್ಯ ಜಯಂತಿ*

February 27, 2026

*ಅತ್ಯುತ್ತಮ ಎಸ್.ಡಿ.ಎಂ.ಸಿ ಪ್ರಶಸ್ತಿಗೆ ಗೋಣಿಕೊಪ್ಪಲು ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆ ಆಯ್ಕೆ

February 27, 2026

*ಮಾ.3ರಂದು ಶ್ರೀ ಯೋಗಿ ನಾರೇಯಣಿ ಯತೀಂದ್ರರ 300ನೇ ಜಯಂತ್ಯುತ್ಸವ*

February 27, 2026

*ಏಮ್ಸ್‌ನಲ್ಲಿ ಬೃಹತ್ ನೇಮಕಾತಿ ಆರಂಭ; 2,551 ಪೋಸ್ಟ್‌ಗಳ ಭರ್ತಿಗೆ ಅಧಿಸೂಚನೆ ಪ್ರಕಟ, ಅರ್ಜಿ ಸಲ್ಲಿಸುವ ವಿಧಾನ ಇಲ್ಲಿದೆ*

February 27, 2026

*ಶ್ರೀ ವನಚಾಮುಂಡೇಶ್ವರಿ ಕ್ಷೇತ್ರದಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ಬಹ್ಮಕಳಶ ಅಷ್ಟಬಂಧ ಪುನರ್ ಪ್ರತಿಷ್ಠಾಪನಾ ಮಹೋತ್ಸವ*

February 27, 2026

*ಬೆಂಗಳೂರು ಕರಗಕ್ಕೆ ಕ್ಷಣಗಣನೆ: ಈ ಬಾರಿಯ ಉತ್ಸವದ ಪ್ರಮುಖ ಬದಲಾವಣೆಗಳೇನು? ಇಲ್ಲಿವೆ ಕಂಪ್ಲೀಟ್ ವಿವರಗಳು!*

February 27, 2026

*ಸ್ಕೂಟರ್ ಡಿಕ್ಕಿ : ಕಾರು ಹರಿದು ಓರ್ವ ಸಾವು*

February 27, 2026

*ಸೆಂಟ್ ಆನ್ಸ್ ಪದವಿ ಕಾಲೇಜಿನ ಎನ್ ಎಸ್ ಎಸ್ ಘಟಕದ ವಾರ್ಷಿಕ ವಿಶೇಷ ಶಿಬಿರ ಮಾರ್ಚ್ 4 ರಿಂದ ಆರಂಭ*

February 27, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.