Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ವಾಂಡರರ್ಸ್ ಶಿಬಿರ : ಕ್ರೀಡೆಯಲ್ಲಿ ಅಭ್ಯಾಸ ನಿರಂತರವಾಗಿರಬೇಕು :  ಒಲಂಪಿಯನ್ ಮನೆಯಪಂಡ ಸೋಮಯ್ಯ*
  • *ಚೆಟ್ಟಳ್ಳಿಯಲ್ಲಿ ವಿಜ್ಞಾನ ಆಧಾರಿತ ಪೋಷಕಾಂಶ ಜಾಗೃತಿ ಕಾರ್ಯಕ್ರಮ : ಸಾವಯವ ಕೃಷಿ, ಜೈವಿಕ ಕೀಟನಾಶಕ ಹಾಗೂ ಆಧುನಿಕ ತೋಟಗಾರಿಕಾ ತಂತ್ರಜ್ಞಾನ ಅಳವಡಿಕೆಗೆ ಒತ್ತು*
  • *ವಿರಾಜಪೇಟೆಯಲ್ಲಿ ರಕ್ತದಾನ ಹಾಗೂ ಉಚಿತ ಆರೋಗ್ಯ ತಪಾಸಣಾ ಶಿಬಿರ : ರಕ್ತದಾನವು ಸಾಮಾಜಿಕ ಜವಾಬ್ದಾರಿಯಾಗಿದೆ : ಡಾ.ಕರುಂಬಯ್ಯ*
  • *ಸಿದ್ದಾಪುರ : ಏ.18 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ*
  • *ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5729 ಪ್ರಕರಣಗಳು ಇತ್ಯರ್ಥ*
  • *ಮಡಿಕೇರಿ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ಉದ್ಯೋಗಮೇಳ*
  • *ಕರ್ನಾಟಕ ಲೋಕಾಯುಕ್ತದ ನಾಲ್ಕು ದಶಕಗಳ ಸಾರ್ಥಕ ಪಯಣ : ಏ.18 ರಂದು ವಿಶೇಷ ಕಾರ್ಯಕ್ರಮ*
  • *ಏ.26ಕ್ಕೆ ಕಿವುಡರ ಸಂಘದ ಸಭೆ*
  • *ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಮಹಿಳಾ ಕ್ರಿಕೆಟ್ ಆರಂಭ : ಏ.18 ರಂದು ನಡೆಯುವ ಪಂದ್ಯಗಳು*
  • *ಸೌಹಾರ್ದ ಕಪ್ ಕ್ರಿಕೆಟ್ : ಮೀಡಿಯಾ ಸೂಪರ್ ಕಿಂಗ್ಸ್ ಚಾಂಪಿಯನ್, ಕಾವೇರಿ ಮೀಡಿಯಾ ರನ್ನರ್ಸ್*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕಾಂಗ್ರೆಸ್ ಸರಕಾರ ಬಡವರಿಗೆ ನಿವೇಶನ ಮತ್ತು ವಸತಿ ನೀಡದೆ ವಂಚಿಸಿದೆ : ಭಾರತ ಕಮ್ಯುನಿಸ್ಟ್ ಪಕ್ಷ ಹಾಗೂ ಎಐಟಿಯುಸಿ ಆರೋಪ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕಾಂಗ್ರೆಸ್ ಸರಕಾರ ಬಡವರಿಗೆ ನಿವೇಶನ ಮತ್ತು ವಸತಿ ನೀಡದೆ ವಂಚಿಸಿದೆ : ಭಾರತ ಕಮ್ಯುನಿಸ್ಟ್ ಪಕ್ಷ ಹಾಗೂ ಎಐಟಿಯುಸಿ ಆರೋಪ*

ಫೆಬ್ರವರಿ 28, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಫೆ.28 NEWS DESK : ಬಡವರ ಮತಗಳಿಂದ ರಾಜ್ಯದಲ್ಲಿ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್ ಸರಕಾರ ಇಲ್ಲಿಯವರೆಗೆ ಬಡವರಿಗೆ ನಿವೇಶನ ಮತ್ತು ವಸತಿ ಸೌಲಭ್ಯವನ್ನು ನೀಡದೆ ವಂಚಿಸಿದೆ ಎಂದು ಭಾರತ ಕಮ್ಯುನಿಸ್ಟ್ ಪಕ್ಷ ಹಾಗೂ ಎಐಟಿಯುಸಿಯ ಕೊಡಗು ಜಿಲ್ಲಾ ಘಟಕಗಳು ಜಂಟಿ ಸುದ್ದಿಗೋಷ್ಠಿಯಲ್ಲಿ ಆರೋಪಿಸಿವೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಎಐಟಿಯುಸಿ ಸಂಘಟನೆಯ ಜಿಲ್ಲಾಧ್ಯಕ್ಷ ಹೆಚ್.ಎಂ.ಸೋಮಪ್ಪ ಅವರು 2007 ರಿಂದ ನಮ್ಮ ಸಂಘಟನೆ ಕೊಡಗು ಜಿಲ್ಲೆಯಲ್ಲಿರುವ ಎಲ್ಲಾ ನಿವೇಶನ ಮತ್ತು ವಸತಿ ರಹಿತ ಬಡವರಿಗೆ, ದಲಿತರಿಗೆ, ಕಾರ್ಮಿಕರಿಗೆ, ಸರ್ವ ದುಡಿಯುವ ವರ್ಗಕ್ಕೆ ನಿವೇಶನ ಹಾಗೂ ವಸತಿಯನ್ನು ನೀಡಬೇಕೆಂದು ಹೋರಾಟ ನಡೆಸುತ್ತಲೇ ಬಂದಿದೆ. ಆದರೆ ಇಲ್ಲಿಯವರೆಗೆ ಅಧಿಕಾರಕ್ಕೆ ಬಂದ ಯಾವುದೇ ಸರಕಾರಗಳು ಬಡವರ ಈ ಬೇಡಿಕೆಗಳನ್ನು ಈಡೇರಿಸಿಲ್ಲ. ರಾಜಕೀಯ ಪಕ್ಷಗಳಿಗೆ ಬಡವರ ಮತಗಳು ಬೇಕು, ಆದರೆ ಬಡವರಿಗೆ ನಿವೇಶನ ಮತ್ತು ವಸತಿ ಸೌಲಭ್ಯ ಕಲ್ಪಿಸಬೇಕು ಎನ್ನುವ ಜವಾಬ್ದಾರಿ ಇಲ್ಲದಾಗಿದೆ. ಪ್ರಸ್ತುತ ಇರುವ ಕಾಂಗ್ರೆಸ್ ಸರಕಾರ ಕೂಡ ಶೋಷಿತರ ಬೇಡಿಕೆಗಳಿಗೆ ಸ್ಪಂದಿಸುವಲ್ಲಿ ವಿಫಲವಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಐಟಿಡಿಪಿ ಅಧಿಕಾರಿಯೊಬ್ಬರು ವಿರಾಜಪೇಟೆ ಭಾಗದಲ್ಲಿ ಸುಮಾರು 3 ಸಾವಿರ ನಿವೇಶನಗಳ ಮಂಜೂರಾತಿಗೆ ಒಪ್ಪಿಗೆ ದೊರೆತ್ತಿದೆ, ಇದು ಶಾಸಕರ ಪ್ರಯತ್ನದ ಫಲ ಎಂದು ಹೇಳಿಕೆ ನೀಡುವ ಮೂಲಕ ಜನರ ಹಾದಿ ತಪ್ಪಿಸುತ್ತಿದ್ದಾರೆ. ಬಡವರಿಗೆ ನಿವೇಶನ ಅಥವಾ ವಸತಿ ದೊರೆಯಬೇಕಾದರೆ ಅದು ನಮ್ಮ ಹೋರಾಟದ ಫಲವೇ ಹೊರತು ಜನಪ್ರತಿನಿಧಿಗಳ ಹಾಗೂ ಅಧಿಕಾರಿಗಳ ಆಸಕ್ತಿಯಿಂದ ಅಲ್ಲವೆಂದು ತಿಳಿಸಿದರು. 2020-2022 ರವರೆಗೆ ಗ್ರಾಮ ಪಂಚಾಯ್ತಿಗಳ ವ್ಯಾಪ್ತಿಯಲ್ಲಿ ಜಾಗವನ್ನು ಗುರುತು ಮಾಡಲಾಗಿತ್ತು. ಅದು ನಮ್ಮ ಪಕ್ಷ ಮತ್ತು ಸಂಘಟನೆಯ ಹೋರಾಟದ ಫಲವಾಗಿದೆ. ಶಾಸಕರುಗಳು ಆಯ್ಕೆಯಾಗಿರುವುದೇ ಜನಸೇವೆಗಾಗಿ, ಜನರ ಹಕ್ಕುಗಳನ್ನು ಮತ್ತು ಬೇಡಿಕೆಗಳನ್ನು ಪೂರೈಸುವುದಕ್ಕಾಗಿ. ಆದರೆ ಕೊಡಗು ಜಿಲ್ಲೆಯಲ್ಲಿ ಇಂದಿಗೂ ಸಾವಿರಾರು ಕುಟುಂಬಗಳು ಸ್ವಂತ ಮನೆ, ನಿವೇಶನವಿಲ್ಲದೆ ಸಂಕಷ್ಟದಲ್ಲಿದ್ದಾರೆ. ಕೊಡಗು ಜಿಲ್ಲೆಯ ಇಬ್ಬರು ಶಾಸಕರುಗಳಿಗೆ ಪರಿಶಿಷ್ಟರು, ಕಾರ್ಮಿಕರು ಹಾಗೂ ಎಲ್ಲಾ ದುಡಿಯುವ ವರ್ಗದ ಮೇಲೆ ನೈಜ ಕಾಳಜಿ ಇದ್ದರೆ ಮುಂದಿನ ಚುನಾವಣೆಯೊಳಗೆ ಎಲ್ಲಾ ನಿವೇಶನ ರಹಿತರಿಗೆ ಮನೆ ನಿರ್ಮಿಸಿಕೊಡಬೇಕು. ನಿರ್ಲಕ್ಷ್ಯ ವಹಿಸಿದರೆ ಇಬ್ಬರು ಶಾಸಕರ ಕಚೇರಿ ಎದುರು ಪ್ರತಿಭಟನೆ ನಡೆಸುವುದಾಗಿ ಹೆಚ್.ಎಂ.ಸೋಮಪ್ಪ ಎಚ್ಚರಿಕೆ ನೀಡಿದರು. ಪ್ರತಿಯೊಂದು ಗ್ರಾಮ ಪಂಚಾಯ್ತಿಗೂ ನಿವೇಶನ ಮತ್ತು ವಸತಿ ರಹಿತರ ಅರ್ಜಿಗಳನ್ನು ಸಲ್ಲಿಸಲಾಗಿದೆ. ಈ ಅರ್ಜಿಯನ್ನು ಶಾಸಕರುಗಳು ಪರಿಗಣಿಸಿದ್ದಾರೆಯೇ ಎಂಬುವುದನ್ನು ಮೊದಲು ಸ್ಪಷ್ಟಪಡಿಸಲಿ ಎಂದು ಒತ್ತಾಯಿಸಿದರು.
2020-2022 ರವರೆಗೆ ಗ್ರಾಮ ಪಂಚಾಯ್ತಿಗಳ ವ್ಯಾಪ್ತಿಯಲ್ಲಿ ಜಾಗವನ್ನು ಗುರುತು ಮಾಡಲಾಗಿತ್ತು. ಅದು ನಮ್ಮ ಪಕ್ಷ ಮತ್ತು ಸಂಘಟನೆಯ ಹೋರಾಟದ ಫಲವಾಗಿದೆ. ಆದರೆ ನಿವೇಶನಗಳನ್ನು ಹಂಚಿಕೆ ಮಾಡದೆ ಇರುವುದು ದುರಂತ. ಶಾಸಕರುಗಳು ಆಯ್ಕೆಯಾಗಿರುವುದೇ ಜನಸೇವೆಗಾಗಿ, ಜನರ ಹಕ್ಕುಗಳನ್ನು ಮತ್ತು ಬೇಡಿಕೆಗಳನ್ನು ಪೂರೈಸುವುದಕ್ಕಾಗಿ ಎಂದರು. ಭಾರತ ಕಮ್ಯುನಿಸ್ಟ್ ಪಕ್ಷದ ಜಿಲ್ಲಾ ಕಾರ್ಯದರ್ಶಿ ರಫೀಕ್ ಎಂ.ಹೆಚ್ ಮಾತನಾಡಿ ನಮ್ಮ ಪಕ್ಷ ನಿವೇಶನ ಮತ್ತು ವಸತಿಗಾಗಿ ನಿರಂತರ ಹೋರಾಟ ಮತ್ತು ಕಾಲ್ನಡಿಗೆ ಜಾಥಾಗಳನ್ನು ನಡೆಸಿಕೊಂಡು ಬಂದಿದೆ. 2019 ರಲ್ಲಿ ವಿರಾಜಪೇಟೆಯ ಅಧಿಕಾರಿಗಳು ಸುಮಾರು 7 ಸಾವಿರ ಫಲಾನುಭವಿಗಳಿಗೆ ನಿವೇಶನ ನೀಡಲು ಮುಂದಾಗಿರುವುದಾಗಿ ಭರವಸೆ ನೀಡಿದ್ದರು. ಆದರೆ ಈ ಭರವಸೆ ಇಲ್ಲಿಯವರೆಗೆ ಈಡೇರಿಲ್ಲವೆಂದು ಬೇಸರ ವ್ಯಕ್ತಪಡಿಸಿದರು. ಪ್ರಸ್ತುತ ವಿರಾಜಪೇಟೆ ಭಾಗದ 3 ಸಾವಿರ ಫಲಾನುಭವಿಗಳಿಗೆ ನಿವೇಶನ ನೀಡಲು ಮುಂದಾಗಿರುವುದು ಸ್ವಾಗತಾರ್ಹ ಕ್ರಮವಾಗಿದೆ. ಆದರೆ ನಾಡಿನಲ್ಲಿರುವ ಬಡವರಿಗೆ ನಾಗರಿಕ ಸಂಪರ್ಕವಿಲ್ಲದ ಕಾಡು ಪ್ರದೇಶದಲ್ಲಿ ನಿವೇಶನ ಗುರುತಿಸಿರುವುದು ಸರಿಯಲ್ಲ, ಇದನ್ನು ಸಿಪಿಐ ವಿರೋಧಿಸುತ್ತದೆ ಎಂದರು. ಜಿಲ್ಲೆಯಲ್ಲಿರುವ ಎಲ್ಲಾ ನಿವೇಶನ ಮತ್ತು ವಸತಿ ರಹಿತ ಬಡವರಿಗೆ ಸೌಲಭ್ಯ ಕಲ್ಪಿಸುವಲ್ಲಿಯವರೆಗೆ ಹೋರಾಟ ನಿರಂತರವಾಗಿ ನಡೆಯಲಿದೆ ಎಂದು ರಫೀಕ್ ಎಂ.ಹೆಚ್ ತಿಳಿಸಿದರು. ಆಲ್ ಇಂಡಿಯಾ ದಲಿತ ಮೂವ್ ಮೆಂಟ್ ನ ರಾಜ್ಯ ಮುಖಂಡ ಮಾಯಮುಡಿ ರಮೇಶ್ ಮಾತನಾಡಿ ಬಡವರು, ಪರಿಶಿಷ್ಟರು ಹಾಗೂ ಕಾರ್ಮಿಕರು ನೆಲೆ ನಿಂತಿರುವ ಪ್ರದೇಶದಲ್ಲೇ ನಿವೇಶನ ಮತ್ತು ವಸತಿ ಸೌಲಭ್ಯ ಕಲ್ಪಿಸಬೇಕು ಎಂದು ಒತ್ತಾಯಿಸಿದರು. ನಮ್ಮ ಸಂಘಟನೆಯ ಹೋರಾಟದ ಫಲವಾಗಿ ವಿರಾಜಪೇಟೆಯಲ್ಲಿ ಮೂರು ಸಾವಿರ ಫಲಾನುಭವಿಗಳಿಗೆ ನಿವೇಶನ ದೊರೆಯುತ್ತಿದೆ. ಆದರೆ ಕೆಲವು ಹೊಟ್ಟೆಪಾಡಿನ ಸಂಘಟನೆಗಳು ನಾವೇ ನಿವೇಶನ ದೊರಕಿಸಿಕೊಡುತ್ತಿದ್ದೇವೆ ಎಂದು ಸುಳ್ಳು ಹೇಳುತ್ತಿವೆ. ಈ ಸಂಘಟನೆಗಳು ಮೊದಲು ಸಂಕಷ್ಟದಲ್ಲಿರುವ ಆದಿವಾಸಿಗಳ ಸಮಸ್ಯೆಗಳಿಗೆ ಸ್ಪಂದಿಸಲಿ ಎಂದರು. ಸುದ್ದಿಗೋಷ್ಠಿಯಲ್ಲಿ ಸಿಪಿಐ ಪಕ್ಷದ ಸೋಮವಾರಪೇಟೆ ಕಾರ್ಯದರ್ಶಿ ಶಬಾನಾ ಎಸ್.ಹೆಚ್ ಉಪಸ್ಥಿತರಿದ್ದರು.

 

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ವಾಂಡರರ್ಸ್ ಶಿಬಿರ : ಕ್ರೀಡೆಯಲ್ಲಿ ಅಭ್ಯಾಸ ನಿರಂತರವಾಗಿರಬೇಕು :  ಒಲಂಪಿಯನ್ ಮನೆಯಪಂಡ ಸೋಮಯ್ಯ*

ಏಪ್ರಿಲ್ 17, 2026

*ಚೆಟ್ಟಳ್ಳಿಯಲ್ಲಿ ವಿಜ್ಞಾನ ಆಧಾರಿತ ಪೋಷಕಾಂಶ ಜಾಗೃತಿ ಕಾರ್ಯಕ್ರಮ : ಸಾವಯವ ಕೃಷಿ, ಜೈವಿಕ ಕೀಟನಾಶಕ ಹಾಗೂ ಆಧುನಿಕ ತೋಟಗಾರಿಕಾ ತಂತ್ರಜ್ಞಾನ ಅಳವಡಿಕೆಗೆ ಒತ್ತು*

ಏಪ್ರಿಲ್ 17, 2026

*ವಿರಾಜಪೇಟೆಯಲ್ಲಿ ರಕ್ತದಾನ ಹಾಗೂ ಉಚಿತ ಆರೋಗ್ಯ ತಪಾಸಣಾ ಶಿಬಿರ : ರಕ್ತದಾನವು ಸಾಮಾಜಿಕ ಜವಾಬ್ದಾರಿಯಾಗಿದೆ : ಡಾ.ಕರುಂಬಯ್ಯ*

ಏಪ್ರಿಲ್ 17, 2026

*ಚೆಟ್ಟಳ್ಳಿಯಲ್ಲಿ ವಿಜ್ಞಾನ ಆಧಾರಿತ ಪೋಷಕಾಂಶ ಜಾಗೃತಿ ಕಾರ್ಯಕ್ರಮ : ಸಾವಯವ ಕೃಷಿ, ಜೈವಿಕ ಕೀಟನಾಶಕ ಹಾಗೂ ಆಧುನಿಕ ತೋಟಗಾರಿಕಾ ತಂತ್ರಜ್ಞಾನ ಅಳವಡಿಕೆಗೆ ಒತ್ತು*

ಏಪ್ರಿಲ್ 17, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಚೆಟ್ಟಳ್ಳಿ ಏ.17 NEWS DESK : ಭಾರತೀಯ ತೋಟಗಾರಿಕೆ ಸಂಶೋಧನಾ ಸಂಸ್ಥೆಯ ಕೇಂದ್ರೀಯ ತೋಟಗಾರಿಕಾ ಪ್ರಾಯೋಗಿಕ ಕೇಂದ್ರ, ಚೆಟ್ಟಳ್ಳಿಯಲ್ಲಿ ವಿಜ್ಞಾನ…

*ವಿರಾಜಪೇಟೆಯಲ್ಲಿ ರಕ್ತದಾನ ಹಾಗೂ ಉಚಿತ ಆರೋಗ್ಯ ತಪಾಸಣಾ ಶಿಬಿರ : ರಕ್ತದಾನವು ಸಾಮಾಜಿಕ ಜವಾಬ್ದಾರಿಯಾಗಿದೆ : ಡಾ.ಕರುಂಬಯ್ಯ*

ಏಪ್ರಿಲ್ 17, 2026

*ಸಿದ್ದಾಪುರ : ಏ.18 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ*

ಏಪ್ರಿಲ್ 17, 2026

*ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5729 ಪ್ರಕರಣಗಳು ಇತ್ಯರ್ಥ*

ಏಪ್ರಿಲ್ 17, 2026

*ಮಡಿಕೇರಿ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ಉದ್ಯೋಗಮೇಳ*

ಏಪ್ರಿಲ್ 17, 2026

*ಕರ್ನಾಟಕ ಲೋಕಾಯುಕ್ತದ ನಾಲ್ಕು ದಶಕಗಳ ಸಾರ್ಥಕ ಪಯಣ : ಏ.18 ರಂದು ವಿಶೇಷ ಕಾರ್ಯಕ್ರಮ*

ಏಪ್ರಿಲ್ 17, 2026

*ಏ.26ಕ್ಕೆ ಕಿವುಡರ ಸಂಘದ ಸಭೆ*

ಏಪ್ರಿಲ್ 17, 2026

*ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಮಹಿಳಾ ಕ್ರಿಕೆಟ್ ಆರಂಭ : ಏ.18 ರಂದು ನಡೆಯುವ ಪಂದ್ಯಗಳು*

ಏಪ್ರಿಲ್ 17, 2026

*ಸೌಹಾರ್ದ ಕಪ್ ಕ್ರಿಕೆಟ್ : ಮೀಡಿಯಾ ಸೂಪರ್ ಕಿಂಗ್ಸ್ ಚಾಂಪಿಯನ್, ಕಾವೇರಿ ಮೀಡಿಯಾ ರನ್ನರ್ಸ್*

ಏಪ್ರಿಲ್ 17, 2026

*ಕಸದ ವಾಹನದಲ್ಲಿ ಆಲಂ ಮತ್ತು ಬ್ಲೀಚಿಂಗ್ ಪೌಡರ್ ಸಾಗಾಟ : ಮಡಿಕೇರಿ ಬ್ಲಾಕ್ ಮತ್ತು ಯೂತ್ ಕಾಂಗ್ರೆಸ್ ಆರೋಪ*

ಏಪ್ರಿಲ್ 17, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.