Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಸುಂಟಿಕೊಪ್ಪ ಸರಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ*
  • *ಕೊಡವ ಸಾಹಿತ್ಯ-ಸಂಸ್ಕೃತಿರ ಅಂದೋಳ : ಜಿಲ್ಲೆ ಚಿಕ್ಕದು, ಕೊಡುಗೆ ದೊಡ್ಡದು : ಅಜ್ಜಿಕುಟ್ಟಿರ ಎಸ್.ಪೊನ್ನಣ್ಣ*
  • *ಕಂಬಿಬಾಣೆ ಶ್ರೀ ರಾಮ ಮತ್ತು ಚಾಮುಂಡೇಶ್ವರಿ ದೇವಾಲಯದ ಸಭಾಭವನ ನಿರ್ಮಾಣಕ್ಕೆ ಚಾಲನೆ*
  • *ವಿದ್ಯಾರ್ಥಿಗಳಿಗೆ ಕವಿಗೋಷ್ಠಿ ಮತ್ತು ಪ್ರಬಂಧ ಸ್ಪರ್ಧೆ : ಭಾಷೆಯ ಒಳ ಮಿಡಿತಗಳು ಅರಿತಾಗ ಸರಳ ಕಾವ್ಯ ಸೃಷ್ಟಿಯಾಗುತ್ತದೆ : ಪತ್ರಕರ್ತ ಜಗದೀಶ್ ಜೋಡುಬಿಟಿ*
  • *ನಾಪೋಕ್ಲು ಪ್ರಕರಣ : ನಾಲ್ವರ ಬಂಧನ*
  • *ಸಂವಿಧಾನ ಮತ್ತು ಪತ್ರಿಕೋದ್ಯಮದ ಕುರಿತ ವಿಚಾರ ಸಂಕಿರಣ : ಕಾರ್ಯಕ್ರಮ ಮಾಧ್ಯಮಗಳು ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಸಮಾಜದ ಒಳಿತಿಗಾಗಿ ಬಳಸಿ : ಶಾಸಕ ಡಾ. ಮಂತರ್ ಗೌಡ ಕರೆ*
  • *ಮಾ.4 ರಂದು ಕುಶಾಲನಗರದಲ್ಲಿ ಕೈಗಾರಿಕೋದ್ಯಮಿಗಳಿಗೆ ಜಾಗೃತಿ ಕಾರ್ಯಕ್ರಮ*
  • *ಕೇಂದ್ರ ಸಚಿವ ಹರ್ ದೀಪ್ ಸಿಂಗ್ ವಜಾಕ್ಕೆ ಆಗ್ರಹಿಸಿ ಕೊಡಗು ಮಹಿಳಾ ಕಾಂಗ್ರೆಸ್ ಪ್ರತಿಭಟನೆ*
  • *ಘಟನೆ ಮರುಕಳಿಸದಂತೆ ಕಠಿಣ ಕ್ರಮ ಕೈಗೊಳ್ಳಿ : ಬಿಜೆಪಿ ಆಗ್ರಹ*
  • *ಕಾಂಗ್ರೆಸ್ ಸರಕಾರ ಬಡವರಿಗೆ ನಿವೇಶನ ಮತ್ತು ವಸತಿ ನೀಡದೆ ವಂಚಿಸಿದೆ : ಭಾರತ ಕಮ್ಯುನಿಸ್ಟ್ ಪಕ್ಷ ಹಾಗೂ ಎಐಟಿಯುಸಿ ಆರೋಪ*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home»ಇತ್ತೀಚಿನ ಸುದ್ದಿಗಳು»*ಘಟನೆ ಮರುಕಳಿಸದಂತೆ ಕಠಿಣ ಕ್ರಮ ಕೈಗೊಳ್ಳಿ : ಬಿಜೆಪಿ ಆಗ್ರಹ*
ಇತ್ತೀಚಿನ ಸುದ್ದಿಗಳು

*ಘಟನೆ ಮರುಕಳಿಸದಂತೆ ಕಠಿಣ ಕ್ರಮ ಕೈಗೊಳ್ಳಿ : ಬಿಜೆಪಿ ಆಗ್ರಹ*

February 28, 20262 Mins Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link


ಮಡಿಕೇರಿ ಫೆ.28 NEWS DESK : ನಾಪೋಕ್ಲುವಿನಲ್ಲಿ ಹಿಂದೂ ಸಂಘಟನೆಯ ಕಾರ್ಯಕರ್ತ ಅಪ್ಪಚ್ಚಿರ ಗೌತಮ್ ಮೇಲೆ ನಡೆದಿರುವ ಹಲ್ಲೆ ಪ್ರಕರಣ ಖಂಡನೀಯವಾಗಿದ್ದು, ಮುಂದೆ ಈ ರೀತಿಯ ಘಟನೆಗಳು ಮರುಕಳಿಸದಂತೆ ಪೊಲೀಸ್ ಇಲಾಖೆ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ವಿಧಾನ ಪರಿಷತ್ ಮಾಜಿ ಸದಸ್ಯ ಹಾಗೂ ಬಿಜೆಪಿ ಮುಖಂಡ ಎಂ.ಪಿ.ಸುನಿಲ್ ಸುಬ್ರಮಣಿ ಆಗ್ರಹಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಹಗಲಿನ ವೇಳೆಯಲ್ಲೇ ರಾಜಾರೋಷವಾಗಿ ಹಲ್ಲೆ ಮಾಡಲಾಗಿದೆ. ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದಾಗಲೆಲ್ಲ ಈ ರೀತಿಯ ಘಟನೆಗಳು ನಡೆಯುತ್ತಿರುತ್ತದೆ ಎಂದು ಆರೋಪಿಸಿದರು. ರಾಷ್ಟ್ರೀಯ ಸ್ವಯಂ ಸೇವಕ ಸಂಘಕ್ಕೆ 100 ವರ್ಷ ತುಂಬಿದ ಹಿನ್ನೆಲೆ ಎಲ್ಲರೂ ಸೇರಿ ಪೀತಿ ಮತ್ತು ಶಾಂತಿಯಿಂದ ಹಿಂದೂ ಸಂಗಮ ಕಾರ್ಯಕ್ರಮವನ್ನು ರಾಜ್ಯವ್ಯಾಪಿ ಮಾಡಲಾಗುತ್ತಿದೆ. ಬಲ್ಲಮಾವಟಿಯಲ್ಲಿ ಕಾರ್ಯಕ್ರಮ ಆಯೋಜನೆಗೊಂಡಿದ್ದ ಹಿನ್ನೆಲೆ ಗೌತಮ್ ಪಿಕ್ ಅಪ್ ವಾಹನದಲ್ಲಿ ತೆರಳುತ್ತಿದ್ದರು, ಧ್ವನಿವರ್ಧಕವನ್ನು ಕೂಡ ಬಳಸಿರಲಿಲ್ಲ. ಈ ಹಂತದಲ್ಲಿ ದಾಳಿ ಮಾಡಲಾಗಿದ್ದು, ಹಲ್ಲೆ ಮಾಡಿರುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಂಡು ಗಡಿಪಾರು ಮಾಡಬೇಕೆಂದು ಒತ್ತಾಯಿಸಿದರು. ಸುಮಾರು ಎರಡು ಸಾವಿರ ಮಂದಿ ಸೇರಿ ನಾಪೋಕ್ಲುವಿನಲ್ಲಿ ರಸ್ತೆ ತಡೆ ಮಾಡಿ ಪ್ರತಿಭಟಿಸಿದ ಪರಿಣಾಮ ಆರೋಪಿಗಳ ಬಂಧನವಾಗಿದೆ. ಪೊಲೀಸ್ ಇಲಾಖೆಗೆ ಸ್ವತಂತ್ರ್ಯವಾಗಿ ಕಾರ್ಯನಿರ್ವಹಿಸಲು ಆಡಳಿತ ನಡೆಸುವವರು ಬಿಡಬೇಕು ಎಂದು ಎಂ.ಪಿ.ಸುನಿಲ್ ಸುಬ್ರಮಣಿ ತಿಳಿಸಿದರು. ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಹೇಶ್ ಜೈನಿ ಮಾತನಾಡಿ ಕಾಂಗ್ರೆಸ್ ಪಕ್ಷ ಮಗುವನ್ನು ಚಿವುಟಿ ತೊಟ್ಟಿಲು ತೂಗುವ ಕೆಲಸ ಮಾಡುತ್ತಿದೆ. ಒಂದು ವರ್ಗವನ್ನು ಮೆಚ್ಚಿಸುವ ಕಾಂಗ್ರೆಸ್ ಕಿಡಿಗೇಡಿಗಳಿಗೆ ಹಿಂಬಾಗಿಲಿನಿಂದ ಬೆಂಬಲ ನೀಡುತ್ತಿದೆ. ಎಲ್ಲಾ ಆರೋಪಿಗಳ ಬಂಧನವಾಗಿದೆ ಎಂದು ಹೇಳಿಕೆ ನೀಡುವ ಮೂಲಕ ರಾಜಕೀಯ ಬೇಳೆ ಬೇಯಿಸಿಕೊಳ್ಳುತ್ತಿದೆ ಎಂದು ಆರೋಪಿಸಿದರು. ಜಿಲ್ಲೆಯಲ್ಲಿ ಗಾಂಜಾ ಹಾವಳಿ ಮಿತಿ ಮೀರಿದ್ದು, ತಕ್ಷಣ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು. ಜಿಲ್ಲಾ ವಕ್ತಾರ ಬಿ.ಕೆ.ಅರುಣ್ ಕುಮಾರ್ ಮಾತನಾಡಿ ರಾಷ್ಟ್ರೀಯ ಸ್ವಯಂ ಸೇವಕ ಸಂಘಕ್ಕೆ 100 ವರ್ಷ ತುಂಬಿದ ಹಿನ್ನೆಲೆ ರಾಜ್ಯದೆಲ್ಲೆಡೆ ಯಶಸ್ವಿಯಾಗಿ ಹಿಂದೂ ಸಂಗಮ ಕಾರ್ಯಕ್ರಮ ನಡೆಯುತ್ತಿದೆ. ಇದನ್ನು ಸಹಿಸಲಾಗದ ಕಿಡಿಗೇಡಿಗಳು ನಾಪೋಕ್ಲುವಿನಲ್ಲಿ ಪೂರ್ವಯೋಜಿತವಾಗಿ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಿದರು. ಹಿಂದೂ ಸಂಗಮದ ಯಾವುದೇ ಕಾರ್ಯಕ್ರಮದಲ್ಲಿ ಅನ್ಯ ಕೋಮಿನವರ ವಿಚಾರವನ್ನು ಪ್ರಸ್ತಾಪಿಸುತ್ತಿಲ್ಲ. ಆದರೂ ಈ ರೀತಿಯ ದಾಳಿ ನಡೆಯುತ್ತಿದೆ, ಆದ್ದರಿಂದ ಹಿಂದೂಗಳು ಒಗ್ಗಟ್ಟು ಪ್ರದರ್ಶಿಸಬೇಕು ಮತ್ತು ಪ್ರಜ್ಞಾವಂತ ಮತದಾರರು ಎಚ್ಚೆತ್ತುಕೊಳ್ಳಬೇಕು ಎಂದು ಕರೆ ನೀಡಿದರು.
ಮಡಿಕೇರಿ ಗ್ರಾಮಾಂತರ ಮಂಡಲದ ಅಧ್ಯಕ್ಷ ನಾಗೇಶ್ ಕುಂದಲ್ಪಾಡಿ ಮಾತನಾಡಿ ಹಿಂದೂಗಳನ್ನು ಗುರಿ ಮಾಡಿ ದಾಳಿ ನಡೆಯುತ್ತಿದೆ. ಜಿಲ್ಲೆಯಲ್ಲಿ ಗಾಂಜಾ ದಂಧೆಯನ್ನು ನಿಯಂತ್ರಿಸಲು ಪೊಲೀಸರು ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು. ಗಾಂಜಾ ಸೇವಿಸಿ ಕಾನೂನು ಬಾಹಿರ ಚಟುವಟಿಕೆಗಳಲ್ಲಿ ತೊಡಗಿರುವವರನ್ನು ಪತ್ತೆ ಹಚ್ಚಲು ವಾಹನಗಳನ್ನು ತಪಾಸಣೆಗೆ ಒಳಪಡಿಸಬೇಕು ಎಂದು ಒತ್ತಾಯಿಸಿದರು. ಸುದ್ದಿಗೋಷ್ಠಿಯಲ್ಲಿ ಪಕ್ಷದ ಮಾಧ್ಯಮ ವಕ್ತಾರ ಶಜಿಲ್ ಕೃಷ್ಣ ಉಪಸ್ಥಿತರಿದ್ದರು.

Share. Facebook Twitter Pinterest LinkedIn Tumblr Email WhatsApp
Previous Article*ಕಾಂಗ್ರೆಸ್ ಸರಕಾರ ಬಡವರಿಗೆ ನಿವೇಶನ ಮತ್ತು ವಸತಿ ನೀಡದೆ ವಂಚಿಸಿದೆ : ಭಾರತ ಕಮ್ಯುನಿಸ್ಟ್ ಪಕ್ಷ ಹಾಗೂ ಎಐಟಿಯುಸಿ ಆರೋಪ*
Next Article *ಕೇಂದ್ರ ಸಚಿವ ಹರ್ ದೀಪ್ ಸಿಂಗ್ ವಜಾಕ್ಕೆ ಆಗ್ರಹಿಸಿ ಕೊಡಗು ಮಹಿಳಾ ಕಾಂಗ್ರೆಸ್ ಪ್ರತಿಭಟನೆ*

Website design development company services in Mangalore

Forex Trading Teacher in India

Related Posts

*ಸುಂಟಿಕೊಪ್ಪ ಸರಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ*

February 28, 2026

*ಕೊಡವ ಸಾಹಿತ್ಯ-ಸಂಸ್ಕೃತಿರ ಅಂದೋಳ : ಜಿಲ್ಲೆ ಚಿಕ್ಕದು, ಕೊಡುಗೆ ದೊಡ್ಡದು : ಅಜ್ಜಿಕುಟ್ಟಿರ ಎಸ್.ಪೊನ್ನಣ್ಣ*

February 28, 2026

*ಕಂಬಿಬಾಣೆ ಶ್ರೀ ರಾಮ ಮತ್ತು ಚಾಮುಂಡೇಶ್ವರಿ ದೇವಾಲಯದ ಸಭಾಭವನ ನಿರ್ಮಾಣಕ್ಕೆ ಚಾಲನೆ*

February 28, 2026

*ಕೊಡವ ಸಾಹಿತ್ಯ-ಸಂಸ್ಕೃತಿರ ಅಂದೋಳ : ಜಿಲ್ಲೆ ಚಿಕ್ಕದು, ಕೊಡುಗೆ ದೊಡ್ಡದು : ಅಜ್ಜಿಕುಟ್ಟಿರ ಎಸ್.ಪೊನ್ನಣ್ಣ*

February 28, 2026

ಮಡಿಕೇರಿ ಫೆ.28 NEWS DESK : ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿಯಿಂದ ಸಾಹಿತ್ಯ-ಸಂಸ್ಕೃತಿ, ಭಾಷೆಯ ರಕ್ಷಣೆ ಮುಖ್ಯವಾದ ಜವಾಬ್ದಾರಿಯಾಗಿದ್ದು, ಸತ್ಕಾರಣಕ್ಕಾಗಿ…

*ಕಂಬಿಬಾಣೆ ಶ್ರೀ ರಾಮ ಮತ್ತು ಚಾಮುಂಡೇಶ್ವರಿ ದೇವಾಲಯದ ಸಭಾಭವನ ನಿರ್ಮಾಣಕ್ಕೆ ಚಾಲನೆ*

February 28, 2026

*ವಿದ್ಯಾರ್ಥಿಗಳಿಗೆ ಕವಿಗೋಷ್ಠಿ ಮತ್ತು ಪ್ರಬಂಧ ಸ್ಪರ್ಧೆ : ಭಾಷೆಯ ಒಳ ಮಿಡಿತಗಳು ಅರಿತಾಗ ಸರಳ ಕಾವ್ಯ ಸೃಷ್ಟಿಯಾಗುತ್ತದೆ : ಪತ್ರಕರ್ತ ಜಗದೀಶ್ ಜೋಡುಬಿಟಿ*

February 28, 2026

*ನಾಪೋಕ್ಲು ಪ್ರಕರಣ : ನಾಲ್ವರ ಬಂಧನ*

February 28, 2026

*ಸಂವಿಧಾನ ಮತ್ತು ಪತ್ರಿಕೋದ್ಯಮದ ಕುರಿತ ವಿಚಾರ ಸಂಕಿರಣ : ಕಾರ್ಯಕ್ರಮ ಮಾಧ್ಯಮಗಳು ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಸಮಾಜದ ಒಳಿತಿಗಾಗಿ ಬಳಸಿ : ಶಾಸಕ ಡಾ. ಮಂತರ್ ಗೌಡ ಕರೆ*

February 28, 2026

*ಮಾ.4 ರಂದು ಕುಶಾಲನಗರದಲ್ಲಿ ಕೈಗಾರಿಕೋದ್ಯಮಿಗಳಿಗೆ ಜಾಗೃತಿ ಕಾರ್ಯಕ್ರಮ*

February 28, 2026

*ಕೇಂದ್ರ ಸಚಿವ ಹರ್ ದೀಪ್ ಸಿಂಗ್ ವಜಾಕ್ಕೆ ಆಗ್ರಹಿಸಿ ಕೊಡಗು ಮಹಿಳಾ ಕಾಂಗ್ರೆಸ್ ಪ್ರತಿಭಟನೆ*

February 28, 2026

*ಘಟನೆ ಮರುಕಳಿಸದಂತೆ ಕಠಿಣ ಕ್ರಮ ಕೈಗೊಳ್ಳಿ : ಬಿಜೆಪಿ ಆಗ್ರಹ*

February 28, 2026

*ಕಾಂಗ್ರೆಸ್ ಸರಕಾರ ಬಡವರಿಗೆ ನಿವೇಶನ ಮತ್ತು ವಸತಿ ನೀಡದೆ ವಂಚಿಸಿದೆ : ಭಾರತ ಕಮ್ಯುನಿಸ್ಟ್ ಪಕ್ಷ ಹಾಗೂ ಎಐಟಿಯುಸಿ ಆರೋಪ*

February 28, 2026

*ನಾಪೋಕ್ಲು ಹಲ್ಲೆ ಪ್ರಕರಣ : ಕಠಿಣ ಕ್ರಮಕ್ಕೆ ಸಿಎನ್‌ಸಿ ಒತ್ತಾಯ*

February 28, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.