Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಮೂರ್ನಾಡಿನಲ್ಲಿ ಮಾದಕ ದ್ರವ್ಯ ಸೇವನೆಯ ದುಷ್ಪರಿಣಾಮ ಕುರಿತು ವಿದ್ಯಾರ್ಥಿಗಳಿಗೆ ಅರಿವು*
  • *ಆ.28 ರಂದು ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ*
  • *ಕರ್ನಾಟಕ ಬಾರ್ ಕೌನ್ಸಿಲ್ ನೂತನ ಸದಸ್ಯರಿಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಶಾಸಕ ಪೊನ್ನಣ್ಣ ಭೇಟಿ*
  • *ಕರ್ನಾಟಕ ಬಾರ್ ಕೌನ್ಸಿಲ್ ನೂತನ ಸದಸ್ಯರಿಂದ ಸಿಎಂ, ಶಾಸಕ ಪೊನ್ನಣ್ಣ ಭೇಟಿ*
  • *ದೊಡ್ಡಸ್ಥಿಕೆಯಿಂದ ಪದ್ಧತಿ–ಸಂಸ್ಕೃತಿಯ ಕಡೆಗಣನೆ ಸಲ್ಲದು : ಅಜ್ಜಿನಿಕಂಡ ಸಿ.ಮಹೇಶ್ ನಾಚಯ್ಯ*
  • *ಟೆಂಪೋ ಟ್ರಾವೆಲರ್ ಮೇಲೆ ಮಗುಚಿದ ಲಾರಿ : ನಾಲ್ವರಿಗೆ ಗಾಯ*
  • *ಯಾವುದೇ ಕಾರಣಕ್ಕೂ ಕೊಡಗಿನಲ್ಲಿ ಮೋಡ ಬಿತ್ತನೆ ಮಾಡಲ್ಲ*
  • *ಘಮ ಘಮಿಸಿದ ಆಟಿ ಹಬ್ಬದೂಟದ ಘಮಲು..! ಮಕ್ಕಂದೂರಿನಲ್ಲಿ ಗೌಡ ಮಹಿಳಾ ಒಕ್ಕೂಟದ ಆಟಿ ಜಂಬರ*
  • *ಸುಂಟಿಕೊಪ್ಪದಲ್ಲಿ ಸಂಭ್ರಮದ ಓಣಂ ಆಚರಣೆ*
  • *ಹಾಕತ್ತೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ರೂ.46.86 ಲಕ್ಷ ನಿವ್ವಳ ಲಾಭ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ವಿದ್ಯಾರ್ಥಿಗಳಿಗೆ ಕವಿಗೋಷ್ಠಿ ಮತ್ತು ಪ್ರಬಂಧ ಸ್ಪರ್ಧೆ : ಭಾಷೆಯ ಒಳ ಮಿಡಿತಗಳು ಅರಿತಾಗ ಸರಳ ಕಾವ್ಯ ಸೃಷ್ಟಿಯಾಗುತ್ತದೆ : ಪತ್ರಕರ್ತ ಜಗದೀಶ್ ಜೋಡುಬಿಟಿ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ವಿದ್ಯಾರ್ಥಿಗಳಿಗೆ ಕವಿಗೋಷ್ಠಿ ಮತ್ತು ಪ್ರಬಂಧ ಸ್ಪರ್ಧೆ : ಭಾಷೆಯ ಒಳ ಮಿಡಿತಗಳು ಅರಿತಾಗ ಸರಳ ಕಾವ್ಯ ಸೃಷ್ಟಿಯಾಗುತ್ತದೆ : ಪತ್ರಕರ್ತ ಜಗದೀಶ್ ಜೋಡುಬಿಟಿ*

ಫೆಬ್ರವರಿ 28, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಗೋಣಿಕೊಪ್ಪ ಫೆ.28  NEWS DESK  : ಮನುಷ್ಯನ ಅಂತಕರಣ ಭಾಷೆಯ ಒಳ ಮಿಡಿತಗಳು ತಿಳಿದಾಗ ವಿರಳವಾದ ಮತ್ತು ಸರಳವಾದ ಕಾವ್ಯ ಸೃಷ್ಟಿಯಾಗುವುದು ಎಂದು ಕವಿ ಮತ್ತು ಪತ್ರಕರ್ತ ಜಗದೀಶ್ ಜೋಡುಬಿಟಿ ಅಭಿಪ್ರಾಯ ವ್ಯಕ್ತಪಡಿಸಿದರು. ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್, ಮಡಿಕೇರಿ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು ಆಶ್ರಯದಲ್ಲಿ ಕೈಬುಲಿರ ಬೋಪಯ್ಯ ಜ್ಞಾಪಕಾರ್ಥ ನಡೆದ ಜಿಲ್ಲಾ ಪದವಿ ಕಾಲೇಜು ವಿದ್ಯಾರ್ಥಿಗಳಿಗೆ ಕವಿಗೋಷ್ಠಿ ಮತ್ತು ಪ್ರಬಂಧ ಸ್ಪರ್ಧೆಯ ಬಹುಮಾನ ವಿತರಣಾ ಕಾರ್ಯಕ್ರಮದ ಕವಿಗೋಷ್ಠಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಆಧುನಿಕ ಭಾವನೆಗಳನ್ನು ಪೂರಣಗಳ ಅನುಭವದಲ್ಲಿ ಕರಗಿಸಿ ಅಭಿವ್ಯಕ್ತಿ ಪಡಿಸಿಕೊಂಡಾಗ ಸ್ಥಿರವಾದ ನೆಲೆಯಲ್ಲಿ ಕಾವ್ಯ ನಿಲ್ಲುತ್ತದೆ. ಕ್ಷಿತಿಜದ ದಾಚೆಗೂ ಒಂದು ಕಣ್ಣೋಟ ನೆಟ್ಟಾಗ ಕವಿತೆಗಳು ಪ್ರಬುದ್ಧತೆಯಲ್ಲಿ ಕಾಣಿಸಿಕೊಳ್ಳಲು ಸಾಧ್ಯವಾಗುತ್ತದೆ ಎಂದರು. ಕಾವ್ಯಕಟ್ಟುವುದು ಒಂದು ಕಸುಬುಗಾರಿಕೆ. ಬಿಡಿಯಾದ ಮಲ್ಲಿಗೆಯ ಮೊಗ್ಗನು ಮಾಲೆಯಾಗಿಸುವ ಕುಸುರಿ ಪದಗಳು ಎದೆಯೊಳಗಿನ ಲಾಲಿತ್ಯದ ಗಿಲಿಕಿ ಯಾಗಬೇಕು. ಕವಿತೆಕಟ್ಟುವುದುಧ್ಯಾನಸ್ಥ ಸ್ಥಿತಿಯ ಅವಲಂಬನೆ. ಆಧ್ಯಾತ್ಮದತಪಸ್ಸು, ಮತ್ತು ಹೊನಪು ಎಂದರು. ಕವಿತೆಯನ್ನು ಕಟ್ಟುವುದಲ್ಲ ಅದನ್ನು ಕೆತ್ತಬೇಕು. ಹಾಗೇ ಮಾಡಿದಾಗ ಕವಿತೆಗೆ ಒಂದು ಶಿಲೆಯ ಸೌಂದರ್ಯ ಸಿಗಬಲ್ಲದು. ಇಂತಹ ಕವಿತೆಗಳು ಸೃಷ್ಟಿಯಾದಾಗ ಜನರೆಡೆಯ ದಿಗಂತಗಳಲ್ಲಿ ಕಾವ್ಯ ವಿಸ್ತಾರಗೊಳ್ಳುವುದರಲ್ಲಿ ಯಾವ ಸಂಶಯವೂ ಇಲ್ಲ ಎಂದು ಹೇಳಿದರು. ಕವಿಗೋಷ್ಠಿ ಉದ್ಘಾಟಿಸಿ ಕವಯತ್ರಿ ಕೆ.ಜಿ. ರಮ್ಯ ಮಾತನಾಡಿ, ಕವಿತೆ ಅಂತರಂಗದ ಅನುಭವಗಳ ಶ್ರಾವಿಕ ಅಭಿವ್ಯಕ್ತಿ. ಕವಿತೆ ನಿರಂತರ ಹರಿವು ಅದನ್ನು ಪದಗಳಿಂದ ಕಟ್ಟಿಹಾಕಲು ಸಾಧ್ಯವಿಲ್ಲ. ಸಾಹಿತ್ಯದಲ್ಲಿ ಕಾವ್ಯ ಪ್ರಕಾರ ಸರಳ ಎನಿಸಿದರೂ ಅಪಾರ ಸಮಯವನ್ನು ಮತ್ತು ಅಂತರ್ ಶಕ್ತಿಯನ್ನು ಕವಿತೆ ಪಡೆದುಕೊಳ್ಳುತ್ತದೆ. ಶಬ್ದಗಳ ಚೌಕಟ್ಟಿಗೆ ನಿಬರ್ಂಧಿಸಿ ಕವಿತೆ ಬರೆದಾಗ ನಮ್ಮೊಳಗಿನ ಕವಿ ನಿರ್ಜೀವಿ ಆಗುತ್ತಾನೆ. ಕವಿತೆ ನಮ್ಮೊಳಗೆ ನಮ್ಮನ್ನು ಬೇರೆಯವರೊಳಗೆ ನಮ್ಮನ್ನು ಕಂಡುಕೊಳ್ಳಲು ಇರುವ ಸಾಧನ. ನಮ್ಮಚಿತ್ತಾ ಹುತ್ತಗಟ್ಟಬೇಕು. ಧ್ಯಾನಸ್ಥ ಸ್ಥಿತಿಗೆ ಕುಂಡೊಯ್ಯಬೇಕು. ಕವಿತೆ ವಸ್ತು ಪ್ರಕಾರದಲ್ಲಿ ಕಾಡಬೇಕು. ಇಂತಹ ಕವಿತೆಗಳನ್ನ ಬರೆಯುವುದು ಉತ್ತಮ ಎಂದರು. ಮಾನವೀಯ ಮೌಲ್ಯಗಳನ್ನು ಬೆಳೆಸಿಕೊಳ್ಳುವುದರ ಜತೆಗೆ ಭಾಷೆಯನ್ನು, ನಿಯಮಗಳನ್ನು ಮೀರಿ ಕವಿತೆಗಳನ್ನು ಹೊಸ ಹೊಸ ಪ್ರಯೋಗಳೊಂದಿಗೆ ಹೊಸಯುವ ವಿಚಾರದ ಕಡೆಯುವ ಸಮುದಾಯ ಮನ ಹಾಯಿಸಬೇಕು ಎಂದು ಸಲಹೆ ನೀಡಿದರು. ಕೊಡಗು ಜಿಲ್ಲಾ ಕಸಾಪ ಅಧ್ಯಕ್ಷ ಎಂ.ಪಿ.ಕೇಶವ ಕಾಮತ್ ಮಾತನಾಡಿ, ದತ್ತಿನಿಧಿ ಕಾರ್ಯಕ್ರಮಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸುವ ಕಾರ್ಯವನ್ನು ಪರಿಷತ್ ಮುಂದುವರಿಸಿದೆ. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳ ಕಡೆ ಸಾಹಿತ್ಯದ ಒಲವನ್ನು ಮೂಡಿಸುವ ಸಲುವಾಗಿ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ವಿದ್ಯಾರ್ಥಿಗಳಿಗೆ ಪ್ರಬಂಧ ಸ್ಪರ್ಧೆಯನ್ನು ಏರ್ಪಡಿಸಿ ಸುಮಾರು 30ಕ್ಕೂ ಹೆಚ್ಚು ವಿದ್ಯಾರ್ಥಿಗಳು ಇದರಲ್ಲಿ ಭಾಗವಹಿಸಿದರು. ಅವುಗಳಲ್ಲಿ ಉತ್ತಮ ನಾಲ್ಕು ಪ್ರಬಂಧಗಳನ್ನು ಆಯ್ಕೆ ಮಾಡಿ ವಿಜೇತರನಾಗಿ ಮಾಡಲಾಗಿದೆ. ಈ ಕಾರ್ಯಕ್ರಮದ ಅಂಗವಾಗಿ ಕವಿಗೋಷ್ಠಿಯನ್ನುಆಯೋಜಿಸುವ ಮೂಲಕ ಮಕ್ಕಳಲ್ಲಿ ಪ್ರೆರಣಾ ದಾಯಕ ಆಸಕ್ತಿಯನ್ನು ಮೂಡಿಸಲಾಗುತ್ತಿದೆ ಎಂದರು. ಕೊಡಗು ಜಿಲ್ಲಾ ಕಸಾಪ ಮಾಜಿ ಅಧ್ಯಕ್ಷ ಟಿ.ಪಿ.ರಮೇಶ್ ಮಾತನಾಡಿ, ಸಾಹಿತ್ಯ ಪ್ರಕಾರಗಳನ್ನು ಹೆಚ್ಚು ತಿಳಿದುಕೊಳ್ಳುವ ಮೂಲಕ ಮಾನವೀಯ ಮೌಲ್ಯಗಳನ್ನು ಬಳಸಿಕೊಳ್ಳಬೇಕು ಎಂದರು. ದತ್ತಿ ದಾನಿಗಳಾದ ಕೈಬುಲಿರ ಪಾರ್ವತಿ ಬೋಪಯ್ಯ ಮಾತನಾಡಿ, ಮಕ್ಕಳು ಸಾಮಾಜಿಕ ಮೌಲ್ಯಗಳ ಬಗ್ಗೆ ಹೆಚ್ಚು ಆಸಕ್ತರಾಗಿ ವಿಚಾರಗಳನ್ನು ತಿಳಿದುಕೊಳ್ಳುವ ಮೂಲಕ ಸಮಾಜದ ಪ್ರಾಮುಖ್ಯತೆಯಾಗಿ ಕಾಣಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು. ಸರ್ಕಾರಿ ಪ್ರಥಮದರ್ಜೆ ಮಹಿಳಾ ಕಾಲೇಜಿನ ಪ್ರಾಂಶುಪಾಲೆ ನಿರ್ಮಲ ಮಾತನಾಡಿ, ಕಲಿಕೆ ಎಂಬುವುದು ಪ್ರತಿಯೊಬ್ಬ ವ್ಯಕ್ತಿಯ ನಿರಂತರವಾದ ಸಾಧನೆಯಾಗಿದೆ. ವಿಷಯ ವಸ್ತುಗಳನ್ನ ಹಂತಹಂತವಾಗಿಕಲಿಯುವ ಮೂಲಕ ವಿದ್ಯಾರ್ಥಿಗಳು ಪ್ರೌಢತೆಯನ್ನ ಗಳಿಸಿಕೊಳ್ಳಬೇಕು ಎಂದು ಹೇಳಿದರು. ಜಿಲ್ಲೆಯ ವಿವಿಧ ಕಾಲೇಜುಗಳಿಂದ ಆಗಮಿಸಿದ ಸುಮಾರು 25ಕ್ಕೂ ಹೆಚ್ಚು ವಿದ್ಯಾರ್ಥಿಗಳು ಕವಿತ ವಾಚನ ಮಾಡಿದರು. ಪ್ರಬಂಧ ಸ್ಪರ್ಧೆ ವಿಜೇತರುಗಳಾದ ಮನ ಕೆ.ಆರ್., ಫಹಿನಾ ಟಿ.ಎ, ಅನುಷಾ ಪಿ.ಆರ್, ಪ್ರೇಕ್ಷ ಜಿ.ಎಂ ಪ್ರೋತ್ಸಾಹಕರ ಬಹುಮಾನ ಪಡೆದುಕೊಂಡರು. ಕ.ಸಾ.ಪ ಜಿಲ್ಲಾ ಸಂಘಟನಾತ್ಮಕ ಕಾರ್ಯದರ್ಶಿ ವಾಸುರೈ, ಪ್ರಧಾನ ಕಾರ್ಯದರ್ಶಿ ರೇವತಿ ರಮೇಶ್, ಕಾಲೇಜಿನ ಉಪನ್ಯಾಸಕರು, ಅಭಿವೃದ್ಧಿ ಸಮಿತಿ ಸದಸ್ಯೆ ಪ್ರೇಮ ಇದ್ದರು.

 

 

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಮೂರ್ನಾಡಿನಲ್ಲಿ ಮಾದಕ ದ್ರವ್ಯ ಸೇವನೆಯ ದುಷ್ಪರಿಣಾಮ ಕುರಿತು ವಿದ್ಯಾರ್ಥಿಗಳಿಗೆ ಅರಿವು*

ಆಗಷ್ಟ್ 26, 2026

*ಆ.28 ರಂದು ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ*

ಆಗಷ್ಟ್ 26, 2026

*ಕರ್ನಾಟಕ ಬಾರ್ ಕೌನ್ಸಿಲ್ ನೂತನ ಸದಸ್ಯರಿಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಶಾಸಕ ಪೊನ್ನಣ್ಣ ಭೇಟಿ*

ಆಗಷ್ಟ್ 26, 2026

*ಆ.28 ರಂದು ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ*

ಆಗಷ್ಟ್ 26, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಆ.26 NEWS DESK : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಇವರ ಸಹಯೋಗದೊಂದಿಗೆ ಬ್ರಹ್ಮಶ್ರೀ…

*ಕರ್ನಾಟಕ ಬಾರ್ ಕೌನ್ಸಿಲ್ ನೂತನ ಸದಸ್ಯರಿಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಶಾಸಕ ಪೊನ್ನಣ್ಣ ಭೇಟಿ*

ಆಗಷ್ಟ್ 26, 2026

*ಕರ್ನಾಟಕ ಬಾರ್ ಕೌನ್ಸಿಲ್ ನೂತನ ಸದಸ್ಯರಿಂದ ಸಿಎಂ, ಶಾಸಕ ಪೊನ್ನಣ್ಣ ಭೇಟಿ*

ಆಗಷ್ಟ್ 26, 2026

*ದೊಡ್ಡಸ್ಥಿಕೆಯಿಂದ ಪದ್ಧತಿ–ಸಂಸ್ಕೃತಿಯ ಕಡೆಗಣನೆ ಸಲ್ಲದು : ಅಜ್ಜಿನಿಕಂಡ ಸಿ.ಮಹೇಶ್ ನಾಚಯ್ಯ*

ಆಗಷ್ಟ್ 26, 2026

*ಟೆಂಪೋ ಟ್ರಾವೆಲರ್ ಮೇಲೆ ಮಗುಚಿದ ಲಾರಿ : ನಾಲ್ವರಿಗೆ ಗಾಯ*

ಆಗಷ್ಟ್ 26, 2026

*ಯಾವುದೇ ಕಾರಣಕ್ಕೂ ಕೊಡಗಿನಲ್ಲಿ ಮೋಡ ಬಿತ್ತನೆ ಮಾಡಲ್ಲ*

ಆಗಷ್ಟ್ 26, 2026

*ಘಮ ಘಮಿಸಿದ ಆಟಿ ಹಬ್ಬದೂಟದ ಘಮಲು..! ಮಕ್ಕಂದೂರಿನಲ್ಲಿ ಗೌಡ ಮಹಿಳಾ ಒಕ್ಕೂಟದ ಆಟಿ ಜಂಬರ*

ಆಗಷ್ಟ್ 26, 2026

*ಸುಂಟಿಕೊಪ್ಪದಲ್ಲಿ ಸಂಭ್ರಮದ ಓಣಂ ಆಚರಣೆ*

ಆಗಷ್ಟ್ 26, 2026

*ಹಾಕತ್ತೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ರೂ.46.86 ಲಕ್ಷ ನಿವ್ವಳ ಲಾಭ*

ಆಗಷ್ಟ್ 26, 2026

*ಕಸ್ತೂರಿ ರಂಗನ್ ವರದಿಯಿಂದ 53 ಗ್ರಾಮಗಳನ್ನು ಕೈಬಿಡಲು ಆಗ್ರಹ : ಸೆ.11ರಂದು ಬೃಹತ್ ಪ್ರತಿಭಟನೆ*

ಆಗಷ್ಟ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.