ಮಡಿಕೇರಿ, NEWS DESK ಮಾ.02:-ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಮಾರ್ಚ್, 06 ರಂದು ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ಮಿನಿ ಉದ್ಯೋಗ ಮೇಳ ನಡೆಯಲಿದೆ.
ಉದ್ಯೋಗ ಮೇಳದಲ್ಲಿ ಅಪೋಲೋ ಫಾರ್ಮಸಿ ಮೈಸೂರು, ಜಾಯ್ ಆಲುಕಾಸ್ ಜ್ಯುವೆಲ್ಲರಿ ಮೈಸೂರು, ಕಲ್ಯಾಣಿ ಮೋಟಾರ್ಸ್ ಕಾರ್ ಶೋರೂಂ, ಮಡಿಕೇರಿ, ಕೂರ್ಗ್ ಕ್ಲಿಪ್ಸ್ ರೆಸಾರ್ಟ್ ಸಿದ್ದಾಪುರ, ಕ್ಲಬ್ ಮಹೀಂದ್ರ ರೆಸಾರ್ಟ್, ಮಡಿಕೇರಿ, ಆಲ್ಫಾ ಟೆಕ್ನಾಲಜಿ ಇವರು ತಮ್ಮ ಸಂಸ್ಥೆಗಳಲ್ಲಿ ಖಾಲಿಯಿರುವ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಿದ್ದಾರೆ.
ಈ ಮೇಳದಲ್ಲಿ ಖಾಸಗಿ ಕಂಪೆನಿಗಳು ಭಾಗವಹಿಸಿ ತಮ್ಮಲ್ಲಿ ಖಾಲಿಯಿರುವ ಹುದ್ದೆಗಳನ್ನು ನೇರ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಿದ್ದಾರೆ. ಈ ಉದ್ಯೋಗಮೇಳದಲ್ಲಿ ಎಸ್‍ಎಸ್‍ಎಲ್‍ಸಿ, ಪಿಯುಸಿ, ಐಟಿಐ, ಡಿಪ್ಲೋಮ, ಪದವಿ ಹಾಗೂ ಸ್ನಾತಕೋತ್ತರ ಪದವಿ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಭಾಗವಹಿಸಿ ಉದ್ಯೋಗದ ನೆರವನ್ನು ಪಡೆಯಬಹುದು. ಅಭ್ಯರ್ಥಿಗಳು ವಿದ್ಯಾರ್ಹತೆಯ ಮೂಲ ದಾಖಲಾತಿಗಳು, ಅನುಭವ ಪ್ರಮಾಣಪತ್ರ(ಅನ್ವಯಿಸುವವರಿಗೆ ಮಾತ್ರ) ಹಾಗೂ ಸ್ವ-ವಿವರಗಳ ಪ್ರತಿಗಳೊಂದಿಗೆ ಉದ್ಯೋಗಮೇಳಕ್ಕೆ ಹಾಜರಾಗುವಂತೆ ಜಿಲ್ಲಾ ಉದ್ಯೋಗಾಧಿಕಾರಿ ಸಿ.ಬಿ.ಮಂಜುನಾಥ್ ಅವರು ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗೆ ಜಾಬ್ ಕೋಆರ್ಡಿನೇಟರ್ 8296020826 ನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಉದ್ಯೋಗಾಧಿಕಾರಿ ಸಿ.ಬಿ.ಮಂಜುನಾಥ್ ಅವರು ತಿಳಿಸಿದ್ದಾರೆ.
Breaking News
- *ಜಿಲ್ಲಾಧಿಕಾರಿಗಳನ್ನು ಭೇಟಿಯಾದ ಕಾವೇರಿ ನದಿ ಸ್ವಚ್ಛತಾ ಆಂದೋಲನ ಸಮಿತಿ*
- *ಅತ್ತೂರು ಜ್ಞಾನಗಂಗಾ ಶಾಲೆಯಲ್ಲಿ ಕ.ಸಾ.ಪ.ವತಿಯಿಂದ ಸೂದನ ರಾಘವಯ್ಯ ದತ್ತಿ ಕಾರ್ಯಕ್ರಮ: ಎಸ್ಸೆಸ್ಸೆಲ್ಸಿ ಪ್ರತಿಭಾವಂತ ವಿದ್ಯಾರ್ಥಿನಿ ನವ್ಯಳಿಗೆ ಪ್ರತಿಭಾ ಪುರಸ್ಕಾರ: ವಿದ್ಯಾರ್ಥಿಗಳು ಸಾಹಿತ್ಯಾ ಭಿರುಚಿ ಬೆಳೆಸಿಕೊಳ್ಳಲು ಜಿಲ್ಲಾ ಕಸಾಪ ಅಧ್ಯಕ್ಷ ಕೇಶವಕಾಮತ್ ಕರೆ*
- *ಕೊಡಗು ಜಿಲ್ಲೆಯಲ್ಲಿ ಉತ್ತಮ ಮಳೆ : ನದಿಗಳಲ್ಲಿ ನೀರಿನ ಮಟ್ಟ ಏರಿಕೆ*
- *ಸೆ.1 ರಂದು ಸಿಎನ್‌ಸಿಯಿಂದ 31ನೇ ವರ್ಷದ ಕೈಲ್ ಪೊವ್ದ್ ಆಚರಣೆ*
- *ಆದಾಯ ತೆರಿಗೆ ಮತ್ತು ಸ್ಪರ್ಧಾತ್ಮಕ ಪರೀಕ್ಷೆಗಳ ಕುರಿತು ಫೀ.ಮಾ. ಕಾರ್ಯಪ್ಪ ಕಾಲೇಜ್ ನಲ್ಲಿ ಕಾರ್ಯಾಗಾರ*
- *ಕಂದಾಯ ಮತ್ತು ಅರಣ್ಯ ಇಲಾಖೆ ಜಂಟಿ ಸರ್ವೆ ನಡೆಸಲಿ : ಕೊಡಗು ಬಿಜೆಪಿ ಒತ್ತಾಯ*
- *ಕೊಡಗಿನಲ್ಲಿ ಕಸ್ತೂರಿ ರಂಗನ್ ವರದಿ: ಸಾಧಕ-ಬಾಧಕಗಳ ಕುರಿತು ಮಹತ್ವದ ಸಮಾಲೋಚನಾ ಸಭೆ*
- *ವಿರಾಜಪೇಟೆಯಲ್ಲಿ ವಿಜೃಂಭಣೆಯ ಓಣಂ ಆಚರಣೆ: ಸೆಪ್ಟೆಂಬರ್ 6ರಂದು ಮಹಾಬಲಿ ಮೆರವಣಿಗೆ, ಸದ್ಯ ಹಾಗೂ ಸಾಂಸ್ಕೃತಿಕ ವೈಭವ*
- *ಮೈಸೂರು ದಸರಾ : ದುಬಾರೆ ಶಿಬಿರದಿಂದ ಗಜ ಪಯಣ*
- *ವಿರಾಜಪೇಟೆಯಲ್ಲಿ ಮದ್ಯಾವರ್ಜನಾ ಶಿಬಿರದ 2ನೇ ಹಂತದ ಪೂರ್ವಭಾವಿ ಸಭೆ: ಸಿದ್ಧತೆ ಹಾಗೂ ಅತಿಥಿಗಳ ಆಯ್ಕೆ ಕುರಿತು ಸುದೀರ್ಘ ಚರ್ಚೆ*







