ಕುಟ್ಟ ಠಾಣಾ ವ್ಯಾಪ್ತಿಯ ಕೊಡಂಗೆ ಜೇನುಕುರುಬರ ಹಾಡಿಗೆ ಮಹಿಳಾ ಠಾಣೆಯ ಪಿಐ ಉಮೇಶ್ ಕುಮಾರ್ ಮತ್ತು ಕುಟ್ಟ ಠಾಣೆ ಪಿಎಸ್‌ಐ ತಮ್ಮಯ್ಯ ಮತ್ತು ಮಕ್ಕಳ ವಿಶೇಷ ಪೊಲೀಸ್ ಘಟಕದ ಸಿಬ್ಬಂದಿಗಳು ಭೇಟಿ ನೀಡಿ ಹಾಡಿಯ ವಾಸಿಗಳಿಗೆ ಪೋಕ್ಸೋ ಕಾಯ್ದೆ, ಬಾಲ್ಯವಿವಾಹ, ಮದ್ಯಪಾನ ಮತ್ತು ಮಾದಕ ವಸ್ತುಗಳ ದುಷ್ಪರಿಣಾಮಗಳ ಬಗ್ಗೆ ಜಾಗೃತಿ ಮೂಡಿಸಿದರು.

ಅಲ್ಲದೆ ಶಾಲೆಯಿಂದ ಹೊರಗುಳಿದ ಮಕ್ಕಳ ಬಗ್ಗೆ, ವಿವಿಧ ಸಹಾಯವಾಣಿ ಸಂಖ್ಯೆಗಳಾದ 1098, 112, 1930 ಗಳ ಬಗ್ಗೆ ಮಾಹಿತಿ ನೀಡಿ ಹಾಡಿಯ ವಾಸಿಗಳನ್ನು ಸಮಾಜದ ಮುಖ್ಯವಾಹಿನಿಗೆ ತರುವ ಉದ್ದೇಶದಿಂದ ನಡೆಸಲಾದ ಈ ಜಾಗೃತಿ ಕಾರ್ಯಕ್ರಮದಲ್ಲಿ ಸುಮಾರು 50 ರಿಂದ 60 ಜನ ಹಾಡಿಯ ನಿವಾಸಿಗಳು ಸೇರಿದ್ದರು.







