Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಐಸಿಎಸ್‌ಇ 10 ನೇ ತರಗತಿ ಪರೀಕ್ಷೆಯಲ್ಲಿ ಅಧೃತ್ ಶರ್ಮ ಕೊಡಗಿಗೆ ಪ್ರಥಮ*
  • *ಇಂಟರ್ ಗೆಲ್ ಫೈಟಿಂಗ್ ಚಾಂಪಿಯನ್ ಶಿಪ್ : ಪದಕ ಗೆದ್ದ ವಿದ್ಯಾರ್ಥಿಗಳು*
  • *ರೆಗ್ಯೂಲರ್ ಡಿಪ್ಲೋಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್ ತರಬೇತಿಗೆ ಅರ್ಜಿ ಆಹ್ವಾನ*
  • *ಮೇ 12 ರಂದು ಉದ್ಯೋಗ ಮೇಳ*
  • *ಹುದ್ದೆಗೆ ಅರ್ಜಿ ಆಹ್ವಾನ*
  • *ಮೇ 10 ರಂದು ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ
  • *ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಪತ್ರ ಬರೆದ ಸಂಸದ ಯದುವೀರ್‌ ಒಡೆಯರ್‌*
  • *ಎನ್‍ಡಿಎ ಫಲಿತಾಂಶ ಪ್ರಕಟ : ಕ್ರಿಯೇಟಿವ್ ಕಾಲೇಜಿನ 4 ಮಂದಿ ವಿದ್ಯಾರ್ಥಿಗಳು ಆಯ್ಕೆ*
  • *ಅರೆಭಾಷೆ ಸಾಂಸ್ಕೃತಿಕ ಸಂಭ್ರಮ : ಬಹು ಸಂಸ್ಕೃತಿ ಉತ್ಸವಗಳು ಭಾಷೆ ಮತ್ತು ಸಂಸ್ಕೃತಿಯ ಉಳಿವಿಗೆ ಪೂರಕ : ಸದಾನಂದ ಮಾವಜಿ*
  • *ಶಾಸಕ ಡಾ.ಮಂತರ್ ಗೌಡ ಅವರ ಕಾಳಜಿಗೆ ಸಾರ್ವಜನಿಕರ ಮೆಚ್ಚುಗೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಆದಿವಾಸಿಗಳ ವಿವಿಧ ಬೇಡಿಕೆ ಆಲಿಸಿದ ಜಿಲ್ಲಾಧಿಕಾರಿ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಆದಿವಾಸಿಗಳ ವಿವಿಧ ಬೇಡಿಕೆ ಆಲಿಸಿದ ಜಿಲ್ಲಾಧಿಕಾರಿ*

ಮಾರ್ಚ್ 7, 20261 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ, NEWS DESK ಮಾ.೭ : ನಾಗರಹೊಳೆಯ ಆದಿವಾಸಿ ನಿವಾಸಿಗಳು ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸುತ್ತಿದ್ದು, ಈ ಹಿನ್ನೆಲೆ ಅರಣ್ಯ ಹಕ್ಕು ಕಾಯ್ದೆಯಡಿ ಮತ್ತೊಮ್ಮೆ ಪರಿಶೀಲಿಸಲು ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ತೀರ್ಮಾನಿಸಲಾಯಿತು.
ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ನಾಗರಹೊಳೆ ಭಾಗದ ಹಾಡಿಗಳಲ್ಲಿನ ಅರಣ್ಯ ಹಕ್ಕು ಕಾಯ್ದೆ ಅರ್ಜಿಗಳ ವಿಲೇವಾರಿ ಬಗ್ಗೆ ಮತ್ತು ಮೂಲಭೂತ ಸೌಕರ್ಯಗಳ ಸಮಸ್ಯೆಗಳ ಕುರಿತು ಹಾಡಿ ಮುಖಂಡರು ಜಿಲ್ಲಾಧಿಕಾರಿ ಅವರ ಗಮನ ಸೆಳೆದರು. ರಾಜ್ಯ ಮಟ್ಟದ ಅರಣ್ಯ ಹಕ್ಕು ಮೇಲುಸ್ತುವಾರಿ ಸಮಿತಿ ಸದಸ್ಯರಾದ ನಾಣಚ್ಚಿ ಗದ್ದೆಹಾಡಿಯ ರಮೇಶ್, ಬ್ರಹ್ಮಗಿರಿ-ಕಾಂತೂರು ಹಾಡಿಯ ಪ್ರಕಾಶ್ ಹಾಗೂ ಮುತ್ತಪ್ಪ ಅವರು ಮಾತನಾಡಿ, ಕಾನೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬ್ರಹ್ಮಗಿರಿ ಕಾಂತೂರು-ಹಾಡಿಯ ಅರಣ್ಯ ಹಕ್ಕು ಅರ್ಜಿಗಳ ಮರು ಸರ್ವೆ ನಡೆಸಿ ಹಕ್ಕು ಪತ್ರ ವಿತರಿಸಲು ಕೋರಿದರು.
ನಾಗರಹೊಳೆ ಹಾಡಿಯ ತಿಮ್ಮ ಹಾಗೂ ಶಿವು ಮಾತನಾಡಿ, ಜಿಲ್ಲೆಯ ಪಿವಿಟಿಜಿ ಜನಾಂಗದವರಿಗೆ ಹ್ಯಾಬಿಟೇಟ್ ಹಕ್ಕು ನೀಡಲು, ಸಮುದಾಯ ಹಕ್ಕುಗಳಿಗೆ ಹಕ್ಕು ಪತ್ರ ವಿತರಿಸಲು ಕೋರಿದರು. ಅಲ್ಲದೇ ಸಾಕ್ಷ್ಯ ಲಭ್ಯವಿಲ್ಲವೆಂದು ತಿರಸ್ಕರಿಸಿರುವ ಅರ್ಜಿಗಳ ಸ್ಥಳ ಮಹಜರು ಮಾಡಿ ಹಕ್ಕು ಪತ್ರ ವಿತರಿಸುವಂತೆ ಕೋರಿದರು.


ಮುಖಂಡರಾದ ಪುಷ್ಪ ಅವರು ಮಾತನಾಡಿ, ದೇವರಪುರ ದೇವರಕಾಡು ಅರಣ್ಯ ಹಕ್ಕು ಅರ್ಜಿಗಳ ಮರು ಸರ್ವೆ ನಡೆಸುವಂತೆ ಕೋರಿದರು.
ಬೊಮ್ಮಾಡು ಹಾಡಿಯ ಸೋಮಯ್ಯ ಮಾತನಾಡಿ, ಈಗಾಗಲೇ ನೀಡಿರುವ ಹಕ್ಕು ಪತ್ರದಲ್ಲಿನ ಜಾಗದ ವಿಸ್ತೀರ್ಣದಲ್ಲಿ ಅನ್ಯಾಯವಾಗಿದೆ ಮತ್ತೊಮ್ಮೆ ಪರಿಶೀಲಿಸಿ ಹಕ್ಕು ಪತ್ರ ಸರಿಪಡಿಸುವಂತೆ ಕೋರಿದರು.
ಈ ಸಂದರ್ಭ ಮಾತನಾಡಿದ ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಅವರು, ಇಲಾಖೆ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿ ಸಮಸ್ಯೆಯನ್ನು ಹಂತ ಹಂತವಾಗಿ ಬಗೆಹರಿಸುವಂತೆ ಸಂಬಂಧಿಸಿದ ಇಲಾಖೆಗಳಿಗೆ ನಿರ್ದೇಶನ ನೀಡಿದರು.
ಅಲ್ಲದೆ ಪ್ರತಿ ತಿಂಗಳು ತಾಲ್ಲೂಕು ಮಟ್ಟದಲ್ಲಿ ಆದಿವಾಸಿಗಳ ಕುಂದುಕೊರತೆ ಸಭೆ ನಡೆಸಿ ಸಮಸ್ಯೆ ಪರಿಹಾರಕ್ಕೆ ಇಲಾಖಾಧಿಕಾರಿಗೆ ಸೂಚಿಸಿದರು.
ಸಭೆಯಲ್ಲಿ ಯೋಜನಾ ಸಮನ್ವಯಾಧಿಕಾರಿ ಹೊನ್ನೇಗೌಡ, ತಾಲ್ಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳಾದ ತೇಜರಾಜು, ಸಿದ್ದೇಗೌಡ, ಬಾಲಕೃಷ್ಣ ರೈ, ಹಾಡಿ ಮುಖಂಡರುಗಳಾದ ರಮೇಶ್, ಪ್ರಕಾಶ್, ತಿಮ್ಮ, ಶಿವು, ಕಾಳ, ಸೋಮಯ್ಯ, ಪುಷ್ಪ ಸೇರಿದಂತೆ ಇತರರು ಹಾಜರಿದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಐಸಿಎಸ್‌ಇ 10 ನೇ ತರಗತಿ ಪರೀಕ್ಷೆಯಲ್ಲಿ ಅಧೃತ್ ಶರ್ಮ ಕೊಡಗಿಗೆ ಪ್ರಥಮ*

ಮೇ 10, 2026

*ಇಂಟರ್ ಗೆಲ್ ಫೈಟಿಂಗ್ ಚಾಂಪಿಯನ್ ಶಿಪ್ : ಪದಕ ಗೆದ್ದ ವಿದ್ಯಾರ್ಥಿಗಳು*

ಮೇ 10, 2026

*ರೆಗ್ಯೂಲರ್ ಡಿಪ್ಲೋಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್ ತರಬೇತಿಗೆ ಅರ್ಜಿ ಆಹ್ವಾನ*

ಮೇ 9, 2026

*ಇಂಟರ್ ಗೆಲ್ ಫೈಟಿಂಗ್ ಚಾಂಪಿಯನ್ ಶಿಪ್ : ಪದಕ ಗೆದ್ದ ವಿದ್ಯಾರ್ಥಿಗಳು*

ಮೇ 10, 2026 ಇತ್ತೀಚಿನ ಸುದ್ದಿಗಳು ಕರ್ನಾಟಕ ಕೊಡಗು ಜಿಲ್ಲೆ

ಮಡಿಕೇರಿ NEWS DESK ಮೇ 10 : ಇಂಡಿಯನ್ ಇಂಟರ್ ಗೆಲ್ ಫೈಟಿಂಗ್ ಅಸೋಸಿಯೇಷನ್ ವತಿಯಿಂದ ಉತ್ತರ ಪ್ರದೇಶದ ಸಹರಂಗಪುರದಲ್ಲಿ…

*ರೆಗ್ಯೂಲರ್ ಡಿಪ್ಲೋಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್ ತರಬೇತಿಗೆ ಅರ್ಜಿ ಆಹ್ವಾನ*

ಮೇ 9, 2026

*ಮೇ 12 ರಂದು ಉದ್ಯೋಗ ಮೇಳ*

ಮೇ 9, 2026

*ಹುದ್ದೆಗೆ ಅರ್ಜಿ ಆಹ್ವಾನ*

ಮೇ 9, 2026

*ಮೇ 10 ರಂದು ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ

ಮೇ 9, 2026

*ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಪತ್ರ ಬರೆದ ಸಂಸದ ಯದುವೀರ್‌ ಒಡೆಯರ್‌*

ಮೇ 9, 2026

*ಎನ್‍ಡಿಎ ಫಲಿತಾಂಶ ಪ್ರಕಟ : ಕ್ರಿಯೇಟಿವ್ ಕಾಲೇಜಿನ 4 ಮಂದಿ ವಿದ್ಯಾರ್ಥಿಗಳು ಆಯ್ಕೆ*

ಮೇ 9, 2026

*ಅರೆಭಾಷೆ ಸಾಂಸ್ಕೃತಿಕ ಸಂಭ್ರಮ : ಬಹು ಸಂಸ್ಕೃತಿ ಉತ್ಸವಗಳು ಭಾಷೆ ಮತ್ತು ಸಂಸ್ಕೃತಿಯ ಉಳಿವಿಗೆ ಪೂರಕ : ಸದಾನಂದ ಮಾವಜಿ*

ಮೇ 9, 2026

*ಶಾಸಕ ಡಾ.ಮಂತರ್ ಗೌಡ ಅವರ ಕಾಳಜಿಗೆ ಸಾರ್ವಜನಿಕರ ಮೆಚ್ಚುಗೆ*

ಮೇ 9, 2026

*ರಾಷ್ಟ್ರಮಟ್ಟದ ಸೆಸ್ಟೋಬಾಲ್ ಕ್ರೀಡೆ : ಮೊದಲ ಬಾರಿಗೆ ಚಿನ್ನ ಗೆದ್ದ ಕರ್ನಾಟಕ ತಂಡ : ಕೀರ್ತಿ ತಂದ ಕೊಡಗಿನ ಕ್ರೀಡಾಪಟುಗಳು*

ಮೇ 9, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.