Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕೆಎಸ್‌ಐಸಿ ಆವರಣದಲ್ಲಿ ಸ್ಡೇಡಿಯಂ ನಿರ್ಮಾಣ ಯೋಜನೆಗೆ ತಿಲಾಂಜಲಿ : ಸಂಘಟಿತ ಹೋರಾಟಕ್ಕೆ ಸಂದ ಜಯ : ಧನ್ಯವಾದ ಸಲ್ಲಿಸಿದ ಸಂಸದ ಯದುವೀರ್‌ ಒಡೆಯರ್‌*
  • *ಮಡಿಕೇರಿ : ಮಾ.11 ರಂದು ನಗರಸಭೆಯ ಆಯವ್ಯಯ ಸಭೆ*
  • *ಮಾ.12ರ ಹೋರಾಟಕ್ಕೆ ಸಿಪಿಐಎಂ ಪಕ್ಷದ ವಿರಾಜಪೇಟೆ ಘಟಕ ಬೆಂಬಲ : ಕೆ.ಎಸ್ ರಮೇಶ್*
  • *ಕ.ಸಾ.ಪ ದತ್ತಿ ಕಾರ್ಯಕ್ರಮ : ಕೊಡಗಿನ ಸಂಸ್ಕೃತಿಯ ಮೂಲ ಸ್ವರೂಪ ಪ್ರಕೃತಿ ಆರಾಧನೆ : ಮಧೋಶ್ ಪೂವಯ್ಯ*
  • *ಪಂಜರಪೇಟೆ ಕೊಡವ ಕೇರಿಯಿಂದ ವೃದ್ಧಾಶ್ರಮಕ್ಕೆ ಭೇಟಿ*
  • *ಕೊಡವ ಕೂಟಾಳಿಯಡ ಕೂಟದಿಂದ ಸಾಧಕ ಮಹಿಳೆಯರಿಗೆ ಸನ್ಮಾನ*
  • *ಆಫ್ ರೋಡ್ ಚಾಲೆಂಜರ್ಸ್ ಸ್ಪರ್ಧೆ : ಮಡಿಕೇರಿಯ ಜತೀನ್ ಕರ್ಕೆರ ಹಾಗೂ ಹಾರ್ಧಿಕ್ ಕರ್ಕೆರ ದ್ವಿತೀಯ*
  • *ಸೋಮವಾರಪೇಟೆಯಲ್ಲಿ ಬಿಜೆಪಿ ಮಂಡಲ ಯುವ ಮೋರ್ಚಾದಿಂದ ಪ್ರತಿಭಟನೆ*
  • *ಕಾಡಾನೆ ದಾಳಿಗೆ ಗ್ರಾ.ಪಂ ಮಾಜಿ ಸದಸ್ಯೆ ಬಲಿ*
  • *ಅನಾರೋಗ್ಯದಿಂದ ಅಭಿ ಸಾವು*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಮಡಿಕೇರಿಯಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ : ಮಹಿಳೆಯರಿಗೆ ಆತ್ಮವಿಶ್ವಾಸ ಮತ್ತು ಸಾಮಾಜಿಕ ಬೆಂಬಲ ಅತ್ಯಗತ್ಯ : ಕವಯತ್ರಿ ಸ್ಮಿತಾ ಅಮೃತಾರಾಜ್*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಮಡಿಕೇರಿಯಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ : ಮಹಿಳೆಯರಿಗೆ ಆತ್ಮವಿಶ್ವಾಸ ಮತ್ತು ಸಾಮಾಜಿಕ ಬೆಂಬಲ ಅತ್ಯಗತ್ಯ : ಕವಯತ್ರಿ ಸ್ಮಿತಾ ಅಮೃತಾರಾಜ್*

ಮಾರ್ಚ್ 8, 20263 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಮಾ.8 NEWS DESK : ಮಹಿಳೆಯರಿಗೆ ಆರ್ಥಿಕ ಸ್ವಾತಂತ್ರ್ಯವೊಂದೇ ಸಾಲದು, ಅದರೊಂದಿಗೆ ಆರ್ಥಿಕ ಜ್ಞಾನ, ನಿರ್ಧಾರ ತೆಗೆದುಕೊಳ್ಳುವ ಸಾಮರ್ಥ್ಯ, ಆತ್ಮವಿಶ್ವಾಸ ಮತ್ತು ಸಾಮಾಜಿಕ ಬೆಂಬಲ ಅತ್ಯಗತ್ಯ ಎಂದು ಖ್ಯಾತ ಕವಯತ್ರಿ ಸ್ಮಿತಾ ಅಮೃತಾರಾಜ್ ಅವರು ಹೇಳಿದರು.
ಕೊಡಗು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಡಿಕೇರಿ ತಾಲ್ಲೂಕು ಪಂಚಾಯತ್ ಸಹಯೋಗದಲ್ಲಿ ನಗರದ ಗಾಂಧಿ ಭವನದಲ್ಲಿ ನಡೆದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ಮುಖ್ಯ ಭಾಷಣಕಾರರಾಗಿ ಪಾಲ್ಗೊಂಡು ಅವರು ಮಾತನಾಡಿದರು. ಮಹಿಳೆಯರ ಸಾಧನೆಯನ್ನು ಗುರುತಿಸಿ, ಗೌರವಿಸುವ ದಿನವಾಗಿದ್ದು, ಇದು ಕೇವಲ ಆಚರಣೆಯಲ್ಲ, 20ನೇ ಶತಮಾನದ ಆರಂಭದಲ್ಲಿ ಮಹಿಳಾ ಕಾರ್ಮಿಕರು ಉತ್ತಮ ವೇತನ, ಕಡಿಮೆ ಕೆಲಸದ ಅವಧಿ ಮತ್ತು ಮತದಾನದ ಹಕ್ಕಿಗಾಗಿ ನಡೆಸಿದ ಬೃಹತ್ ಹೋರಾಟಗಳ ಫಲವಾಗಿದೆ ಎಂದರು. ಅನಾದಿ ಕಾಲದಿಂದಲೂ ಮಹಿಳೆಯರನ್ನು ಎರಡನೇ ದರ್ಜೆಯ ನಾಗರಿಕರಂತೆ ಪರಿಗಣಿಸಿ ಕಡೆಗಣಿಸಲಾಗುತ್ತಿದೆ. ಆದರೂ ಪ್ರಸ್ತುತ ದಿನಗಳಲ್ಲಿ ಶಿಕ್ಷಣ ಹಾಗೂ ಆರ್ಥಿಕ ಸ್ವಾತಂತ್ರ್ಯದಿಂದ ಸಬಲೀಕರಣಗೊಳ್ಳುತ್ತಿರುವುದು ಶ್ಲಾಘನೀಯ ಎಂದರು. ಪ್ರತಿಯೊಬ್ಬ ಯಶಸ್ವಿ ಪುರುಷನ ಹಿಂದೆ ಒಬ್ಬ ಮಹಿಳೆ ಇರುತ್ತಾಳೆ. ಭಾರತದಲ್ಲಿ ಮಹಿಳೆಯರಿಗೆ ಸ್ವತಂತ್ರ್ಯ ಇದೆ. ಕಾಲ, ದೇಶ, ಭಾಷೆ ಗಡಿಗಳನ್ನು ದಾಟಿದರೂ ಹೆಣ್ಣಿನ ಸಮಸ್ಯೆ ಒಂದೇ. ಹೆಣ್ಣಿಗೆ ಸಮಾಜದಲ್ಲಿ ಪುರುಷರಷ್ಟೇ ಸ್ಥಾನಮಾನ ದೊರಕಲು, ಮಹಿಳೆಯರಿಗೆ ಅಕ್ಷರದ ವಾರಸುದಾರಿಕೆ ಕೊಟ್ಟಂತ ಶ್ರೇಯಸ್ಸು ಸಾವಿತ್ರಿ ಬಾಪುಲೆ ಅವರಿಗೆ ಸಲ್ಲುತ್ತದೆ. ಮಹಿಳಾ ಸಮಾಜಕ್ಕೆ ಇದ್ದ ಧಾರ್ಮಿಕ ಕಟ್ಟುಪಾಡುಗಳ ವಿರೋಧದ ನಡುವೆ ಅಕ್ಷರವನ್ನು ಬಿತ್ತಿ ಮಹಿಳಾ ಸಬಲೀಕರಣಕ್ಕೆ ನಾಂದಿ ಹಾಡಿದವರು ಸಾವಿತ್ರಿ ಬಾಯಿಪುಲೆ. ಸಮಾಜದ ಮಹಿಳೆಯರ ಅಭ್ಯುದಯಕ್ಕೆ ಕಾರಣಕರ್ತರಾದರು. ಮಹಿಳಾ ಸಂಕುಲ ಸಂಕಷ್ಟಗಳಿಂದ ಸ್ವತಂತ್ರವಾಗಲು ಶಿಕ್ಷಣದಿಂದ ಸಶಕ್ತರಾಗಿಸಿದರು ಎಂದು ಹೇಳಿದರು.
ಪ್ರಸ್ತುತ ಸಮಾಜದಲ್ಲಿ ಗಂಡಳ್ವಿಕೆಯ ಹೆಣ್ಣಿನಿಂದಲೂ ಮಹಿಳೆಯರನ್ನು ದಮನಿಸುವ ಕಾರ್ಯ ನಡೆಯುತ್ತಿದೆ ಎಂದರು. ಮಹಿಳೆಯರನ್ನು ಗೌರವಿಸುವ ಕಾರ್ಯ ಸಮಾಜ ಮಾಡಬೇಕಿದೆ. ಮಹಿಳೆಯರಿಗೆ ಶಿಕ್ಷಣ, ಉದ್ಯೋಗಾವಕಾಶಗಳಲ್ಲಿ ಸಮಾನವಕಾಶಗಳನ್ನು ನೀಡಬೇಕು. ಮಹಿಳೆಯರು ಸಹ ಇಂದು ವೃತ್ತಿ ಜೀವನದಲ್ಲಾಗಲೀ, ಇತರ ರಂಗಗಳಲ್ಲಾಗಲೀ ಅವಕಾಶಗಳು ಬಂದಾಗ ಕೀಳರಿಮೆಯಿಂದ ಹಿಂದೆ ಸರಿಯದೆ ಪ್ರತಿಯೊಂದನ್ನು ಸವಾಲಾಗಿ ಸ್ವೀಕರಿಸಬೇಕು ಎಂದರು. ಎಲ್ಲರಲ್ಲೂ ಸಾಮರ್ಥ್ಯ ಇದೆ. ಅನಿವಾರ್ಯ ಪರಿಸ್ಥಿತಿಯಲ್ಲಿ ಅದನ್ನು ಹೊರಬಿಡಬೇಕು. ಸರ್ಕಾರ ಮಹಿಳೆಯರ ಒಳಿತಿಗಾಗಿ ಸಾಕಷ್ಟು ಯೋಜನೆಗಳನ್ನು ತಂದಿದೆ. ಮಹಿಳಾ ಸಂಘಟನೆಗಳು ಮಹಿಳೆರನ್ನು ಸಬಲೀಕರಣ ಗೊಳಿಸುತ್ತಿದೆ. ಮಹಿಳೆಯರು ಇಡೀ ಪ್ರಕೃತಿಯ ಒಂದು ರೂಪಕ ಎಂದು ಬಣ್ಣಿಸಿದ ಅವರು, ನಮ್ಮ ಮಿತಿಯೊಳಗೆ ಏನೆಲ್ಲ ಮಾಡಲು ಸಾಧ್ಯವೋ ಎನ್ನುವುದನ್ನು ಕಂಡುಕೊಳ್ಳಬೇಕು. ಆ ಮೂಲಕ ತಮ್ಮ ಆಸಕ್ತಿಯನ್ನು ಪೋಷಿಸಿ, ಬೆಳೆಸಬೇಕು ಎಂದರು. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಮಡಿಕೇರಿ ತಾಲ್ಲೂಕು ಅಧ್ಯಕ್ಷ ಮಂದ್ರಿರ ಮೋಹನ್‍ದಾಸ್, ಮಹಿಳಾ ದಿನಾಚರಣೆಯೂ ಒಂದು ದಿನಕ್ಕೆ ಸಿಮೀತವಾಗಬಾರದು, ಎಲ್ಲಾ ರಂಗದಲ್ಲೂ ತೊಡಗಿಕೊಂಡು ಸಮಾಜದ ಅಭಿವೃದ್ಧಿಗೆ ಮುಂದಾಗಬೇಕು. ಮಹಿಳೆಯರು ಮಗಳಾಗಿ, ಸಹೋದರಿಯಾಗಿ, ಬಾಳಸಂಗತಿಯಾಗಿ, ತಾಯಿಯಾಗಿ, ಅತ್ತೆ, ಅಜ್ಜಿಯಾಗಿ ಹಂತ ಹಂತವಾಗಿ ಈ ಎಲ್ಲಾ ಪಾತ್ರಗಳನ್ನು ಸಂತಸದಿಂದ ನಿರ್ವಹಿಸುತ್ತಾರೆ. ಇದರೊಂದಿಗೆ ತಮಗೆ ಎದುರಾಗುವ ಸವಾಲುಗಳನ್ನೂ ಎದುರಿಸಿ ಮುನ್ನುಗ್ಗಿದರೆ ಸಮೃದ್ಧಿ ಹಾಗೂ ಯಶಸ್ಸಿನ ಜೀವನ ನಡೆಸಬಹುದು, ಅಲ್ಲದೇ ಸಮಾಜಕ್ಕೆ ಉತ್ತಮ ದಾರಿದೀಪ ಆಗಬಹುದು ಎಂದು ಸಲಹೆ ನೀಡಿದರು. ರಾಜ್ಯ ಸರ್ಕಾರ ಮಹಿಳೆಯರಿಗಾಗಿ ಶೇ.80 ರಷ್ಟು ಗ್ಯಾರಂಟಿಯೋಜನೆಯನ್ನು ಮೀಸಲಿಟ್ಟಿದ್ದು, ಯಾವುದೇ ಲೋಪದೋಷಗಳಿದ್ದಲ್ಲಿ ಸಂಬಂಧಪಟ್ಟವರ ಗಮನಕ್ಕೆ ತರಬೇಕು. ಸರ್ಕಾರದ ಸೌಲಭ್ಯಗಳನ್ನು ಸದುಪಯೋಗ ಪಡಿಸಿಕೊಂಡು ಸ್ವಾವಲಂಭಿ ಬದುಕನ್ನು ನಡೆಸುವಂತಾಗಬೇಕು ಎಂದು ಮೋಹನ್‍ದಾಸ್ ಅವರು ಹೇಳಿದರು. ತಾ.ಪಂ.ಇಒ ಶೇಖರ್ ಮಾತನಾಡಿ, ನಮ್ಮ ದೇಶದ ಸಂಸ್ಕøತಿಯಲ್ಲಿ ಅನಾದಿಕಾಲದಿಂದಲೂ ಮಹಿಳೆಯರಿಗೆ ಉನ್ನತ ಸ್ಥಾನಮಾನ ನೀಡಲಾಗಿದೆ. ಅದರಂತೆ ಎಲ್ಲಾ ನಾರಿಯರನ್ನು ಗೌರವದಿಂದ, ಹಕ್ಕು, ಸ್ಥಾನಮಾನ ನೀಡಿ ತೃಪ್ತಿ ಪಡಿಸಿದರೆ ಈ ದೇಶ, ರಾಜ್ಯ ಸಮೃದ್ಧಿಯಾಗುತ್ತದೆ ಎಂದು ಹೇಳಿದರು. ತಮಗೆ ಎದುರಾಗುವ ಸವಾಲುಗಳನ್ನು ಧೈರ್ಯದಿಂದ ಎದುರಿಸಿ ಮುನ್ನುಗಿದರೆ ಮುಂದೆ ಉತ್ತಮ ವೇದಿಕೆ ಲಭ್ಯವಾಗಲಿದೆ. ಮಹಿಳೆಯರು ಅವಕಾಶವನ್ನು ಸೃಷ್ಟಿಸಿಕೊಳ್ಳಬೇಕು ಅಥವಾ ಸಿಕ್ಕ ಅವಕಾಶವನ್ನು ಬಳಸಿಕೊಂಡು ಎಲ್ಲಾ ಕ್ಷೇತ್ರದಲ್ಲೂ ಮುಂದೆ ಬರಬೇಕು ಎಂದು ಕರೆ ನೀಡಿದರು. ಪ್ರಸ್ತುತ ದಿನದಲ್ಲಿ ಮಹಿಳೆಯರ ವೇಗವನ್ನು ಗಮನಿಸಿದರೆ ಮುಂದಿನ ದಿನಗಳಲ್ಲಿ ಪುರುಷರು ಮೀಸಲಾತಿಗಾಗಿ ಹೋರಾಡುವ ಪರಿಸ್ಥಿತಿ ಎದುರಾಗಲಿದೆ. ಎಲ್ಲರಿಗೂ ಸಮಾನ ಶಿಕ್ಷಣ ಮತ್ತು ಆರ್ಥಿಕ ಸ್ವಾತಂತ್ರ್ಯ ಸಿಕ್ಕರೆ ಮಹಿಳಾ ಸಬಲೀಕರಣವಾಗಲಿದೆ ಎಂದು ಶೇಖರ್ ಅವರು ನುಡಿದರು. ಮಡಿಕೇರಿ ನಗರಸಭೆ ಅಧ್ಯಕ್ಷರಾದ ಪಿ.ಕಲಾವತಿ ಮಾತನಾಡಿ, ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಪ್ರತಿ ವರ್ಷ ಮಾರ್ಚ್ 8 ರಂದು ವಿಶ್ವದಾದ್ಯಂತ ಆಚರಿಸಲಾಗುತ್ತಿದೆ. ಮಹಿಳೆಯರು ತಮ್ಮ ಜವಾಬ್ದಾರಿಯನ್ನು ಅರಿತು ಸಮಾಜದ ಅಭಿವೃದ್ಧಿಗೆ ಕೊಡುಗೆ ನೀಡಬೇಕು ಮತ್ತು ಮಹಿಳೆಯರನ್ನು ಪ್ರತಿಯೊಬ್ಬರು ಗೌರವಿಸಬೇಕು ಎಂದು ಹೇಳಿದರು. ಸಂಜೀವಿನಿ ಒಕ್ಕೂಟದ ಅಧ್ಯಕ್ಷರಾದ ರಾಣಿ ಅವರು ಮಾತನಾಡಿ, ಮಹಿಳೆಯರು ಅಬಲೆಯರಲ್ಲ, ಸಬಲೆಯರು. ಪುರುಷರಂತೆ ಮಹಿಳೆಯರು ಕೂಡ ಎಲ್ಲಾ ಕ್ಷೇತ್ರದಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದಾರೆ. ಮುಂದಿನ ದಿನಗಳಲ್ಲೂ ಎಲ್ಲಾ ಕ್ಷೇತ್ರದಲ್ಲಿ ತೊಡಗಿಸಿಕೊಳ್ಳುವಂತಾಗಬೇಕು ಎಂದು ಕರೆ ನೀಡಿದರು. ಕಾರ್ಯಕ್ರಮದಲ್ಲಿ ಪಂಚಾಯತ್ ರಾಜ್ ಸಹಾಯಕ ನಿರ್ದೇಶಕರಾದ ಎಂ.ಜಿ.ಸುನಿತಾ, ಎಸ್.ಎಸ್.ಹೇಮಂತ್, ಸಂಜೀವಿನಿ ಒಕ್ಕೂಟದ ಪ್ರಮುಖರು ಹಾಗೂ ಸದಸ್ಯರು ಹಾಜರಿದ್ದರು. ರಮ್ಯ ಮೂರ್ನಾಡು ಪ್ರಾರ್ಥಿಸಿದರು, ಚೆಂಬು ಗ್ರಾಮ ಪಂಚಾಯಿತಿ ಸಂಜೀವಿನಿ ಒಕ್ಕೂಟದ ಸದಸ್ಯೆ ರೇಖಾ ನಿರೂಪಿಸಿದರು, ಹೊದ್ದೂರು ಗ್ರಾ.ಪಂ ಪಿಡಿಒ ವತ್ಸಲಾ ಕುಮಾರಿ ಸ್ವಾಗತಿಸಿದರು, ಮೂಕಾಂಬಿಕ ಸಂಜೀವಿನಿ ಒಕ್ಕೂಟದ ಕನಕಾಂಬಿಕೆ ವಂದಿಸಿದರು. ಕಾರ್ಯಕ್ರಮದಲ್ಲಿ ಸ್ಮೀತಾ ಅಮೃತರಾಜ್ ಅವರನ್ನು ಸನ್ಮಾನಿಸಿ, ಗೌರವಿಸಲಾಯಿತು. ಗ್ರಾ.ಪಂ ಮಟ್ಟದಲ್ಲಿ ಕಾರ್ಯನಿರ್ವಹಿಸುತ್ತಿರುವ 26 ಒಕ್ಕೂಟಗಳಿಗೆ ನೆನಪಿನ ಕಾಣಿಕೆ ನೀಡಲಾಯಿತು. ಸಭಾ ಕಾರ್ಯಕ್ರಮದ ನಂತರ ನಡೆದ ಸಾಂಸ್ಕೃತಿಕ ಕಾರ್ಯಕ್ರಮ ಎಲ್ಲರ ಗಮನ ಸೆಳೆಯಿತು. ವಿವಿಧ ಒಕ್ಕೂಟದ ಸದಸ್ಯರು ಹತ್ತಕ್ಕೂ ಹೆಚ್ಚು ಮಳಿಗೆಗಳನ್ನು ತೆರೆಯಲಾಯಿತು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕೆಎಸ್‌ಐಸಿ ಆವರಣದಲ್ಲಿ ಸ್ಡೇಡಿಯಂ ನಿರ್ಮಾಣ ಯೋಜನೆಗೆ ತಿಲಾಂಜಲಿ : ಸಂಘಟಿತ ಹೋರಾಟಕ್ಕೆ ಸಂದ ಜಯ : ಧನ್ಯವಾದ ಸಲ್ಲಿಸಿದ ಸಂಸದ ಯದುವೀರ್‌ ಒಡೆಯರ್‌*

ಮಾರ್ಚ್ 9, 2026

*ಮಡಿಕೇರಿ : ಮಾ.11 ರಂದು ನಗರಸಭೆಯ ಆಯವ್ಯಯ ಸಭೆ*

ಮಾರ್ಚ್ 9, 2026

*ಮಾ.12ರ ಹೋರಾಟಕ್ಕೆ ಸಿಪಿಐಎಂ ಪಕ್ಷದ ವಿರಾಜಪೇಟೆ ಘಟಕ ಬೆಂಬಲ : ಕೆ.ಎಸ್ ರಮೇಶ್*

ಮಾರ್ಚ್ 9, 2026

*ಮಡಿಕೇರಿ : ಮಾ.11 ರಂದು ನಗರಸಭೆಯ ಆಯವ್ಯಯ ಸಭೆ*

ಮಾರ್ಚ್ 9, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಮಾ.9 NEWS DESK : ನಗರಸಭೆಯ 2026-27ನೇ ಸಾಲಿನ ಆಯವ್ಯಯ ಮಂಜೂರಾತಿಗೆ ಮಾರ್ಚ್, 11 ರಂದು ಬೆಳಗ್ಗೆ 11.30…

*ಮಾ.12ರ ಹೋರಾಟಕ್ಕೆ ಸಿಪಿಐಎಂ ಪಕ್ಷದ ವಿರಾಜಪೇಟೆ ಘಟಕ ಬೆಂಬಲ : ಕೆ.ಎಸ್ ರಮೇಶ್*

ಮಾರ್ಚ್ 9, 2026

*ಕ.ಸಾ.ಪ ದತ್ತಿ ಕಾರ್ಯಕ್ರಮ : ಕೊಡಗಿನ ಸಂಸ್ಕೃತಿಯ ಮೂಲ ಸ್ವರೂಪ ಪ್ರಕೃತಿ ಆರಾಧನೆ : ಮಧೋಶ್ ಪೂವಯ್ಯ*

ಮಾರ್ಚ್ 9, 2026

*ಪಂಜರಪೇಟೆ ಕೊಡವ ಕೇರಿಯಿಂದ ವೃದ್ಧಾಶ್ರಮಕ್ಕೆ ಭೇಟಿ*

ಮಾರ್ಚ್ 9, 2026

*ಕೊಡವ ಕೂಟಾಳಿಯಡ ಕೂಟದಿಂದ ಸಾಧಕ ಮಹಿಳೆಯರಿಗೆ ಸನ್ಮಾನ*

ಮಾರ್ಚ್ 9, 2026

*ಆಫ್ ರೋಡ್ ಚಾಲೆಂಜರ್ಸ್ ಸ್ಪರ್ಧೆ : ಮಡಿಕೇರಿಯ ಜತೀನ್ ಕರ್ಕೆರ ಹಾಗೂ ಹಾರ್ಧಿಕ್ ಕರ್ಕೆರ ದ್ವಿತೀಯ*

ಮಾರ್ಚ್ 9, 2026

*ಸೋಮವಾರಪೇಟೆಯಲ್ಲಿ ಬಿಜೆಪಿ ಮಂಡಲ ಯುವ ಮೋರ್ಚಾದಿಂದ ಪ್ರತಿಭಟನೆ*

ಮಾರ್ಚ್ 9, 2026

*ಕಾಡಾನೆ ದಾಳಿಗೆ ಗ್ರಾ.ಪಂ ಮಾಜಿ ಸದಸ್ಯೆ ಬಲಿ*

ಮಾರ್ಚ್ 9, 2026

*ಅನಾರೋಗ್ಯದಿಂದ ಅಭಿ ಸಾವು*

ಮಾರ್ಚ್ 9, 2026

*ಕಾಡಾನೆ ಹಾವಳಿ ನಿಯಂತ್ರಿಸಲು ಸರ್ಕಾರ ವಿಫಲ : ಕೂಡಲೇ ಕೊಡಗಿಗೆ ಅರಣ್ಯ ಸಚಿವರು ಭೇಟಿ ನೀಡಲಿ : ಎಡಿಕೇರಿ ಪ್ರಸನ್ನ ಒತ್ತಾಯ*

ಮಾರ್ಚ್ 9, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.