ಮಡಿಕೇರಿ, NEWS DESK ಮಾ.೯ : ಜಿಲ್ಲೆಯ ಮತ್ತಿಗೋಡು ಸಾಕಾನೆ ಶಿಬಿರದ ಆನೆ “ಅಭಿ” (೨೧) ಅನಾರೋಗ್ಯದಿಂದ ಮೃತಪಟ್ಟಿದೆ.
ಕಾಡಾನೆ ಸೆರೆ ಕಾರ್ಯಾಚರಣೆಯಲ್ಲಿ ಬಳಕೆಯಾಗುತ್ತಿದ್ದ “ಅಭಿ” ಕಳೆದ ೬ ತಿಂಗಳಿನಿAದ ಕಾಲು ನೋವಿನಿಂದ ಬಳಲುತ್ತಿದ್ದ. ಸುದೀರ್ಘ ಕಾಲದ ಚಿಕಿತ್ಸೆ ಫಲಿಸದೆ ಭಾನುವಾರ ರಾತ್ರಿ ಮೃತಪಟ್ಟಿದ್ದಾನೆ.
ಪಶುವೈದ್ಯ ಡಾ.ರಮೇಶ ಮರಣೋತ್ತರ ಪರೀಕ್ಷೆ ನಡೆಸಿದರು. ಡಿಎಫ್ ಓ, ಡಿಸಿಎಫ್ ಹಾಗೂ ಹಿರಿಯ ಅರಣ್ಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದರು.







